• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ದೇವೇಗೌಡರು ಮತ್ತು ಸಿಂಧಗಿ ಕ್ಷೇತ್ರದ ಕರುಳಬಳ್ಳಿ ಸಂಬಂಧ ಬಿಡಿಸಿಟ್ಟ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
October 19, 2021
in POLITICS, STATE
Reading Time: 1 min read
0
ಪ್ರಾಧ್ಯಾಪಕರಾದ ದಳಪತಿ
949
VIEWS
FacebookTwitterWhatsuplinkedinEmail

ಮನಗೂಳಿ ಕಾಕಾ ಸಾಧನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಲಾಗದು
ಸಿದ್ದರಾಮಯ್ಯ ಸರಣಿ ಸುಳ್ಳು ಹೇಳುತ್ತಿದ್ದಾರೆ
ಬಿಜೆಪಿ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲ ಎಂದ ಮಾಜಿ ಮುಖ್ಯಮಂತ್ರಿಗಳು

ಸಿಂಧಗಿ: ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ, ಜಾತ್ಯಾತೀತ ಜನತಾದಳ ಮತ್ತು ಸಿಂಧಗಿ ಕ್ಷೇತ್ರದ ನಡುವೆ ವಾತ್ಸಲ್ಯಪೂರ್ಣವಾದ ಕರುಳುಬಳ್ಳಿಯ ಸಂಬಂಧ ಇದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬಣ್ಣಿಸಿದರು.

ಸಿಂಧಗಿ ಕ್ಷೇತ್ರದ ಹೊಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೋಮವಾರ ಚುನಾವಣಾ ಪ್ರಚಾರ ಮಾಡುವ ವೇಳೆ ಅವರು ಮಾತನಾಡಿದರು.

ಸುಮಾರು ಮೂವತ್ತು ವರ್ಷಗಳ ಕಾಲ ದಿವಂಗತ ಮನಗೂಳಿ ಕಾಕಾ ಅವರು ದೇವೇಗೌಡರ ಕುಟುಂಬದ ಸದಸ್ಯರಂತೆ ಇದ್ದರು. ಅವರನ್ನು ದೇವೇಗೌಡರು ಸ್ವಂತ ಸಹೋದರನಂತೆ ನೋಡುತ್ತಿದ್ದರು. ಏಳು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಸಲ ಗೆದ್ದ ಅವರನ್ನು ಎರಡೂ ಸಲವೂ ಪಕ್ಷ ಮಂತ್ರಿ ಮಾಡಿತ್ತು ಎಂದು ಕುಮಾರಸ್ವಾಮಿ ಅವರು ನೆನಪು ಮಾಡಿಕೊಂಡರು.

ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಆಗಿದ್ದಾಗ ದೇವೇಗೌಡರು ಸಿಂಧಗಿ ಕ್ಷೇತ್ರಕ್ಕೆ ಅನೇಕ ಯೋಜನೆಗಳನ್ನು ನೀಡಿದ್ದರು. ನೀರಾವರಿ ಯೋಜನೆಗಳನ್ನು ಜಾರಿ ಮಾಡಿದ್ದರು. ಅದಕ್ಕೆ ಕುರುಹಾಗಿ ದೇವೇಗೌಡರು ಮತ್ತು ಮನಗೂಳಿ ಅವರಿಬ್ಬರ ಪ್ರತಿಮೆಗಳನ್ನು ಜನರು ಕೃತಜ್ಞತಾಪೂರ್ವಕವಾಗಿ ಇಲ್ಲಿ ಸ್ಥಾಪನೆ ಮಾಡಿದ್ದಾರೆ. ಇಂಥ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳುವ ಅದೃಷ್ಟ ನನ್ನದು ಎಂದು ಕುಮಾರಸ್ವಾಮಿ ಅವರು ನುಡಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗಲೂ ನೀರಾವರಿ ಯೋಜನೆಗಳು ಸೇರಿ ಹತ್ತಾರು ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇನೆ ಎಂದರು ಅವರು.

ಮನಗೂಳಿ ಸಾಧನೆ ಹೈಜಾಕ್ ಮಾಡಲಾಗದು

ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯ ಗತಿ ಇಲ್ಲದೆ ಮನಗೂಳಿ ಕಾಕಾ ಅವರ ಪುತ್ರನನ್ನು ಹೈಜಾಕ್ ಮಾಡಿ ಅಭ್ಯರ್ಥಿ ಮಾಡಿರಬಹುದು. ಆದರೆ, ಕಾಕಾ ಅವರ ಜನಪ್ರಿಯತೆ, ಅವರು ಮಾಡಿದ ಸೇವೆ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಜೆಡಿಎಸ್ ಕೊಟ್ಟಿರುವ ಕೊಡುಗೆಯನ್ನು ಹೈಜಾಕ್ ಮಾಡಲಾಗದು ಎಂದು ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷಕ್ಕೆ ಕುಟುಕಿದರು.

ಮನಗೂಳಿ ಕಾಕಾ ಮಾಡಿರುವ ಸಾಧನೆಗಳನ್ನು ಕಾಂಗ್ರೆಸ್ ಅಭ್ಯರ್ಥಿ ಈಗ ಹೈಜಾಕ್ ಮಾಡಲು ಹೊರಟಿದ್ದಾರೆ. ಅದಕ್ಕಾಗಿ ಸಾಧನೆಗಳ ಪುಸ್ತಕ ಮಾಡಿ ಹಂಚುತ್ತಿದ್ದಾರೆ. ಆದರೆ, ಸಿಂಧಗಿ ಜನತೆಗೆ ನಮ್ಮ ಪಕ್ಷದ ಮೇಲೆ ಅಪಾರ ಪ್ರೀತಿ, ನಂಬಿಕೆ ಇದೆ. ಮಾಡಿದ ಸೇವೆಯ ನೆನಪಿದೆ. ಅದನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ

ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಯಾವ ನಾಲಿಗೆಯಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎನ್ನುತ್ತಿದ್ದರೂ ಅದೇ ನಾಯಕರೂ ಕಳೆದ ಚುನಾವಣೆ ನಂತರ ಸರಕಾರ ಮಾಡಬೇಕು ಎಂದು ನಮ್ಮ ಪಕ್ಷದ ಬಾಗಿಲಲ್ಲಿ ನಿಂತಿದ್ದರು.
ಯಾರು ನಮ್ಮ ಪಕ್ಷಕ್ಕೆ ಮತ ಹಾಕಬೇಡಿ ಎಂದು ಜನರಿಗೆ ಹೇಳಿದರೋ ಅವರೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ದೇವೇಗೌಡರ ಮನೆ ಮುಂದೆ ನಿಂತರು. ಆದರೆ, ಸಿದ್ದರಾಮಯ್ಯ ಅವರ ಸುಳ್ಳು ಮಾತುಗಳಿಂದ ನಮ್ಮ ಪಕ್ಷಕ್ಕೆ ಆ ಚುನಾವಣೆಯಲ್ಲಿ ಹಾನಿ ಆಯಿತು ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಅಷ್ಟಕ್ಕೇ ಸುಮ್ಮನಾಗದ ಸಿದ್ದರಾಮಯ್ಯ ಈಗ ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಸೆಕ್ಯುಲರ್ ಮತಗಳನ್ನು ವಿಭಜಿಸಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಸರಣಿ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬಾರದು ಎಂದು ಜನತೆಯನ್ನು ಕೋರಿದ ಹೆಚ್ ಡಿಕೆ ಅವರು, ಒಂದು ವೇಳೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದರೆ ಅದರ ಫಲ ಬಿಜೆಪಿಗೆ ಹೋಗುತ್ತದೆ. ಈ ಕಾರಣಕ್ಕೆ ಜೆಡಿಎಸ್ ಸಿಂಧಗಿ ಜನರ ಸಹಜ ಆಯ್ಕೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಜೆಡಿಎಸ್ ಗೆಲವು ಖಚಿತ

ಸಿಂಧಗಿ ಕ್ಷೇತ್ರದಲ್ಲಿ ಹಣಾಹಣಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿತ್ತು. ಯಾವ ಚುನಾವಣೆಯಲ್ಲಿಯೂ ಇಲ್ಲಿ ಆ ಪಕ್ಷ ಎರಡನೇ ಸ್ಥಾನಕ್ಕೆ ಬಂದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡ ವೇಳೆ ಮಾತನಾಡಿದ ಅವರು, ಸುಳ್ಳು ಮಾತುಗಳಿಂದ ಚುನಾವಣೆಯನ್ನು ಗೆಲ್ಲಲಾಗದು. ಜನರ ಕೆಲಸ ಮಾಡಿದರಷ್ಟೇ ಜಯ ಸಾಧ್ಯ ಎಂದರು.

ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ವಿಫಲ

ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಸಿಂಧಗಿಯ ಮಾಡಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಜೆ ಪ್ರಚಾರ ನಡೆಸಿದ ಅವರು, ಉತ್ತರ ಕರ್ನಾಟಕ ಪ್ರದೇಶದಲ್ಲಿ ನೆರೆ ಬಂತು. ಅದನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ. ಮನೆ ಕಳೆದುಕೊಂಡ ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರವನ್ನು ನೀಡಲಿಲ್ಲ ಎಂದು ಅವರು ಹೇಳಿದರು.

ಕೊರೋನ ನಿರ್ವಹಣೆಯಲ್ಲಿ ಕೂಡ ಸರಕಾರ ಸರಿಯಾಗಿ ಕೆಲಸ ಮಾಡಲಿಲ್ಲ. ಪ್ರಾಣಹಾನಿ ಅದ ಕುಟುಂಬಗಳಿಗೆ ಯಾವ ನೆರವನ್ನೂ ಕೊಡಲಿಲ್ಲ. ಕಾರ್ಮಿಕ ಮತ್ತು ಶ್ರಮಿಕ ವರ್ಗದ ಜನರಿಗೆ ಕೊನೆಪಕ್ಷ ಹತ್ತು ಸಾವಿರ ರೂಪಾಯಿ ಹಣವನ್ನು ನೀಡಲಿಲ್ಲ ಎಂದು ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಸಿಂಧಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಜಿಯ ಶಕೀಲಾ ಅಂಗಡಿ, ಪಕ್ಷದ ಹಿರಿಯ ನಾಯಕ ಬಂಡೆಪ್ಪ ಕಾಷೆಂಪೂರ್, ರಾಜೂಗೌಡ ಪಾಟೀಲ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು, ಜನರು ನೆರೆದಿದ್ದರು.

Tags: cknewsnowCongresshd devegowdahd kumaraswamyjdsmc managooliPoliticssiddaramaiahsindagi by election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಾಯಿಗೆ ತಕ್ಕ ಮಗ

ತಾಯಿಗೆ ತಕ್ಕ ಮಗ

Leave a Reply Cancel reply

Your email address will not be published. Required fields are marked *

Recommended

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

4 years ago
ಹಾಡಿದವು ಕಣ್ಣುಗಳು!!

ಹಾಡಿದವು ಕಣ್ಣುಗಳು!!

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ