• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

cknewsnow desk by cknewsnow desk
November 3, 2021
in STATE
Reading Time: 1 min read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
938
VIEWS
FacebookTwitterWhatsuplinkedinEmail

ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದ ದಳಪತಿ

ಬೆಂಗಳೂರು/ಬಿಡದಿ: ಜೆಡಿಎಸ್‌ ಪಕ್ಷವು ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇಂದಿಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು; “ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಫರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಸಿಂಧಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ” ಎಂದರು.

ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೆಚ್‌ಡಿಕೆ ಅವರು ಹೇಳಿದರು.

ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ನಮ್ಮ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ಪ್ರಚಾರದ ವೇಳೆ ನಾನು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿದ್ದೆ. ಜನರ ಸ್ಪಂದನೆ ಉತ್ತಮವಾಗಿತ್ತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನೀಡಿದ್ದ ನೀರಾವರಿ ಯೋಜನೆಗಳ ಬಗ್ಗೆ, ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಕಾರ್ಯಕ್ರಮಗಳು ಹಾಗೂ ಸಾಲ ಮನ್ನಾ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜನ ಮಾತನಾಡಿದ್ದರು. ಸ್ವತಃ ಜನರೇ ನನ್ನ ಬಳಿಗೆ ಬಂದು ಈ ಬಗ್ಗೆ ಮಾತನಾಡುತ್ತಿದ್ದರು. ಆದರೂ ಈ ರೀತಿಯ ಫಲಿತಾಂಶ ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮನಗೂಳಿ ಮಗನ ಹೈಜಾಕ್

ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿತು. ಜತೆಗೆ, ನಮ್ಮ ಸಂಘಟನೆಯನ್ನೂ ದುರ್ಬಲ ಮಾಡಲಾಗಿತ್ತು. ಇದು ನನ್ನ ಗಮನದಲ್ಲಿತ್ತು. ಮತಗಟ್ಟೆಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವುದೇ ದೊಡ್ಡ ಸವಾಲಾಗಿತ್ತು. ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು. ಆದರೂ ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದು ಅವರು ಹೇಳಿದರು.

ಹಾನಗಲ್‌ʼನಲ್ಲಿ ನಮಗೆ ನೆಲೆ ಇರಲಿಲ್ಲ. ಆದರೆ, ಸಿಂಧಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್‌ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದು ಅವರು ತಿಳಿಸಿದರು.

ಸಾಮಾನ್ಯವಾಗಿ ಎಲ್ಲರಿಗೂ ತಿಳಿದಂತೆ ಉಪ ಚುನಾವಣೆಗಳು ನಡೆಯುವ ಬಗೆಯೇ ಬೇರೆ, ಸಾರ್ವತ್ರಿಕ ಚುನಾವಣೆಗಳು ನಡೆಯುವ ರೀತಿಯೇ ಬೇರೆ ಎಂದ ಅವರು, ನಮ್ಮ ಪಕ್ಷ 2023ನೇ ವಿಧಾನಸಭೆ ಚುನಾವಣೆ ಮೇಲೆ ಪೂರ್ಣ ಗಮನ ಕೇಂದ್ರೀಕರಿಸಿದೆ. ಅದಕ್ಕೆ ಬಿಡದಿಯಲ್ಲಿ ಸಂಘಟನಾ ಕಾರ್ಯಗಾರವನ್ನೂ ನಡೆಸಲಾಯಿತು. ಈಗ ಪಕ್ಷದ ಸಂಘಟನೆಯತ್ತಲೇ ನಾವು ಗಮನ ಇರಿಸಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಣದಿಂದಲೇ ಚುನಾವಣೆ ನಡೆದಿದೆ

ಉಪ ಚುನಾವಣೆಗಳು ನಡೆಯುವುದು ಹಣಬಲದಿಂದಲೇ ಎನ್ನುವುದು ಎಲ್ಲರೂ ಬಲ್ಲ ಸಂಗತಿ. ಸಿಂಧಗಿಯಲ್ಲಿ ಕೊನೆ ಆಟ ಎಂದಿದ್ದ ಸಚಿವರೊಬ್ಬರ ಹೇಳಿಕೆಯನ್ನು ಮಾಧ್ಯಮಗಳೇ ವರದಿ ಮಾಡಿವೆ. ಹಾನಗಲ್‌ ಮತ್ತು ಸಿಂಧಗಿ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ ಎನ್ನುವುದನ್ನು ಎಲ್ಲ ಮಾಧ್ಯಮಗಳೂ ವರದಿ ಮಾಡಿವೆ. ಬಿಜೆಪಿ- ಕಾಂಗ್ರೆಸ್‌ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ಇದೇ ಆಗಿದೆ. ಸಿದ್ದರಾಮಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಗಳ ಕಥೆ ಏನೂ ಎನ್ನುವುದು ತಿಳಿದ ವಿಷಯವೇ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.‌

ಈ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಾರೆ ಎಂದು ಅವರು ಹೇಳಿದರು.

8ರಿಂದ ಜಿಲ್ಲಾವಾರು ಸಭೆ

ಇದೇ ನವೆಂಬರ್‌ 8ರಿಂದ 16ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ. ಪದಾಧಿಕಾರಿಗಳು ಹಾಗೂ ಸಂಭನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ 2023ಕ್ಕೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

Tags: bjpby electionCongresshanagalhd kumaraswamyjdskarnatakaPoliticssindagi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು

ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ, ಕೈಗಾರಿಕೆ-ಉದ್ಯೋಗ ಪೂರಕ ಶಿಕ್ಷಣ; ರಾಜ್ಯದ 150 ಐಟಿಐಗಳ ಆಮೂಲಾಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚ

5 years ago
ಗುಡಿಬಂಡೆ ಅರಣ್ಯದ 284 ಎಕರೆ ನುಂಗಿದ ಗೌರಿಬಿದನೂರು ಕಂದಾಯ ಇಲಾಖೆ

ಗುಡಿಬಂಡೆ ಅರಣ್ಯದ 284 ಎಕರೆ ನುಂಗಿದ ಗೌರಿಬಿದನೂರು ಕಂದಾಯ ಇಲಾಖೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ