• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

cknewsnow desk by cknewsnow desk
December 28, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
1.2k
VIEWS
FacebookTwitterWhatsuplinkedinEmail

ಕೆಲಸ ಕಾಯಂ ಮಾಡುವಂತೆ ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

By GS Bharath Gudibande

ಚಿಕ್ಕಬಳ್ಳಾಪುರ: ಸರಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಚಿಕ್ಕಬಳ್ಳಾಪುರದ ನಗರದಲ್ಲಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ನೂರಾರು ಅತಿಥಿ ಉಪನ್ಯಾಸಕರು ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಎಂ.ಜಿ.ರಸ್ತೆಯಲ್ಲಿರುವ ಸರಕಾರಿ ಪದವಿ ಕಾಲೇಜು ಮುಂಭಾಗದಿಂದ ಮೆರವಣಿಗೆ ಹೊರಟ ಉಪನ್ಯಾಸಕರು  ಜೈ ಭೀಮ್ ವಿದ್ಯಾರ್ಥಿ ನಿಲಯ ಅವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ  ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿದ ಸರಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು.

ಸೇವಾ ಭದ್ರತೆ ನೀಡಿ

ಪ್ರತಿಭಟನಾ ನಿರತ ಅತಿಥಿ ಉಪನ್ಯಾಸಕರನ್ನು ಉದ್ದೇಶಿಸಿ ಮಾತನಾಡಿದ ಎಂ.ಮುನಿರಾಜು; ರಾಜ್ಯದಲ್ಲಿರುವ 438 ಸರಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 14,500 ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಅತ್ಯಂತ  ಕಡಿಮೆ ವೇತನ ಪಡೆದು ಕೆಲಸ ಮಾಡುತ್ತಾ ಬಂದಿದ್ದಾರೆ. ಸೇವೆಯನ್ನು ಖಾಯಂ ಮಾಡಿ ಎಂದು ಅನೇಕ ಹೋರಾಟ, ಹರತಾಳ, ಧರಣಿ, ತರಗತಿ ಬಹಿಷ್ಕಾರ ಮಾಡುವ ಮೂಲಕ ಸರಕಾರಕ್ಕೆ ಮನವಿ ಮಾಡಲಾಗಿದೆ. ಆದರೂ ಈ ಬೇಡಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದೆ ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ. ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕೆಲವಾರು ಉಪನ್ಯಾಸಕರಿಗೆ ವಯೋಮಿತಿ ಮೀರಿದೆ. ಹಲವರು ಈ ವ್ಯವಸ್ಥೆಯಿಂದ ರೋಸಿ ಹೋಗಿ ಜೀವವನ್ನು ಕಳೆದುಕೊಂಡಿದ್ದಾರೆ. ಇಷ್ಟಾದರೂ ಕ್ರಮಕೈಗೊಳ್ಳದ ಸರಕಾರದ ಮೊಂಡುತನವನ್ನು ವಿರೋಧಿಸಿ ಡಿ.10ರಿಂದ ಪ್ರಾರಂಭವಾಗಿರುವ ತರಗತಿ ಬಹಿಷ್ಕಾರ ಚಳವಳಿ ನಡೆಸುತ್ತಿದ್ದೇವೆ. ಇದು ಮಾಡು ಇಲ್ಲವೆ ಮಡಿ ಹೋರಾಟವಾಗಿದ್ದು, ಸರಕಾರದಿಂದ ಸ್ಪಷ್ಟ ಆದೇಶ ಬರುವವರೆಗೆ ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು.

ಅನಿರ್ದಿಷ್ಟಾವಧಿ ಪ್ರತಿಭಟನೆ

ಹಿರಿಯ ಉಪನ್ಯಾಸಕ ನರಸಿಂಹಮೂರ್ತಿ ಮಾತನಾಡಿ; ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ನಮ್ಮನ್ನು ಕರ್ನಾಟಕ ನಾಗರೀಕ ಸೇವೆ ನಿಯಮ1(3)(2)ಮತ್ತು ನಿಯಮ14ಡಿ ಅಡಿಯಲ್ಲಿ ಸೇವೆಯನ್ನು ವಿಲೀನಗೊಳಿಸಬೇಕು. ಈ ಪ್ರಕ್ರಿಯೆ ಮುಗಿಯುವವರೆಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಹಿಡಿಯಬೇಕು. ಕೊರೋನಾ ಅವಧಿ ನಂತರ ಅತಿಥಿ ಉಪನ್ಯಾಸಕರ ನೇಮಕಾತಿ ಆದೇಶವನ್ನು ಹಿಂಪಡೆದು, 12 ತಿಂಗಳ ಅವಧಿಗೆ ನೇಮಕ ಆದೇಶ ಮಾಡಬೇಕು. ಇಲ್ಲದಿದ್ದರೆ ವಿಧಾನಸೌಧದ ಮುಂದೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ರವೀಂದ್ರ, ಹರ್ಷನ್, ಡಾ.ಪ್ರಭು, ರಘುನಾಥ, ರಾಮಚಂದ್ರ, ಗಿರಿಜಾ, ಕೃಷ್ಣಮೂರ್ತಿ, ಅಜಿತ್‌ ಕುಮಾರ್, ಮೊಹಮ್ಮದ್ ಸಖೀಬ್. ಎನ್.ನರಸಿಂಹ ಮೂರ್ತಿ, ಗಂಗಾಧರ್, ನಾರಾಯಾಣಸ್ವಾಮಿ, ಮಂಜುನಾಥ್, ರಾಮಾಂಜಿನಪ್ಪ, ಹರೀಶ್, ಸೌಮ್ಯಾ, ಮಾಲಿನಿ, ರೋಜಾ, ರೀಟಾ, ಗಂಗಾಧರಪ್ಪ, ವೆಂಕಟರಮಣ, ಜಯಚಂದ್ರ, ಕಾಂತರಾಜ್, ಜಿ.ಎಸ್.ಭರತ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Tags: chikkaballapuracknewsnowclass boycottguest lecturersguest lecturers demandshigher educationkarnatakanewsprotest
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

ಸಚಿವ ಡಾ.ಸುಧಾಕರ್ ಬೆಂಬಲಿಗರ ಜಯಭೇರಿ

Leave a Reply Cancel reply

Your email address will not be published. Required fields are marked *

Recommended

ಎಲ್ಲಿದ್ದರೂ ಓಕೆ, ಯಾವಾಗ ಆದರೂ ಸರಿ, ಕಲಿಯಿರಿ‌: ಎಂಜಿನಿಯರಿಂಗ್, ಡಿಗ್ರಿ, ಡಿಪ್ಲೊಮೋದ 5 ಲಕ್ಷ‌ ವಿದ್ಯಾರ್ಥಿಗಳಿಗೆ  ಡಿಜಿಟಲ್‌ ಕ್ಲಾಸ್

ಎಲ್ಲಿದ್ದರೂ ಓಕೆ, ಯಾವಾಗ ಆದರೂ ಸರಿ, ಕಲಿಯಿರಿ‌: ಎಂಜಿನಿಯರಿಂಗ್, ಡಿಗ್ರಿ, ಡಿಪ್ಲೊಮೋದ 5 ಲಕ್ಷ‌ ವಿದ್ಯಾರ್ಥಿಗಳಿಗೆ ಡಿಜಿಟಲ್‌ ಕ್ಲಾಸ್

6 years ago
ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ