• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮಳೆ & ನೆರೆ ನಿರ್ವಹಣೆ: ಸರಕಾರ-ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ

cknewsnow desk by cknewsnow desk
November 20, 2021
in POLITICS, STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
930
VIEWS
FacebookTwitterWhatsuplinkedinEmail

ಮಾಧ್ಯಮಗೋಷ್ಟಿಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇರ ಆರೋಪ

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ನಡುವೆ ಬಿಜೆಪಿ ನಾಯಕರು ಶಂಖ ಊದಲು ಹೋಗಿದ್ದಾರೆ!!

ಸಂದೇಶ್ ನಾಗರಾಜ್, ಸಿ.ಆರ್.ಮನೋಹರ್ ಪಕ್ಷಕ್ಕೆ ವಾಪಸ್ ಬರುವ ಬಗ್ಗೆ ಪ್ರಸ್ತಾಪ ಇಲ್ಲ

ಬೆಂಗಳೂರು: ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಇಡೀ ರಾಜ್ಯವೇ ನಡುಗಡ್ಡೆ ಆಗಿದ್ದರೂ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ನೆರೆ, ಮಳೆ ನಿರ್ವಹಣೆಯಲ್ಲಿ ಅಧಿಕಾರಿಗಳು ಮತ್ತು ಸರಕಾರದ ನಡುವೆ ಹೊಂದಾಣಿಕೆ, ಸಮನ್ವಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಮಾಡಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನೆರೆಯಿಂದ ರೈತರು ಬೀದಿಗೆ ಬಿದ್ದಿದ್ದಾರೆ. ಬೆಳೆದಿದ್ದ ಫಸಲು ಕೈಗೆ ಬಾರದೇ ಅನ್ನದಾತ ದುಃಖದಲ್ಲಿ ಇದ್ದಾನೆ. ಆದರೆ ಸಚಿವರು, ಶಾಸಕರು ಶಂಖ ಊದಿಕೊಂಡು ತಿರುಗುತ್ತಿದ್ದರೆ, ಅಧಿಕಾರಿಗಳು ಮಾತ್ರ ತಮ್ಮ ಪಾಡಿಗೆ ಅವರಿದ್ದಾರೆ ಎಂದು ಹೇಳಿದರು.

ಮಳೆಯಿಂದಾಗಿ ರೈತರಿಗೆ, ಗ್ರಾಹಕರಿಗೆ ನಿರಂತರ ಸಮಸ್ಯೆ ಆಗುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ನೆರೆಯಿಂದ ನಡುಗಡ್ಡೆಗಳಂತೆ ಆಗಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರು ಶಂಖ ಊದಲು ಹೋಗಿದ್ದಾರೆ. ಮುಖ್ಯಮಂತ್ರಿಗಳು ಕೂಡ ಹೋಗಿದ್ದಾರೋ ಏನೋ ಗೊತ್ತಿಲ್ಲ. ಆದರೆ ಈ ಎರಡೂ ಜಿಲ್ಲೆಗಳಲ್ಲಿ ಮಳೆ ಜಾಸ್ತಿ ಆಗಿದೆ. ನೀರು ಮನೆಗಳು ಮತ್ತು ತೋಟಗಳಿಗೆ ನುಗ್ಗಿದೆ. ಬೆಳೆದಿದ್ದ ಬೆಳೆ ನೆಲದ ಮೇಲೆ ಮಲಗಿದೆ. ಆದರೆ ಸರಕಾರ ಮಾತ್ರ ಅತೀವ ನಿರ್ಲಕ್ಷ್ಯ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಅಧಿಕಾರಿಗಳಿಗೆ ಮಳೆ ಪೀಡಿತ ಸ್ಥಳಕ್ಕೆ ಹೋಗಲು ಹೇಳಿದ್ದಾರೆ. ಆದರೆ ಮಂತ್ರಿಗಳಿಗೆ ಹೋಗಲು ಹೇಳಿಲ್ಲ. ಇದರ ಅರ್ಥವೇನು? ಆದರೆ ಯಾರೂ ಕೂಡ ಜನರ ಬಳಿ ಹೋಗಿಲ್ಲ. ಸರ್ಕಾರಕ್ಕೂ ಅಧಿಕಾರಿಗಳಿಗೂ ಸಮನ್ವಯವೇ ಇಲ್ಲ. ಸರ್ಕಾರಕ್ಕೆ ಜನರಿಗಿಂತ ಚುನಾವಣೆಯೇ ಮುಖ್ಯವಾಗಿದೆ. ನಿಮ್ಮ ಶಂಖ ನಾದವನ್ನು ಹದಿನೈದು ದಿನ ಮುಂದೂಡಿ. ಈಗ ಶಂಖ ಊದಿ ನೀವು ಯಾವ ಚುನಾವಣೆ ಗೆಲ್ಲಬೇಕು? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಸರಕಾರ ಮತ್ತು ಆಡಳಿತಾರೂಢ ಪಕ್ಷ ಬಿಜೆಪಿಗೆ ಬಿಸಿ ಮುಟ್ಟಿಸಿದರು.

ಸಾಧನೆಯ ಆಧಾರದ ಮೇಲೆ ಶಂಖ ಊದಿದರೆ ಪರಿಷತ್ ಚುನಾವಣೆ ಮೇಲೆ ಏನೂ ಪರಿಣಾಮ ಆಗಲ್ಲ. ನೀವು ಎಲ್ಲಿ ಕೂತರೂ ಚುನಾವಣೆ ಗೆಲ್ಲುತ್ತೀರಿ, ಹೇಗೆ ಗೆಲ್ಲಬೇಕು ಅಂತಾ ನಿಮಗೆ ಚೆನ್ನಾಗಿ ಗೊತ್ತಿದೆ ಎಂದು ಅವರು ಬಿಜೆಪಿ ಪಕ್ಷದ ಕಾಳೆದದರು.

ಗೃಹ ಸಚಿವರಿಗೆ ಪ್ರತ್ಯುತ್ತರ

ತಮ್ಮ ಬಗ್ಗೆ ಹಗುರವಾಗಿ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮಾಜಿ ಮುಖ್ಯಮಂತ್ರಿಗಳು ಟಾಂಗ್ ಕೊಟ್ಟಿದ್ದು ಹೀಗೆ;

ಕುಮಾರಸ್ವಾಮಿ ಅವರ ರೀತಿ ನಾವು ದಿನಕ್ಕೆರಡು ಬಾರಿ ಕ್ಯಾಮೆರಾ ಮುಂದೆ ಬರಲು ಆಗುತ್ತಾ? ಎಂದು ಗೃಹ ಸಚಿವರು ಕೇಳಿದ್ದಾರೆ. ಹೌದು, ನನಗೆ ಈಗ ಕೆಲಸ ಇಲ್ಲ. ಹಾಗಾಗಿ ಹೆಚ್ಚಾಗಿ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತೇನೆ. ಅವರು ನಾಡಿನ ಗೃಹ ಸಚಿವರು. ಅವರಿಗೆ ತುಂಬಾ ಕೆಲಸ ಇರುತ್ತದೆ.

ಬಿಜೆಪಿ ನಾಯಕರಷ್ಟು ನಾನು ಪ್ರಚಾರ ತೆಗೆದುಕೊಂಡಿಲ್ಲ. ನನಗೇನೂ ಕೆಲಸ ಇಲ್ಲ. ಅಧಿಕಾರ ಇಲ್ಲ, ಅದಕ್ಕೆ ಕ್ಯಾಮೆರಾ ಮುಂದೆ ಬರುತ್ತೇನೆ. ಸಚಿವರು ಹೇಳಿದ್ದು ಸರಿಯಾಗಿಯೇ ಇದೆ. ನನ್ನ ಪ್ರಕಾರ ಇಂತಹ ಗೃಹ ಸಚಿವರು ಈವರೆಗೆ ಬರಲೇ ಇಲ್ಲ.

ನನ್ನ ಬಗ್ಗೆ ಅವರು ಲಘುವಾಗಿ ಮಾತಾಡುವ ಅವಶ್ಯಕತೆ ಇಲ್ಲ. ಪಾಪ ಅವರು ಜನರ ಕಷ್ಟ ಕೇಳಲು ನಿದ್ದೆ ಕೂಡ ಮಾಡುತ್ತಿಲ್ಲ ಅನಿಸುತ್ತಿದೆ. ಜ್ಞಾನೇಂದ್ರ ಅವರ ಶಿವಮೊಗ್ಗ ಜಿಲ್ಲೆ ಹೇಗಿದೆ? ಅಡಿಕೆ ಬೆಳೆಗಾರರು ಹೇಗಿದ್ದಾರೆ? ಅವರು ನೋಡಿದ್ದರಾ? ಅವರ ಕಷ್ಟ ಸುಖ ವಿಚಾರ ಮಾಡಿದ್ದೀರಾ ಜ್ಞಾನೇಂದ್ರ ಅವರೇ?

ಸೋಮವಾರ ಅಭ್ಯರ್ಥಿಗಳ ಪಟ್ಟಿ

ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಣೆ ಮಾಡಲಾಗುವುದು. ಇಂದು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ನಮಗೆ ಶಕ್ತಿ ಇರುವ ಆರು ಅಥವಾ ಎಂಟು ಕ್ಷೇತ್ರಗಳಲ್ಲಿ ನಾವು ಸ್ಪರ್ಧೆ ಮಾಡುತ್ತೇವೆ. ಕೋಲಾರ ಅಭ್ಯರ್ಥಿ ನಾಳೆ ಸಂಜೆ ತೀರ್ಮಾನ ಮಾಡಲಾಗುವುದು. ಮಂಡ್ಯದಲ್ಲಿ ಹಾಲಿ ಸದಸ್ಯರೇ ಮರು ಸ್ಫರ್ಧೆ ಮಾಡುತ್ತಿದ್ದಾರೆ. ದೇವೇಗೌಡರ ಜತೆ ಅಂತಿಮ ಚರ್ಚೆ ಮಾಡಿ‌ ಅಂತಿಮ ಪ್ರಕಟ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಸಂದೇಶ್ ನಾಗರಾಜ್, ಸಿ.ಆರ್. ಮನೋಹರ್ ಬಗ್ಗೆ ಪ್ರಸ್ತಾಪ ಇಲ್ಲ

ನಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಸಂದೇಶ್ ನಾಗರಾಜ್ ಮತ್ತು ಸಿ.ಆರ್. ಮನೋಹರ್ ಮತ್ತೆ ಪಕ್ಷಕ್ಕೆ ವಾಪಸ್ ಬರುವ ವಿಚಾರ ನನ್ನ ಮುಂದೆ ಪ್ರಸ್ತಾಪ ಇಲ್ಲ. ನಮ್ಮ ಮೇಲೆ ನಂಬಿಕೆ ಇಲ್ಲ ಅಂತ ಅವರು ಹೋದವರು. ಮೂರು ವರ್ಷದ ಹಿಂದೆಯೇ ಪಕ್ಷ ಬಿಟ್ಟಿರುವುದಾಗಿ ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಜಿ.ಟಿ.ದೇವೇಗೌಡ ಕುಟುಂಬದ ಸ್ಫರ್ಧೆ ವಿಚಾರ ನನ್ನ ಮುಂದೆ ಚರ್ಚೆ ಆಗಿಲ್ಲ. ಸಾ.ರಾ.‌ಮಹೇಶ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಬಗ್ಗೆಯೂ ನನ್ನ ಮುಂದೆ ಯಾವುದೇ ಪ್ರಸ್ತಾಪ ಬಂದಿಲ್ಲ. ಹಾಗಾಗಿ ನಾನು ಉತ್ತರ ಕೊಡುವುದು ಅನವಶ್ಯಕ ಎಂದು ಅವರು ತಿಳಿಸಿದರು.

Tags: bjpbjp jana swarajya yatrechikkaballapuracknewsnowcr manoharhd kumaraswamyjdskolarsandesh nagaraj
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿಂಗಾಪುರದ ಬದಲಿಗೆ ಚರಂಡಿಯಾದ ಚಿಕ್ಕಬಳ್ಳಾಪುರ!

ಸಿಂಗಾಪುರದ ಬದಲಿಗೆ ಚರಂಡಿಯಾದ ಚಿಕ್ಕಬಳ್ಳಾಪುರ!

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರಿಗೆ ಸಂಕ್ರಾತಿ ಕೊಡುಗೆ

4 years ago
ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ