• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ

cknewsnow desk by cknewsnow desk
November 10, 2021
in STATE
Reading Time: 1 min read
0
ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ
956
VIEWS
FacebookTwitterWhatsuplinkedinEmail

ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

  • ಸಿದ್ದರಾಮಯ್ಯ ಕಾಲದಲ್ಲಿಯೇ ಬೆಳಕಿಗೆ ಬಂದಿದ್ದ ಬಿಟ್ ಕಾಯಿನ್ ದಂಧೆ
  • ಐದು ವರ್ಷ ಆಡಳಿತ ನಡೆಸಿದವರೂ ಸುಮ್ಮನೆ ಮಾತನಾಡುತ್ತಿದ್ದಾರೆ!
  • ಪ್ರಧಾನಿ ಮೋದಿ ಅವರಿಗೆ ಎಲ್ಲ ಮಾಹಿತಿ ಹೋಗಿದೆ ಎಂದ ದಳಪತಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು ಅವರು.

ಕೆಲ ದಿನಗಳಿಂದ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಬಿಟ್ ಕಾಯಿನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ದಿಲ್ಲಿಯಲ್ಲಿ ರಫೆಲ್ ಯುದ್ಧ ವಿಮಾನಗಳ ಖರೀದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಎರಡೂ ಪಕ್ಷಗಳ ಕೆಸರೆರಚಾಟದಲ್ಲಿ ನಿರತವಾಗಿವೆ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಬಿಟ್ ಕಾಯಿನ್ ಹಗರಣ ಬಗ್ಗೆ ಗಂಭೀರ ನಿಲುವು ತಾಳಬೇಕು. ಸರಕಾರ ಪ್ರಾರಂಭಿಕ ಹಂತದಲ್ಲಿ ಪ್ರಚಾರಕ್ಕೆ ಮಾತ್ರ ಚರ್ಚೆ ಮಾಡಿ ನಂತರ ನಿರ್ಲಕ್ಷ್ಯ ಮಾಡುವುದು ಬೇಡ. 2016-17ರಿಂದಲೂ ಈ ಹಗರಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಆಗಲೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಆಗಲೇ ಅವರು ಕಠಿಣವಾಗಿ ವರ್ತಿಸಿ ಪ್ರಾರಂಭಿಕ ಹಂತದಲ್ಲೇ ಕ್ರಮ ತೆಗೆದುಕೊಂಡಿದ್ದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ದಂಧೆ ನಡೆಯುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ತನಿಖೆಯಲ್ಲಿ ಜಾರಿ ನಿರ್ದೇಶನಾಲಯ ತೊಡಗಿದೆ ಎನ್ನುವ ಮಾಹಿತಿ ಇದೆ. ಸರಕಾರ ನಡೆಸುವವರು, ಸರಕಾರದ ಅಧೀನ ಸಂಸ್ಥೆಗಳು ಜನರಿಗೆ ಸರಿಯದ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನಂತೂ ನಿಖರ ಮಾಹಿತಿ‌ ಇಲ್ಲದೆ ಯಾವುದೇ ಹೇಳಿಕೆ ನೀಡಲು ತಯಾರಿಲ್ಲ. ಆದರೆ, ಜನರ ಮುಂದೆ ವಾಸ್ತವಾಂಶ ಇಡಲು ಯಾರು ತಯಾರಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ನಾಲ್ಕು ಜನರಿಗೆ ತೊಂದರೆ ಕೊಡುವುದರಿಂದ ಉಪಯೋಗ ಇಲ್ಲ. ಆಗಿರುವ ಲೋಪವನ್ನು ಸರಕಾರ ಸರಿ ಮಾಡಬೇಕು. ಇನ್ನು, ಕೇಂದ್ರ ಸರಕಾರದ ಆದೇಶದ ಮೇರೆಗೆ ಇಡಿ ತನಿಖೆಗೆ ಶಿಫಾರಸು ಮಾಡಿದ್ದಾರೋ ಅಥವಾ ರಾಜ್ಯ ಸರಕಾರವೇ ಶಿಫಾರಸು ಮಾಡಿದೆಯೋ ಗೊತ್ತಿಲ್ಲ. ಇದರ ಮೇಲೆ ಕೂಡ ಈಗ ಚರ್ಚೆ ನಡೆಯುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲ್ಲಾ ಮಾಹಿತಿ ರವಾನೆಯಾಗಿದೆ. ಆದರೆ, ರಾಜ್ಯ ಸರಕಾರ ಏನು ಮಾಡುತ್ತದೆಯೋ ನೋಡೋಣ ಎಂದು ಹೆಚ್ ಡಿಕೆ ಅವರು ಹೇಳಿದರು.

ಕಾಂಗ್ರೆಸ್ ನಾಯಕರು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಲ್ಲಿಯೂ ಸರಕಾರದ ಅಧಿಕಾರಿಗಳೇ ಇರುತ್ತಾರೆ. ನ್ಯಾಯಾಂಗ ತನಿಖೆ ವರದಿ ಕೂಡ ಎಲ್ಲಿಗೆ ತೆಗೆದುಕೊಂಡು ಹೋಗಿ ನಿಲ್ಲಿಸುತ್ತಾರೆ? ಹಿಂದೆ ಅರ್ಕಾವತಿ ಡಿನೋಟಿಫಿಕೇಷನ್ ಬಗ್ಗೆ ತನಿಖೆ ನಡೆಸಿದ ನ್ಯಾ. ಕೆಂಪಣ್ಣ ಆಯೋಗದ ವರದಿ ಏನಾಯಿತು? ಬಿಟ್ ಕಾಯಿನ್ ತನಿಖೆ ವರದಿಯ ಗತಿಯೂ ಅಷ್ಟೇ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಮಾರ್ಮಕವಾಗಿ ಹೇಳಿದರು.

ರಾಜ್ಯದಲ್ಲಿ ಐದು ವರ್ಷ ಸರಕಾರ ನಡೆಸಿದವರು ಸುಮ್ಮನೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದ ಪ್ರಯೋಜನ ಏನು? ಈಗ ಮಾತನಾಡುವ ಬದಲು ತಮ್ಮ ಕಾಲದಲ್ಲಿಯೇ ಕ್ರಮ ವಹಿಸಿದ್ದರೆ ಬಿಟ್ ಕಾಯಿನ್ ದಂಧೆ ಇಷ್ಟು ದೂರ ಬರುತ್ತಿರಲಿಲ್ಲ. ಆಗ ಸುಮ್ಮನಿದ್ದು ಈಗ ಜನರ ಮುಂದೆ ಹೇಳಿಕೆಗಳಿಗೆ ಮಾತ್ರ ಸೀಮಿತವಾಗಿದ್ದರೆ ಎಂದು ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು.

ನನಗೆ ಈಗ ಪಕ್ಷ ಸಂಘಟನೆ ಮುಖ್ಯ. ನನ್ನ ಗುರಿ ಏನಿದ್ದರೂ 2023ರ ಚುನಾವಣೆ. ವಿಧಾನ ಪರಿಷತ್ ಚುನಾವಣೆ ಬಗ್ಗೆಯೂ ನಮ್ಮ ಪಕ್ಷ ಗಂಭೀರವಾಗಿದೆ. ಅನಗತ್ಯ ವಿಷಯಗಳು ನನಗೆ ಬೇಕಿಲ್ಲ. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಜನರು ಗಮನಿಸುತ್ತಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು

ವಿಧಾನ ಪರಿಷತ್; ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು.

ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಉಳಿದಂತೆ, ಹಾಸನದ ವಿಚಾರ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು ಬಿಜಾಪುರ, ಕಲಬುರ್ಗಿಯಲ್ಲು ನಮ್ಮ ಅಭ್ಯರ್ಥಿಗಳನ್ನು ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

Tags: bitcoinbjpcknewsnowCongresshd kumaraswamyjdskarnataka bitcoin scamenews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಬಿಜೆಪಿ ಶಾಸಕರು, ಸಚಿವರ ರಹಸ್ಯ ಸಭೆ

Leave a Reply Cancel reply

Your email address will not be published. Required fields are marked *

Recommended

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

2 years ago
ಹೈಕಮಾಂಡ್ ಅಮ್ಮನಂತೆ ಎಂದಿದ್ದ ಡಿಕೆಶಿ ಆವತ್ತೊಂದು ದಿನ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು!

ವ್ಯಕ್ತಿಪೂಜೆಗಲ್ಲ, ಪಕ್ಷಪೂಜೆಗೆ ಮಾತ್ರ ಅವಕಾಶ: ಶಾಸಕ ಜಮೀರ್‌ ಅಹಮದ್‌ಗೆ ನೇರವಾಗಿ ಟಾಂಗ್‌ ಕೊಟ್ಟ ಡಿ.ಕೆ.ಶಿವಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ