• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ!

cknewsnow desk by cknewsnow desk
November 25, 2021
in STATE
Reading Time: 2 mins read
1
ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ!
1.3k
VIEWS
FacebookTwitterWhatsuplinkedinEmail

ಉಸ್ತುವಾರಿ ಸಚಿವರ ಮೇಲೆ ಹೆಚ್.ಡಿ.ಕುಮಾರಸ್ವಾಮಿ ಗರಂ

  • ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ನಾಯಕರಿಗೆ ಜೆಡಿಎಸ್‌ ಜ್ವರ !!
  • ಬಿಜೆಪಿ-ಕಾಂಗ್ರೆಸ್‌ ನಡುವೆ ಒಳ ಒಪ್ಪಂದ ಆಗಿದೆ; ಮಂಡ್ಯ-ಕೊಡಗು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳೇ ಇದಕ್ಕೆ ಸಾಕ್ಷಿ‌

by M Krishnappa Chikkaballapura

ಚಿಕ್ಕಬಳ್ಳಾಪುರ: ಪ್ರತಿ ಬಾರಿ ಚುನಾವಣೆ ಬಂದಾಗಲೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಜೆಡಿಎಸ್‌ ಜ್ವರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿರುವ ಪಕ್ಷದ ಮುಖಂಡ ರವಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಯಾವ ಚುನಾವಣೆಯೇ ಬರಲಿ, ಕಾಂಗ್ರೆಸ್‌ ನಾಯಕರಿಗೆ ತಕ್ಷಣ ನೆನಪಾಗುವುದು ಜೆಡಿಎಸ್‌ ಪಕ್ಷ ಮಾತ್ರ. ಜೆಡಿಎಸ್‌-ಬಿಜೆಪಿ ಒಪ್ಪಂದ ಮಾಡಿಕೊಂಡಿವೆ ಎಂದು ಆ ಪಕ್ಷದ ನಾಯಕರು  ಹೇಳುತ್ತಾರೆ. ಆ ಚುನಾವಣೆ ಮುಗಿದ ಮೇಲೆ ಆ ವಿಷಯವನ್ನು ಅಲ್ಲಿಯೇ ಕೈಬಿಡುತ್ತಾರೆ. ಅವರು ಪದೇಪದೆ ಯಾಕೆ ಈ ರೀತಿಯ ಅಪಪ್ರಚಾರ ನಡೆಸುತ್ತಿದ್ದಾರೆ ಎನ್ನುವುದು ನನಗಂತೂ ಅರ್ಥವಾಗುತ್ತಿಲ್ಲ” ಎಂದರು.

ಒಂದು ವೇಳೆ ನಮ್ಮ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಿದ್ದರೆ ಜೆಡಿಎಸ್‌ ಸ್ಪರ್ಧೆ ಮಾಡಿರುವ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹಾಕುತ್ತಿತ್ತೇ? ಈ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ಮತಗಳೇ ಇಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಲಾಗಿದೆ. ಚುನಾವಣೆಯಲ್ಲಿ ನಮ್ಮನ್ನು ಸೋಲಿಸಬೇಕು ಎಂದು ಬಿಜೆಪಿ ನಾಯಕರು ಕೂಡ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಕೂಡ ಯತ್ನಿಸುತ್ತಿದೆ. ಹೀಗಿದ್ದರೂ ಕಾಂಗ್ರೆಸ್‌ ನಾಯಕರು ವಿನಾಕಾರಣ ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಹೆಚ್‌ʼಡಿಕೆ ಬೇಸರ ವ್ಯಕ್ತಪಡಿಸಿದರು.

ಒಳ ಒಪ್ಪಂದ ಎಂದರೆ ಇದು!

ಕಳೆದ ಲೋಕಸಭೆ ಚುನಾವಣೆ ವೇಳೆ ಹಾಸನದಲ್ಲಿ ಕಾಂಗ್ರೆಸ್‌ ಸರಕಾರದಲ್ಲಿ ಮಂತ್ರಿಯಾಗಿದ್ದ ನಾಯಕನನ್ನು ಬಿಜೆಪಿಗೆ ಕಳಿಸಿ ಅಭ್ಯರ್ಥಿಯನ್ನಾಗಿ ಮಾಡಿಸುತ್ತಾರೆ. ಈಗ ಅದೇ ನಾಯಕನ ಪುತ್ರ ಕೊಡಗಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈಗ ಇಲ್ಲಿ ಅಪ್ಪ ಬಿಜೆಪಿ ಪಾರ್ಟಿ, ಮಗ ಕಾಂಗ್ರೆಸ್‌ ಪಾರ್ಟಿ! ಇದೇನು ಒಪ್ಪಂದ? ಜನರಿಗೆ ಎಲ್ಲವೂ ಚೆನ್ನಾಗಿ ಅರ್ಥವಾಗುತ್ತಿದೆ. ನಿಜಕ್ಕೂ ಒಳ ಒಪ್ಪಂದ ಎಂದರೆ ಇದೇ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ ಸರಕಾರದ ಮಂತ್ರಿಯೊಬ್ಬರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವ್ಯಕ್ತಿಗೆ ಮಂಡ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿದೆ. ಒಳ ಒಪ್ಪಂದ ಜೆಡಿಎಸ್-ಬಿಜೆಪಿ ನಡುವೆ ಆಗಿದೆಯೋ ಅಥವಾ ಕಾಂಗ್ರೆಸ್-ಬಿಜೆಪಿ ನಡುವೆ ಆಗಿದೆಯೋ? ಎನ್ನುವುದನ್ನು ಜನತೆಯೇ ತೀರ್ಮಾನ ಮಾಡಲಿ. ಇನ್ನಾದರೂ ಕಾಂಗ್ರೆಸ್‌ ಪಕ್ಷದ ನಾಯಕರು ಜೆಡಿಎಸ್‌ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಅವರು ತಾಕೀತು ಮಾಡಿದರು.

ಕಳೆದ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಮತದಾರರು ಗೆಲ್ಲಿಸಿದ್ದರು. ಆದರೆ, ಪ್ರತಿ ಬಾರಿ ಚುನಾವಣೆ ಬಂದಾಗ ಕಾಂಗ್ರೆಸ್‌ ಪಕ್ಷದ ನಾಯಕರು ನಮ್ಮ ಪಕ್ಷದ ವಿರುದ್ಧ ಕುತಂತ್ರಗಳನ್ನು ಹೂಡುತ್ತಲೇ ಇದ್ದಾರೆ. ಈ ಚುನಾವಣೆ ಇಂಥ ಕುತಂತ್ರಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಲ ಸ್ಪರ್ಧೆ ಮಾಡಿರುವ ಜೆಡಿಎಸ್‌ ಅಭ್ಯರ್ಥಿ ವಕ್ಕಲೇರಿ ರಾಮು ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ, ಅನುಕಂಪವೂ ಇದೆ. ಅವರು ಸಮರ್ಥ ಅಭ್ಯರ್ಥಿಯಾಗಿದ್ದು, ಖಂಡಿತಾ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದ ಅವರು; ನಾಳೆ ನಾನು ಪುನಾ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಮಂತ್ರಿಗಳ ನೆರೆ ವೀಕ್ಷಣೆ ವೈಖರಿಗೆ ತರಾಟೆ

ಕಳೆದ ಅನೇಕ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗಿ ಜನರು ಅತೀವ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಂತ್ರಿಗಳ ನೆರೆ ವೀಕ್ಷಣೆ ಹೇಗಿದೆ ಎಂದರೆ, ಬಂದ ಪುಟ್ಟಾ.. ಹೋದ ಪುಟ್ಟಾ ಎನ್ನುವಂತಿದೆ. ಹಿಂದೆ ನೆರೆ ಬಂದಾಗಲೇ ಮನೆ ಕಳೆದುಕೊಂಡವರಿಗೆ, ಬೆಳೆ ನಷ್ಟವಾದರಿಗೆ ಇನ್ನೂ ಪರಿಹಾರ ನೀಡಲಿಲ್ಲ. ಈಗ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂ. ಪರಿಹಾರ ಕೋಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆಯೇ ಘೋಷಣೆ ಮಾಡಿದ್ದ ಹಣವನ್ನೇ ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಬಿಡುಗಡೆ ಮಾಡುತ್ತೆ ಅನ್ನುವುದಕ್ಕೆ ಖಾತ್ರಿ ಏನಿದೆ? ಈ ಸರಕಾರ ಬರೀ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕಟುವಾಗಿ ಟೀಕಿಸಿದರು.

ಮಳೆ ಸಂತ್ರಸ್ತರಿಗೆ ಸಚಿವ ಡಾ,ಕೆ.ಸುಧಾಕರ್‌ ಅವರು ಧಮ್ಕಿ ಹಾಕಿರುವ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು ಹೇಳಿದ್ದಿಷ್ಟು;

“ಜಿಲ್ಲಾ ಉಸ್ತುವಾರಿ ಸಚಿವರಿಗೆ ಜನರ ಬವಣೆ ಬಗ್ಗೆ ಗೊತ್ತಿಲ್ಲ. ಅವರು ಆಕಾಶದಲ್ಲಿದ್ದಾರೆ. ಅವರ ಬಗ್ಗೆ ನನಗೆ ಎಲ್ಲ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಅವರ ಬಗ್ಗೆ ಜನವೇ ತೀರ್ಮಾನ ಮಾಡುತ್ತಾರೆ. ಇವರೆಲ್ಲಾ ಹಣದ ಮೂಲಕ ಏನನ್ನಾದರೂ ಸಾಧಿಸಬಹುದು ಎಂದು ಭಾವಿಸಿದ್ದಾರೆ. ಇವತ್ತು ಹಣ ಮಾಡಿಟ್ಟರೆ, ಚುನಾವಣೆ ಬಂದಾಗ ಹಣ ಹಂಚಿ ಜನರನ್ನು ಕೊಂಡುಕೊಳ್ಳಬಹುದು ಎಂದು ಅವರು ಭಾವಿಸಿದಂತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ-ಕೋಲಾರದ ಇದೇ ಜನವೇ ಹಣವನ್ನು ಧಿಕ್ಕರಿಸಿ ಹಣ ಬಲಕ್ಕಿಂತ ಜನ ಬಲವೇ ದೊಡ್ಡದು ಎಂದು ಸಾಬೀತು ಮಾಡಲಿದ್ದಾರೆ” ಎಂದರು.

ಮಳೆಯಿಂದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಭಾರೀ ಹಾನಿಯಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷ ನಾಯಕರು ಭೇಟಿ ನೀಡಿದ್ದಾರೆ. ಬರೀ ಭೇಟಿ ನೀಡಿದರೆ ಸಾಲದು, ಸರಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಕೇವಲ ಎನ್‌ಡಿಆರ್‌ಎಫ್‌ ಅಥವಾ ಎಸ್‌ಟಿಆರ್‌ಎಫ್‌ ನಿಯಮಗಳನ್ನು ಹೇಳುತ್ತಾ ಕೂತರೆ ಪ್ರಯೋಜನವಿಲ್ಲ. ಅಲ್ಪ ಪ್ರಮಾಣದ ಪರಿಹಾರದಿಂದ ಜನರಿಗೇನು ಉಪಯೋಗ ಎಂದು ಅವರು ಪ್ರಶ್ನಿಸಿದರು.

ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ,ಕುಮಾರಸ್ವಾಮಿ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದ ಪಕ್ಷದ ಮುಖಂಡ ರವಿ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹೆಚ್‌ʼಡಿಕೆ ಅವರು ಕಾರ್ಯಕರ್ತರ ಜತೆ ಚರ್ಚೆ ನಡೆಸಿದರು. ಮಾಜಿ ಶಾಸಕರಾದ ಬಚ್ಚೇಗೌಡ, ವೆಂಕಟಶಿವಾರೆಡ್ಡಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಕೇಶವ ರೆಡ್ಡಿ ಮುಂತಾದವರು ಜತೆಯಲ್ಲಿದ್ದರು.

Tags: bjpchikkaballapuracknewsnowCongresshd kumaraswamyjdskarnatakamelurunewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ: ಟೊಮ್ಯಾಟೊಗೆ ಇಬ್ಬರು ಬಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊಗೆ ಇಬ್ಬರು ಬಲಿ

Comments 1

  1. Pingback: ಎತ್ತಿನಹೊಳೆ ಹಣ ಲೂಟಿ ಹೊಡೆಯುವ ಯೋಜನೆ: ಹೆಚ್‌.ಡಿ.ಕುಮಾರಸ್ವಾಮಿ - cknewsnow

Leave a Reply Cancel reply

Your email address will not be published. Required fields are marked *

Recommended

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ