• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಳೆ ಹಾನಿ ಪರಿಹಾರ; ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸಚಿವ ಡಾ.ಕೆ.ಸುಧಾಕರ್ ಸೂಚನೆ

cknewsnow desk by cknewsnow desk
October 16, 2021
in CHIKKABALLAPUR, STATE
Reading Time: 1 min read
0
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್
990
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಕೆಡಿಪಿ ತ್ರೈಮಾಸಿಕ ಸಭೆ

by M Krishnappa Chikkaballapura

ಚಿಕ್ಕಬಳ್ಳಾಪುರ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಆ ಎಲ್ಲಾ ವಿವರನ್ನು ಪರಿಶೀಲಿಸಿ ಅಂಕಿ-ಅಂಶಗಳು ಮತ್ತು ಸಮಗ್ರ ಮಾಹಿತಿಯೊಂದಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಜಿಲ್ಲಾಡಳಿತದ ಸಂಬಂಧಪಟ್ಟ ಅಧಿಕಾರಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಕಳೆದ 25-30 ವರ್ಷಗಳಿಂದ ಆಗದ ದೆ ಇರುವ ಮಳೆ ಈ ವರ್ಷ ಆಗಿದೆ. 2021ನೇ ಸಾಲಿನ ಅಕ್ಟೋಬರ್ ಅಂತ್ಯಕ್ಕೆ ವಾರ್ಷಿಕ ವಾಡಿಕೆ ಮಳೆ 731 ಮಿ.ಮೀ ಇದ್ದು, ವಾಸ್ತವಿಕವಾಗಿ 962 ಮಿ.ಮೀ ಮಳೆಯಾಗಿದೆ. ಅದರಲ್ಲೂ ಕಳೆದ ಒಂದು ವಾರದಿಂದ ಹೆಚ್ಚು ಮಳೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ಕುರಿತು ಕೃಷಿ, ತೋಟಗಾರಿಕೆ, ಸಾಂಖಿಕ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಬೆಳೆ ನಷ್ಟದ ಸ್ಥಳಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿ ಮಳೆಯಿಂದ ಆಗಿರುವ ನಷ್ಟವನ್ನು ಅಂದಾಜು ಲೆಕ್ಕ ಹಾಕಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಶೀಘ್ರವಾಗಿ ಸರ್ಕಾರದಿಂದ ಹಣ ಮಂಜೂರು ಮಾಡಿಸಿ, ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರ ನಗರದವರೆಗಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ 275 ಕೋಟಿಗಳ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿದ್ದು, ಈ ತಿಂಗಳ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಮುಂದಿನ 6-7 ತಿಂಗಳಲ್ಲಿ ಗುಣಮಟ್ಟದ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಈ ನಿಟ್ಟಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ ಎಂದರು.

ರೈತರಿಗೆ ಅರಿವು ಮೂಡಿಸಿ

ಕೃಷಿ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕಿಸಾನ್ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಹೆಚ್ಚಾಗಿ ರೈತರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಧಿಕಾರಿಗಳು ರೂಪಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಾಗಾರಗಳನ್ನು ನಡೆಸಬೇಕು. ಪ್ರತಿಯೊಬ್ಬ ರೈತರಿಗೆ ಅರಿವು ಮೂಡಿಸಿ ಈ ಯೋಜನೆಗಳಡಿ ನೊಂದಣಿ ಮಾಡಿಸಬೇಕು. ಹವಾಮಾನ ವೈಪರಿತ್ಯಗಳು ಉಂಟಾದರೂ ರೈತರು ನಷ್ಟಕ್ಕೆ ಸಿಲುಕದಂತೆ ಕಾರ್ಯಕ್ರಮಗಳನ್ನು ಅನಷ್ಟಾನಗೊಳಿಸಬೇಕು ಎಂದರು.

ಜಿಲ್ಲೆಯಲ್ಲಿ ಕೋವಿಡ್-19ರ ಮೊದಲ ಡೋಸ್ ಲಸಿಕೆಯನ್ನು ಶೇ.87 ರಷ್ಟು ಜನರು ಪಡೆದಿದ್ದಾರೆ. ಶೇ.48 ರಷ್ಟು ಜನ 2ನೇ ಡೋಸ್ ಲಸಿಕೆಯನ್ನು ಪಡೆದಿರುತ್ತಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ಕಾಯಿಲೆ ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಸ್ಪಂದಿಸಿದೆ. ಬಡವರಿಗೆ ಆಶ್ರಯ ವಸತಿ ಯೋಜನೆಯಡಿ ನಿವೇಶನಗಳನ್ನು ಹಂಚಿಕೆ ಮಾಡಲು ಪರಿಣಾಮಕಾರಿಯಾಗಿ ಕಾರ್ಯೊನ್ಮುಖವಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಆಂದೋಲನ ಮಾಡಿ ಅರ್ಹರಿರುವ ಎಲ್ಲರಿಗೂ ಪಿಂಚಣಿ ಮಂಜೂರು ಮಾಡಿದೆ. ಅಧಿಕಾರಿಗಳೆಲ್ಲರೂ ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಸರ್ಕಾರದ ಕಾರ್ಯಕ್ರಮಗಳನ್ನು ಹಾಗೂ ವಿವಿಧ ಯೋಜನೆಗಳನ್ನು ಸಮಾಜ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಸಲುವಾಗಿ ಸಾಕಷ್ಟು ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ ಎಂದರು.

ಜನರ ಮನೆ ಬಾಗಿಲಿಗೆ ತಲುಪಿವೆ

ಇಲಾಖಾವಾರು ಪ್ರತಿ ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡಿ ಗುರಿ ನೀಡಲಾಗಿದೆ. ಆ ಎಲ್ಲಾ ಗುರಿಗಳನ್ನು ಸಾಧಿಸಲು ಸಮಯವನ್ನು ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಇನ್ನಷ್ಟು ಬಿಗಿಯಾದ ಆಡಳಿತ ನೀಡಬೇಕು. ಬಡವರ, ಜನಪರ ಹಾಗೂ ರೈತರ ಕಲ್ಯಾಣ ಕಾರ್ಯಗಳು ಆಗಲಿಕ್ಕೆ ಸರ್ಕಾರದ ಏನೆಲ್ಲಾ ಯೋಜನೆಗಳಿವೆ ಆ ಎಲ್ಲಾ ಯೋಜನೆಗಳನ್ನು ಜಿಲ್ಲಾಡಳಿತ ಜನರ ಮನೆ ಬಾಗಿಲಿಗೆ ಪರಿಣಾಮಕಾರಿಯಾಗಿ ತಲುಪಿಸುತ್ತಾ ಇದೆ. ಮತ್ತಷ್ಟು ಪರಿಣಾಮಕಾರಿಯಾಗಿ ಜಿಲ್ಲಾಡಳಿತ ಚುಕ್ಕಾಣಿಯನ್ನು ಚುರುಕುಗೊಳಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಪದವಿ ಪೂರ್ವ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ರೈತರ ಮಕ್ಕಳ ವಿವರವನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ರೈತರ ಮಕ್ಕಳಿಗೆ ತಲುಪಿಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

6 ತಿಂಗಳಲ್ಲಿ ನೊಂದಣಿ ಪೂರ್ಣಗೊಳಿಸಿ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಸ್ತುತ 13 ಲಕ್ಷ ಜನರನ್ನು ಜಿಲ್ಲೆಯಲ್ಲಿ ನೊಂದಾಯಿಸಬೇಕು. ಈವರೆಗೆ ಸುಮಾರು 2 ಲಕ್ಷ ಜನರನ್ನು ಮಾತ್ರ ನೊಂದಾಯಿಸಲಾಗಿದೆ. ಈ ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ಕೈಗೊಂಡು ಮುಂದಿನ 6 ತಿಂಗಳ ಒಳಗಾಗಿ ಉಳಿದ 11 ಲಕ್ಷ ಜನರನ್ನು ಈ ಯೋಜನೆಯಡಿ ಒಳಪಡಿಸಿ ನೊಂದಾಯಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ತಿಳಿಸಿದರು.

ಕೋವಿಡ್ ನಿಂದ ತಂದೆ ತಾಯಿ ಇಬ್ಬರನ್ನು ಕಳೆದುಕೊಂಡ ಜಿಲ್ಲೆಯ 12 ಮಕ್ಕಳಿಗೆ ಬಾಲ ಸೇವಾ ಯೋಜನೆಯಡಿ ವಿಶೇಷ ಕಾಳಜಿ ವಹಿಸಿ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಭವನಗಳ ನಿರ್ಮಾಣಕ್ಕೆ ಒತ್ತು

ಜಿಲ್ಲಾ ಕೇಂದ್ರದಲ್ಲಿ ಹಲವಾರು ಜಿಲ್ಲಾ ಮಟ್ಟದ ಭವನಗಳನ್ನು ನಿರ್ಮಿಸಬೇಕಾಗಿದೆ. ಮುಂದಿನ 2 ತಿಂಗಳ ಒಳಗಾಗಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ಕಾರ್ಯ ನೆರವೇರಿಸಬೇಕು. 3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣವಾಗಬೇಕು. ಅಲ್ಲದೇ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ, ದೇವರಾಜು ಅರಸ್ ಭವನ ಹಾಗೂ ಕನಕ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಮುದ್ರ ಯೋಜನೆಗಳಡಿ ಸಾಲ ವಿತರಣೆ ಸಮರ್ಪಕವಾಗಿ ಆಗಬೇಕು. ವಿವಿಧ ಇಲಾಖೆಗಳಿಂದ ಶಿಪಾರಸ್ಸುಗೊಂಡಿರುವ ಫಲಾನುಭವಿಗಳಿಗೆ ಎಷ್ಟು ಸಾಲ ಮಂಜೂರಾಗಿದೆ. ಎಷ್ಟು ಬಾಕಿ ಇದೆ ಎಂಬ ಮಾಹಿತಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಒಂದೆರಡು ದಿನಗಳಲ್ಲಿ ಪಡೆದು ಬಾಕಿಯಿರುವ ಸಾಲ ವಿತರಣೆ ಕಾರ್ಯವನ್ನು ಕೈಗೊಳ್ಳುವಂತೆ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ವೇಳೆ ನಗರ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕವಾದ ಸರ್ಕಾರಿ ನೌಕರರಿಗೆ ನೇಮಕಾತಿ ಆದೇಶ ಪತ್ರಗಳನ್ನು ಸಚಿವರು ವಿತರಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: chikkaballapuracknewsnowdr k sudhakarkarnatakakdp meetingnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದ ಹೆಚ್‌ಡಿಕೆ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರ ನೇಮಕ: 27ರಿಂದ ಆನ್ ಲೈನ್ ಕೌನ್ಸೆಲಿಂಗ್

5 years ago
ಜಸ್ಟೀಸ್ ನೂತಲಪಾಟಿ ವೆಂಕಟರಮಣ  (ಎನ್.ವಿ.ರಮಣ): ಪತ್ರಕರ್ತರು, ವಕೀಲರು,  ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು

ಜಸ್ಟೀಸ್ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ): ಪತ್ರಕರ್ತರು, ವಕೀಲರು, ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ