ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಹಾನಗಲ್: ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ನಡುವೆ ನಡೆಯುತ್ತಿರುವ ತಿಕ್ಕಾಟಕ್ಕೆ ಹೊಸ ತಿರುವು ಸಿಕ್ಕಿದೆ.
ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಜಿಲ್ಲೆಯ ಎಲ್ಲರಿಗೂ ಸಾಲ ನೀಡದೆ ಕೇವಲ ಎರಡು ಮೂರು ಕ್ಷೇತ್ರದವರಿಗಷ್ಟೇ ಸಾಲ ನೀಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಕುರಿತು ಸಭೆ ಕೂಡ ಮಾಡಲಾಗಿದೆ. ಕೋಲಾರ ಡಿಸಿಸಿ ಬ್ಯಾಂಕ್’ಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.
ತುಮಕೂರು ಡಿಸಿಸಿ ಬ್ಯಾಂಕ್ ನಲ್ಲಿ ಕೂಡ ಸರಿಯಾಗಿ ಸಾಲ ಕೊಡುತ್ತಿಲ್ಲ ಎಂದು ದೂರು ಬಂದಿದ್ದು ತನಿಖೆ ಮಾಡಲಾಗುತ್ತಿದೆ. ಉಳಿದಂತೆ 19 ಡಿಸಿಸಿ ಬ್ಯಾಂಕ್ ಗಳು ಅಲ್ಪಾವಧಿ, ದೀರ್ಘಾವಧಿ ಸಾಲ ನೀಡುತ್ತಿವೆ. ಎಸ್ ಸಿ, ಎಸ್ ಟಿ, ಒಬಿಸಿ ಸೇರಿದಂತೆ ಎಲ್ಲಾ ಜನಾಂಗದವರಿಗೆ ಸಾಲ ನೀಡಬೇಕೆಂದು ಹೇಳಲಾಗಿದೆ. 20,810 ಕೋಟಿ ರೂ. ಕೃಷಿ ಸಾಲವನ್ನು 30.86 ಲಕ್ಷ ರೈತರಿಗೆ ವಿತರಿಸುವ ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.