• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದ ಹೆಚ್‌ಡಿಕೆ

cknewsnow desk by cknewsnow desk
October 16, 2021
in POLITICS, STATE
Reading Time: 1 min read
0
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ
926
VIEWS
FacebookTwitterWhatsuplinkedinEmail

ಸರಣಿ ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕನ ಮೇಲೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

  • ಮುಸ್ಲೀಂ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಸಿದ್ದರಾಮಯ್ಯ
  • ಪ್ರತಿಪಕ್ಷ ನಾಯಕನ ನಿಜ ಬಣ್ಣ ಬಯಲಾಗಿದೆ ಎಂದ ಹೆಚ್‌ಡಿಕೆ
  • ಸರಡಗಿ ಸೋಲಿಗೆ ಕಾರಣ ಹೇಳಿದ ದಳಪತಿ
  • ರೆಹಮಾನ್ ಷರೀಫ್, ರೋಷನ್ ಬೇಗ್, ಸಲೀಂ ರಾಜಕೀಯ ಭವಿಷ್ಯಕ್ಕೆ ಕೊಳ್ಳಿ
  • ತನ್ವೀರ್ ಸೇಠ್ ಮೇಲೆ ಸಿದ್ದರಾಮಯ್ಯ ಸೇಡಿನ ರಾಜಕಾರಣ

ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿಸೆಕ್ಯೂಲರ್ ಮತಗಳನ್ನು ವಿಭಜನೆ ಮಾಡಲು ಜೆಡಿಎಸ್ ಮುಸ್ಲೀಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಆರೋಪ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನುʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದು ಕರೆದಿರುವ ಹೆಚ್ಡಿಕೆ ಅವರು, ಸರಣಿ ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ದೂರುವುದು ಸೇರಿದಂತೆ ಅಲ್ಪಸಂಖ್ಯಾತರ ವಿಷಯವನ್ನೇ ಮುಂದು ಮಾಡಿ ಪಕ್ಷವನ್ನು ಪದೇ ಪದೆ ಟೀಕೆ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಟ್ವೀಟ್ʼನ ಪೂರ್ಣ ಪಾಠ ಇಲ್ಲಿದೆ.

  • “ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ!”
  • “ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ.”
  • “ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ.”
  • “2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಭೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು?”
  • ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಾರೆ. ಅದಕ್ಕೆ ಹೈಕಮಾಂಡ್ ಸೊಪ್ಪು ಹಾಕುವುದಿಲ್ಲ. ರಾಜಕೀಯ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! ಇನ್ನು; 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?”
  • “ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.”
  • “ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.”
  • “ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?”
  • “ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.”
  • “ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ.”
  • “ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ…”

ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ʼನಲ್ಲಿ ಹೇಳಿದ್ದಾರೆ.

Tags: cknewsnowCongresshd kumaraswamyjdskarnatakaminoritysPoliticssiddaramaiahtweet war
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತುಂಡಾದ ಕೆರೆಕಟ್ಟೆಗಳಲ್ಲಿ ಹರಿದ ರೈತರ ಕಣ್ಣೀರು!

ತುಂಡಾದ ಕೆರೆಕಟ್ಟೆಗಳಲ್ಲಿ ಹರಿದ ರೈತರ ಕಣ್ಣೀರು!

Leave a Reply Cancel reply

Your email address will not be published. Required fields are marked *

Recommended

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

4 years ago
ಥಾವರಚಂದ್ ಗೆಹಲೋತ್ ರಾಜ್ಯದ  ಹೊಸ ರಾಜ್ಯಪಾಲ

ಥಾವರಚಂದ್ ಗೆಹಲೋತ್ ರಾಜ್ಯದ ಹೊಸ ರಾಜ್ಯಪಾಲ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ