• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

“ನಾನೂ ಕುರಿ ಸಾಕುತ್ತೇನೆ, ಸಿದ್ದರಾಮಯ್ಯ ಬಿಡದಿ ತೋಟಕ್ಕೆ ಬಂದು ನೋಡಲಿ”

cknewsnow desk by cknewsnow desk
October 25, 2021
in POLITICS, STATE
Reading Time: 1 min read
0
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ
945
VIEWS
FacebookTwitterWhatsuplinkedinEmail

“ನಾನು ನೇಗಿಲೂ ಹಿಡಿದಿದ್ದೇನೆ, ಕೂಲಿಯನ್ನೂ ಮಾಡಿದ್ದೇನೆ, ತಲೆ ಮೇಲೆ ಗೊಬ್ಬರವನ್ನೂ ಹೊತ್ತಿದ್ದೇನೆ”

“ಜಾತಿ ಹೋಗಬೇಕು ಅಂತಾರೆ, ಆದರೆ ಸಿಂಧಗಿಯಲ್ಲಿ ಜಾತಿಗೊಂದು ಸಮಾವೇಶ ಮಾಡ್ತಾರೆ”

ಸಿದ್ದರಾಮಯ್ಯ ಮೇಲೆ ಹೆಚ್‌ಡಿಕೆ ತೀವ್ರ ವಾಗ್ದಾಳಿ

ಮೈಸೂರು: ಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಅವರು ಸಿಂಧಗಿಯಲ್ಲಿ ಕೂತು ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿಂದ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ನಿನ್ನೆಯ ದಿನ ಸಿದ್ದರಾಮಯ್ಯ ಅವರು ಕುರುಬರಿಗೊಂದು ಪ್ರತ್ಯೇಕ ಸಮಾವೇಶ, ತಳವಾರ ಸಮಾಜಕ್ಕೊಂದು ಪ್ರತ್ಯೇಕ ಸಮಾವೇಶ, ಕೋಳಿ ಸಮಾಜಕ್ಕೊಂದು ಪ್ರತ್ಯೇಕ ಸಮಾವೇಶ ಮಾಡಿದ್ದಾರೆ. ಇದು ಯಾವ ಸೀಮೆಯ ಜಾತ್ಯಾತೀತತೆ? ಬಾಯಲ್ಲಿ ಮಾತ್ರ ಜಾತ್ಯತೀತ, ಒಳಗೆಲ್ಲ ಬರೀ ಜಾತಿ. ನಮ್ಮ ರಾಜ್ಯದಲ್ಲಿ ಜಾತಿ-ಜಾತಿಗಳ ನಡವೆ ಕಂದಕ ಸೃಷ್ಟಿ ಮಾಡುತ್ತಿರುವುದೇ ಇದೇ ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ತಾವು ಗಾಜಿನ ಮನೆಯಲ್ಲಿ ಕೂತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಹೊಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಬೇರೆಯವರಿಗೆ ಉಪದೇಶ ಮಾಡುವ ಮುನ್ನ ಅವರು ತಮ್ಮ ನಡವಳಿಕೆಯ ಬಗ್ಗೆ ಜನರಿಗೆ ಸ್ಪಷ್ಟವಾಗಿ ಹೇಳಬೇಕು. ಒಂದು ಕಡೆ ಜಾತಿ ಹೋಗಬೇಕು ಅಂತೀರಿ? ಹಾಗಾದರೆ, ಜಾತಿ ಸಮಾವೇಶಗಳನ್ನು ಯಾಕೆ ಮಾಡುತ್ತೀರಿ? ಚುನಾವಣೆಯಲ್ಲಿ ಮತ ಪಡೆಯುವುದಕ್ಕಷ್ಟೇ ಸಿದ್ದರಾಮಯ್ಯ ಅವರ ಜಾತಿ ರಾಜಕೀಯ ಎಂದು ಮಾಜಿ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

ನಾನೂ ಕುರಿ ಸಾಕುತ್ತೇನೆ, ಬಂದು ನೋಡಲಿ

ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಾವ ಕುರಿ ಕಾಯ್ದವರೇ ಎಂದು ಲಘುವಾಗಿ ಮಾತನಾಡಿದ್ದಾರೆ ಸಿದ್ದರಾಮಯ್ಯ. ಇವರೊಬ್ಬರೇನಾ ಕುರಿ ಕಾಯ್ದವರು? ಚಿಕ್ಕ ಮಕ್ಕಳಿದ್ದಾಗ ನಾವು ಕುರಿ ಮಂದೆಯಲ್ಲೇ ಊಟ ಮಾಡಿ ಅಲ್ಲೇ ಮಲಗ್ತಿದ್ದೆವು. ನಾವು ಕೂಡ ಕುರಿ ಸಾಕಿದ್ದೇವೆ, ಈಗಲೂ ಸಾಕುತ್ತಿದ್ದೇವೆ. ಬೇಕಾದರೆ ಬಿಡದಿ ತೋಟಕ್ಕೆ ಬಂದು ನೋಡಲಿ. ಕುರಿ ಸಾಕಣೆ ಮಾಡಿದವರು ಸಿದ್ದರಾಮಯ್ಯ ಒಬ್ಬರೇ ಅಲ್ಲ ಎಂದು ಪ್ರತಿಪಕ್ಷ ನಾಯಕನಿಗೆ ಹೆಚ್‌ಡಿಕೆ ಟಾಂಗ್ ಕೊಟ್ಟರು.

ಮೊನ್ನೆ ಹಾನಗಲ್ʼನಲ್ಲಿ ಭಾಷಣ ಮಾಡುತ್ತಿದ್ದರು ಇದೇ ಮಹಾನುಭಾವರು. ಕುಮಾರಸ್ವಾಮಿ ನೇಗಿಲು ಹಿಡಿದವ್ನಾ? ಕೃಷಿ ಮಾಡವ್ನಾ? ಕೂಲಿ ಮಾಡವ್ನಾ? ಅವನಿಗೇನು ಗೊತ್ತು ಕೃಷಿ? ಎಂದು ಕೇವಲವಾಗಿ ಮಾತನಾಡಿದ್ದಾರೆ. ನಾನು ಯಾವ ರೀತಿ ಕೃಷಿ ಮಾಡುತ್ತಿದ್ದೇನೆ ಎನ್ನುವುದನ್ನು ಅವರು ನನ್ನ ತೋಟಕ್ಕೇ ಬಂದು ನೋಡಲಿ. ಸಿದ್ದರಾಮಯ್ಯ ಏನ್ಮಾಡಿದ್ದಾರೆ? ಅವರದ್ದು ತೋಟ ಇರಬೇಕಲ್ಲಾ? ಏನೇನು ಮಾಡಿದ್ದಾರೋ ಹೇಳಲಿ. ನಾವು ಕೂಲಿಯನ್ನೂ ಮಾಡಿದ್ದೇವೆ, ನೇಗಿಲನ್ನೂ ಹಿಡಿದಿದ್ದೇವೆ, ತಲೆಯ ಮೇಲೆ ಗೊಬ್ಬರವನ್ನೂ ಹೊತ್ತಿದ್ದೇವೆ. ಇವರೊಬ್ಬರೇ ಅಲ್ಲ ಎಂದು ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ತಳಮಳ ಉಂಟಾಗಿದೆ

ಈಗ ಜೆಡಿಎಸ್ ಪಕ್ಷದ ಓಟ ವೇಗವಾಗಿದೆ. ಜನರಿಗೆ ಹತ್ತಿರವಾಗುತ್ತಿದೆ, ಹೀಗಾಗಿ ಅವರಲ್ಲಿ ತಳಮಳ ಉಂಟಾಗಿದೆ. ಆದ್ದರಿಂದಲೇ ಇಷ್ಟು ದೊಡ್ಡ ಮಟ್ಟದ ದಾಳಿಗಳು ನಮ್ಮ ಪಕ್ಷದ ಮೇಲಾಗುತ್ತಿವೆ. ವೈಯಕ್ತಿಕವಾಗಿಯೂ ಟೀಕೆ ಮಾಡುತ್ತಿದ್ದಾರೆ. ಕಾರ್ಯಕ್ರಮಗಳ ಮೇಲೆ ಅಥವಾ ನಮ್ಮ ವೈಫಲ್ಯಗಳನ್ನು ಎತ್ತಿತೋರಿಸಿ ದಾಳಿ ನಡೆಸುತ್ತಿಲ್ಲ, ಬದಲಿಗೆ ನಮ್ಮ ವ್ಯಕ್ತಿಗತ ವಿಚಾರಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಅವರು ಎಷ್ಟು ಟೀಕೆ ಮಾಡಿದರೂ ನಾವು ಅಷ್ಟೇ ಗಟ್ಟಿಯಾಗುತ್ತೇವೆ. ಅವರು ಇನ್ನೂ ಹೆಚ್ಚೆಚ್ಚು ಟೀಕೆ ಮಾಡಲಿ, ಅದೇ ನಮಗೆ ಆಶೀರ್ವಾದ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಗುಬ್ಬಿಯಲ್ಲಿ ನಮ್ಮ ಪಕ್ಷದ ಒಂದು ಕಾರ್ಯಕ್ರಮವಿದೆ. ಅದನ್ನು ಮುಗಿಸಿಕೊಂಡು ಪುನಾ ಇಂದು ನಾನು ಸಿಂಧಗಿಗೆ ತೆರಳುತ್ತಿದ್ದೇನೆ ಎಂದ ಕುಮಾರಸ್ವಾಮಿ ಅವರು; ಮತ್ತೆ ಎರಡು ದಿನ ನಾನು ಅಲ್ಲಿಯೇ ಇರುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗುಬ್ಬಿ ವಾಸು ಮತ್ತು ಕಾಂತರಾಜು ಅವರಿಬ್ಬರೂ ಕುಮಾರಸ್ವಾಮಿ ಅವರೇ ನಮ್ಮನ್ನು ಪಕ್ಷದಿಂದ ಹೊರದಬ್ಬುತ್ತಿದ್ದಾರೆಂದು ಹೇಳಿಕೆ ನೀಡಿದ್ದಾರಲ್ಲ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; “ನಾನು ಯಾರನ್ನೂ ಪಕ್ಷದಿಂದ ಹೊರಗೆ ಕಳಿಸುತ್ತಿಲ್ಲ. ಹೋಗಿ ಎಂದು ಯಾರಿಗೂ ಹೇಳಿಯೂ ಇಲ್ಲ. ಇವತ್ತು ಕೆಲ ಕಾರ್ಯಕರ್ತರು ಪಕ್ಷಕ್ಕೆ ಸೇರುತ್ತೇವೆ ಎಂದು ಮುಂದೆ ಬಂದ ಕಾರಣಕ್ಕೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಾನು ಗುಬ್ಬಿಗೆ ಹೋಗುತ್ತಿದ್ದೇನೆ. ಪಕ್ಷಕ್ಕೆ ಸೇರುತ್ತಿರುವ ಕಾರ್ಯಕರ್ತರು ಸ್ವತಃ ಶಾಸಕರ ಮನೆಗೇ ಹೋಗಿ ನಿಮ್ಮ ಅಧ್ಯಕ್ಷತೆಯಲ್ಲೇ ಸೇರ್ಪಡೆ ಆಗುತ್ತೇವೆ ಎಂದು ಹೇಳಿದ್ದಾರೆ. ಇಲ್ಲಿ ಯಾರನ್ನು ಹೊರಗೆ ಕಳಿಸುವ ಉದ್ದೇಶವಿಲ್ಲ.” ಎಂದರು.

ಕಳೆದ ಮೂರು ವರ್ಷಗಳಿಂದ ಅವರು ಪಕ್ಷದೊಳಗೇ ಇದ್ದುಕೊಂಡು ಪಕ್ಷದ ಬಗ್ಗೆ ಹಾಗೂ ನಾಯಕರ ಬಗ್ಗೆ ಯಾವೆಲ್ಲ ಹೇಳಿಕೆಗಳನ್ನು ನೀಡಿದ್ದಾರೆನ್ನುವುದನ್ನು ಆ ಇಬ್ಬರು ಮುಖಂಡರು ಒಮ್ಮೆ ನೆನಪು ಮಾಡಿಕೊಳ್ಳಲಿ. ವೈಯಕ್ತಿಕವಾಗಿ ನನ್ನ ಬಗ್ಗೆಯೇ ಹೇಳಿಕೆಗಳನ್ನು ನೀಡಿದ್ದರು, ಅದರ ಅಗತ್ಯ ಇತ್ತಾ? ಬಿಡದಿಯಲ್ಲಿ ನಡೆದ ಕಾರ್ಯಾಗಾರಕ್ಕೆ ಬರುವಂತೆ ಸ್ವತಃ ನಾನೇ ಕರೆದಿದ್ದೇನೆ. ಸಮಸ್ಯೆ ಇದ್ದರೆ ಮುಕ್ತವಾಗಿ ಚರ್ಚೆ ಮಾಡೋಣ ಎಂದು ಹೇಳಿದ್ದೇನೆ. ಅವರೇ ತಮಗೆ ಬೇಕಾದ ಹಾಗೆ ಹೇಳಿಕೆಗಳನ್ನು ನೀಡಿದರೆ ಹೇಗೆ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿಯನ್ನು ಹುಡುಕುತ್ತಿದ್ದೀರಾ? ಎನ್ನುವ ಪ್ರಶ್ನೆಗೆ; “ನಮ್ಮ ಪಕ್ಷವು 2023ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿದೆ. ಬಿಡದಿಯಲ್ಲಿ ಕಾರ್ಯಾಗಾರವನ್ನು ಹುಡುಗಾಟಕ್ಕೆ ಮಾಡಿದ್ದಲ್ಲ. ಚುನಾವಣೆಗೆ 17 ತಿಂಗಳ ಮೊದಲೇ ಪಕ್ಷದ ಸಂಘಟನೆಗೆ ಚಾಲನೆ ನೀಡಿದ್ದೇವೆ. ನವೆಂಬರ್ 1ರಿಂದ ಪುನಾ ಜನತಾ ಸಂಗಮ ಎನ್ನುವ ಕಾರ್ಯಕ್ರಮ ಆರಂಭವಾಗುತ್ತಿದೆ. ಅದಕ್ಕೆ ಅಗತ್ಯವಾದ ಪೂರ್ವ ಸಿದ್ಧತೆ ನಡೆಯುತ್ತಿದೆ. ಕೇವಲ ಚಾಮುಂಡೇಶ್ವರಿ ಅಥವಾ ಶಿರಾ ಕ್ಷೇತ್ರಗಳ ಪ್ರಶ್ನೆ ಅಲ್ಲ, ನಾವು ಗುರಿ ಹಾಕಿಕೊಂಡಿರುವಂತೆ 123 ಕ್ಷೇತ್ರಗಳನ್ನು ಗೆಲ್ಲಲು ಏನು ಬೇಕೋ ಅದೆಲ್ಲವನ್ನೂ ಮಾಡುತ್ತೇವೆ” ಎಂದು ಅವರು ತಿಳಿಸಿದರು.

ದೇವೇಗೌಡರು, ಕುಮಾರಸ್ವಾಮಿ ಅವರು ಸಿಂಧಗಿಯಲ್ಲಿ ಬೀಡುಬಿಟ್ಟಿರುವುದೇ ಕಾಂಗ್ರೆಸ್ ಪಕ್ಷವನ್ನು ಸೋಲಿಸಲಿಕ್ಕೆ ಎಂದು ಸಿದ್ದರಾಮಯ್ಯ ಮತ್ತು ಅವರ ಆಪ್ತರು ಆರೋಪ ಮಾಡಿದ್ದಾರೆ. ಹಾಗಾದರೆ, ಜೆಡಿಎಸ್ ಪಕ್ಷವನ್ನು ಸೋಲಿಸಲು ಅವರೂ ಕೂಡ ಸಿಂಧಗಿಯಲ್ಲೇ ಬೀಡುಬಿಟ್ಟಿದ್ದಾರೆಂದು ನಾನೂ ಹೇಳಬಹುದಲ್ಲ ಎಂದ ಅವರು. ಕಾಂಗ್ರೆಸ್ ಪಕ್ಷವೆಂದೂ ಸಹ ಸಿಂದಗಿಯಲ್ಲಿ ಎರಡನೇ ಸ್ಥಾನಕ್ಕೇ ಬಂದಿಲ್ಲ ಎಂದು ಚಾಟಿ ಬೀಸಿದರು.

ಫಾರೂಕ್ ಅವರನ್ನು ಸೋಲಿಸಿದ್ದು ಯಾರು?

ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಫಾರೂಕ್ ಅವರದ್ದು ಯಾವ ಜಾತಿ? ಅವರನ್ನು ಸೋಲಿಸಿದ್ದು ಯಾರು? ಇವರೇ ಅಲ್ಲವೇ? 9 ಜನ ಶಾಸಕರು ಮತ ಹಾಕಿದ್ದು ಯಾರಿಗೆ? ಹೀಗಿ ರಾಮಮೂರ್ತಿ ಅವರಿಗೆ ಮತ ಹಾಕಿದ್ರಿ. ಈಗ ರಾಮಮೂರ್ತಿ ಅವರು ಎಲ್ಲಿದ್ದಾರೆ? ಬಿಜೆಪಿಯಲ್ಲಿದ್ದಾರೆ. ಇದು ಅವರು ಪಕ್ಷ ಕಟ್ಟುವ ರೀತಿ ಹಾಗೂ ಅಲ್ಪಸಂಖ್ಯಾತರನ್ನು ಉದ್ಧಾರ ಮಾಡುವ ವೈಖರಿ ಎಂದು ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಜಮೀರ್ʼಗೆ ಬಿಸಿ ಮುಟ್ಟಿಸಿದರು.


ಮಕ್ಕಳು ಶಾಲೆಗೆ; ಇದು ಉತ್ತಮ ಬೆಳವಣಿಗೆ

ಮಕ್ಕಳು ಎರಡು ವರ್ಷಗಳ ನಂತರ ಶಾಲೆಗೆ ಬರುತ್ತಿರುವುದು ಸಂತೋಷದ ಸಂಗತಿ. ಆದರೆ, ಆ ಮಕ್ಕಳ ಆರೋಗ್ಯದ ಮೇಲೆ ಯಾವುದೇ ವ್ಯತಿರೀಕ್ತ ಪರಿಣಾಮ ಬೀರದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಸರಕಾರ ಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ಸೂಕ್ತ ನಿರ್ದೇಶನ ನೀಡಿ ನಿಗಾ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.

Tags: by electioncknewsnowCongresshd kumaraswamyjdskarnatakanewsPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಇಸ್ರೇಲ್‌ನಲ್ಲೇ ನನ್ನ ಪ್ರಾಣ ಹೋಗಬೇಕಿತ್ತು: ಹೆಚ್.‌ಡಿ.ಕುಮಾರಸ್ವಾಮಿ

ಇಸ್ರೇಲ್‌ನಲ್ಲೇ ನನ್ನ ಪ್ರಾಣ ಹೋಗಬೇಕಿತ್ತು: ಹೆಚ್.‌ಡಿ.ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Recommended

ಟೆನಿಸ್‌: ರಷ್ಯಾವನ್ನು ಮಣಿಸಿದ ಉಕ್ರೇನ್‌

ಟೆನಿಸ್‌: ರಷ್ಯಾವನ್ನು ಮಣಿಸಿದ ಉಕ್ರೇನ್‌

4 years ago
40,000ಕ್ಕೂ ಹೆಚ್ಚು ಗೀತಪುಷ್ಪಗಳ ಹಾರದೊಂದಿಗೆ ಸ್ವರಮಾತೆಯ ಮಡಿಲಲ್ಲಿ ಐಕ್ಯರಾದ ಬಾಲು

ಎಸ್ ಪಿ ಬಾಲಸುಬ್ರಹ್ಮಣ್ಯಂ; ಹಾಡಿನ ಜೀವನದಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ