• About
  • Advertise
  • Careers
  • Contact
Tuesday, June 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ತುಮಕೂರಿನಲ್ಲಿ ದೇವೇಗೌಡರ ಸೋಲಿಗೆ ಸೇಡು ತೀರಿಸಿಕೊಳ್ಳುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
November 23, 2021
in POLITICS, STATE
Reading Time: 1 min read
0
ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಹೆಚ್.ಡಿ.ಕುಮಾರಸ್ವಾಮಿ

962
VIEWS
FacebookTwitterWhatsuplinkedinEmail

ಕಾಂಗ್ರೆಸ್ ಪಕ್ಷವು ಬಿಜೆಪಿಯ ಬಿ ಟೀಮೋ ಅಥವಾ ಸಿ ಟೀಮೋ?; ನಮ್ಮ ನಾಯಕರ ಬ್ರೈನ್ ವಾಶ್ ಮಾಡುತ್ತಿದ್ದಾರೆ

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಮ್ ಎಂದು ಕುಹಕ ಆಡುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈಗ ಬಿಜೆಪಿಯ ಬಿ ಟೀಮ್ ಹಾಗೂ ಸಿ ಟೀಮ್ ಯಾವ ಪಕ್ಷ ಎನ್ನುವುದು ಜನರಿಗೆ ಈಗ ಚೆನ್ನಾಗಿ ಅರ್ಥವಾಗಿದೆ ಎಂದರು.

ದೇವನಹಳ್ಳಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ರಮೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದ ವೇಳೆ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮಗಳ ಜತೆ ಮಾತನಾಡಿದರು.

ನಿಜವಾದ ಎ ಟೀಮ್, ಬಿ ಟೀಮ್ ಮತ್ತು ಸಿ ಟೀಮ್ ಯಾವುದು ಎನ್ನುವುದು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿಯೇ ಗೊತ್ತಾಗುತ್ತದೆ. ಹಾಸನದಲ್ಲಿ ತಂದೆ (ಎ.ಮಂಜು) ಬಿಜೆಪಿ ಅಭ್ಯರ್ಥಿ. ಕೊಡಗಿನಲ್ಲಿ ಅವರ ಪುತ್ರನೇ ಕಾಂಗ್ರೆಸ್ ಪಕ್ಷದ ಉಮೇದುವಾರ. ಬಿಜೆಪಿ ಸರಕಾರದಲ್ಲಿ ಸಚಿವರಿಗೆ ಪಿಎ ಆಗಿದ್ದ ವ್ಯಕ್ತಿ ಈಗ ಮಂಡ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ. ಇದು ಏನನ್ನು ಸೂಚಿಸುತ್ತದೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಮುಖಂಡನನ್ನು ಬಿಜೆಪಿಗೆ ಕಳಿಸಿ ಅಭ್ಯರ್ಥಿ ಮಾಡಿತ್ತು. ಈಗ ಅದೇ ಬಿಜೆಪಿಯು ತನ್ನ ನಾಯಕನ ಮಗನನ್ನು ಕಾಂಗ್ರೆಸ್ ಪಕ್ಷಕ್ಕೆ ಕಳಿಸಿ ಕೊಡಗಿನ ಅಭ್ಯರ್ಥಿ ಮಾಡಿದೆ. ಇದು ರಾಷ್ಟ್ರೀಯ ಪಕ್ಷಗಳ ಅಡ್ಜೆಸ್ ಮೆಂಟ್ ರಾಜಕೀಯ ಎಂದು ಅವರು ಟೀಕಿಸಿದರು.

ಈಗ ಕಾಂಗ್ರೆಸ್ ಪಕ್ಷದ ನಿಜವಾದ ಬಣ್ಣ ಕಳಚಿ ಬಿದ್ದಿದೆ. ಜನರಿಗೂ ಆ ಪಕ್ಷದ ಅಸಲಿ ಸ್ವರೂಪ ಗೊತ್ತಾಗಿದೆ. ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ಕಾಂಗ್ರೆಸ್ ಪಕ್ಷದ ನಾಯಕರು ಈಗ ಏನು ಹೇಳುತ್ತಾರೆ? ಯಾವ ನಾಲಗೆಯಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ ಎಂದು ಅವರು ಕೇಳಿದರು.

ನಾವು ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದೇವೆ. ಆ ಪೈಕಿ ಕೊನೆಪಕ್ಷ ಆರು ಕಡೆಯಾದರೂ ಗೆಲ್ಲುತ್ತೇವೆ ಎಂದ ಅವರು; ಈಗ ನಮ್ಮ ಪಕ್ಷ ಕಷ್ಟದ ಪರಿಸ್ಥಿತಿಯಲ್ಲಿದೆ. ಹೀಗಾಗಿ ನಾವು ಕಣಕ್ಕಿಳಿದಿರುವ ಕಡೆ ಗೆಲ್ಲಲೇಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್‌ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ರಮೇಶ್‌ ಗೌಡರು ನಾಮಪತ್ರ ಸಲ್ಲಿಸಿದಾಗ ಸಾಥ್‌ ನೀಡಿ ಶುಭ ಹಾರೈಸಿದೆ. ಮಾಜಿ ಶಾಸಕರಾದ ಶ್ರೀ ಇ.ಕೃಷ್ಣಪ್ಪ, ಶಾಸಕರಾದ ಶ್ರೀ ನಿಸರ್ಗ ನಾರಾಯಣ ಸ್ವಾಮಿ, ಡಾ.ಶ್ರೀನಿವಾಸ ಮೂರ್ತಿ ಅವರು ಜತೆಯಲ್ಲಿದ್ದರು. ಬಳಿಕ ಬಹಿರಂಗ ಸಭೆಯಲ್ಲಿ ಭಾಗಿಯಾದೆ. pic.twitter.com/OVrVkHB1ax

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2021

ಬ್ರೈನ್ ವಾಶ್ ಮಾಡುತ್ತಿದ್ದಾರೆ

ಮೈತ್ರಿ ಸರಕಾರವನ್ನು ಪತನ ಮಾಡಿದ ನಂತರ ನಮ್ಮ ಪಕ್ಷವನ್ನು ಮುಗಿಸಲು ಕೆಲವರು ಹೊಂಚು ಹಾಕಿ ಕೂತಿದ್ದಾರೆ. ನಮ್ಮ ನಾಯಕರ ಬ್ರೈನ್ ವಾಶ್ ಮಾಡಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪರಿಷತ್ ಚುನಾವಣೆ ಬಂದಿದೆ. ನಾವು ಕಾರ್ಯಕರ್ತರನ್ನು ನಂಬಿ ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪಕ್ಷದಿಂದ ಬೆಳೆದವರು ಪಕ್ಷದ ಬೆನ್ನು ಇರಿದರು. ತುಮಕೂರಿನಲ್ಲಿ ದೇವೇಗೌಡರನ್ನು ಸೋಲಿಸಿದರು. ಕಾಂಗ್ರೆಸ್ ಪಕ್ಷದ ನಾಯಕರೇ ಕುತಂತ್ರ ನಡೆಸಿ ಮಾಜಿ ಪ್ರಧಾನಿಗಳ ಸೋಲಿಗೆ ಕಾರಣರಾದರು ಎಂದು ಅವರು ಕಿಡಿ ಕಾರಿದರು.

ತಡರಾತ್ರಿ 1.30ಕ್ಕೆ ಅಭ್ಯರ್ಥಿಗಳನ್ನ ಅಂತಿಮ ಮಾಡಲಾಗಿದೆ. ನಮ್ಮ ಪಕ್ಷದ ಶಕ್ತಿಗೆ ತಕ್ಕಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದ ಕುಮಾರಸ್ವಾಮಿ ಅವರು; ಬಿಜೆಪಿಗೆ ಅನುಕೂಲ ಮಾಡಿಕೊಡಲು ದೇವೇಗೌಡರನ್ನು ಕಾಂಗ್ರೆಸ್ ನಾಯಕರು ತುಮಕೂರಿನಲ್ಲಿ ಸೋಲಿಸಿದರು. ಯಾವ ಕುತಂತ್ರಕ್ಕೆ ಅಂದು ನಾವು ಬಲಿಯಾದೇವೂ ಅದನ್ನೆ ಈಗ ತೋರಿಸುತ್ತೇವೆ. ಪರಿಷತ್ ಚುನಾವಣೆಯಲ್ಲಿ ನಮ್ಮ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷಕ್ಕೆ ನೇರ ಸವಾಲು ಹಾಕಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ನೂರಕ್ಕೆ ನೂರು ಪರ್ಸೆಂಟ್ ಗೆಲ್ಲುತ್ತೇವೆ. ಇದರ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೂಡಲೇ ರೈತರಿಗೆ ನರವಾಗಬೇಕು

ಈಗಾಗಲೇ ಸತತ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅನ್ನು ಬದಿಗಿಟ್ಟು ರೈತರನ್ನು ಉಳಿಸುವ ಕೆಲಸ ಮಾಡಬೇಕು. ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಕೂಡ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದು ದೊಡ್ಡದಾಗುವ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮಳೆ ನೆರೆಗೆ ಸರಕಾರಗಳೇ ಹೊಣೆ

ರಾಜಕಾಲುವೆಗಳ ಅಸಮರ್ಪಕ ನಿರ್ವಹಣೆ ಹಾಗೂ ಒತ್ತುವರಿಯಿಂದ ಬೆಂಗಳೂರಿನಲ್ಲಿ ಮಳೆ ಅನಾಹುತ ಹೆಚ್ಚಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಆಡಳಿತ ನಡೆಸಿವೆ. ಕೆಂಪೇಗೌಡರು ಕಟ್ಟಿದ ಬೆಂಗಳೂರಲ್ಲಿ ಹಣಕ್ಕಾಗಿ ಕೆರೆ ಕಟ್ಟೆಗಳನ್ನೇ ನುಂಗಿದರು. ರಾಜಕಾಲುವೆಗಳನ್ನ ನುಂಗಲು ಬೆಂಬಲ ನೀಡಿದವರೇ ಈಗಿನ ಅನಾಹುತಗಳಿಗೆ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ನೇರವಾಗಿ ಹೇಳಿದರು.

ಅನೇಕ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಸಿಎಂ, ಸಚಿವರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಹತ್ತು ಲಕ್ಷ ಹೆಕ್ಟೇರ್ ಬೆಳೆ ನಾಶ ಎನ್ನುತ್ರಿದ್ದಾರೆ. ಕೃಷಿ ಸಚಿವರು ಐದು ಲಕ್ಷ ಹೆಕ್ಟೇರ್ ಭೂಮಿ ಬೆಳೆ ನಾಶ ಎನ್ನುತ್ತಿದ್ದಾರೆ. ಯಾರ ಮಾತನ್ನು ನಂಬಬೇಕು. ಸರಕಾರ ಇಂಥ ಹೇಳಿಕೆಗಳನ್ನು ಬಿಟ್ಟು ಕೂಡಲೇ ಬೆಳೆ ನಷ್ಟ ಮಾಡಿಕೊಂಡಿರುವ ರೈತರಿಗೆ ನೆರವಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಪಡಿಸಿದರು.

2023ಕ್ಕೆ ಸ್ವತಂತ್ರ ಸರಕಾರ

2023ಕ್ಕೆ ಸ್ವತಂತ್ರವಾಗಿ ಪಕ್ಷವನ್ನ ಅಧಿಕಾರಕ್ಕೆ ತರಬೇಕು ಎನ್ನುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಪ್ರಯತ್ನದ ಬಗ್ಗೆ ಕೆಲವರು ತುಂಬಾ ಹಗುರವಾಗಿ ಮಾತಮಾಡುತ್ತಿದ್ದಾರೆ. ಯಾರು ಏನೇ ಹೇಳಲಿ, ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕಿದೆ. ಯಾವುದೇ ಪಕ್ಷಗಳ ಹಂಗಿಲ್ಲದೆ ಅಧಿಕಾರಕ್ಕೆ ತರಬೇಕಿದೆ ಎಂದು ಅವರು ತಿಳಿಸಿದರು.

ನಮಗೆ ದೊಡ್ಡ ಮಟ್ಟದ ನಾಯಕರಿಲ್ಲ. ಕಾರ್ಯಕರ್ತರೇ ನಮಗೆ ದೊಡ್ಡ ಶಕ್ತಿ. ಅದೇ ನಮಗೆ ಆತ್ಮವಿಶ್ವಾಸ. ಈ ಚುನಾವಣೆಯಲ್ಲಿ ನಾವು ಗೆಲ್ಲುವ ಮೂಲಕ ಸಂದೇಶ ಕೊಡಬೇಕಿದೆ ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ಮಾಜಿ ಸಿಎಂ ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ರಮೇಶ್ ಗೌಡ ಮುಂತಾದವರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

Tags: cknewsnowCongresshd devegowdahd kumaraswamyjdskarnatakanewsPoliticstumakuru
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಬೊಮ್ಮಾಯಿ ನಂತರ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಇಬ್ಬರು ಕ್ರಷರ್‌ ಮಾಲೀಕರು ಸೇರಿ ಐವರ ಬಂಧನ, ಪ್ರಮುಖ ಆರೋಪಿ ಗುಡಿಬಂಡೆ ನಾಗರಾಜ್‌ ಇನ್ನೂ ನಾಪತ್ತೆ, ತೀವ್ರ ಶೋಧ

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಇಬ್ಬರು ಕ್ರಷರ್‌ ಮಾಲೀಕರು ಸೇರಿ ಐವರ ಬಂಧನ, ಪ್ರಮುಖ ಆರೋಪಿ ಗುಡಿಬಂಡೆ ನಾಗರಾಜ್‌ ಇನ್ನೂ ನಾಪತ್ತೆ, ತೀವ್ರ ಶೋಧ

4 years ago
ಅರಮನೆಯಲ್ಲಿ ಆರಾಮಾಗಿರುವ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ಸಂತೋಷ!

ಅರಮನೆಯಲ್ಲಿ ಆರಾಮಾಗಿರುವ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ಸಂತೋಷ!

1 year ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ