• About
  • Advertise
  • Careers
  • Contact
Wednesday, May 6, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಕಹಿ ಮರೆಯೋಣ..

cknewsnow desk by cknewsnow desk
January 1, 2022
in EDITORS'S PICKS, GUEST COLUMN
Reading Time: 1 min read
0
ಕಹಿ ಮರೆಯೋಣ..

Photo by Clay Banks on Unsplash

927
VIEWS
FacebookTwitterWhatsuplinkedinEmail

ಅಟ್‌ ಲೀಸ್ಟ್ ಇನ್ನೊಂದು ವರ್ಷ ಬರುವ ತನಕ..

Dr. Guruprasad Hawaldar

ಹೊಸ ವರ್ಷದಲ್ಲಿ ಹೊಸ, ಹೊಸ ಕನಸುಗಳು ಚಿಗುರುವುದು ಸಾಮಾನ್ಯ. ಆದರೆ ಚಿಗುರಿದ ಕನಸುಗಳು  ಸಾಕಾರವಾಗಬೇಕಾದರೆ ನಮ್ಮಲ್ಲಿ ಆತ್ಮವಿಶ್ವಾಸ ಉಳಿಯಬೇಕು. ಅದು ಉಳಿಯಬೇಕಾದರೆ ನಿರಾಸೆಗೆ ವಿದಾಯ ಹೇಳಿ ಉತ್ಸಾಹ ಚಿಲುಮೆಯಾಗಿ ತೆರೆದುಕೊಳ್ಳಬೇಕು. ಹಾಗೆ ನೋಡಿದರೆ ನಾವು ಸವೆಸಿ ಬಂದ ಅಷ್ಟೂ ವರ್ಷಗಳು ಅಮೂಲ್ಯವೇ.

ಪ್ರತಿ ವರ್ಷವೂ ವರ್ಷದ ಕೊನೆಯಲ್ಲಿ ನಿಂತು ನಾವು ಸವೆಸಿ ಬಂದ ಅಷ್ಟೂ ದಿನಗಳತ್ತ ತಿರುಗಿ ನೋಡಿದಾಗಲೆಲ್ಲ ಕಳೆದುಹೋದ ಕ್ಷಣಗಳು ಅದು ತಂದೊಡ್ಡಿದ ಸಂಕಟ, ಸಾವು, ನೋವು, ದುಃಖ ದುಮ್ಮಾನ, ಈಡೇರದೆ ಉಳಿದು ಹೋದ ಬಯಕೆಗಳು.. ಹೀಗೆ ಕೆಲವೇ ಕೆಲವಷ್ಟೆ ಖುಷಿಯ ಕ್ಷಣಗಳನ್ನು ಹೊರತುಪಡಿಸಿದರೆ ನೂರಾರು ನಿರಾಸೆ ಕಷ್ಟ- ನೋವುಗಳು ನಮ್ಮನ್ನು ಸುತ್ತಿ ನೇವಳಿಸಿ ಎಸೆದು ಬಿಡುತ್ತದೆ.

ಪ್ರತಿ ವರ್ಷದ ಆರಂಭದ ಶಪಥ ಕ್ರಮೇಣ ಮಾಸಿ ಹೋಗುತ್ತದೆ. ಅದರಾಚೆಗೆ ವರ್ಷದ ಆರಂಭದ ಆತ್ಮವಿಶ್ವಾಸಕ್ಕೆ ತುಕ್ಕು ಹಿಡಿಯುತ್ತದೆ. ಮತ್ತೆ ಅದೇ ಬದುಕು ಮುನ್ನಡೆಯುತ್ತದೆ. ಸಾಧನೆ ಹಾದಿಗಾಗಿ ನಾವೇ ಹಾಕಿಟ್ಟ ಮಾಪನವೂ ಮಸುಕಾಗಿ ಬಿಡುತ್ತದೆ. ಇಷ್ಟಕ್ಕೂ ಎಲ್ಲ ವರ್ಷಗಳಲ್ಲಿಯೂ ಒಂದಲ್ಲ ಒಂದು ರೀತಿಯ ಘಟನಾವಳಿಗಳು ನಡೆದೇ ನಡೆದಿರುತ್ತವೆ.

ಅವುಗಳಲ್ಲಿ ಕೆಲವು ಖುಷಿ ಕೊಟ್ಟಿದ್ದರೆ ಮತ್ತೆ ಕೆಲವು ದುಃಖವನ್ನು ತಂದಿರುತ್ತವೆ. ಕೆಲವು ಮನೆಗಳಲ್ಲಿ ಶುಭ ಕಾರ್ಯಕ್ರಮಗಳು ನಡೆದಿದ್ದರೆ ಮತ್ತೆ ಕೆಲವರ ಮನೆಗಳಲ್ಲಿ ಸಾವು-ನೋವು ಘಟಿಸಿರಬಹುದು. ಆದರೆ ಕಾಲವೇ ಹಾಗೆ ಅದಕ್ಕೆ ಎಲ್ಲವನ್ನು ಮರೆಸುತ್ತಾ ಮುನ್ನಡೆಸುವ ಶಕ್ತಿಯಿದೆ.

ವ್ಯಕ್ತಿಗತವಾಗಿ ನಾವೆಲ್ಲರೂ ಸಾಕಷ್ಟು ಏರುಪೇರುಗಳನ್ನು ಅನುಭವಿಸಿರಬಹುದು. ಆದರೆ ರಾಷ್ಟ್ರೀಯ ವಿಪತ್ತುಗಳು ಮಾತ್ರ ಎಲ್ಲರನ್ನು ತಲ್ಲಣಿಸಿ ಬಿಡುತ್ತವೆ.

ಕಳೆದ ಎರೆಡು ವರ್ಷಗಳಿಂದ ಕೊರೊನಾ ವೈರಸ್ಸಿನ ಪರಿಣಾಮದಿಂದ ಜನರೆಲ್ಲರೂ ಅನುಭವಿಸಿದ ಕಷ್ಟನಷ್ಟಗಳನ್ನು ಮರೆಯುವುದು ಅಸಾಧ್ಯ. ಇದೀಗ ಹೊಸ ವರ್ಷ, ಹೊಸ ಭರವಸೆ, ಹೊಸ ಸಾಧನೆಗಳತ್ತ ನೋಡುವ ಸಮಯ ಬಂದಿದೆ. ಹಿಂದಿನ ವರ್ಷಗಳಂತೆ ಹೊಸ ವರ್ಷವನ್ನು ಬರ ಮಾಡಿಕೊಳ್ಳುವಾಗ ಭವಿಷ್ಯದ ಬಗ್ಗೆ ಹೊಸ ನಿರ್ಣಯವನ್ನು ಮಾಡಿ, ಅದನ್ನು ಈಡೇರಿಸಲು ದೃಢ ಸಂಕಲ್ಪ ಮಾಡುವುದರ ಜತೆಗೆ ಬಂಧು-ಮಿತ್ರರ ಒಡಗೂಡಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿ, ಸಂಭ್ರಮಪಡಲು ಕೊರೊನಾ ಅಡ್ಡಿಯಾಗಿದೆ.

ಕೊರೊನಾ ಸಾಂಕ್ರಾಮಿಕವಲ್ಲದೆ ಈ ವರ್ಷದಲ್ಲಿ ರೈತರ ಪ್ರತಿಭಟನೆಗಳು, ಸರಣಿ ಚಂಡಮಾರುತ, ಪ್ರಾಕೃತಿಕ ವಿಕೋಪ, ಹವಾಮಾನ ಏರುಪೇರು, ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದು, ಸಿಲೆಬ್ರಿಟಿಗಳ ಆಘಾತಕಾರಿ ಸಾವು, ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆಯಿಂದ ಕೆಳಗಿಳಿದು, ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಬಿಟ್ ಕಾಯಿನ್ ಜಟಾಪಟಿ, ಮತಾಂತರ ನಿಷೇಧ ಕಾಯ್ದೆ ಜಾರಿ ಸೇರಿದಂತೆ ಅನೇಕ ನೋವು-ನಲಿವು, ರೋಗ ರುಜಿನ, ಪ್ರತಿಭಟನೆ ಸಂಘರ್ಷ, ರಾಜಕೀಯ ತಲ್ಲಣಗಳ ನಡುವೆ 2021ರ ಘಟನಾವಳಿಗಳು ನೆಡೆದಿದ್ದು, ಅದರಾಚೆಗೆ ಅಲ್ಲಲ್ಲಿ ಸಂಭವಿಸಿದ ಅಪಘಾತಗಳು, ಆಕಸ್ಮಿಕ ಅವಘಡಗಳು ಒಂದೇ ಎರಡೇ ಲೆಕ್ಕಕ್ಕೆ ಸಿಗದಷ್ಟಿವೆ. ಹಲವು ನಾಯಕರು, ಸ್ವಾಮೀಜಿಗಳು, ಪ್ರೀತಿಯ ಸಿನಿಮಾ ನಟರು ನಮ್ಮನ್ನು ಅಗಲಿದ್ದಾರೆ. ಅವರು ತುಂಬಿದ್ದ ಸ್ಥಾನದ ನಷ್ಟ ಭರಿಸುವುದು ಅಸಾಧ್ಯವೇ ಸರಿ.

ಮುಂಗಾರು ಅಬ್ಬರಿಸಿದ ಕಾರಣ ಹಲವು ಜಲಾಶಯಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗುವಂತೆ ಮಾಡಿತು, ಜತೆ ಜತೆಗೆ ಪ್ರವಾಹದಿಂದಾಗಿ ಸಂಭವಿಸಿದ ಹಾನಿ ಅನುಭವಿಸಿದ ಕಷ್ಟನಷ್ಟಗಳು ಮರೆಯಲಾರದ್ದು ಜಲ ಪ್ರಳಯ ಆ ಸಂಕಟದಿಂದ ಇನ್ನೂ ಹೊರಬರಲಾಗದೆ ಪರದಾಡುತ್ತಿರುವ ಜನ. ತಮ್ಮವರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬದ ಸದಸ್ಯರು.

ನಾವು ಎಲ್ಲವನ್ನು ನೆನಪಿಸಿಕೊಂಡು ಮುಂದಿನ ವರ್ಷಕ್ಕೆ ಹೆಜ್ಜೆ ಇಡುವುದು ಅನಿವಾರ್ಯವಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಸಂಭ್ರಮಕ್ಕಿಂತಲೂ ಹೆಚ್ಚಾದ ಸಾಮಾಜಿಕ ಹೊಣೆಗಾರಿಕೆಯನ್ನು ನಾವು ನಿರ್ವಹಿಸಬೇಕಾಗಿದೆ. ಕೊರೊನಾ ವಿರುದ್ಧದ ಸಂಘರ್ಷದಲ್ಲಿ ಅತ್ಯಂತ ನಿರ್ಣಾಯಕವಾದ ಸಂದರ್ಭ ಪ್ರಸ್ತುತ ನಮ್ಮ ಮುಂದಿದೆ. ಕೊರೊನಾ ಮೂರನೇ ಅಲೆ ಒಮಿಕ್ರೋನ್ ಆರಂಭವಾಗಿದೆ ಎನ್ನುವ ಆತಂಕವೂ ತಲೆದೋರಿದೆ. ಅದ್ದರಿಂದ ಸರಕಾರ ರಸ್ತೆ, ಉದ್ಯಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನಿರಾಕರಿಸಲಾಗಿದೆ. ವಸತಿ ಸಮುಚ್ಚಯದ ನಿವಾಸಿಗಳು ಹಾಗೂ ಕ್ಲಬ್‌ʼನವರು ತಂತಮ್ಮ ನಿಗದಿತ ಜಾಗದಲ್ಲಿ ಆಚರಣೆ ಮಾಡಲಿಕ್ಕೆ ಅನುಮತಿ ಇದ್ದರೂ ಆ ಕಾರ್ಯಕ್ರಮಗಳಿಗೆ ಹೊರಗಿನವರನ್ನು ಸೇರಿಸಲಿಕ್ಕೆ ಅವಕಾಶವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರ ಹಿತಾಸಕ್ತಿಯ ಕಾರಣದಿಂದಾಗಿ ರೂಪಿಸಲಾಗಿದ್ದು, ಅವುಗಳನ್ನು ಎಲ್ಲರೂ ಸ್ವಯಂ ಪ್ರೇರಣೆಯಿಂದ ಪಾಲಿಸುವುದು ಅಗತ್ಯವಾಗಿದೆ.

ವಿಶ್ವದ ವಿವಿಧ ಭಾಗಗಳಲ್ಲಿ ಕೊರೊನಾದ ಮೂರನೇ ಅಲೆ ಕಾಣಿಸಿಕೊಂಡಿದೆ. ಸಾಂಕ್ರಾಮಿಕ ವೈರಸ್ ನಿಯಂತ್ರಿಸಲು ಅಭಿವೃದ್ಧಿ ಹೊಂದಿದ ದೇಶಗಳೇ ಒದ್ದಾಡುತ್ತಿವೆ. ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿರುವಾಗ, ಸಂಭ್ರಮದ ಹೆಸರಿನಲ್ಲಿ ಮೈಮರೆತರೆ ಅಪಾಯಕ್ಕೆ ಆಹ್ವಾನ ನೀಡಿದಂತೆಯೇ. ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಮದ್ದು ಎನ್ನುವುದನ್ನು ಮನಗಂಡು, ಸಾಮೂಹಿಕ ಜವಾಬ್ದಾರಿ ನಿರ್ವಹಿಸಬೇಕಾದ ಸಂದರ್ಭವಿದು.

ನಮಗೆ ಗೊತ್ತು ಹೊಸ ವರ್ಷದಲ್ಲಿ ಏನೂ ಇಲ್ಲ ಎಂಬುದು ಆದರೂ ಹೊಸತನಕ್ಕೆ ಹಾತೊರೆಯುವ ಜಾಯಮಾನ ನಮ್ಮದಾಗಿರುವ ಕಾರಣ ಅತ್ತ ಹೆಚ್ಚು ಆಕರ್ಷಿತರಾಗುತ್ತಿದ್ದೇವೆ. ಇಡೀ ಜಗತ್ತೇ ಹೊಸ ವರ್ಷದತ್ತ ತವಕಿಸುತ್ತಿರುವಾಗ ಅವರಲ್ಲಿ ನಾವು ಒಬ್ಬರಾಗಿ ಮುನ್ನಡಿಯಿಡೋಣ. ವರ್ಷದ ಮೊದಲ ದಿನವಷ್ಟೆ ಹೊಸತು. ನಂತರ ಅದು ಕೂಡ ಹಳೆದಾಗುತ್ತದೆ.

ಮತ್ತೆ ಹೊಸ ವರ್ಷ ಬಂದಾಗ ನಾವು ಅದನ್ನು ಸ್ವಾಗತಿಸಲು ಸಿದ್ಧವಾಗಿ ಬಿಡುತ್ತೇವೆ. ಇದೆಲ್ಲವೂ ನೈಸರ್ಗಿಕ ನಿಯಮ. ಆದರೂ ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು ಹಳೆಯ ವರ್ಷದ ದಿನಗಳನ್ನು ಮೆಲುಕು ಹಾಕುತ್ತಾ ಸಂತಸದ ಕ್ಷಣಗಳನ್ನು ನೆನಪಿಸಿಕೊಳ್ಳುತ್ತಾ ದುಃಖದ ಕ್ಷಣಗಳನ್ನು ಮರೆಯುತ್ತಾ ಮುನ್ನಡೆಯೋಣ. ಇನ್ನೊಂದು ಹೊಸವರ್ಷ ಬರೋ ತನಕ…

ಹೊಸ ವರ್ಷದ ಶುಭಾಶಯಗಳು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಶ್ರೀರಾಮ ನವಮಿ ಶುಭಾಶಯಗಳು

ಶ್ರೀರಾಮ ನವಮಿ ಶುಭಾಶಯಗಳು

by cknewsnow desk
April 17, 2024
0

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೇ | ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ || ಶ್ರೀ ರಾಮ ಜಾನಕೀನಾಥ ತಾಟಕಾಸುರ ಮರ್ದನ | ಇಕ್ಷ್ವಾಕುಕುಲಸಂಭೂತ ರಣಪಂಡಿತ ರಾಘವಃ...

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

Next Post
ವೈಷ್ಣೋದೇವಿ ದೇವಾಲಯ: ಕಾಲ್ತುಳಿತದಲ್ಲಿ 20 ಸಾವು

ವೈಷ್ಣೋದೇವಿ ದೇವಾಲಯ: ಕಾಲ್ತುಳಿತದಲ್ಲಿ 20 ಸಾವು

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿಗೆ ಬೆಂಗಳೂರು ಕೊಚ್ಚೆ ನೀರು; ಕರವೇ ಪ್ರತಿಭಟನೆ

ಬಾಗೇಪಲ್ಲಿಗೆ ಬೆಂಗಳೂರು ಕೊಚ್ಚೆ ನೀರು; ಕರವೇ ಪ್ರತಿಭಟನೆ

4 years ago
ಹಿರಿಯ ಪತ್ರಕರ್ತಕನಿಗೆ ಒಲಿದ ಕನ್ನಡ ಪರಿಚಾರಿಕೆಯ ಅದೃಷ್ಟ

ಹಿರಿಯ ಪತ್ರಕರ್ತಕನಿಗೆ ಒಲಿದ ಕನ್ನಡ ಪರಿಚಾರಿಕೆಯ ಅದೃಷ್ಟ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ