ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ; ಹೈಕೋರ್ಟ್ ಗಡುವಿನಂತೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇಂದು ವಿಚಾರಣೆ
by M krishnappa Chikkaballapura
ಚಿಕ್ಕಬಳ್ಳಾಪುರ: ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಕಾಂಗ್ರೆಸ್ ಪಕ್ಷದ ಏಳು ಜನ ನಗರಸಭೆ ಸದಸ್ಯರ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಇಂದು ಅಪರಾಹ್ನ ೩ ಗಂಟೆ ಸುಮಾರಿಗೆ ವಿಚಾರಣೆ ನಡೆಯಲಿದ್ದು , ರಾಜ್ಯ ಉಚ್ಚ ನ್ಯಾಯಾಲಯ ನಿರ್ದೇಶನದ ಅನ್ವಯ ನಡೆಯಲಿರುವ ಈ ವಿಚಾರಣೆ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಚಿಕ್ಕಬಳ್ಳಾಪುರ ನಗರಸಭೆಗೆ 2020ರ ಅಕ್ಟೋಬರ್ 30ರಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಏಳು ಸದಸ್ಯರ ವಿರುದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ದೂರು ನೀಡಿ, ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಏಳು ಸದಸ್ಯರನ್ನು ಅನರ್ಹಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ದೂರಿನ ಅನ್ವಯ ಕಳೆದ ಒಂದು ವರ್ಷದಿಂದ ವಿಚಾರಣೆ ಕೈಗೆತ್ತಿಕೊಂಡಿರುವ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಾ ಬಂದಿದೆ.
ಈ ಸುದ್ದಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಒಂದು ವರ್ಷದಿಂದಲೂ ವಿಚಾರಣೆ ಮುಂದೂಡುತ್ತಲೇ ಬಂದ ಹಿನ್ನಲೆಯಲ್ಲಿ ಅರ್ಜಿದಾರರು, ರಾಜ್ಯ ಉಚ್ಚನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಾಲ್ಕು ವಾರಗಳಲ್ಲಿ ಈ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ಕಳೆದ ನವೆಂಬರ್ 27ರಂದು ಜಿಲ್ಲಾಧಿಕಾರಿಗಳಿಗೆ ಗಡುವು ನೀಡಿತ್ತು.
ರಾಜ್ಯದ ಹಾಸನ, ಕೊಳ್ಳೆಗಾಲ, ಯಾದಗಿರಿ, ಕೊರಟಗರೆ ಮಹಲಿಂಗಪುರ ನಗರಸಭೆಗಳಲ್ಲೂ ಅಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ವಿಪ್ ಉಲ್ಲಂಘಿಸಿದವರ ಬಗ್ಗೆ ದೂರು ನೀಡಿದ್ದ ಅನ್ವಯ ಅಲ್ಲಿನ ಜಿಲ್ಲಾಧಿಕಾರಿಗಳು ಅಂಥಹವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು. ಆದರೆ ಇತ್ತ ಚಿಕ್ಕಬಳ್ಳಾಪುರದಲ್ಲಿ ಅನರ್ಹತೆ ಆಗಿರಲಿಚಲ್ಲ. ಈ ಕಾರಣಕ್ಕೆ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಕೀಲಾ ಬಾನು, ಎಂ.ಸ್ವಾತಿ, ರತ್ನಮ್ಮ, ಅಫ್ಜಲ್, ಚಂದ್ರಶೇಖರ್, ಎಸ್.ಎಂ.ರಫೀಕ್, ಮೀನಾಕ್ಷಿ ಅವರು ಚುನಾವಣೆಯಲ್ಲಿ ಅಡ್ಡಮತ ಹಾಕಿದ್ದು, ಇವರನ್ನು ನಗರಸಭೆ ಸದಸ್ಯತ್ವದಿಂದ ಸನರ್ಹಗೊಳಿಸಬೇಕು ಎಂದು ಅರ್ಜಿದಾರರು ದೂರು ನೀಡಿದ್ದರು.
ಈ ಸುದ್ದಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ..