• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬೆಂಗಳೂರು ಬಿಟಿಎಸ್’ನಲ್ಲಿ ನೊಬೆಲ್ ಪುರಸ್ಕೃತ ವಿಜ್ಞಾನಿ ವೆಂಕಿ ರಾಮಕೃಷ್ಣನ್

P K Channakrishna by P K Channakrishna
November 18, 2021
in NATION, STATE, TECH, WORLD
Reading Time: 1 min read
0
ಬೆಂಗಳೂರು ಬಿಟಿಎಸ್’ನಲ್ಲಿ ನೊಬೆಲ್ ಪುರಸ್ಕೃತ ವಿಜ್ಞಾನಿ ವೆಂಕಿ  ರಾಮಕೃಷ್ಣನ್

Venki Ramakrishnan photo courtesy: Wikipedia

944
VIEWS
FacebookTwitterWhatsuplinkedinEmail

ಆಹಾರ ಭದ್ರತೆ, ಸುಸ್ಥಿರ ಇಂಧನ, ಆರೋಗ್ಯ ಕ್ಷೇತ್ರದಲ್ಲಿ ಸಂಶೋಧನೆಗೆ ಹೂಡಿಕೆ ಹೆಚ್ಚಿಸಿ

ಬೆಂಗಳೂರು: ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿದಲ್ಲಿ ಮಾತ್ರ ಭವಿಷ್ಯ ಸುಭದ್ರವಾಗಿರುತ್ತದೆ.  ಆಹಾರ ಸುಭದ್ರತೆ, ಸುಸ್ಥಿರ ಇಂಧನ ಮತ್ತು ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗಾಗಿ ನಿರಂತರವಾಗಿ ಅಧ್ಯಯನ ಮತ್ತು ಸಂಶೋಧನೆಗಳು ನಡೆಯುವುದು ಅವಶ್ಯಕ ಎಂದು ನೊಬೆಲ್ ಪುರಸ್ಕೃತ ವಿಜ್ಞಾನಿ ವೆಂಕಿ ರಾಮಕೃಷ್ಣನ್ ಅಭಿಪ್ರಾಯಪಟ್ಟರು.

ಇಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ನಡೆದ ‘ವಿದ್ವತ್ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿ ಹೆಚ್ಚಿಸುವ ಕ್ಷೇತ್ರಗಳಲ್ಲಿ ಸಂಶೋಧನೆಗಳನ್ನು ನಡೆಸುವ ಸಾಧ್ಯತೆಗಳು ಹೆಚ್ಚಬೇಕು ಎಂದರು.

ಗೂಗಲ್, ಮೈಕ್ರೊಸಾಫ್ಟ್ ಅಂತಹ ಖಾಸಗಿ ಸಂಸ್ಥೆಗಳು ಸಹ ಸಂಶೋಧನಾ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿವೆ. ಕಡಿಮೆ ದರದಲ್ಲಿ ದೊರಕುವ ಉದ್ಯೋಗಿಗಳಿಂದ ಆರ್ಥಿಕತೆ ಬೆಳೆಯುವುದಿಲ್ಲ, ಬದಲಾಗಿ ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಹೆಚ್ಚು ಹೂಡಿಕೆ ಮಾಡಿದಲ್ಲಿ ಮಾತ್ರ ಭವಿಷ್ಯ ಸುಭದ್ರವಾಗಿರಲಿದೆ. ಈಗ ಭಾರತದಲ್ಲಿ ಸಂಶೋಧನೆಗಳಿಗಾಗಿ ಜಿ.ಡಿ.ಪಿ.ಯ ಶೇ 0.8ರಷ್ಟು ಹೂಡಿಕೆಯಾಗುತ್ತಿದ್ದು, ಇದು ಕೊರಿಯಾ, ಜಪಾನ್ ಮತ್ತಿತರ ದೇಶಗಳಿಗೆ ಹೋಲಿಸಿದರೆ ಶೇ 25ಕ್ಕಿಂತ ಕಡಿಮೆ ಇದೆ. ಆದರೂ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವುದು ಸಮಾಧಾನಕರ ಎಂದರು.

ಸಂಶೋಧನೆ ಮತ್ತು ತಂತ್ರಜ್ಞಾನ ಪರಸ್ಪರ ಪೂರಕ.  ಯಾವುದೇ ದೇಶದ ಬೆಳವಣಿಗೆಯು ಅಲ್ಲಿನ ನೈಸರ್ಗಿಕ ಸಂಪನ್ಮೂಲಗಳಿಗಿಂತ  ಜ್ಞಾನ ಮತ್ತು ಸಂಶೋಧನೆಯ ಮೇಲೆ ಅವಲಂಬಿತವಾಗಿರುತ್ತದೆ. ತಂತ್ರಜ್ಞಾನ ಮತ್ತು ಸಂಶೋಧನೆಗಳಿಗೆ ಹೆಚ್ಚು ತೆರೆದುಕೊಂಡಿಲ್ಲದ ರಾಷ್ಟ್ರಗಳು ಅಭಿವೃದ್ಧಿ ಹೊಂದಿಲ್ಲ ಎಂದು ಪ್ರೊ. ವೆಂಕಿ ರಾಮಕೃಷ್ಣನ್ ಅಭಿಪ್ರಾಯಪಟ್ಟರು.

ಇಂದು ಜಗತ್ತಿನ ಟ್ರಿಲಿಯನ್ ಗಟ್ಟಲೆ ಡಾಲರ್ ವ್ಯವಹಾರ ನಡೆಸುವ ಹಲವು ಕಂಪನಿಗಳು ಹುಟ್ಟಿರುವುದಕ್ಕೆ ಹೊಸ ಸಂಶೋಧನೆಗಳೇ ಕಾರಣ.  ಕ್ವಾಂಟಮ್ ವಿಜ್ಞಾನದ ಅಧ್ಯಯನದ ಫಲವಾಗಿ ಟ್ರಾನ್ಸಿಸ್ಟರ್. ಲೇಸರ್ನಂತಹ ಹೊಸ ಶೋಧನೆಗಳು ಸಾಧ್ಯವಾದವು. ನ್ಯೂಟನ್ ಅವರ ‘ಲಾ ಆಫ್ ಮೋಷನ್’ ಬಳಸಿ ರಾಕೆಟ್, ಉಪಗ್ರಹಗಳ ಉಡಾವಣೆಯಲ್ಲಿ ಬಹಳ ದೊಡ್ಡ ಸಾಧನೆ ಸಾಧ್ಯವಾಯಿತು. ಜಿಪಿಎಸ್ ಅನ್ವೇಷಣೆಯ ಹಿಂದಿನ ತತ್ವವು ಆಲ್ಬರ್ಟ್ ಐನ್ ಸ್ಟೀನ್ ಅವರ ‘ಥಿಯರಿ ಆಫ್ ರಿಲೇಟಿವಿಟಿ’ಯನ್ನು ಆಧರಿಸಿದೆ ಎಂದು ವಿವರಿಸಿದರು.

ಕೋವಿಡ್ ಸಂದರ್ಭದಲ್ಲಿ ನೀಡಲಾದ ಲಸಿಕೆಯ ಶೋಧನೆಯ ಹಿಂದೆ ಸುಮಾರು 1965-2018ರ ನಡುವಿನ ಹಲವು ಶೋಧನೆಗಳು ನೆರವಿಗೆ ಬಂದಿವೆ ಎಂದ ಅವರು, ತಮ್ಮ ಸಂಶೋಧನೆಯ ರೈಬೋಸೋಮ್ಸ್ ಅಧ್ಯಯನವು ಕೋವಿಡ್ ಲಸಿಕೆ ತಯಾರಿಕೆಯಲ್ಲಿ ನೆರವಾದ ಬಗೆ, ಇನ್ನಿತರ ಪೂರಕ ಶೋಧನೆಗಳ ಬಗ್ಗೆ ವಿಷಯಗಳನ್ನು ಹಂಚಿಕೊಂಡರು.

ಬೆಂಗಳೂರು ಜಗತ್ತಿನ ತಂತ್ರಜ್ಞಾನದ ಬೇಡಿಕೆಯನ್ನು ಪೂರೈಸುವ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ಕೋವಿಡ್ ನಂತರ ಜಗತ್ತಿನ ಡಿಜಿಟಲ್ ಎಕಾನಮಿ ವ್ಯವಸ್ಥೆಯು ಬಹು ದೊಡ್ಡ ಸ್ಥಿತ್ಯಂತರವನ್ನು ಕಂಡಿದ್ದು, ಭಾರತದಲ್ಲೇ  ನೂರು ಕೋಟಿ ವ್ಯವಹಾರ ನಡೆಸುವಂತೆ ಸಾಧ್ಯವಾಗಿದ್ದು ತಂತ್ರಜ್ಞಾನದ ಪ್ರಭಾವದಿಂದ ಎಂದು ಕಿಂಡ್ರೆಲ್ ಕಂಪನಿಯ ಸಿಇಒ ಮಾರ್ಟಿನ್ ಶ್ರೋಟರ್  ಅಭಿಪ್ರಾಯಪಟ್ಟರು.

ಸಾಮಾಜಿಕ ಜೀವನ, ವೈದ್ಯವೃತ್ತಿ, ಉದ್ಯೋಗಗಳು, ಕೃಷಿ-ಆಹಾರ ಉತ್ಪನ್ನಗಳ ಕ್ಷೇತ್ರಗಳ ಕಾರ್ಯಶೈಲಿಯಲ್ಲಿ ಕೋವಿಡ್ ತರುವಾಯದ ಸಮಗ್ರ ಬದಲಾವಣೆಗೆ ತಂತ್ರಜ್ಞಾನವು ಸಹಾಯಕವಾಗಿ ಒದಗಿಬಂದಿದೆ.

2020ರ ವೇಳೆಗೆ ಭಾರತದಲ್ಲಿ 500 ದಶಲಕ್ಷ ಸ್ಮಾರ್ಟ್ ಫೋನ್ ಬಳಕೆದಾರರಿದ್ದರೆ, ಈಗ ಅದು 820 ದಶಲಕ್ಷಕ್ಕೆ ಹೆಚ್ಚಾಗಿದೆ. ಭಾರತ ಸರ್ಕಾರವು ಕೇವಲ 278 ದಿನಗಳಲ್ಲಿ 100 ಕೋಟಿ ಕೋವಿಡ್ ಲಸಿಕೆ ನೀಡಿರುವುದು ದೊಡ್ಡ ಸಾಧನೆಯಾಗಿದೆ. ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದಲ್ಲಿ ಭವಿಷ್ಯ ಉಜ್ವಲವಾಗಿದ್ದು ದತ್ತಾಂಶಗಳ ಬಳಕೆ ಮತ್ತು ನಿರ್ವಹಣೆ ಮೂಲಕ ಮಹತ್ತನ್ನು ಸಾಧಿಸಬಹುದು ಎಂದು ಹೇಳಿದರು.

ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಅವರು ನೊಬೆಲ್ ಪುರಸ್ಕೃತ ವಿಜ್ಞಾನಿ ವೆಂಕಿ ರಾಮಕೃಷ್ಣನ್ ಅವರ ಬದುಕು-ಸಾಧನೆಗಳ ಕಿರುಪರಿಚಯ ಮಾಡಿದರು.

Tags: bengaluru tech summitBiophysicistbtskarnatakapresident of the Royal SocietyscientistVenki Ramakrishnan
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

Leave a Reply Cancel reply

Your email address will not be published. Required fields are marked *

Recommended

ವಿಜಯಶಾಂತಿ ಬಿಜೆಪಿಗೆ ರೀ ಎಂಟ್ರಿ ಕೊಟ್ಟಿದ್ದೇಕೆ? ಎಲ್ಲಿಂದ ಹೊರಟಿರೋ ಮತ್ತೆ ಅಲ್ಲಿಗೇ ಬಂದು ನಿಂತ ಲೇಡಿ ಸೂಪರ್‌ಸ್ಟಾರ್

ವಿಜಯಶಾಂತಿ ಬಿಜೆಪಿಗೆ ರೀ ಎಂಟ್ರಿ ಕೊಟ್ಟಿದ್ದೇಕೆ? ಎಲ್ಲಿಂದ ಹೊರಟಿರೋ ಮತ್ತೆ ಅಲ್ಲಿಗೇ ಬಂದು ನಿಂತ ಲೇಡಿ ಸೂಪರ್‌ಸ್ಟಾರ್

5 years ago
ಮೈಸೂರಿನಲ್ಲಿ ಮುಗಿದ ಪೆಟ್ರೋಮ್ಯಾಕ್ಸ್; ನೀರ್ ದೋಸೆ ಡೈರೆಕ್ಟರ್ ಸಿನಿಮಾದಲ್ಲಿದೆಯಾ ಡಬಲ್ ಮೀನಿಂಗ್ ಡೈಲಾಗು

ಮೈಸೂರಿನಲ್ಲಿ ಮುಗಿದ ಪೆಟ್ರೋಮ್ಯಾಕ್ಸ್; ನೀರ್ ದೋಸೆ ಡೈರೆಕ್ಟರ್ ಸಿನಿಮಾದಲ್ಲಿದೆಯಾ ಡಬಲ್ ಮೀನಿಂಗ್ ಡೈಲಾಗು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ