• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

cknewsnow desk by cknewsnow desk
December 3, 2021
in POLITICS, STATE
Reading Time: 2 mins read
0
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?
941
VIEWS
FacebookTwitterWhatsuplinkedinEmail

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ; ಕೋಲಾರ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ


ಕೋಲಾರ: 2023ರ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷವು ಯಾವ ಪಕ್ಷಕ್ಕಾದರೂ ಬೆಂಬಲ ನೀಡಬೇಕೆ-ಬೇಡವೇ ಎಂಬುದನ್ನು ಭಾನುವಾರದೊಳಗೆ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮೇಲ್ಮನೆ ಚುನಾವಣೆ ನಿಮಿತ್ತ ಕೋಲಾರ ಜಿಲ್ಲೆಯಲ್ಲಿ ಅವರಿಂದು ಪ್ರಚಾರ ಕೈಗೊಂಡಿದ್ದು, ಬೆಳಗ್ಗೆ ಅವರು ಮುಳಬಾಗಿಲಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿ ನಾಯಕರು ಬೆಂಬಲ ಕೇಳಿದ್ದಾರೆ ನಿಜ. ಎರಡು ದಿನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಹೇಳುವುದಾಗಿ ನಾನು ಹೇಳಿರುವುದೂ ನಿಜ. ಇನ್ನೂ ಸಮಯ ಇದೆ, ಆತುರವೇನೂ ಇಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ನಮ್ಮ ಪಕ್ಷದ್ದು. ಆ ಗೆಲುವಿಗೆ ಏನೆಲ್ಲ ಆಗಬೇಕೋ ಆ ಹಿನ್ನೆಲೆಯಲ್ಲಿ ಸ್ಥಳೀಯವಾಗಿಯೇ ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ಳಬೇಕೋ ಎಂಬ ನಿರ್ದೇಶನವನ್ನು ನಾಳೆ ಅಥವಾ ನಾಡಿದ್ದರ ಒಳಗೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿ ಒಂದು ಕಡೆ ಜೆಡಿಎಸ್ ಬೆಂಬಲ ಕೇಳುತ್ತದೆ. ಇನ್ನೊಂದು ಕಡೆ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನ ಮಾಡುತ್ತಿದೆ. ಜೆಡಿಎಸ್ ಪಕ್ಷವನ್ನು ಸಂಪೂರ್ಣ ನಾಶ ಮಾಡಬೇಕೆಂದು ಎರಡೂ ರಾಷ್ಟ್ರೀಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಇದೆಲ್ಲವನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 2023ಕ್ಕೆ ಜನತೆಯಿಂದಲೇ ಇದೆಲ್ಲಕ್ಕೂ ಉತ್ತರ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾರ್ಮಿಕವಾಗಿ ಉತ್ತರಿಸಿದರು.

ಚುನಾವಣೆಗಳನ್ನು ಹೇಗೆ ಗೆಲ್ಲಬೇಕು ಎಂಬುದು ಬಿಜೆಪಿಗೆ ಚೆನ್ನಾಗಿ ಕರಗತವಾಗಿದೆ. ಹಣದಿಂದ ಗೆಲುವು ಸಾಧಿಸುವುದು ಹೇಗೆ ಎಂಬುದು ಆ ಪಕ್ಷಕ್ಕೆ ಚೆನ್ನಾಗಿ ತಿಳಿದಿದೆ. ರಾಜ್ಯದ ಹಣ ಲೂಟಿ ಮಾಡಿ ಆ ಪಕ್ಷ ಚುನಾವಣೆಗಳನ್ನು ಗೆಲ್ಲುತ್ತಿದೆ. ಆ ವಿಷಯದಲ್ಲಿ ಆ ಪಕ್ಷದ ನಾಯಕರಿಗೆ ಒಳ್ಳೆಯ ಅನುಭವ ಇದೆ ಹಾಗೂ ಅದರಲ್ಲಿ ಅವರು ಯಶಸ್ಸು ಸಾಧಿಸಿದ್ದಾರೆ. ಇಂಥ ಗೆಲುವು ನಿರಂತರವಾಗಿ ಎಲ್ಲ ಸಂದರ್ಭಗಳಲ್ಲೂ ಆಗುತ್ತದೆ ಎಂದು ಅವರು ನಂಬಿದ್ದಾರೆ. ಅದಕ್ಕೆ ವಿರುದ್ಧವಾಗಿ ಜನರು ತೀರ್ಮಾನ ತೆಗೆದುಕೊಳ್ಳುವ ಕಾಲ ಬಂದಿದೆ. ಹಣ ಬಲದ ವಿರುದ್ಧ ಒಂದಲ್ಲ ಒಂದು ದಿನ ಜನರು ತಿರುಗಿಬೀಳುತ್ತಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯಗೆ ಪರೋಕ್ಷ ಚಾಟಿ

ಚಿಹ್ನೆಯ ಮೇಲೆ ಈ ಚುನಾವಣೆ ನಡೆಯಲ್ಲ. ಕೋಲಾರ-ಚಿಕ್ಕಬಳ್ಳಾಪುರ ಸೇರಿ ನಾವು ಸ್ಪರ್ಧೆ ಮಾಡುರುವ ಆರೂ ಕ್ಷೇತ್ರಗಳಲ್ಲಿಯೂ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ತ್ರಿಕೋನ ಸ್ಪರ್ಧೆ ಇದೆ. ಈ ಚುನಾವಣೆಯಲ್ಲಿ ಹಣಕ್ಕಿಂತ ಹೆಚ್ಚಾಗಿ ಸ್ಥಳೀಯವಾಗಿರುವ ರಾಜಕೀಯ ಬೆಳವಣಿಗೆಗಳು ಪ್ರಭಾವ ಬೀರಲಿವೆ. ಹೀಗಿದ್ದರೂ ಚುನಾವಣೆ ಎಂದ ಕೂಡಲೇ ಕಾಂಗ್ರೆಸ್ ನಾಯಕರೊಬ್ಬರು ಜೆಡಿಎಸ್ ಪಕ್ಷಕ್ಕೆ ಸರ್ಟಿಫಿಕೇಟ್ ಕೊಡಲು ಮುಂದಾಗುತ್ತಾರೆ. ೨೦೧೮ರಿಂದಲೂ ಅವರಿಂದ ಈ ರೀತಿಯ ಹೇಳಿಕೆಗಳು ಆರಂಭವಾಗಿದ್ದು, ಇದು ೨೦೨೩ರ ವಿಧಾನಸಭೆ ಚುನಾವಣೆವರೆಗೂ ಮುಂದುವರಿಯಲಿವೆ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಹೇಳದೆಯೇ ಚಾಟಿ ಬೀಸಿದರು.

ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಂ ಅಂತಾರೆ, ಮತ್ತೆ ನಮ್ಮ ಮನೆ ಬಾಗಿಲಿಗೇ ಬಂದು ನಿಂತ್ಕೊಂಡು, ಬನ್ನಿ ಸರಕಾರ ಮಾಡೋಣ ಅಂತ ಕರೀತಾರೆ. ಕಾಂಗ್ರೆಸ್ ಪಕ್ಷದ ನಾಯಕರ ನಡವಳಿಕೆಯ ಬಗ್ಗೆ ತೀರ್ಮಾನ ಕೈಗೊಳ್ಳುವುದನ್ನು ನಾಡಿನ ಜನರ ವಿವೇಚನೆಗೆ ಬಿಡಲು ನಾನು ನಿರ್ಧಾರ ಮಾಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಓಮಿಕ್ರಾನ್ ನಿಯಂತ್ರಸಿ

ರಾಜ್ಯದಲ್ಲಿ ಓಮಿಕ್ರಾನ್ ಬಗ್ಗೆ ಈಗಾಗಲೇ ಸರಕಾರದ ಗಮನ ಸೆಳೆದಿದ್ದೇನೆ. ನಿನ್ನೆಯೂ ಈ ಬಗ್ಗೆ ಮಾತನಾಡಿದ್ದೇನೆ. ಸರಕಾರವೂ ಹಲವಾರು ಸಭೆಗಳನ್ನು ಮಾಡುತ್ತಿದೆ. ಕೇವಲ ಸಭೆ ಮಾಡಿದರೆ ಉಪಯೋಗವಿಲ್ಲ. ಎರಡನೇ ಅಲೆಯಲ್ಲಿ ಉಂಟಾದ ಪ್ರಾಣಹಾನಿ ಈ ಬಾರಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ವೈದ್ಯರಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ಅವರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಅವರು ಸರಕಾರಕ್ಕೆ ಸಲಹೆ ನೀಡಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿಗಳು ಸೋಮೇಪಾಳ್ಯದ ಈಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಪೂಲ್‌ ಚಂದ್‌ ಜೈನ್‌ ಕಲ್ಯಾಣ ಮಂಟಪದಲ್ಲಿ ನಡೆದ ಚಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ಕೋಲಾರದ ಸಿಎಂಆರ್‌ ಹೌಸ್‌, ನಾರಾಯಣಿ ಕನ್ವೆನ್ಷನ್‌ ಹಾಲ್‌ʼನಲ್ಲಿ ನಡೆದ ಪ್ರಚಾರದಲ್ಲಿ ಹಾಗೂ ಮಾಲೂರಿನ ಆರ್.ಜೆ.ಕನ್ವೆನ್ಷನ್‌ ಹಾಲ್‌ ನಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು.

ಇಂದು ಕೋಲಾರದ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣಾ ಪ್ರಚಾರ ಸಭೆ ನಡೆಸಿ ಮತಯಾಚನೆ ಮಾಡಲಾಯಿತು. pic.twitter.com/m4SMyNDtgZ

— Janata Dal Secular (@JanataDal_S) December 3, 2021

ಈ ಸಂದರ್ಭದಲ್ಲಿ ಪಕ್ಷದ ಅಭ್ಯರ್ಥಿ ವಕ್ಕಲೇರಿ ರಾಮು, ಮಾಜಿ ಶಾಸಕ ವೆಂಕಟ ಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಮುಖಂಡ ಸಮೃದ್ಧಿ ಮಂಜುನಾಥ್ ಮುಂತಾದವರು ಜತೆಯಲ್ಲಿದ್ದರು.

Tags: cknewsnowhd kumaraswamyjdsKarnataka legislative council electionkolarnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪೊಲೀಸ್ ಬೆಂಗಾವಲು ವಾಹನ ಅಪಘಾತ; ಗಾಯಾಳು ಆಸ್ಪತ್ರೆಗೆ ಸೇರಿಸಲು ಡಿಕೆಶಿ, ಸಿದ್ದು ನೆರವು

ಪೊಲೀಸ್ ಬೆಂಗಾವಲು ವಾಹನ ಅಪಘಾತ; ಗಾಯಾಳು ಆಸ್ಪತ್ರೆಗೆ ಸೇರಿಸಲು ಡಿಕೆಶಿ, ಸಿದ್ದು ನೆರವು

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಚಿಕ್ಕಬಳ್ಳಾಪುರದ ಕೀಲು ಕುದುರೆ ನಾರಾಯಣಪ್ಪ, ಕೋಲಾರದ ತತ್ತ್ವಪದದ ದನಿ ಕೆ.ಎನ್.ಚಂಗಪ್ಪ ಅವರಿಗೆ 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

5 years ago
ಮುಂದಿನ ತಿಂಗಳೇ 5 ಗ್ಯಾರಂಟಿ!

ಆರೇ ತಿಂಗಳಲ್ಲಿ ಮಾಧ್ಯಮ ಪ್ರಚಾರಕ್ಕೆ 140 ಕೋಟಿ ರೂ. ಖರ್ಚು ಮಾಡಿದ ಸಿದ್ದರಾಮಯ್ಯ ಸರಕಾರ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ