ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಆಪರೇಷನ್ ಕಮಲ ಪ್ರಕರಣ
by M Krishnappa Chikkaballapura
ಚಿಕ್ಕಬಳ್ಳಾಪುರ: ಇಲ್ಲಿನ ನಗರಸಭೆಯ ಏಳು ಸದಸ್ಯರ ಅನರ್ಹತೆ ವಿಚಾರವನ್ನು ತ್ವರಿತವಾಗಿ ಇತ್ಯರ್ಥ ಮಾಡುವಂತೆ ರಾಜ್ಯ ಹೈಕೋರ್ಟ್ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.
ಏಳು ಸದಸ್ಯರ ಅನರ್ಹತೆ ಇತ್ಯರ್ಥವು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಳಂಬವಾಗುತ್ತಿರುವುದನ್ನು ಪ್ರಶ್ನಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ನಾಗಪ್ರಸನ್ನ ಅವರು; ನಾಲ್ಕುವಾರಗಳಲ್ಲಿ ಸದಸ್ಯರ ಅನರ್ಹತೆ ಪ್ರಕರಣವನ್ನು ಇತ್ಯರ್ಥ ಮಾಡಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಗಡುವು ನೀಡಿ ಆದೇಶಿಸಿದ್ದಾರೆ.
ಹಿರಿಯ ವಕೀಲ ವೀರಭದ್ರಯ್ಯ ಮತ್ತು ಚಿಕ್ಕಬಳ್ಳಾಪುರದ ವಕೀಲ ನಾರಾಯಣಸ್ವಾಮಿ ಅವರು ಅರ್ಜಿದಾರರ ಪರವಾಗಿ ಉಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
2020 ಅಕ್ಟೋಬರ್ 30ರಂದು ನಡೆದ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಏಳು ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಹಾಗೂ ಗೈರು ಹಾಜರಾಗಿರುವ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, ಈ ಏಳು ಸದಸ್ಯರನ್ನು ಅನರ್ಹಗೊಳಿಸಬೇಕೆಂದು ಕೋರಿದ್ದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಳಂಬವಾಗಿರುವ ಹಿನ್ನಲೆಯಲ್ಲಿ ಕೆ.ಎನ್.ಕೇಶವರೆಡ್ಡಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿಯನ್ನು ವಿಚಾರಣೆ ನಡೆಸಿರುವ ಏಕಸದಸ್ಯ ನ್ಯಾಯಪೀಠವು; ಪ್ರಕರಣವನ್ನು ನಾಲ್ಕು ವಾರಗಳ ಒಳಗಾಗಿ ಇತ್ಯರ್ಥಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದೆ.
ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
Comments 2