• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

P K Channakrishna by P K Channakrishna
December 3, 2021
in POLITICS, STATE
Reading Time: 1 min read
0
ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು
962
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಚುನಾವಣಾ ಪ್ರಚಾರ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ತಮ್ಮ ಬಗ್ಗೆ ಟೀಕೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಿಡಿಕಿಡಿಯಾದ ಪ್ರಸಂಗ ಗುರುವಾರ ನಡೆಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿಧಾನ ಪರಿಷತ್‌ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡುವಾಗ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಪತ್ರಕರ್ತರು ಮಾಜಿ ಪ್ರಧಾನಿಗಳ ಗಮನ ಸೆಳೆದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬಗ್ಗೆ ಸಿಟ್ಟಾದ ಗೌಡರು, “ಪ್ರಧಾನಿಗಳನ್ನು ಭೇಟಿ ಮಾಡಲು ಸಿದ್ದರಾಮಯ್ಯ ಪರ್ಮಿಷನ್ ಬೇಕಾ? ನಾನ್‌ಸೆನ್ಸ್”‌ ಎಂದು ಗುಡುಗಿದರು.

“ನಾನು ಪ್ರಧಾನಿಗಳನ್ನು ಭೇಟಿ ಮಾಡುವುದಕ್ಕೆ ಸಿದ್ದರಾಮಯ್ಯನ ಪರ್ಮಿಷನ್ ಬೇಕಾ? ಮನಮೋಹನ್ ಸಿಂಗ್ ಅವರನ್ನು ಭೇಟಿ ಮಡಿದ್ದೇನೆ, ವಾಜಪೇಯಿ ಅವರನ್ನು ಭೇಟಿ ಮಾಡಿದ್ದೇನೆ. ಸಿದ್ದರಾಮಯ್ಯನಿಗೆ ನನ್ನ ಪಕ್ಷವನ್ನು ಸರಂಡರ್ ಮಾಡ್ತೀವಿ ಅಂತ ಹೇಳಿದ್ದೀವಾ? ನಾನ್ಸೆನ್ಸ್” ಎಂದು ಅವರು ಕಟುವಾಗಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್​​​​​ಗೆ ಬೆಂಬಲ ಕೊಡಬೇಕಾ ಬೇಡವಾ ಎನ್ನುವುದು 2023 ಚುನಾವಣೆಯಲ್ಲಿ ತೀರ್ಮಾನವಾಗುತ್ತದೆ. ಕುಮಾರಸ್ವಾಮಿ ಅವರು ನನ್ನ ಅನುಮತಿ ಇಲ್ಲದೆ ಬಿಜೆಪಿ ಜೊತೆ ಸರಕಾರ ಮಾಡಿದರು. ಆಮೇಲೆ ಸರಕಾರ ಮಾಡಲು ಕಾಂಗ್ರೆಸ್‌ ಪಕ್ಷದವರೇ ನಮ್ಮ ಮನೆ ಬಾಗಿಲಿಗೆ ಬಂದರು. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಆಮೇಲೆ ಸರಕಾರವನ್ನು ಕೆಡವಿದವರು ಯಾರು ಅಂತ ಉತ್ತರ ಕೊಡಲಿ ಎಂದು ಗೌಡರು ಹೇಳಿದರು.

ಬೆಂಗಳೂರಿನಿಂದ ಶಿಡ್ಲಘಟ್ಟ ತಾಲೂಕಿನ ಹಿಂಡಿಗನಾಳಕ್ಕೆ ಆಗಮಿಸಿದ ಮಾಜಿ ಪ್ರಧಾನಿಗಳು, ಹೆಚ್.ಕ್ರಾಸ್‌ ಸಮೀಪದ  ಬಾಲಾಜಿ ಕನ್ವೆವೆನ್ಷನ್ ಹಾಲ್ʼನಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ವಕ್ಕಲೇರಿ ರಾಮು ಪರ ಮತಯಾಚನೆ ಮಾಡಿದರು.

ಪ್ರಚಾರ ಸಭೆಯಲ್ಲಿ ಮಾತನಾಡಿದ ಗೌಡರು; ಜೆಡಿಎಸ್‌ ಪಕ್ಷ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರು ಗಟ್ಟಿಯಾಗಿ ಕಟ್ಟಿದ್ದಾರೆ. ಅದನ್ನು ನಿರ್ನಾಮ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ನಾನು ಎಂದೂ ನನ್ನ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮನೆಗೆ ಹೋಗಲಿಲ್ಲ. ಅವರೇ ನಮ್ಮ ಬಾಗಿಲಿಗೆ ಬಂದರು. ಐದು ವರ್ಷ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಮಾತು ಕೊಟ್ಟರು. ಸಿದ್ದರಾಮಯ್ಯ ಏನೆಲ್ಲಾ ಮಾಡಿದರು ಎನ್ನುವುದು ಗೊತ್ತಿದೆ. ಅವರ ಎಲ್ಲ ಭಾಗ್ಯಗಳನ್ನು ನಿಲ್ಲಿಸುವಂತಿರಲಿಲ್ಲ. ಆದರೂ ಕುಮಾರಸ್ವಾಮಿ ೨೩,೦೦೦ ಕೋಟಿ ರೂ.ಗಳಷ್ಟು ಸಾಲ ಮನ್ನಾ ಮಾಡಿದರು ಎಂದು ಮಾಜಿ ಪ್ರಧಾನಿಗಳು ವಿವರಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ ವಕ್ಕಲೇರಿ ರಾಮು ಒಳ್ಳೆಯ ಹುಡುಗ. ರೈತ ಕುಟುಂಬದಿಂದ ಬಂದವನು. ಹಿಂದೆ ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಟಿಕೆಟ್‌ ಕೊಟ್ಟಿದ್ದೆ. ಕೊನೆ ಕ್ಷಣದಲ್ಲಿ ಪಕ್ಷವೂ ಮತ್ತೊಬ್ಬರಿಗೆ ಟಿಕೆಟ್‌ ನೀಡಿದಾಗ ರಾಮು ಭೀ ಫಾರಂ ಅನ್ನು ವಾಪಸ್‌ ತಂದುಕೊಟ್ಟರು. ಅಂಥ ಪಕ್ಷನಿಷ್ಠೆ ಅವರದ್ದು ಎಂದರು ದೇವೇಗೌಡರು.

ನಾನೇನು ಕೆಲಸ ಮಾಡಿದ್ದೇನೆ ಎನ್ನುವುದು ಜನರಿಗೆ ಗೊತ್ತಿದೆ. ರೈತರಿಗಾಗಿ ಏನೆಲ್ಲ ಮಾಡಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಅಲ್ಪಸಂಖ್ಯಾತರಿಗೆ ಮೀಸಲು ಸೌಲಭ್ಯ ಕೊಟ್ಟಿದ್ದೇ ಈ ದೇವೇಗೌಡನೇ. ಜಮೀರ್‌ʼಗೆ ಅಧಿಕಾರ ಕೊಟ್ಟಿದ್ದು ಯಾರು? ಗೆಲ್ಲಿಸಿದ್ದು ಯಾರು? ನಾನೇ. ಅಲ್ಲದೆ ಮಿರಾಜುದ್ದೀನ್‌ ಪಾಟೀಲ್‌, ಸಿಎಂ ಇಬ್ರಾಹಿಂ ಅಂಥವರಿಗೆ ಅಧಿಕಾರ ಕೊಟ್ಟಿದ್ದು ಕೂಡ ನಾನೇ ಎಂದು ಅವರು ಹೇಳಿದರು.

ದೇಶಕ್ಕೆ ದೇವೇಗೌಡರು ಏನು ಮಾಡಿದರು ಎಂದು ಕೆಲವರು ಕೇಳುತ್ತಾರೆ. ಅವರಿಗೆ ಉತ್ತರ ಕೊಡುವ ಕಾಲ ಬಂದಿದೆ. ಇದೇ ಡಿಸೆಂಬರ್‌ ೧೩ರಂದು ನನ್ನ ಕುರಿತಾದ ಪುಸ್ತಕವೊಂದು ಬಿಡುಗಡೆ ಆಗುತ್ತಿದೆ. ದೇಶಕ್ಕೆ ನಾನು ಏನೆಲ್ಲ ಕೆಲಸ ಮಾಡಿದೆ ಎನ್ನುವುದು ಆ ಪುಸ್ತಕದಲ್ಲಿದೆ. ಎಲ್ಲರೂ ಓದಬೇಕು ಎಂದರು ಗೌಡರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ, ವಿಧಾನ ಪರಿಷತ್‌ ಸದಸ್ಯ ಗೋವಿಂದ ರಾಜು, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಮುಂತಾದವರಿದ್ದರು.

ಕರ್ನಾಟಕ ವಿಧಾನಮಂಡಲದ ಮೇಲ್ಮನೆ ವಿಧಾನ ಪರಿಷತ್​ಗೆ ಚುನಾವಣೆ ಘೋಷಣೆಯಾಗಿದೆ. 2022ರ ಜನವರಿ 5ರಂದು 25 ಪರಿಷತ್​ ಸದಸ್ಯರ ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ ‌10ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ. ನವೆಂಬರ್ 16ರಂದು ಅಧಿಸೂಚನೆ ಹೊರಡಿಸಲಾಗುವುದು. ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುತ್ತದೆ.

Tags: chikkaballapuraCongressformer prime minister of Indiahd devegowdakarnatakakolarPoliticssiddaramaiahSonia Gandhi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೋದಿ ಅವರನ್ನು ಗೌಡರು ಭೇಟಿಯಾಗುವುದು ತಪ್ಪೇ?

ಮೋದಿ ಅವರನ್ನು ಗೌಡರು ಭೇಟಿಯಾಗುವುದು ತಪ್ಪೇ?

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಡಿಕೆಶಿಗೆ ಭರ್ಜರಿ ಆಫರ್‌ ಕೊಟ್ಟ ಹೆಚ್‌ ಡಿಕೆ

2 years ago
ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ