• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

cknewsnow desk by cknewsnow desk
November 15, 2021
in CHIKKABALLAPUR, STATE
Reading Time: 2 mins read
0
ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ
1.1k
VIEWS
FacebookTwitterWhatsuplinkedinEmail

ಮನೆ ಮನೆಗೂ ತೆರಳಿ ಮತಯಾಚನೆ: ನ.21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೂ ಮತದಾನ; ನ.24ರಂದು ಫಲಿತಾಂಶ

By GS Bharath Gudibande

ಗುಡಿಬಂಡೆ/ಚಿಕ್ಕಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ಮುಂದಕ್ಕೆ ಹೋಗಿ ತಡವಾಗಿತ್ತು, ಈಗ ಕಸಾಪ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದಂತೆ ವಿಶ್ರಾಂತಿಯಲ್ಲಿದ್ದ ಅಭ್ಯರ್ಥಿಗಳು ಕಣ್ಣಕ್ಕಿಳಿದು ಪ್ರಚಾರದ ಅಬ್ಬರ ಶುರು ಮಾಡಿದ್ದಾರೆ. ಅವಿರೋಧ ಆಯ್ಕೆಯ ಕನಸು ಕಂಡಿದ್ದ ಜಿಲ್ಲಾ ಸಾಹಿತ್ಯ ಬಳಗಕ್ಕೆ ಈಗ ಮತದಾನ ಅನಿವಾರ್ಯತೆ ಉಂಟಾಗಿ ನಿರಾಶೆ ಆಗಿದೆ.

ಈ ತಿಂಗಳ 21ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಪ್ರಚಾರದ ಅಬ್ಬರ ಜೋರಾಗಿದೆ.

ಕನ್ನಡ ನಾಡಿನ ನಾಡು-ನುಡಿ, ಭಾಷೆ, ಸಂಸ್ಕೃತಿ, ಗಡಿ ಪ್ರದೇಶದಲ್ಲಿ ಕನ್ನಡದ ಉಳಿವಿಗೆಂದೆ ಅಸ್ತಿತ್ವದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಪ್ರಚಾರವು ದಿನದಿಂದ ಕಾವೇರುತ್ತಿದೆ.

ನವೆಂಬರ್‌ 21ರಂದು ಮತದಾನ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನ.21ರಂದು ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳಂತೆ, ಪ್ರಚಾರ, ಗುಂಪುಗಾರಿಕೆ, ಜಾತಿ ರಾಜಕೀಯದ ಲೆಕ್ಕಾಚಾರಗಳು ವಿಪರೀತ ಎನ್ನುವಂತ ಹಂತ ಮುಟ್ಟಿವೆ. ಕಸಾಪ ಸದಸ್ಯತ್ವ ಪಡೆದ ಮೂರು ವರ್ಷಗಳಾದ ಸದಸ್ಯರು ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಈಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಅವರೆಲ್ಲರ ಮನೆ ಬಾಗಿಲು ತಟ್ಟುತ್ತಿದ್ದಾರೆ.

ಡಾ.ಕೋಡಿ ರಂಗಪ್ಪ ಮತ್ತು ಕೈವಾರ ಶ್ರೀನಿವಾಸ್

ಕಣದಲ್ಲಿ ಯಾರಿದ್ದಾರೆ?

ಈಗಾಗಲೇ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಡಾ. ಕೈವಾರ ಶ್ರೀನಿವಾಸ್ ಈ ಸಲವೂ ಕಣಕ್ಕಿಳಿದಿದ್ದಾರೆ. ವೃತ್ತಿಯಲ್ಲಿ ಕನ್ನಡ ಶಿಕ್ಷಕರಾಗಿ, ಕನ್ನಡಕ್ಕಾಗಿ ಹಲವು ಹೋರಾಟ, ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಮತ್ತೊಬ್ಬರು ಶಿಕ್ಷಣತಜ್ಞ ಡಾ.ಕೋಡಿ ರಂಗಪ್ಪ ಅವರು ಹೊಸದಾಗಿ ಅಖಾಡಕ್ಕೆ ಇಳಿದಿದ್ದಾರೆ. ಮತದಾರರು ಯಾರ ಮೇಲೆ ಒಲವು ತೋರಲಿದ್ದಾರೆ ಎನ್ನುವುದು ನಿಗೂಢವಾಗಿದೆ.

ರಜೆ ದಿನ ಮತ್ತು ಸಂಜೆ ವೇಳೆ ಪ್ರಚಾರ

ಕಸಾಪ ಸದಸ್ಯರಲ್ಲಿ ಬಹುತೇಕರು ಸರಕಾರಿ ನೌಕರರೇ ಆಗಿರುವುದರಿಂದ ಕಸಾಪ ಸದಸ್ಯರನ್ನು (ಮತದಾರರನ್ನು) ಭೇಟಿ ಮಾಡಲು ರಜೆ ಅಥವಾ ಸಾಯಂಕಾಲದ ವೇಳೆ ಸೂಕ್ತವಾಗಿದ್ದು, ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಕೈವಾರ ಶ್ರೀನಿವಾಸ್ ಮತ್ತು ಕೋಡಿ ರಂಗಪ್ಪ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದು, ವಿಜಯಮಾಲೆ ಯಾರಿಗೆ ಒಲಿಯಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರು ತಾಲೂಕುಗಳಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಟ್ಟು 6,400 ಸದಸ್ಯರಿದ್ದಾರೆ ಎಂದು ಅಂದಾಜಿಸಲಾಗಿದೆ.

  • ಚಿಕ್ಕಬಳ್ಳಾಪುರ: 2119
  • ಬಾಗೇಪಲ್ಲಿ: 219
  • ಗುಡಿಬಂಡೆ: 535
  • ಗೌರಿಬಿದನೂರು: 850
  • ಶಿಡ್ಲಘಟ್ಟ: 1818
  • ಚಿಂತಾಮಣಿ: 1350

ನವೆಂಬರ್‌ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ, ಬಾಗೇಪಲ್ಲಿ, ಚಿಂತಾಮಣಿ ತಾಲೂಕು ಕಚೇರಿಗಳಲ್ಲಿ ಮತಗಟ್ಟೆಗಳಿರುತ್ತವೆ. ಜತೆಗೆ; ಒಂದು ಸಾವಿರಕ್ಕೂ ಹೆಚ್ಚು ಮತದಾರರು ಇರುವ ಕಡೆ ಎರಡು ಮತಗಟ್ಟೆಗಳನ್ನು ತೆರೆಯಲಾಗುವುದು. ಆಯಾ ತಾಲೂಕಿನ ತಹಸೀಲ್ದಾರ್‌ ಅವರು ಚುನಾವಣಾ ಅಧಿಕಾರಿ ಆಗಿರುತ್ತಾರೆ.

ಕೇಂದ್ರ ಸಾಹಿತ್ಯ ಪರಿಷತ್‌ಗೂ ಅಂದೇ ಚುನಾವಣೆ

ನವೆಂಬರ್‌ 21ರಂದೇ ಕೇಂದ್ರ ಸಾಹಿತ್ಯ ಪರಿಷತ್ತಿಗೂ ಚುನಾವಣೆ ನಡೆಯುತ್ತದೆ. ರಾಜ್ಯಾದ್ಯಂತ 3,10,109 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲಿದ್ದಾರೆ. ರಾಜ್ಯದ ತಾಲೂಕು ಕೇಂದ್ರಗಳು ಸೇರಿ  ಬೆಂಗಳೂರು ನಗರದಲ್ಲಿ 27 ವಿಧಾನಸಭಾ ಕ್ಷೇತ್ರದ ಆಯ್ದ ಸ್ಥಳಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ವ.ಚ.ಚನ್ನೇಗೌಡ, ಡಾ.ಮಹೇಶ್ ಜೋಶಿ, ರಾಜಶೇಖರ ಮುಲಾಲಿ ಸೇರಿದಂತೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Tags: chikkaballapuracknewsnowkaiwara gopinathkannadakannada sahitya parishat‌ electionkarnatakakasapakodi rangappanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಂತಾಮಣಿಯ ಮಿಟ್ಟಹಳ್ಳಿಯಲ್ಲಿ ನಿಲ್ಲದ ಶಬ್ದ

ಚಿಂತಾಮಣಿಯ ಮಿಟ್ಟಹಳ್ಳಿಯಲ್ಲಿ ನಿಲ್ಲದ ಶಬ್ದ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಟೆಕ್‌ ಸಮಿಟ್-‌2020 ಮುಂದಿನದು ಈಗಲೇ ಎಂದ ಕರ್ನಾಟಕ

ಬೆಂಗಳೂರು ಟೆಕ್‌ ಸಮಿಟ್-‌2020 ಮುಂದಿನದು ಈಗಲೇ ಎಂದ ಕರ್ನಾಟಕ

5 years ago
ಚಿಕ್ಕಬಳ್ಳಾಪುರ, ಕೋಲಾರವನ್ನು ಭೂ ರಣಹದ್ದುಗಳಿಗಿಟ್ಟ ಬಿಜೆಪಿಯಿಂದ ಈಗ ಗ್ರಾಮ ಸ್ವರಾಜ್ಯದ ಭಜನೆ!

ಗ್ರೇಟರ್‌ ಹೈದರಾಬಾದ್ ಚುನಾವಣೆಯಲ್ಲಿ‌ ಐವತ್ತರ ಹತ್ತಿರಕ್ಕೆ ಬಂದು ನಿಂತ ಬಿಜೆಪಿಗೆ ಇದು ಜಸ್ಟ್‌ ಬಿಗಿನಿಂಗ್‌ ಮಾತ್ರವೇ!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ