• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್‌ ಸಂತ್ರಸ್ತರಿಗೆ ಪರಿಹಾರ; ಸಚಿವ ಡಾ.ಸುಧಾಕರ್‌ ಕಟಾಕ್ಷಕ್ಕೆ ಕಾದಿದೆ ಗುಡಿಬಂಡೆ

cknewsnow desk by cknewsnow desk
January 12, 2022
in CHIKKABALLAPUR, COVID-19, EDITORS'S PICKS, STATE
Reading Time: 1 min read
0
ಕೋವಿಡ್‌ ಸಂತ್ರಸ್ತರಿಗೆ ಪರಿಹಾರ; ಸಚಿವ ಡಾ.ಸುಧಾಕರ್‌  ಕಟಾಕ್ಷಕ್ಕೆ ಕಾದಿದೆ ಗುಡಿಬಂಡೆ
1.4k
VIEWS
FacebookTwitterWhatsuplinkedinEmail

ಪರಿಹಾರ ವಿತರಿಸಿ ಪ್ರಚಾರ ಗಿಟ್ಟಿಸಲು ಸಚಿವರು-ಶಾಸಕರ ಹಗ್ಗಜಗ್ಗಾಟ

by GS Bharath Gudibande

ಗುಡಿಬಂಡೆ: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಸರಕಾರ ಪರಿಹಾರ ಘೋಷಿಸಿದ್ದರೂ  ಜಿಲ್ಲೆಯ ಸಚಿವರು, ಶಾಸಕರು ರಾಜಕೀಯ ಲಾಭ ಪಡೆಯಲು ಜನರ ಸಂಕಷ್ಟಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ತಾಲೂಕಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಕೆನ್ಯೂಸ್ ನೌ ಜತೆ ಮಾತನಾಡಿದ ಅವರು; ಕೋವಿಡ್-19 ಸೋಂಕಿನಿಂದ ಮೃತರಾದವರ ಕುಟುಂಬಗಳು ಸಾಕಷ್ಟು ಸಮಸ್ಯೆ, ತೊಂದರೆಗಳನ್ನು ಅನುಭವಿಸುತ್ತಿದ್ದು, ಅವರಿಗೆ ಪರಿಹಾರ ನೀಡಲು ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ಕೂಡಲೇ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು..

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ ತಾಲೂಕುಗಳಿಗೆ ಸಚಿವ ಡಾ.ಕೆ.ಸುಧಾಕರ್ ಅವರು ಪರಿಹಾರ ವಿತರಣೆ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ಕಾರ್ಯಕ್ರಮ ಮುಂದೂಡಿ ತಿಂಗಳಾದರೂ ಇನ್ನೂ ಕಾರ್ಯಕ್ರಮ ನಿಗದಿಯಾಗಿಲ್ಲ.

ದುಡಿಯುವ ಜೀವವನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಆಸರೆಯಾಗಿ ಪರಿಹಾರ ವಿತರಿಸಲು ರಾಜಕೀಯ ನಾಯಕರೇ ಬರಬೇಕು. ಅಲ್ಲಿಯವರೆಗೂ ಪರಿಹಾರ ವಿತರಿಸಲು ಸಾಧ್ಯವಿಲ್ಲ ಎಂಬಂತೆ ಕಾಣುತ್ತಿದೆ ಎಂದು ಮೃತರ ಕುಟುಬಂಸ್ಥರು ಸಿಕೆನ್ಯೂಸ್ ನೌ ಜತೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಚಿವರು ಮತ್ತು ಶಾಸಕರ ಜಗ್ಗಾಟ

ಸಂತ್ರಸ್ತರ ಪರಿಹಾರದ ವಿಚಾರದಲ್ಲಿ ಸಚಿವ ಡಾ.ಕೆ.ಸುಧಾಕರ್‌ ಮತ್ತು ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆಯಾ ಎಂಬ ಅನುಮಾನ ಈ ಭಾಗದ ಜನರಿಗೆ ಕಾಡುತ್ತಿದೆ. ಪರಿಹಾರದ ಹಣ ತಮ್ಮ ಕೈಯ್ಯಿಂದಲೇ ಸ್ವತಃ ನಾವೇ ಕೊಡಬೇಕು ಎಂಬ ಹಠ ಇಬ್ಬರಲ್ಲಿ ಇದ್ದಂತೆ ಕಾಣುತ್ತಿದೆ  ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದ ಕೊಡಿಸಲು ಜನ ಪ್ರತಿನಿಧಿಗಳಿಗೆ ಮನಸ್ಸಿಲ್ಲ

ಪರಿಹಾರಕ್ಕಾಗಿ ಸಂತ್ರಸ್ಥರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇನ್ನೂ ರಾಜ್ಯದಲ್ಲಿ ಮತ್ತೆ ಮೂರನೇ ಅಲೆ ಭೀತಿ ಆರಂಭವಾಗಿದ್ದು ಪರಿಹಾರ ವಿತರಣೆ ಮತ್ತಷ್ಟು ವಿಳಂಬವಾಗಬಹುದು‌ ಎನ್ನುವ ಅನುಮಾನ ಜನರನ್ನು ಕಾಡುತ್ತಿದೆ. ಅನಗತ್ಯವಾಗಿ ಜನಪ್ರತಿನಿಧಿಗಳು ಪರಿಹಾರ ನೀಡಿಕೆಯನ್ನು ವಿಳಂಬ ಮಾಡುತ್ತಿದ್ದು, ಅಧಿಕಾರಿಗಳು ಅಸಹಾಯಕರಾಗಿದ್ದಾರೆ.

ಯಾರು ಏನಂತಾರೆ?

ತಂದೆ, ತಾಯಿ ಮಕ್ಕಳನ್ನು ಹೀಗೆ ಮನೆಯ ಆಧಾರ ಸ್ತಂಭಗಳನ್ನು ಕಳೆದುಕೊಂಡ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಹೀಗಿರುವಾಗ ಸರಕಾರ ಘೋಷಿಸಿರುವ ಕೋವಿಡ್ ಪರಿಹಾರ ಹಣ ನೇರವಾಗಿ ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡದೇ, ಸಚಿವರ ಅಪಾಯಿಂಟ್ʼಮೆಂಟ್ʼಗಾಗಿ ಅಧಿಕಾರಿಗಳು ಕಾಯುತ್ತಿರುವುದು ಮಾನವೀಯತೆ ಅಲ್ಲ. ಕೂಡಲೇ ಅಧಿಕಾರಿಗಳು ಸಂತ್ರಸ್ತರಿಗೆ ಪರಿಹಾರ ವರ್ಗಾವಣೆ ಮಾಡಬೇಕು.

ನವೀನ್ ಜಿ.ಎನ್., ಜಿಲ್ಲಾ ಯುವಾಧ್ಯಕ್ಷ, ಜಯಕರ್ನಾಟಕ

ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ಶೀಘ್ರವಾಗಿ ನೀಡಿ ಎಂದು ತಹಸೀಲ್ದಾರ್ ಸಿಬ್ಗತ್ ವುಲ್ಲಾ ಅವರಲ್ಲಿ ಮನವಿ ಮಾಡಿದಾಗ, ಅವರು ದೊಡ್ಡ ಸಾಹೇಬರು ಬರಬೇಕು. ಅವರು ಬರುವವರೆಗೂ ಪರಿಹಾರ ನೀಡಬಾರದು ಎಂದು ಹೇಳಿದ್ದಾರೆ, ನಾವು ಏನು ಮಡೋದು ಎಂದಿದ್ದಾರೆ. ಗುಡಿಬಂಡೆಯ ಮುಖ್ಯರಸ್ತೆಯಲ್ಲಿ ಬಜ್ಜಿ ಹಾಕಿ ಜೀವನ  ಮಾಡುತ್ತಿದ್ದ ನಾಗೇಂದ್ರ ಎಂಬುವರು ಸೋಂಕಿಗೆ ಬಲಿಯಾಗಿದ್ದರು. ಈಗ ಅವರ ಪತ್ನಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಇಂತಹ ಸಂದರ್ಭದಲ್ಲಿ ಸಚಿವರು ಹಾಗೂ ಶಾಸಕರು ರಾಜಕೀಯ ಮಾಡುವುದು ಮಾನವೀಯತೆ ಅಲ್ಲ. ಕೂಡಲೇ ಪರಿಹಾರವನ್ನು ಸಂತ್ರಸ್ತರ ಖಾತೆಗೆ ಜಮಾ ಮಾಡಬೇಕು.

ಬುಲೆಟ್ ಶ್ರೀನಿವಾಸ್, ಅಧ್ಯಕ್ಷರು, ಜಯಕರ್ನಾಟಕ, ಗುಡಿಬಂಡೆ

ಪಟ್ಟಣದ 7ನೇ ವಾರ್ಡಿನ ಕುತುಬ್ದೀನ್ (ಚೋಟು) ಕೋವಿಡ್ ಸೋಂಕಿಗೆ ಬಲಿಯಾಗಿದ್ದರೆ, ಅವರ ಕುಟುಂಬಕ್ಕೆ ಅವರೇ ಆಧಾರವಾಗಿದ್ದರು. ಹಾಗಾಗಿ ಅವರನ್ನು ಕಳೆದುಕೊಂಡ ಜೀವನ ನಡೆಸಲು ಸಾಧ್ಯವಾಗದೇ ಆರ್ಥಿಕವಾಗಿ ನೋವನ್ನು ಎದುರಿಸುತ್ತಿದ್ದಾರೆ ಆ ಮನೆಯವರು. ಇಬ್ಬರು ಹೆಣ್ಣು ಮಕ್ಕಳು ಹಾಗೂ ತಾಯಿ ಬೀಡಿ ಸುತ್ತಿ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಬಾಡಿಗೆ ಕಟ್ಟಲು ಸಾಧ್ಯವಾಗದೇ ಪ್ರತಿದಿನ ನೋವಿನಲ್ಲಿ ಜೀವನ ಮಾಡುತ್ತಿದ್ದಾರೆ. ಇಂತಹ ಕುಟುಂಬಗಳನ್ನು ರಕ್ಷಿಸಬೇಕಾದ ಸರಕಾರ ಹಾಗೂ ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿ ಬಡವರನ್ನು ಬಾವಿಗೆ ತಳ್ಳುತ್ತಿದ್ದಾರೆ. ಇನ್ನಾದರೂ ಅಧಿಕಾರಿಗಳು ಕಣ್ತೆರೆದು ಕೂಡಲೇ ಪರಿಹಾರ ನೀಡಬೇಕು.

ಕಡೇಹಳ್ಳಿ ಶ್ರೀನಿವಾಸ್, ಗುಡಿಬಂಡೆ

ಹಣ ನೇರ ಜನರ ಖಾತೆಗೇ ಬರುತ್ತದೆ; ಜನ ಪ್ರತಿನಿಧಿಗಳ ಶೋ ಏಕೆ?

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲವನ್ನೂ ಡಿಜಿಟಲ್‌ ಮಾಡಿದ್ದಾರೆ. ಸರಕಾರದ ಎಲ್ಲಾ ಸೌಲಭ್ಯಗಳು  ನೇರವಾಗಿ ಆರ್.ಟಿ.ಜಿ.ಎಸ್ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಆಗುತ್ತವೆ. ಹೀಗಿರುವಾಗ ಪರಿಹಾರ ವಿತರಣೆಗೆ ಕಾರ್ಯಕ್ರಮ ಎನ್ನುವುದೇ ಅಪ್ರಸ್ತುತ ಮತ್ತು ಅನಗತ್ಯ. ಈ ಕಾರ್ಯಕ್ರಮಕ್ಕೆ ಸಚಿವರು, ಶಾಸಕರು ಬಂದು ಶೋ ಮಾಡುವ ಅಗತ್ಯವಿಲ್ಲ. ಕೇವಲ ಪ್ರಚಾರಕ್ಕಾಗಿ ಅವರು ಪರಿಹಾರ ವಿತರಣೆಗೆ ಕೊಕ್ಕೆ ಹಾಕಿ ಕೂತಿದ್ದಾರೆ. ಚೆಕ್‌ ಅಥವಾ ನಗದು ರೂಪದಲ್ಲಿ ಪರಿಹಾರ ವಿತರಿಸುವ ವ್ಯವಸ್ಥೆಯೇ ಈಗ ಇಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋವಿಡ್ ಸೋಂಕಿಗೆ ಬಲಿಯಾದ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ನೇರವಾಗಿ ಅವರ ಖಾತೆಗೆ ಆರ್.ಟಿ.ಜಿ.ಎಸ್ ಮಾಡಬೇಕು ಎಂಬುದು ನಿಯಮ. ರಾಜ್ಯ ಸರಕಾರ ಪರಿಹಾರ ಘೋಷಣೆ ಮಾಡಿ ಹಲವು ದಿನಗಳೇ ಕಳೆದಿದೆ. ತಾಲೂಕು ಮಟ್ಟದ ಅಧಿಕಾರಿಗಳು ಸಂತ್ರಸ್ತರ ಬಳಿ ದಾಖಲೆಗಳನ್ನು ಪಡೆದು ಹಲವು ತಿಂಗಳಾಗಿದೆ. ಆದರೆ ಇನ್ನೂ ಪರಿಹಾರ ಅವರ ಖಾತೆಗೆ ಜಮೆ ಆಗಿಲ್ಲ. ಸಚಿವರು ಬಂದು ಅವರ ಅಮೃತಹಸ್ತ (?)ದ ಮೂಲಕವೇ ಪರಿಹಾರ ನೀಡಬೇಕು ಎಂಬ ಮಾತು ಇರುವುದಿಂದ ಅಧಿಕಾರಿಗಳು ಏನು ಮಾಡದ ಸ್ಥಿತಿಯಲ್ಲಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೋ ಅಥವಾ ಜಂಗಲ್‌ ರಾಜ್ಯವೋ ಎಂದು ಸಂಘಟನೆಗಳು ಪ್ರಶ್ನೆ ಮಾಡುತ್ತಿವೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

Leave a Reply Cancel reply

Your email address will not be published. Required fields are marked *

Recommended

ನವರಾತ್ರಿಗೆ ಕತ್ತಲೆಭಾಗ್ಯ ಖಾತರಿ; ಹೊಸ ವರ್ಷಕ್ಕೆ ಕಗ್ಗತ್ತಲೆಭಾಗ್ಯ!!

ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್

3 years ago
ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ