ಬಾಗೇಪಲ್ಲಿಯಲ್ಲಿ ಪಿಎಸ್‌ಎಸ್ & ಹಸಿರುಸೇನೆ ಪ್ರತಿಭಟನೆ
by Ra Na Gopala Reddy Bagepalli
ಬಾಗೇಪಲ್ಲಿ: ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ ಪಿಎಸ್ಎಸ್ ಹಾಗೂ ರಾಜ್ಯ ಹಸಿರು ಸೇನೆ ಕಾರ್ಯಕರ್ತರು ಇಂದಿಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಗೂಳೂರು ವೃತ್ತದಿಂದ ಹೊರಟ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ತದನಂತರ ಪಿಎಸ್ಎಸ್ ಸಂಸ್ಥಾಪಕ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮ ರೆಡ್ಡಿ ಅವರು ಪ್ರತಿಭಟನೆ ನೇತೃತ್ವ ವಹಿಸಿ ‘ಕೃಷಿ ಕಾಯ್ದೆಗಳ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಇಡಿ ದೇಶವೇ ತಲೆತಗ್ಗಿಸುವಂತಹ ಘಟನೆ ಇದಾಗಿದ್ದು, ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೇ ಎಂಬ ಅನುಮಾನ ಹುಟ್ಟುಹಾಕಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಿಎಸ್ಎಸ್ ಜಿಲ್ಲಾ ಸಂಚಾಲಕ ಚನ್ನರಾಯಪ್ಪ, ಹಸಿರು ಸೇನೆ ಬಾಗೇಪಲ್ಲಿ ತಾಲ್ಲೂಕು ಘಟಕ ಲಕ್ಷ್ಮಣ್ ರೆಡ್ಡಿ, ಸಿ.ಉಮಾ, ಜುಬೇದ್ ಅಹ್ಮದ್ ಇನ್ನೂ ಮುಂತಾದ ಪ್ರಮುಖರು ಪಾಲ್ಗೊಂಡಿದ್ದರು.