• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

‌ವಿಷಕಾರಿ ಟ್ಯಾಂಕರ್ ತುಂಬಾ ಬರೀ ವಿಷ!

cknewsnow desk by cknewsnow desk
December 2, 2021
in STATE
Reading Time: 2 mins read
0
‌ವಿಷಕಾರಿ ಟ್ಯಾಂಕರ್ ತುಂಬಾ ಬರೀ ವಿಷ!
1.1k
VIEWS
FacebookTwitterWhatsuplinkedinEmail

ಮೀಸಲು ಅರಣ್ಯ-ಕೆರೆಗೆ ವಿಷಪ್ರಾಷಣ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಸಿಕೆನ್ಯೂಸ್ ನೌ ವರದಿ ಬಂದ ಮರುದಿನವೇ ಗುಡಿಬಂಡೆ ಅರಣ್ಯಾಧಿಕಾರಿಗಳ ಕೈಸೇರಿದ ಲ್ಯಾಬ್ ವರದಿ: ಆರೋಪಿಗಳ ವಿರುದ್ಧ ಶೀಘ್ರವೇ ಆರೋಪ ಪಟ್ಟಿ

CkNewsNow Impact

By GS Bharath Gudibande

ಗುಡಿಬಂಡೆ: ತಾಲೂಕಿನ ಮೀಸಲು ಅರಣ್ಯ ಪ್ರದೇಶ ಹಾಗೂ ವಾಟದ ಹೊಸಹಳ್ಳಿ ಕೆರೆಗೆ ವಿಷಪ್ರಾಷಣ ಮಾಡಿದ ಆಘಾತಕಾರಿ ಘಟನೆಗೆ ತಾರ್ಕಿಕ ಅಂತ್ಯ ಕಾಣುವ ಸಮಯ ಹತ್ತಿರವಾಗಿದ್ದು, ಟ್ಯಾಂಕರ್‌ʼನಲ್ಲಿದ್ದ ವಿಷಕಾರಿ ತ್ಯಾಜ್ಯದ ಪ್ರಯೋಗಾಲಯದ ಪರೀಕ್ಷೆ ವರದಿ ಅರಣ್ಯಾಧಿಕಾರಿಗಳ ಕೈಸೇರಿದೆ.

ಮೂರು ತಿಂಗಳ ಬಳಿಕ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಅರಣ್ಯ ಇಲಾಖೆಗೆ ಕೇಂದ್ರ ಪರಿಸರ ಪ್ರಯೋಗಾಲಯದ ವರದಿ ಸಲ್ಲಿಸಿದ್ದು, ಈಗ ಅರಣ್ಯ ಇಲಾಖೆ ಅಧಿಕಾರಿಗಳು ವಿಷಕಾರಿ ಟ್ಯಾಂಕರ್‌ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.

ತಾಲೂಕಿನ ಅರಣ್ಯ ಪ್ರದೇಶದ ಸರ್ವೆ ನಂ.43 ಹಾಗೂ ಗೌರಿಬಿದನೂರು ತಾಲೂಕಿನ ನಗರಗೆರೆ ಹೋಬಳಿಯ ಸಬ್ಬನಹಳ್ಳಿ ಸರ್ವೆ ನಂ.4ರಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಹೊರಹಾಕಲಾಗುವ ಅತ್ಯಂತ ವಿಷಕಾರಿ ಕೆಮಿಕಲ್ ನೀರನ್ನು ಸಮೀಪದ ಕೆರೆ ಹಾಗೂ ಅರಣ್ಯ ಪ್ರದೇಶದಲ್ಲಿ ವಿಲೇವಾರಿ ಮಾಡುವಾಗ ರೆಡ್ ಹ್ಯಾಂಡ್ ಆಗಿ ಟ್ಯಾಂಕರ್ ಸಮೇತ ಸಿಕ್ಕಿಬಿದ್ದ ಪ್ರಕರಣಕ್ಕೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.

ವಿಷಕಾರಿ ಟ್ಯಾಂಕರ್ ಸಿಕ್ಕಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಥಮ ವರ್ತಮಾನ ಮಾಹಿತಿ (ಎಫ್.ಐ.ಆರ್) ದಾಖಲಿಸಿದ್ದರು. ನಂತರ ತಾಲೂಕು ವಲಯ ಅರಣ್ಯಾಧಿಕಾರಿ ಚಂದ್ರಶೇಖರ್‌ ಅವರು ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯಲಕ್ಷ್ಮೀ ಅವರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ಮಾಡಿ ಪಂಚನಾಮೆ (ಮಹಜರ್) ನಡೆಸಿ ಕೆಮಿಕಲ್ ನೀರಿನ ಸ್ಯಾಂಪಲ್ ಪಡೆದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರಿನ ಕೇಂದ್ರ ಪರಿಸರ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದರು.

ವರದಿಯಲ್ಲಿ ಸ್ಫೋಟಕ ಅಂಶಗಳು

ಕೇಂದ್ರ ಪರಿಸರ ಪ್ರಯೋಗಾಲಯವು ಕೆಮಿಕಲ್ ನೀರಿನಲ್ಲಿ ಎಷ್ಟು ಪ್ರಮಾಣದ ಹಾನಿಕಾರಕ ಕೆಮಿಕಲ್ ಸಂಗ್ರಹಣೆಯಾಗಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದೆ. ಈಗ ಅರಣ್ಯ ಇಲಾಖೆಯು ಅಪರಾಧಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದೆ. ನವೆಂಬರ್ 12ರಂದೇ ಕೇಂದ್ರ ಪರಿಸರ ಪ್ರಯೋಗಾಲಯದಿಂದ ಈ ವರದಿ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ಕೈಸೇರಿದ್ದು, ಹೆಚ್ಚೂ ಕಡಿಮೆ ಇಪ್ಪತ್ತು ದಿನಗಳ ನಂತರ ವರದಿಯನ್ನು ಗುಡಿಬಂಡೆ ಅರಣ್ಯಾಧಿಕಾರಿಗಳಿಗೆ ನೀಡಿರುವ ಬಗ್ಗೆ ನಾನಾ ರೀತಿಯ ಅರಣ್ಯಾಧಿಕಾರಿಗಳಿಗೆ ನೀಡಲಾಗಿದೆ. ಇದೇ ವೇಳೆ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿಜಯಲಕ್ಷ್ಮೀ ವರ್ಗಾವಣೆಯಾಗಿದ್ದಾರೆ.

ಮೂರು ತಿಂಗಳಾದರೂ ಕೆಮಿಕಲ್‌ ನೀರಿನ ವರದಿ ನೀಡದ ಬಗ್ಗೆ ಸಿಕೆನ್ಯೂಸ್‌ ನೌ ವೆಬ್‌ತಾಣವು ನವೆಂಬರ್‌ ೨೮ರಂದು ವರದಿ ಮಾಡಿತ್ತು. ಈ ವರದಿ ಬಂದ ಮರುದಿನವೇ ಪ್ರಯೋಗಾಲಯದ ವರದಿ ಗುಡಿಬಂಡೆ ಅರಣ್ಯಾಧಿಕಾರಿಗಳ ಕೈಸೇರಿದೆ!

 ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ 
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನಾಟ್‌ ರೀಚೆಬಲ್!‌

ಉಳಿದಂತೆ, ಕೇಂದ್ರ ಪ್ರಯೋಗಾಲಯದಿಂದ ಬಂದಿರುವ ವರದಿಗೆ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ.ರೂಪಾದೇವಿ ಅವರು ಸಹಿ ಹಾಕಿದ್ದು, ಅವರು ನೀಡಿರುವ ವರದಿಯಲ್ಲಿ ಎಲ್ಲ ತಾಂತ್ರಿಕ ಅಂಶಗಳೂ ಇವೆ.

ಈಗ ಗುಡಿಬಂಡೆ ವಲಯ ಅರಣ್ಯಾಧಿಕಾರಿಗಳು ಆರೋಪಿಗಳ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 24 (ಸಿ) (ii), 24 (1)ರ ಅಡಿಯಲ್ಲಿ ಕಳೆದ ಅಗಸ್ಟ್‌ 29ರಂದು ಎಫ್.ಐ.ಆರ್ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
ಅರಣ್ಯದಲ್ಲಿ ತಪ್ಪಿದ ಮಹಾ ದುರಂತ!!

ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಪ್ರಯೋಗಾಲಯದ ವರದಿ ಆಧಾರದ ಮೆರೆಗೆ ಆರೋಪಗಳನ್ನು ವಿಚಾರಣೆ ಮಾಡಿ, ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಈಗಾಗಲೇ ಜಿಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ವರದಿಯನ್ನು ನಮಗೆ ನೀಡಿದ್ದಾರೆ. ನಾವು ಆ ವರದಿಯನ್ನು ಪರಿಶೀಲನೆ ಮಾಡುತ್ತಿದ್ದೇವೆ, ಅದರಲ್ಲಿ ಕೆಲ ಅಘಾತಕಾರಿ ಅಂಶಗಳೂ ಇವೆ.

ಚಂದ್ರಶೇಖರ್, ಗುಡಿಬಂಡೆ ವಲಯ ಅರಣ್ಯಾಧಿಕಾರಿ
Tags: atadahosahalli lakeChemical wastechikkaballapuradisposal watergudibande reserve forestkarnatakapoisoning to the lake poisonouswasterpollutionpollution control board
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಎರಡು ಓಮಿಕ್ರಾನ್ ಪ್ರಕರಣ ಪತ್ತೆ; ದೇಶದಲ್ಲೇ ಮೊದಲು

Leave a Reply Cancel reply

Your email address will not be published. Required fields are marked *

Recommended

ಅಪರೂಪದ ಸಮಾಗಮ: ಒಂದೇ ವೇದಿಕೆಯಲ್ಲಿ ಹೆಚ್.ಡಿ.ದೇವೇಗೌಡರು, ಬಿ.ಎಸ್.ಯಡಿಯೂರಪ್ಪ

ಅಪರೂಪದ ಸಮಾಗಮ: ಒಂದೇ ವೇದಿಕೆಯಲ್ಲಿ ಹೆಚ್.ಡಿ.ದೇವೇಗೌಡರು, ಬಿ.ಎಸ್.ಯಡಿಯೂರಪ್ಪ

2 years ago
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಕಣ್ಣೀರಿಟ್ಟ‌ ಡಿಕೆಶಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ