ಕೋವಿಡ್ ಕಾರಣ ಕೊಟ್ಟ ಕನಕಪುರದ ಬಂಡೆ
ಬೆಂಗಳೂರು: ಮಾಜಿ ಎಂಎಲ್ಸಿ ಬೆಮೆಲ್ ಕಾಂತರಾಜು ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದು, ಕೊರೋನ ನಿಯಮಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರು ಯಾರೂ ಬರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಜವಾಬ್ದಾರಿಯುತ ಪಕ್ಷದ ಪ್ರತಿನಿಧಿಗಳಾಗಿ ಕೊರೋನ ನಿಯಮಗಳ ಪಾಲನೆ ನಮ್ಮೆಲ್ಲರ ಕರ್ತವ್ಯ. ಕಾರ್ಯಕರ್ತರು ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನನ್ನ ಮನವಿಗೆ ಸ್ಪಂದಿಸಬೇಕು. ಆಹ್ವಾನಿತ ಮುಖಂಡರನ್ನು ಹೊರತುಪಡಿಸಿ ಬೇರಾರೂ ಬರಕೂಡದು ಎಂದು ಮಾಧ್ಯಮ ಹೇಳಿಕೆ ಮೂಲಕ ಅವರು ತಿಳಿಸಿದ್ದಾರೆ.