• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ವೀಕೆಂಡ್‌ ಕರ್ಫ್ಯೂ ಸೇರಿ ಮತ್ತಷ್ಟು ಬಿಗಿಕ್ರಮ

cknewsnow desk by cknewsnow desk
January 2, 2022
in COVID-19, STATE
Reading Time: 1 min read
0
ವೀಕೆಂಡ್‌ ಕರ್ಫ್ಯೂ ಸೇರಿ ಮತ್ತಷ್ಟು ಬಿಗಿಕ್ರಮ

ಬೆಳಗಾವಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

1.1k
VIEWS
FacebookTwitterWhatsuplinkedinEmail

ಮಾತು ಕೇಳದ ಜನರಿಗೆ ಶಾಕ್‌ ಕೊಡಲಿದೆ ಸರಕಾರ

ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಓಮಿಕ್ರಾಸ್‌ ರೂಪಾಂತರಿ ಮಾರಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಕಾರಣಕ್ಕೆ ಸರಕಾರ ಎಲ್ಲ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಸೋಂಕು ಹರಡುವುದನ್ನು ತಡೆಯಲು ಹೊಸ ವರ್ಷ ಆಚರಣೆಗೆ ಬ್ರೇಕ್‌ ಹಾಕಿದ ಬೆನ್ನಲ್ಲೇ ತಾಂತ್ರಿಕ ನಿಪುಣರು ನೀಡಿರುವ ಸಲಹೆ ಮೇರೆಗೆ ವೀಕೆಂಡ್‌ ಕರ್ಫ್ಯೂ ಮತ್ತಿತರೆ ಬಿಗಿ ಕ್ರಮಗಳ ಬಗ್ಗೆ ಸರಕಾರ ಆಲೋಚನೆ ಮಾಡುತ್ತಿದೆ ಎಂದು ಉನ್ನತ ಮೂಲಗಳು ಸಿಕೆನ್ಯೂಸ್‌ ನೌ ಗೆ ತಿಳಿಸಿವೆ.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಪದೇಪದೆ ಜನರಿಗೆ ಎಚ್ಚರಿಕೆ ನೀಡುತ್ತಲೇ ಇದ್ದರೂ, ಸೋಂಕು ಹೆಚ್ಚುತ್ತಲೇ ಇದೆ.

ಕಳೆದ ಒಂದು ವಾರದಲ್ಲಿ ಕರೋನಾ, ಒಮಿಕ್ರಾನ್ ಕೇಸ್ ಹೆಚ್ಚಾಗ್ತಿದೆ. ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು. ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್‌ʼಗಳನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು. ಪ್ರಯಾಣಿಕರಿಗೆ ಸಣ್ಣಪ್ರಮಾಣದ ತೊಂದರೆಯಾದರೂ ಬೆಳಗಾವಿ ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ಲಸಿಕಾ ಅಭಿಯಾನ

ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಮಾನ್ಯ ಪ್ರಧಾನಮಂತ್ರಿಗಳ ಆಶಯದ ಈ ಕಾರ್ಯಕ್ರಮಕ್ಕೆ ಜನವರಿ 3 ರಂದು ಚಾಲನೆ ನೀಡಲಾಗುವುದು. ಜನವರಿ 10 ರಂದು ಕೊ -ಮಾರ್ಬಿಡಿಟಿ ಇರುವ  ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೊರೋನಾ ಎದುರಿಸಲು ಸಕಲ ಸಿದ್ಧತೆ

ಕೊರೋನಾ ವನ್ನು ನಿರ್ಬಂಧಿಸುವ ಜೊತೆಗೆ ಕರೋನಾವನ್ನು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಸಂಭವಿಸಿದ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಆಕ್ಸಿಜನ್ ಸರಬರಾಜು ಕಂಪನಿಗಳೊಂದಿಗೆ ಸಂಯೋಜಿಸಿ ಸಮರ್ಪಕ ಆಕ್ಸಿಜನ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ಜಿಲ್ಲಾ ಹಾಗು ತಾಲ್ಲೂಕು ಮಟ್ಟದಲ್ಲಿರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಮತ್ತು ಹೆಚ್ಚುವರಿ ಬೆಡ್, 4000 ಐಸಿಯುಗಳನ್ನು ಇಡೀ ರಾಜ್ಯದಲ್ಲಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ. ಸಮರ್ಪಕ ಔಷಧಿಪೂರೈಕೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧಾರ

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ನಿರ್ಧಾರ ಕೈಗೊಳ್ಳಲಾಗುವುದು. ಕರೋನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕರೋನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜನ ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದರೆ ಲಾಕ್ ಡೌನ್ ಘೋಷಿಸುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜನರು ಇದನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವ ಮೂಲಕ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು. ಸಧ್ಯದಲ್ಲಿಯೇ ಕರೋನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು  ಎಂದು ಅವರು ತಿಳಿಸಿದರು.

Tags: belagaviBengaluruchief minister basavaraj bommayicknewsnowcoronacovid19newsweekend curfew
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಶಕ್ತರಿಗೆ ಅಕ್ಷರ ಕಲಿಸಿದ ಅಕ್ಷರದವ್ವ

ಅಶಕ್ತರಿಗೆ ಅಕ್ಷರ ಕಲಿಸಿದ ಅಕ್ಷರದವ್ವ

Leave a Reply Cancel reply

Your email address will not be published. Required fields are marked *

Recommended

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

5 years ago
ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..

ನಾಳೆಯಿಂದ SSLC ಪರೀಕ್ಷೆ, ಶುಭಾಶಯ ಮಕ್ಕಳೇ..

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ