• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

#ResignByrathiBasavaraj | ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡರಾ ಭೈರತಿ ಬಸವರಾಜ್

cknewsnow desk by cknewsnow desk
December 17, 2021
in NATION, STATE
Reading Time: 2 mins read
0
#ResignByrathiBasavaraj | ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡರಾ ಭೈರತಿ ಬಸವರಾಜ್
995
VIEWS
FacebookTwitterWhatsuplinkedinEmail

ನಗರಾಭಿವೃದ್ಧಿ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಳಗಾವಿ: ಭೂ ವಂಚನೆ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಬಸವರಾಜು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಅವರನ್ನು ಮುಖ್ಯಮಂತ್ರಿಯೇ ತೆಗೆದು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಹೇಳಿದ್ದಿಷ್ಟು;

ನಿಯಮ 60 ರಡಿ ಸಾರ್ವಜನಿಕ ತುರ್ತಿನ ವಿಚಾರಗಳನ್ನು ಚರ್ಚೆ ನಡೆಸತಕ್ಕದ್ದು ಎಂದು ಸದನದ ನಿಯಮದಲ್ಲಿದೆ. ಇಂದು ನಾನು ಸದನದ ನಿಯಮದಂತೆ ಒಂದು ಗಂಟೆ ಮುಂಚಿತವಾಗಿ ಬೈರತಿ ಬಸವರಾಜ್ ಅವರು ಭಾಗಿಯಾಗಿರುವ ಭೂ ಹಗರಣದ ಬಗ್ಗೆ ನಿಯಮ 60ರಡಿ ಚರ್ಚೆಗೆ ಅವಕಾಶ ನೀಡುವಂತೆ ಕೋರಿದ್ದೆ.

ಸಭಾಧ್ಯಕ್ಷರು ಮೊದಲು ನನಗೆ ಪ್ರಾಥಮಿಕ ಸಲ್ಲಿಕೆಗೆ ಅವಕಾಶ ನೀಡಿ, ನನ್ನ ಮಾತುಗಳು ಅವರಿಗೆ ತೃಪ್ತಿದಾಯಕವಾಗಿವೆ ಅನ್ನಿಸಿದರೆ ಚರ್ಚೆಗೆ ಅವಕಾಶ ನೀಡಬೇಕು. ಆದರೆ ಇತ್ತೀಚೆಗೆ ನಿಯಮ 60ರಡಿ ಚರ್ಚೆ ಮಾಡದೆ ಅದನ್ನು ನಿಯಮ 69ಕ್ಕೆ ಬದಲಾವಣೆ ಮಾಡಿಕೊಂಡು ಚರ್ಚೆಗೆ ಅವಕಾಶ ನೀಡಲಾಗುತ್ತಿದೆ.

ಅಣ್ಣಯ್ಯಪ್ಪ ಎಂಬುವರಿಂದ 21/05/2003ರಲ್ಲಿ ಖಾಲಿ ಛಾಪಾ ಕಾಗದಕ್ಕೆ ಸಹಿ ಹಾಕಿಸಿಕೊಂಡು, ಅದೇ ದಿನ 22 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಖರೀದಿ ಮಾಡಲಾಗಿದೆ. ಬೈರತಿ ಬಸವರಾಜು ಅವರು ಈ ನಕಲಿ ದಾಖಲೆ ಸೃಷ್ಟಿ ಕೃತ್ಯದಲ್ಲಿ ಷಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರಂ ಹೋಬಳಿಯ ಕಲ್ಕೆರೆಯಲ್ಲಿರುವ ಈ ಜಮೀನನ್ನು ಬೈರತಿ ಬಸವರಾಜ್ ಅವರು ನಕಲಿ ದಾಖಲೆ ಸೃಷ್ಟಿಸಿ ಖರೀದಿ ಮಾಡಿದ್ದಾರೆ. ಈ ಭೂಮಿಯ ಮೌಲ್ಯ ಕನಿಷ್ಠ 350-400 ಕೋಟಿ ರೂಪಾಯಿ ಇದೆ.

ದೂರುದಾರರಾದ ಮಾದಪ್ಪ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲು ಮಾಡಿದರು, ನಂತರ ಪೊಲೀಸರು ಬಿ ರಿಪೋರ್ಟ್ ಹಾಕಿದರು. ಇದನ್ನು ಪ್ರಶ್ನಿಸಿ ಮಾದಪ್ಪನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ಸೆಕ್ಷನ್ 120(B), 420, 427, 465, 467, 471 ಗಳಡಿಯಲ್ಲಿ ಕ್ರಿಮಿನಲ್ ಅಪರಾಧ ಪ್ರಕರಣವೆಂದು ದಾಖಲಿಸಿಕೊಂಡು, ಸಮನ್ಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಇವುಗಳಲ್ಲಿ ಕೆಲವು ಜಾಮೀನು ರಹಿತ ಅಪರಾಧಗಳಾಗಿವೆ.

ನಮ್ಮ ಸರ್ಕಾರದ ಅಧಿಕಾರದಲ್ಲಿ ಇದ್ದಾಗ 11/07/2016 ರಲ್ಲಿ ಡಿ.ವೈ.ಎಸ್.ಪಿ ಗಣಪತಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಅವರು ಸನದನಲ್ಲಿ ನಿಯಮ 60 ರಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಧರಣಿ ಮಾಡಿದ್ದರು.

ಬಿಜೆಪಿಯವರ ಧರಣಿ ನಂತರ ಅಂದಿನ ಸಭಾಧ್ಯಕ್ಷರು ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡಿದ್ದರು. ಅಂದು ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದು ಹೇಳಿದ್ದೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ಬೈರತಿ ಬಸವರಾಜು ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು @BJP4Karnataka ಸರ್ಕಾರವನ್ನು ಆಗ್ರಹಿಸುತ್ತೇನೆ. 1/11#ResignByrathiBasavaraj

— Siddaramaiah (@siddaramaiah) December 17, 2021

ಡಿ.ವೈ.ಎಸ್.ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಕರಣದ ನೈತಿಕ ಹೊಣೆ ಹೊತ್ತು @thekjgeorge ಅವರು ತಮ್ಮ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದರು.
ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿ ತಿಂಗಳಾಗುತ್ತಾ ಬಂದರೂ ಬೈರತಿ ಬಸವರಾಜ್ ರಾಜೀನಾಮೆ ಪಡೆಯದ @BJP4Karnataka ಅವರಿಗೆ ಸರ್ಕಾರ ನಡೆಸಲು ನೈತಿಕತೆ ಇದೆಯೇ? 2/11

— Siddaramaiah (@siddaramaiah) December 17, 2021

ಜಾರ್ಜ್ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು, ನ್ಯಾಯಾಲಯ ಪ್ರಾಥಮಿಕ ತನಿಖಾ ವರದಿ ಹಾಕುವಂತೆ ಆದೇಶಿಸಿದ ಕೂಡಲೆ ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ರೀತಿ ಬೈರತಿ ಬಸವರಾಜ್ ಕೂಡ ಈಗಾಗಲೇ ರಾಜೀನಾಮೆ ಕೊಡಬೇಕಿತ್ತು ಇಲ್ಲ ಸರ್ಕಾರವೇ ಅವರನ್ನು ವಜಾ ಗೊಳಿಸಬೇಕಿತ್ತು.

ಬೈರತಿ ಬಸವರಾಜ್ ಸಚಿವ ಸ್ಥಾನದಲ್ಲೇ ಮುಂದುವರೆದರೆ ದೂರುದಾರನಿಗೆ ನ್ಯಾಯ ಸಿಗಲು ಸಾಧ್ಯವೇ? ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕಿದ್ದ ಬಸವರಾಜ ಬೊಮ್ಮಾಯಿ ನಮಗೆ ನೈತಿಕತೆ ಪಾಠ ಮಾಡುತ್ತಿದ್ದಾರೆ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸುತ್ತೇನೆ.

ಡಿ.ಕೆ.ರವಿ ಹಾಗೂ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನಮ್ಮ ಸರ್ಕಾರ ಸಿ.ಬಿ.ಐ ತನಿಖೆಗೆ ಒಪ್ಪಿಸಿತ್ತು. ಎರಡೂ ಪ್ರಕರಣದಲ್ಲಿ ಜಾರ್ಜ್ ಅವರು ನಿರಪರಾಧಿ ಎಂದು ವರದಿ ಬಂದಿದೆ. ಇಂತಹ ಪ್ರಕರಣದಲ್ಲೇ ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು.

ಇಂದು ನನಗೆ ಪ್ರಾಥಮಿಕ ಪ್ರಸ್ತಾಪಕ್ಕೆ ಅವಕಾಶ ನೀಡುವ ಮೊದಲೇ ಸಭಾಧ್ಯಕ್ಷರು ನನ್ನ ನೋಟಿಸ್ ಅನ್ನು ತಿರಸ್ಕಾರ ಮಾಡಿದ್ದಾರೆ. ಮಾತನಾಡಲು ಅವಕಾಶವನ್ನೇ ಕೊಡಲ್ಲ ಅಂದರೆ ನಾವು ಸದನಕ್ಕೆ ಯಾಕೆ ಬರಬೇಕು?

ಗಣಪತಿ, ಡಿ.ಕೆ ರವಿ ಪ್ರಕರಣ ನ್ಯಾಯಾಲಯದಲ್ಲಿತ್ತು, ಆದರೂ ಸದನದಲ್ಲಿ ಚರ್ಚೆ ಮಾಡಲಾಗಿತ್ತು‌. ಈಗಲೂ ನಾವು ಪ್ರಕರಣದ ಮೆರಿಟ್ ಮೇಲೆ ಚರ್ಚೆ ಮಾಡಲ್ಲ. ಆದರೆ ಸಂತ್ರಸ್ತನಿಗೆ ನ್ಯಾಯ ಸಿಗಬೇಕು, ಅಪರಾಧ ಆರೋಪ ಎದುರಿಸುತ್ತಿರುವವರು ಸಚಿವ ಸ್ಥಾನದಲ್ಲಿದ್ದರೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನಮಗಿಲ್ಲ.

ನಿಯಮ‌60 ರಡಿ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಬೇಡಿಕೆ. ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೆ ಕೈ ಬಿಡುವ ಪ್ರಶ್ನೇಯೇ ಇಲ್ಲ. ಸಮಯಾವಕಾಶದ ಕೊರತೆ ಇದೆ ಎನಿಸಿದರೆ ಸರ್ಕಾರ ಸದನವನ್ನು ಒಂದು ತಿಂಗಳವರೆಗೆ ಮುಂದುವರೆಸಲಿ, ನಾವು ಸದನಕ್ಕೆ ಹಾಜರಾಗಲು ಸಿದ್ಧರಿದ್ದೇವೆ.

ಮಾಧ್ಯಮಗೋಷ್ಠಿಯಲ್ಲಿ ರಮೇಶ್‌ ಕುಮಾರ್‌, ಎಚ್.ಕೆ.ಪಾಟೀಲ್‌, ವಿಧಾನ ಪರಿಷತ್‌ ಸದಸ್ಯ ಎಂ.ನಾರಾಯಣಸ್ವಾಮಿ ಮುಂತಾದವರು ಇದ್ದರು.

#ResignByrathiBasavaraj

ಇದೇ ವೇಳೆ ಕಾಂಗ್ರೆಸ್‌ ಪಕ್ಷವೂ #ResignByrathiBasavaraj ಹ್ಯಾಶ್‌ ಟ್ಯಾಗ್‌ ಮಾಡಿ ಭೈರತಿ ಬಸವರಾಜು ರಾಜೀನಾಮೆಗೆ ಡಿಮಾಂಡ್‌ ಮಾಡುತ್ತಿದೆ. ಸಿದ್ದರಾಮಯ್ಯ ಸೇರಿದಂತೆ ವಿವಿಧ ಕಾಂಗ್ರೆಸ್‌ ನಾಯಕರು ಈಗಾಗಲೇ ಈ ಹ್ಯಾಶ್‌ ಟ್ಯಾಗ್‌ ನಲ್ಲಿ ಟ್ವಿಟರ್‌ʼನಲ್ಲಿ ಅಭಿಯಾನ ಶುರು ಮಾಡಿದ್ದಾರೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಗಂಭೀರ ಆರೋಪ ಮಾಡಿದ ಕಾಂಗ್ರೆಸ್‌ ಎಂಎಲ್ಸಿ
Tags: BengaluruCongressdr k sudhakarkalkereland garbingminister byrathi basavarajmlc m narayanaswamyramamurthynagarresign byrathi basavarajsiddaramaiahurban development minister
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ

ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

ಬರ ಪರಿಹಾರ;‌ ಕೇಂದ್ರದ ಬಿಜೆಪಿ-ಕಾಂಗ್ರೆಸ್‌ ಸರಕಾರಗಳು ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?

ಬರ ಪರಿಹಾರ;‌ ಕೇಂದ್ರದ ಬಿಜೆಪಿ-ಕಾಂಗ್ರೆಸ್‌ ಸರಕಾರಗಳು ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು?

2 years ago
ಕೋಲಾರದ ಮಾವಿಗೆ ಬರಲಿದೆ ಒಳ್ಳೆಯ ಕಾಲ; ಶ್ರೀನಿವಾಸಪುರದ ರುಚಿಕರ ಮ್ಯಾಂಗೋಗೆ ಶಕ್ತಿ ತುಂಬಲಿದೆ ಇಸ್ರೇಲ್

ಕೋಲಾರದ ಮಾವಿಗೆ ಬರಲಿದೆ ಒಳ್ಳೆಯ ಕಾಲ; ಶ್ರೀನಿವಾಸಪುರದ ರುಚಿಕರ ಮ್ಯಾಂಗೋಗೆ ಶಕ್ತಿ ತುಂಬಲಿದೆ ಇಸ್ರೇಲ್

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ