• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಳೆ ಅಬ್ಬರ ತಗ್ಗಿದ 45 ದಿನಗಳ ನಂತರ ಗುಡಿಬಂಡೆಯಲ್ಲಿ ಪ್ರತ್ಯಕ್ಷರಾದರು ಡೀಸಿ ಮೇಡಮ್!

cknewsnow desk by cknewsnow desk
November 20, 2021
in CHIKKABALLAPUR, EDITORS'S PICKS, STATE
Reading Time: 1 min read
0
ಮಳೆ ಅಬ್ಬರ ತಗ್ಗಿದ 45 ದಿನಗಳ ನಂತರ ಗುಡಿಬಂಡೆಯಲ್ಲಿ ಪ್ರತ್ಯಕ್ಷರಾದರು ಡೀಸಿ ಮೇಡಮ್!
1.6k
VIEWS
FacebookTwitterWhatsuplinkedinEmail

ಅಮಾನಿ ಭೈರಸಾಗರ ಕಟ್ಟೆಗೆ ಬಂದು ಕಾರು ಹತ್ತಿದ ಜಿಲ್ಲಾಧಿಕಾರಿ; ಜಲಪೀಡಿತ ಗುಡಿಬಂಡೆ ಬಗ್ಗೆ ಮಲತಾಯಿ ದೋರಣೆ

  • ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ 357 ಕೋಟಿ ರೂ. ಬೆಳೆ ಹಾನಿ
  • 30,000 ಹೆಕ್ಟೇರ್ ರಾಗಿ, 5,200 ಹೆಕ್ಟೇರ್ ತೋಟಗಾರಿಕೆ ಬೆಳೆ ನೀರುಪಾಲು
  • ಅಮಾನಿ ಭೈರಸಾಗರ ಕೆರೆ ಕಟ್ಟೆ ದುರಸ್ತಿ ಮಾಡಲು ಶೀಘ್ರ ಕ್ರಮದ ಭರವಸೆ

By GS Bharath Gudibande.

ಗುಡಿಬಂಡೆ: ಸುಮಾರು ನಲವತ್ತೈದಕ್ಕೂ ಹೆಚ್ಚು ದಿನ ಗುಡಿಬಂಡೆ ತಾಲೂಕಿನ ಜನರು ಅತಿವೃಷ್ಟಿಯಿಂದ ನರಳಿದ ಮೇಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಡೀಸಿ ಮೇಡಮ್‌ʼನವರು ಜಲಪೀಡಿತ ತಾಲೂಕಿನಲ್ಲಿ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.

ಇಡೀ ರಾಜ್ಯದಲ್ಲಿಯೇ ಅತಿಹೆಚ್ಚು ಮಳೆಹಾನಿಗೆ ತುತ್ತಾದ ಎರಡನೇ ಜಿಲ್ಲೆ ಇದಾಗಿದ್ದು, ಅದರಲ್ಲಿಯೂ ಜಿಲ್ಲೆಯ ಎಲ್ಲಾ ತಾಲೂಕುಗಳ ಪೈಕಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಗುಡಿಬಂಡೆ. ಆದರೆ, ಒಂದೂವರೆ ತಿಂಗಳಿಂದ ಒಂದಲ್ಲ ಒಂದು ಜಲ ಸಂಕಷ್ಟಕ್ಕೆ ಸಿಲುಕಿದ್ದ ತಾಲೂಕಿಗೆ ಡೀಸಿ ಅವರು ಹೆಜ್ಜೆ ಇಟ್ಟಿರಲಿಲ್ಲ. ಅಂತೂ ಇವತ್ತು ಪ್ರತ್ಯಕ್ಷರಾಗಿ ಪರಿಶೀಲನೆ ನಡೆಸಿದ್ದಾರೆ.

ಉಕ್ಕಿ ಹರಿಯುತ್ತಿರುವ ಕುಶಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಗುಡಿಬಂಡೆಯ ಅಮಾನಿ ಭೈರಸಾಗರ ಕೆರೆ ಏರಿ ಸ್ಥಳವನ್ನು ಪಟ್ಟಣವು ನಾಲ್ಕೂ ದಿಕ್ಕುಗಳಿಂದ ಜಲದಿಗ್ಬಂಧನಕ್ಕೆ ಒಳಗಾದ ನಾಲ್ಕೈದು ದಿನಗಳ ನಂತರ ಮೇಡಮ್ ನವರು ಅಲ್ಲಿಗೆ ಪದಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸುರಕ್ಷತಾ  ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.

ಕುಶಾವತಿ ಜಲಾನಯನ ಪ್ರದೇಶಲ್ಲಿ ಭಾರೀ ಮಳೆಯಾಗಿ ಅಮಾನಿ ಭೈರಸಾಗರ ಕೋಡಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದೆ ಎಂದು ಮಾಧ್ಯಮಗಳು ನಿರಂತರವಾಗಿ ಸುದ್ದಿ ಮಾಡಿದರೂ ಜಿಲ್ಲಾಧಿಕಾರಿ ಆರ್.‌ಲತಾ ಅವರು ತಾಲೂಕಿನತ್ತ ಸುಳಿದಿರಲಿಲ್ಲ. ಅಲ್ಲದೆ, ಹಂಪಸಂದ್ರ, ಕಡೇಹಳ್ಳಿ ಸೇರಿದಂತೆ ತಾಲೂಕಿನ ಬಹುತೇಕ ಕೆರೆಗಳು ಉಕ್ಕಿ ತಾಲೂಕು ದ್ವೀಪದಂತೆ ಆದರೂ ಅವರು ಇತ್ತ ತಲೆ ಹಾಕಿಲಿಲ್ಲ. ಮನೆಗಳು ಕುಸಿದು ಜನರು ಆಸ್ಪತ್ರೆ ಪಾಲಾದರೂ, ಶಾಲೆಗಳು ಸೋರುತ್ತಾ ಕುಸಿದು ಬೀಳುವ ಸ್ಥಿತಿಯಲ್ಲಿದ್ದರೂ ಅವರು ಗುಡಿಬಂಡೆಯತ್ತ ಕಾಳಜಿಯಿಂದ ನೋಡಲೇ ಇಲ್ಲ.

ಅ‌ಷ್ಟೇ ಅಲ್ಲದೆ, ಕೆಲವೊತ್ತು ಕಾಟಾಚಾರಕ್ಕೆ ಅಮಾನಿ ಭೈರಸಾಗರ ಏರಿಯನ್ನು ಪರಿಶೀಲನೆ ಮಾಡಿದ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿ ಬಾಗೇಪಲ್ಲಿಯತ್ತ ಹೊರಟರು. ಅವರು ಗೌರಿಬಿದನೂರಿನಿಂದ ತಾಲೂಕಿಗೆ ಬಂದಿದ್ದರು. ಭಾರೀ ಮಳೆಯಿಂದ ತಾಲೂಕಿನ ಕೆಲ ಕೆರೆ ಕಟ್ಟೆಗಳು ಒಡೆದುಹೋಗುವ ಹಂತದಲ್ಲಿವೆ ಎಂದು ಸ್ಥಳೀಯರು ಅಲವತ್ತುಕೊಂಡರೂ ಕಿವಿಗೊಡದ ಜಿಲ್ಲಾಧಿಕಾರಿ ತರಾತುರಿಯಲ್ಲಿ ಅಲ್ಲಿಂದ ನಿರ್ಗಮಿಸಿದರು.

ಶನಿವಾರ ಮಳೆ ಕೋಮಚ ಬಿಡುವು ಕೊಟ್ಟ ಮೇಲೆ ಹಾಗೂ ಮಾಧ್ಯಮಗಳಲ್ಲಿ ಗುಡಿಬಂಡೆಯ ಮಳೆ ಸುದ್ದಿಗಳು ಭಾರೀ ಪ್ರಚಾರ ಪಡೆದ ಮೇಲೆ ಅವರು ತಾಲೂಕಿಗೆ ಭೇಟಿ ನೀಡಿದ್ದಾರೆ.

ಕಾಳಜಿ ಕೇಂದ್ರಗಳ ಸ್ಥಾಪನೆ

ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿಯೇ ದಾಖಲೆ ಪ್ರಮಾಣದ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗಿದೆ. ಪ್ರತೀ ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಕಾಳಜಿ ಕೇಂದ್ರಗಳನ್ನು  ತೆರೆಯಲಾಗಿದೆ. ಗೌರಿಬಿದನೂರು ಕಾಳಜಿ ಕೇಂದ್ರದಲ್ಲಿ 1,015 ಜನರಿಗೆ ಆಶ್ರಯ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ. ಆದರೆ, ನಲವತ್ತೈದು ದಿನಗಳಿಂದ ಮಳೆ ಸುರಿದರೆ, ಜಿಲ್ಲಾಡಳಿತ ಕಾಳಜಿ ಕೇಂದ್ರ ತೆರೆದಿರುವುದು ಎರಡು ಮೂರು ದಿನಗಳ ಹಿಂದೆ ಮಾತ್ರ.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮಳೆಯ ಅಬ್ಬರಕ್ಕೆ 40ಕ್ಕೂ ಹೆಚ್ವು ಹಳೆಯ ಮನೆಗಳು  ಸಂಪೂರ್ಣವಾಗಿ ಬಿದ್ದು ಹೋಗಿವೆ. ಇನ್ನೂ 500ಕ್ಕೂ ಹೆಚ್ಚು ಮನೆಗಳಿಗೆ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದೆ. ಮನೆಗಳನ್ನು ಕಳೆದುಕೊಂಡವರಿಗೆ ಶೀಘ್ರವೇ ವಸತಿ ಕಲ್ಪಸಲಾಗುವುದು ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಗ್ರಾಮಗಳಲ್ಲಿ 50% ಮಿ.ಮೀ.ಗಿಂತ ಹೆಚ್ಚು ಮಳೆ

ಕಳೆದ ಹಲವು ದಿನಗಳಿಂದ ಬೀಳುತ್ತಿರುವ ಮಳೆಗೆ ಜಿಲ್ಲೆಯ ಬಹುತೇಕ ಗ್ರಾಮಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಒಟ್ಟು 157 ಗ್ರಾಮ ಪಂಚಾಯತಿಯಲ್ಲಿ 70ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ 50% ಮಿ.ಮೀ. ಗಿಂತ ಹೆಚ್ಚು ಮಳೆಯಾಗಿದೆ. ಹಾಗಾಗಿ ಎಲ್ಲಾ ಕೆರೆ, ಕುಂಟೆ,  ಕಾಲುವೆಗಳು ತುಂಬಿ ಅವಾಂತರ ಸೃಷ್ಟಿಯಾಗಿದೆ ಅವರು ಹೇಳಿದರು.

357 ಕೋಟಿ ರೂ. ಮೌಲ್ಯದ ಬೆಳೆಹಾನಿ

ಎಡೆಬಿಡದೆ ಸುರಿದ ಭಾರೀ ಮಳೆಗೆ 30 ಸಾವಿರ ಹೆಕ್ಟೇರ್ ರಾಗಿ ಬೆಳೆಯಲ್ಲಿ ಅರ್ಧದಷ್ಟು ರಾಗಿ ಸಂಪೂರ್ಣ ನಾಶವಾಗಿದೆ. 5,200 ಹೆಕ್ಟೇರ್ ತೋಟಗಾರಿಕೆ ಬೆಳೆಗಳು, ಭತ್ತ, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣ ನಾಶವಾಗಿರುವುದು ನೋವಿನ ಸಂಗತಿ ಎಂದರು ಅವರು.

596 ಶಾಲಾ ಕೊಠಡಿಗಳಿಗೆ ಹಾನಿ

ಜಿಲ್ಲೆಯಲ್ಲಿ ಎಂದೂ ಕಂಡು ಕೇಳರಿಯದಷ್ಟು ಮಳೆಯಾಗಿದ್ದು, ಭಾರೀ ಮಳೆಗೆ ಜಿಲ್ಲೆಯ 457 ಶಾಲೆಗಳ 596 ತರಗತಿ ಕೊಠಡಿಗಳಿಗೆ ಹಾನಿಯಾಗಿದೆ. ಇವುಗಳ ರಿಪೇರಿಗೆ 6 ಕೋಟಿಗೂ ಹೆಚ್ಚು ಹಣ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಇನ್ನೂ 52 ಅಂಗನವಾಡಿ ಕೇಂದ್ರಗಳಿಗೂ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪಟ್ಟಣ ಪಂಚಾಯತಿ, ತಾಲೂಕು ಪಂಚಾಯತಿ, ಆರೋಗ್ಯ ಇಲಾಖೆ, ಹೀಗೆ ಎಲ್ಲಾ ಅಧಿಕಾರಿಗಳೆಲ್ಲರೂ ಹಗಲಿರುಳು ಮಳೆಯನ್ನು ಲೆಕ್ಕಿಸದೇ ಕೆಲಸ ಮಾಡಿದ್ದಾರೆ. ಇವರ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ 40-50 ವರ್ಷಗಳ ನಂತರ ಇಷ್ಟೊಂದು ಭಾರೀ ಮಳೆಯಾಗಿದೆ. ಇಡೀ ರಾಜ್ಯದಲ್ಲಿಯೇ ದಾಖಲೆಯ ಮಳೆಯಾಗಿರುವ ಎರಡನೇ ಜಿಲ್ಲೆ ಚಿಕ್ಕಬಳ್ಳಾಪುರ. ಕೃಷಿ, ತೋಟಗಾರಿಕೆ, ಮನೆಗಳು, ಶಾಲೆಗಳು, ಅಂಗನವಾಡಿ ಸೇರಿದಂತೆ ಮುಂತಾದವಕ್ಕೆ  ಹಾನಿಯಾಗಿದೆ. ಇಂದಿನಿಂದ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಪರಿಹಾರಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು.

ಆರ್.ಲತಾ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ

ತಾಲೂಕಿನಲ್ಲಿ ರಾಜ ಕಾಲುವೆಗಳ ಒತ್ತುವರಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಳೆ ನೀರು ತೋಟಗಳಿಗೆ ನುಗ್ಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಭತ್ತ, ರಾಗಿ, ಮುಸುಕಿನ ಜೋಳ, ಟೊಮ್ಯಾಟೊ, ಕ್ಯಾಪ್ಸಿಕಂ ಮುಂತಾದ ತರಕಾರಿ ಬೆಳೆಗಳು ಹಾಳಾಗಿದೆ. ಅತಿ ಜರೂರಾಗಿ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ಬೀಡುಗಡೆ ಮಾಡಬೇಕು.

ಶ್ರೀನಿವಾಸ್, ರೈತ
Tags: amaani bhyarasagarachikkaballapuracknewsnowdc visitdeputy commissionergudibandegudibande lakeheavy rain
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಮಳೆ & ನೆರೆ ನಿರ್ವಹಣೆ: ಸರಕಾರ-ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಮಾಲೂರಿನ ಕೆ.ಎಂ.ಕವಿತಾ ಅವರಿಗೆ ತುಮಕೂರು ವಿವಿಯಿಂದ ಪಿಎಚ್ ಡಿ ಪದವಿ

ಮಾಲೂರಿನ ಕೆ.ಎಂ.ಕವಿತಾ ಅವರಿಗೆ ತುಮಕೂರು ವಿವಿಯಿಂದ ಪಿಎಚ್ ಡಿ ಪದವಿ

5 years ago
ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

ಬಾಲ ಬಿಚ್ಚಿದ್ರೆ ಹುಷಾರ್‌! ಚಿಕ್ಕಬಳ್ಳಾಪುರ ಜಿಲ್ಲೆ ಕ್ವಾರಿ-ಕ್ರಷರ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಎಸ್‌ಪಿ ಮಿಥುನ್‌ ಕುಮಾರ್; ಸರ್ಕಲ್‌ ಇನಸ್ಪೆಕ್ಟರ್‌ಗಳು-ಸಬ್‌ ಇನಸ್ಪೆಕ್ಟರ್‌ಗಳಿಗೂ ಫುಲ್‌ ಕ್ಲಾಸ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ