೬೬ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
ಬೆಂಗಳೂರು: ರಾಜ್ಯದ ೬೬ನೇ ಕನ್ನಡ ರಾಜ್ಯೋತ್ಸವದ ಸಂಭ್ರದಲ್ಲಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
“ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ” ಎಂದು ಪ್ರಧಾನಿ ಹಾರೈಸಿದ್ದಾರೆ.
ಹಾಗೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಕನ್ನಡದಲ್ಲೇ ರಾಜ್ಯೋತ್ಸವ ಶುಭ ಕೋರಿದ್ದಾರೆ.
“ಕರ್ನಾಟಕ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸಹೋದರ ಮತ್ತು ಸಹೋದರಿಯರಿಗೆ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು ಅದ್ಭುತ ಸಂಸ್ಕೃತಿ, ಖಾದ್ಯ, ಸಂಪ್ರದಾಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಚೆಲುವಿನ ನಾಡು ಭಾರತದ ಪ್ರಗತಿಗೆ ಸದಾ ಕೊಡುಗೆ ನೀಡುತ್ತಿರಲಿ.” ಎಂದು ಶಾ ಅವರು ಹಾರೈಸಿದ್ದಾರೆ.