• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಕೋಲಾರ-ಚಿಕ್ಕಬಳ್ಳಾಪುರ, ಮಂಡ್ಯ ಕ್ಷೇತ್ರ ಸೋತಿದ್ದಕ್ಕೆ ಕಾರಣ ಕೊಟ್ಟ ಹೆಚ್‌ಡಿಕೆ

P K Channakrishna by P K Channakrishna
December 14, 2021
in POLITICS, STATE
Reading Time: 1 min read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
926
VIEWS
FacebookTwitterWhatsuplinkedinEmail

ದಿಲ್ಲಿಯಲ್ಲಿ ಮಾಜಿ ಸಿಎಂ ಹೇಳಿದ್ದೇನು?

  • ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ
  • ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್‌ ʼಸಿದ್ದಹಸ್ತʼರ ಕೈಚಳಕ; ಕೋಲಾರ-ಮಂಡ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಒಳಸಂಚು
  • ಜೆಡಿಎಸ್‌ ಮತಗಳು ಜೆಡಿಎಸ್‌ʼಗೇ ಬಿದ್ದಿವೆ; ನಮಗೆ ಹಿನ್ನಡೆಯಾಗಿಲ್ಲ
  • ನಮ್ಮದು ಜೆಡಿಎಫ್‌, ಕಾಂಗ್ರೆಸ್‌ ಪಕ್ಷದ್ದು ಯಾವ ಎಫ್?‌

ನವದೆಹಲಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್‌ ಪಕ್ಷಕ್ಕೆ ಹಿನ್ನಡೆ ಆಗಿಲ್ಲ. ನಮ್ಮ ಪಕ್ಷ ವಿರೋಚಿತ ಸೋಲು ಕಂಡಿದೆ ನಿಜ, ಆದರೆ; ರಾಜ್ಯದಲ್ಲಿನ ಎರಡು ರಾಷ್ಟ್ರೀಯ ಪಕ್ಷಗಳ ಅಪವಿತ್ರ ಮೈತ್ರಿ, ಒಳ ಸಂಚು ಏನೆಂಬುದು ಬಟಾ ಬಯಲಾಗಿದೆ. ಎರಡೂ ಪಕ್ಷಗಳ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ವಿಧಾನ ಪರಿಷತ್‌ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವೆ ಸ್ಥಳೀಯ ಮಟ್ಟದಲ್ಲಿ ಒಳ ಒಪ್ಪಂದ ಏರ್ಪಟ್ಟಿದೆ. ಅದಕ್ಕೆ ಕಾಂಗ್ರೆಸ್‌ ಪಕ್ಷದ ಸಿದ್ದಹಸ್ತರೇ ಕಾರಣ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಿಷ್ಟು;

ಜೆಡಿಎಸ್‌ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡುವುದು ಸರಿಯಲ್ಲ. ಪಕ್ಷ ಬೆಂಬಲಿತ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಕ್ಷದ ಗೌರವ ಉಳಿಸುವ ಕೆಲಸ ಮಾಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು.

ಕಾಂಗ್ರೆಸ್‌ ನಾಯಕರು ಪದೇಪದೆ ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡುತ್ತಿದ್ದದ್ದೇ ನಮಗೆ ಮಂಡ್ಯ ಮತ್ತು ಕೋಲಾರದಲ್ಲಿ ಹಿನ್ನಡೆಯಾಗಲು ಕಾರಣ. ಇಂಥ ಅಪಪ್ರಚಾರವನ್ನು ನಿರಂತರವಾಗಿ ಕಾಂಗ್ರೆಸ್‌ ನಾಯಕರು ನಡೆಸಿದರು.

ರಾಜ್ಯದಲ್ಲಿರುವ ರಾಜಕೀಯ ಪಕ್ಷಗಳೆರಡಕ್ಕೂ ಇರುವ ಗುರಿ ಒಂದೇ. ಮುಂದಿನ ಸಾರ್ವತ್ರಿಕ ಚುನಾವಣೆ ಒಳಗೆ ಜೆಡಿಎಸ್‌ ಪಕ್ಷವನ್ನು ಸಂಪೂರ್ಣವಾಗಿ ಮುಗಿಸುವುದು. ರಾಜಕೀಯದಿಂದ ನಮ್ಮನ್ನು ಮರೆ ಮಾಡಬೇಕು ಎನ್ನುವುದು ಅವುಗಳ ದುರಾಲೋಚನೆ ಹಾಗೂ ನಮ್ಮ ಪಕ್ಷವನ್ನು ನಾಶ ಮಾಡುವುದೇ ಅವರ ಆದ್ಯತೆ. ಉದಾಹರಣೆಗೆ, ಮಂಡ್ಯದ ಇಂದಿನ ಫಲಿತಾಂಶವನ್ನು ವಿಶ್ಲೇಷಣೆ ಮಾಡುವುದಾದರೆ; ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ, ರೈತಸಂಘಗಳು ಯಾವ ರೀತಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಚಕ್ರವ್ಯೂಹ ಸೃಷ್ಟಿಸಿ ಕುತಂತ್ರದ ರಾಜಕಾರಣ ನಡೆಸಿದ್ದವೋ ಈಗ ಅದನ್ನೇ ಪುನರಾವರ್ತನೆ ಮಾಡಿರುವುದನ್ನು ಎಲ್ಲರೂ ಗಮನಿಸಬಹುದು.

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಬಿಜೆಪಿ ಮತ!

ಮಂಡ್ಯದಲ್ಲಿ ನಮ್ಮ ಮತದಾರರ ಸಂಖ್ಯೆ 1900. ಬಿಜೆಪಿಗೆ 450ರಿಂದ 500 ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ 1450ರಿಂದ 1500 ಮತಗಳು ಮಾತ್ರ ಇದ್ದವು. ಆದರೆ, ಕಾಂಗ್ರೆಸ್‌ ಅಭ್ಯರ್ಥಿ 2,000 ಮತ ಪಡೆಯಲು ಕಾರಣ ಕೊನೆಯ ಎರಡು ದಿನಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಒಳ ಒಪ್ಪಂದದಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಕಣ್ಣೀರು ಹಾಕಿದ್ದೇ ಎರಡೂ ಪಕ್ಷಗಳ ಸ್ಥಳೀಯ ನಾಯಕರ ಕುತಂತ್ರ ರಾಜಕಾರಣಕ್ಕೆ ಹಿಡಿದ ಕನ್ನಡಿ. ಇಲ್ಲಿ ಕಾಂಗ್ರೆಸ್-ಬಿಜೆಪಿ ಸೇರಿ ಜೆಡಿಎಸ್‌ ಪಕ್ಷಕ್ಕೆ ಮುಖಭಂಗ ಮಾಡಬೇಕು ಎಂದು ಷಡ್ಯಂತ್ರ ಹೂಡಿದ್ದು ಯಾರಿಗಾದರೂ ಅರ್ಥವಾಗುತ್ತದೆ.

ಮಂಡ್ಯದಲ್ಲಿ ನಮಗೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷದಿಂದ ಮುಖಭಂಗ ಆಗಿಲ್ಲ. ನಮ್ಮ ಮತದಾರರು ನಮ್ಮ ಅಭ್ಯರ್ಥಿಗೇ ಮತ ಕೊಟ್ಟಿದ್ದಾರೆ. ಅಲ್ಲೇನು ಬದಲಾವಣೆಗಳೇನಾಗಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಮತಗಳನ್ನು ಪಡೆಯುವ ಮೂಲಕ ಕಳೆದ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಪುನರಾವರ್ತನೆ ಮಾಡಿಕೊಂಡಿದ್ದಾರೆ.

ಕೋಲಾರದಲ್ಲಿ ಬಿಜೆಪಿ-ಕಾಂಗ್ರೆಸ್‌ ಒಳಸಂಚು

ಕೋಲಾರ ಕ್ಷೇತ್ರದ ಬಗ್ಗೆ ಹೇಳುವುದಾದರೆ, ಬಿಜೆಪಿಗೆ ಅಲ್ಲಿದ್ದದ್ದು ಕೇವಲ 500 ಮತ ಮಾತ್ರ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಸ್ವತಃ ಕಾಂಗ್ರೆಸ್ ನಾಯಕರು ಏನೆಲ್ಲ ಷಡ್ಯಂತ್ರ ಮಾಡಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದೇ ಕಾಂಗ್ರೆಸ್ ನಾಯಕರು ಮತ್ತು ಬಿಜೆಪಿ ಪಕ್ಷದ ಲೋಕಸಭೆ ಸದಸ್ಯರು ಕುಮ್ಮಕ್ಕಾಗಿ ಬಿಜೆಪಿಯಿಂದ ಅಭ್ಯರ್ಥಿಯನ್ನೂ ಹಾಕಿಸಿ ಕಾಂಗ್ರೆಸ್ʼನಿಂದ ಅಸಮಧಾನಿತಗೊಂಡ ಮತದಾರರು ಎಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ಹಾಕುತ್ತಾರೋ ಎಂದು ಬಿಜೆಪಿಯಿಂದಲೇ ಮತಗಳನ್ನು ಬೇರ್ಪಡಿಸಿ ಜೆಡಿಎಸ್ ಪಕ್ಷವನ್ನು ಸೋಲುವಂತೆ ಮಾಡಿದರು.

ಕೋಲಾರ ಕ್ಷೇತ್ರದಲ್ಲಿ ನಮಗೆ 1400 ಮತಗಳು ಇದ್ದವು. ಅಷ್ಟೂ ಮತಗಳು ನಮಗೇ ಬಂದಿವೆ. ಅಲ್ಲಿ ಕಾಂಗ್ರೆಸ್ ಅಸಮಾಧಾನಿತ ಮತಗಳು ಜೆಡಿಎಸ್ʼಗೆ ಹೋಗಬಾರದು ಎಂದು ಸಂಚು ರೂಪಿಸಿ ಅಲ್ಲಿನ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮಾಡಿಕೊಂಡ ಒಳ ಒಪ್ಪಂದದಿಂದ ನಮ್ಮ ಅಭ್ಯರ್ಥಿಗೆ ಸೋಲಾಗಿದೆ. ಇದು ಸರಳವಾಗಿ ಎಲ್ಲರಿಗೂ ಅರ್ಥವಾಗುತ್ತದೆ. ಕಾಂಗ್ರೆಸ್ ಪಕ್ಷದ ʼಸಿದ್ದಹಸ್ತʼರ ಕೈಚಳಕ ಕೋಲಾರದಲ್ಲೂ ಕೆಲಸ ಮಾಡಿದೆ. ಆ ಹೆಸರನ್ನು ನಾನು ಪದೇಪದೆ ಹೇಳುತ್ತೇನೆ. ತಮ್ಮ ʼಸಿದ್ದಹಸ್ತʼದ ಕಲೆಯ ಮೂಲಕ ಮೈತ್ರಿ ಸರಕಾರ ಕೆಡವಿದ ವ್ಯಕ್ತಿ ಆಗ ಬಿಜೆಪಿ ಜತೆ ಒಳಸಂಚು ಮಾಡಿಕೊಂಡು ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲು ಕಾರಣರಾಗಿದ್ದರು. ಈಗ ಅದೇ ʼಸಿದ್ದಹಸ್ತʼರು ಸ್ಥಳೀಯ ಬಿಜೆಪಿ ನಾಯಕರ ಜತೆ ಒಳ ಒಪ್ಪಂದ ಮಾಡಿಕೊಂಡು ಇಂಥ ಫಲಿತಾಂಶಕ್ಕೆ ಕಾರಣರಾಗಿದ್ದಾರೆ.

ರಾಷ್ಟ್ರೀಯ ಪಕ್ಷಗಳ ಬಣ್ಣ ಬಯಲಾಗಿದೆ

ಜೆಡಿಎಸ್ ಪಕ್ಷಕ್ಕೆ ಮುಖಭಂಗ ಮಾಡಿದ್ದೇವೆ ಎಂದು ಅವರು ಹೇಳಿಕೊಳ್ಳಬಹುದು. ಆದರೆ ಈ ಆರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷಕ್ಕೆ ಬರಬೇಕಾದ ಮತಗಳು ಎಲ್ಲೂ ತಪ್ಪಿಲ್ಲ. ಇಷ್ಟೂ ಕ್ಷೇತ್ರಗಳಲ್ಲೂ ನಮ್ಮ ನೈಜ ಮತದಾರರು ನಮಗೇ ಮತ ನೀಡಿದ್ದಾರೆ. ಆದರೆ, ಬಿಜೆಪಿ-ಕಾಂಗ್ರೆಸ್ ಒಳ ಒಪ್ಪಂದದಿಂದ ನಮಗೆ ಹಿನ್ನಡೆಯಾಗಿದೆ. ರಾಜ್ಯದ ಜನತೆ ಮುಂದೆ ಎರಡೂ ರಾಷ್ಟ್ರೀಯ ಪಕ್ಷಗಳ ಬಣ್ಣ ಬಟಾ ಬಯಲಾಗಿದೆ.

ನಾವು ಸೋತಿರುವ ಯಾವ ಕ್ಷೇತ್ರದಲ್ಲೂ ನಮ್ಮ ಮತಗಳು ನಮಗೆ ತಪ್ಪಿಲ್ಲ. ಆದರೆ, ಬಿಜೆಪಿಯ 400-500 ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೋದ ಕಾರಣಕ್ಕೆ ನಾವು ಸೋತಿದ್ದೇವೆ. ಕಾಂಗ್ರೆಸ್ ತಾನೊಂದು ಪಕ್ಷ ಎಂದು ಉದ್ದುದ್ದ ಭಾಷಣ ಮಾಡುತ್ತಿದೆ. ಆದರೆ, ಬಿಜೆಪಿಯ ಸಹಕಾರ, ಸ್ಥಳೀಯ ನಾಯಕರ ಒಳ ಸಂಚಿನ ಲಾಭ ಪಡೆದು ಮಂಡ್ಯದಲ್ಲಿ ಗೆಲುವು ಸಾಧಿಸಿದೆ.

2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ. 2/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2021

ಜೆಡಿಎಸ್‌ ಗುರಿ 2023 ಚುನಾವಣೆ

ನಮ್ಮ ಗುರಿ 2023ರ ಚುನಾವಣೆ ಮೇಲೆ ನೆಟ್ಟಿದೆ. ಅದಕ್ಕೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಸಂಘಟನೆಗೆ ಒತ್ತು ಕೊಡುತ್ತಿದ್ದೇವೆ. ಈಗಾಗಲೇ ಹಲವಾರು ಬಾರಿ ಈ ವಿಷಯ ಹೇಳಿದ್ದೇನೆ, ಈಗಲೂ ಅದೇ ಮಾತನ್ನೇ ಪುನರುಚ್ಛಾರ ಮಾಡುತ್ತಿದ್ದೇನೆ. ಕೇವಲ ಈ ಚುನಾವಣೆಯಿಂದ ನಮ್ಮ ಪಕ್ಷವನ್ನು ಮುಳುಗಿಸಿಬಿಡುತ್ತೇವೆ ಎನ್ನುವುದು ಕೇವಲ ಭ್ರಮೆಯಷ್ಟೇ. ಎರಡೂ ರಾಷ್ಟ್ರೀಯ ಪಕ್ಷಗಳು ಇದನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು.

ನಮ್ಮದು ಜೆಡಿಎಫ್‌, ಕಾಂಗ್ರೆಸ್‌ ಪಕ್ಷದ್ದು ಯಾವ ಎಫ್?‌

ವಿರೋಧ ಪಕ್ಷದ ನಾಯಕರು ಜೆಡಿಎಸ್ ಪಕ್ಷವನ್ನು ಜೆಡಿಎಫ್ ಎಂದು ಕರೆಯುತ್ತಿದ್ದಾರಲ್ಲ, ಅದಕ್ಕೆ ಇಂಬು ನೀಡುವಂತಿದೆ ಇಂದಿನ ಫಲಿತಾಂಶ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಜೆಡಿಎಸ್ ಪಕ್ಷದ ಶಕ್ತಿ ಅಡಗಿರುವುದೇ ದೇವೇಗೌಡರ ಕುಟುಂಬದಲ್ಲಿ ಎಂಬುದನ್ನು ಈ ಫಲಿತಾಂಶ ಸಾಭೀತು ಮಾಡಿದೆ. ಇದರಲ್ಲಿ ಯಾವುದೇ ಸಂಶಯ ಇಲ್ಲ. ನಮ್ಮ ಕುಟುಂಬ ಈ ಪಕ್ಷವನ್ನು ಉಳಿಸಿಕೊಳ್ಳಲಿಕ್ಕೆ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಇದೇ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಹಾಸನದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲು ಕಾರಣ ಅಲ್ಲಿ ನಮ್ಮ ಮತಗಳನ್ನು ಭದ್ರ ಮಾಡಿಕೊಂಡಿದ್ದು. ಹಾಸನದಲ್ಲಿ ಬಿಜೆಪಿ-ಕಾಂಗ್ರೆಸ್‌ ಒಳ ಸಂಚು ನಡೆದಿಲ್ಲ. ಕಾಂಗ್ರೆಸ್‌ ಪಕ್ಷದ ಸಿದ್ದಹಸ್ತರು ಪದೇ ಪದೇ ಹೇಳುತ್ತಿದ್ದಾರಲ್ಲ, ಜೆಡಿಎಫ್‌ ಎಂದು. ಅವರ ಪಕ್ಷದಲ್ಲಿ ಕುಟುಂಬ ರಾಜಕಾರಣ ಮೀರಿ ಎಷ್ಟು ಅಭ್ಯರ್ಥಿಗಳಿಗೆ ಟಿಕೆಟ್‌ ಕೊಟ್ಟಿದ್ದಾರೆ ಎನ್ನುವುದು ಗೊತ್ತಾ? ಕುಟುಂಬ ರಾಜಕಾರಣದ ಹಿನ್ನೆಲೆಯುಳ್ಳ ಎಂಟು ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ಕೊಟ್ಟಿದೆ. ಅದೇ ರೀತಿ ಬಿಜೆಪಿ ಅಂಥ ಎಷ್ಟು ಜನರಿಗೆ ಟಿಕೆಟ್‌ ನೀಡಿದೆ ಎನ್ನುವುದು ಗೊತ್ತಿದೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾದ ವಿಚಾರವಲ್ಲ. ಎಲ್ಲ ಪಕ್ಷಗಳಲ್ಲೂ ಇದೆ. ಹೀಗಾಗಿ ಜೆಡಿಎಸ್‌ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರಿಗಿಲ್ಲ. ನಮ್ಮದು ಜೆಡಿಎಫ್‌ ಆದರೆ ಕಾಂಗ್ರೆಸ್‌ ಪಕ್ಷದ್ದು ಯಾವ ʼಎಫ್‌ʼ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

Tags: bjpcknewsnowCongresshd kumaraswamyjdskarnatakamlc electionnewsPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಧಾನಮಂಡಲ ಅಧಿವೇಶನ

ಬಿಜೆಪಿ-ಕಾಂಗ್ರೆಸ್‌ ತಲಾ 11, ದಳಕ್ಕೆ 2, ಪಕ್ಷೇತರ 1

Leave a Reply Cancel reply

Your email address will not be published. Required fields are marked *

Recommended

ಅರ್ಥಪೂರ್ಣ ಚಿತ್ರಾವತಿ ಉತ್ಸವ

ಅರ್ಥಪೂರ್ಣ ಚಿತ್ರಾವತಿ ಉತ್ಸವ

5 years ago
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಗುಡಿಬಂಡೆ ಪಂ.ಪಂಚಾಯಿತಿ 2ನೇ ವಾರ್ಡ್ ಉಪ ಚುನಾವಣೆ: 6 ಆಕಾಂಕ್ಷಿಗಳಿಂದ ನಾಮಪತ್ರ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ