• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸುಂದರ ಚಿಕ್ಕಬಳ್ಳಾಪುರ ನಿರ್ಮಾಣಕ್ಕೆ ಗುದ್ದಲಿಪೂಜೆ ಭರಾಟೆ

cknewsnow desk by cknewsnow desk
February 3, 2022
in CHIKKABALLAPUR, STATE
Reading Time: 2 mins read
0
ಸುಂದರ ಚಿಕ್ಕಬಳ್ಳಾಪುರ ನಿರ್ಮಾಣಕ್ಕೆ ಗುದ್ದಲಿಪೂಜೆ ಭರಾಟೆ

ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್‌ ಹಾಗೂ ಜಿಲ್ಲಾಧಿಕಾರಿ ಆರ್.‌ಲತಾ.

1.3k
VIEWS
FacebookTwitterWhatsuplinkedinEmail

ಸರಣಿ ಭೂಮಿಪೂಜೆ, ಟೇಪ್‌ ಕಟಿಂಗ್‌ ಮಾಡಿದ ಸಚಿವ ಡಾ.ಕೆ.ಸುಧಾಕರ್‌

ವಿಧಾನಸಭೆ ಚುನಾವಣೆಗೆ ಇನ್ನು ಒಂದೂ ಚಿಲ್ಲರೆ ವರ್ಷ ಬಾಕಿ ಇರುವಂತೆಯೇ ಚಿಕ್ಕಬಳ್ಳಾಪುರದಲ್ಲಿ ಗುದ್ದಲಿಪೂಜೆ, ಭೂಮಿಪೂಜೆ, ಶಂಕುಸ್ಥಾಪನೆ ಹಾಗೂ ಟೇಪ್‌ ಕಟಿಂಗ್‌ʼಗಳ ಭರಾಟೆ ಶುರುವಾಗಿದೆ. ಜಿಲ್ಲಾ ಉಸ್ತುವಾರಿ ಕೈತಪ್ಪಿದ ಮೇಲೆ ಜಿಲ್ಲೆಯಲ್ಲಿಂದು ಸರಣಿ ಕಾರ್ಯಕ್ರಮಗಳನ್ನು ಹಾಕಿಕೊಂಡ ಚಿಕ್ಕಬಳ್ಳಾಪುರ ಶಾಸಕರೂ ಆದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು; ಮೇಲಿಂದ ಮೇಲೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅದರ ಪೂರ್ಣ ವರದಿ ಇಲ್ಲಿದೆ.

by M Krishnappa Chikkaballapura

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವು ಅತೀ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಅದನ್ನು ಮತ್ತಷ್ಟು ಮೇಲ್ದರ್ಜೆಗೇರಿಸಿ ಸುಂದರ ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಿಂದ ಚಿಕ್ಕಬಳ್ಳಾಪುರ ನಗರಕ್ಕೆ ಪ್ರವೇಶಿಸುವ ಪ್ರಮುಖ ರಸ್ತೆಗಳನ್ನು ಉತ್ತಮ ಗುಣಮಟ್ಟದ ಕಾಂಕ್ರಿಂಟ್ ರಸ್ತೆಗಳನ್ನಾಗಿ ನಿರ್ಮಿಸುವ ಕಾರ್ಯಕ್ಕೆ ಇಂದು (ಗುರುವಾರ) ನಗರದ ವಿವಿಧೆಡೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಿಳಿಸಿದರು.

ಗುರುವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ನಗರಕ್ಕೆ ನಂದಿ, ಮುಸ್ಟೂರು, ಮೈಲಪ್ಪನಹಳ್ಳಿ ಮತ್ತು ಮಂಚನಬಲೆ ಕಡೆಯಿಂದ ಸಂಪರ್ಕಿಸುವ ರಸ್ತೆಗಳನ್ನು ಸುಸಜ್ಜಿತವಾಗಿ ಅಭಿರುದ್ಧಿ ಪಡಿಸಿ ಉತ್ತಮ ಸಿ.ಸಿ.ರಸ್ತೆ ಹಾಗೂ ರಸ್ತೆ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಅನುದಾನದಲ್ಲಿ ಗ್ರಾಮೀಣ ಭಾಗದಿಂದ ನಗರಕ್ಕೆ ಆಗಮಿಸುವವರಿಗೆ ನಗರ ಎಂಬ ಮನೋಭಾವನೆ ಉಂಟಾಗುವ ರೀತಿ ಮಾದರಿಯಾಗಿ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ನಗರಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ (four line )ರೀತಿಯ ರಸ್ತೆಯು ಅನೇಕ ನಗರಗಳಿಗೆ ಇಲ್ಲ. ಗ್ರಾಮೀಣ ಭಾಗದಿಂದ ನಗರವನ್ನು ಸಂಪರ್ಕಿಸುವ ರಸ್ತೆಗಳನ್ನು ಸಹ ಗುಣಮಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ನಗರದ ವಿವಿಧೆಡೆ ರಸ್ತೆ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ನೂತನ ಮಳಿಗೆಗಳಿಂದ ಆದಾಯ

ನಗರಸಭೆ ವತಿಯಿಂದ ನಗರಸಭಾ ವ್ಯಾಪ್ತಿಯ ಕೃಷ್ಣಾ ಟಾಕೀಸ್ ಮುಂಭಾಗದಲ್ಲಿ ಐ.ಡಿ.ಎಸ್.ಎಮ್.ಟಿ ಯೋಜನೆಯಡಿ ನೂತನ 13 ಮಳಿಗೆಗಳನ್ನು ನಿರ್ಮಿಸಲಾಗಿದ್ದು ಇದು ಭವ್ಯವಾದ ಸಂಕೀರ್ಣವಾಗಿದೆ. ಅಲ್ಲದೆ ನಗರದ ಹೃದಯ ಭಾಗದಲ್ಲಿರುವುದರಿಂದ ಹೆಚ್ಚು ಬೇಡಿಕೆಯೂ ಇದ್ದು, ವಾರದೊಳಗೆ ಹರಾಜು ಕರೆದು ಬಾಡಿಗೆಗೆ ನೀಡುವ ವ್ಯವಸ್ಥೆಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಇದರಿಂದ ನಗರಸಭೆಯ ವರಮಾನ ಸಹ ಹೆಚ್ಚಾಗಲಿದ್ದು, ಸಂಪನ್ಮೂಲವನ್ನು ಕ್ರೂಢಿಕರಿಸಲು ಸಹಕಾರಿಯಾಗಲಿದೆ ಎಂದರು.

ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗೆ ಪೂರಕವಾಗಿ ಬ್ಯಾಂಕ್ ಆಫ್ ಬರೋಡ ಅವರೊಂದಿಗೆ ಒಪ್ಪಂದ ಮಾಡಿಕೊಂಡು ನಗರಸಭೆ ಆವರಣದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಶಾಖೆಯನ್ನು ತೆರೆದಿರುವುದು ಉತ್ತಮ ಕಾರ್ಯವಾಗಿದೆ. ಡಿಜಿಟಲ್ ಕಾರ್ಡ್ ಮತ್ತು ಸ್ವೈಪಿಂಗ್ ವ್ಯವಸ್ಥೆ ಒದಗಿಸಿದ್ದು, ಹಣ ಪಾವತಿ ಮಾಡಲು ಸಾಲಿನಲ್ಲಿ ನಿಲ್ಲುವ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಉತ್ತಮ ಮಾರ್ಗವಾಗಿದೆ. ಇದರಿಂದ ನಗರಸಭೆಗೆ ಕೂಡ ಹೆಚ್ಚು ಹಣ ಸಂದಾಯವಾಗುತ್ತದೆ. ಈ ಕಾರ್ಯಕ್ಕೆ ಸಹಕರಿಸಿದ ನಗರಸಭೆ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು ಮತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು.

400 ಪಶು ವೈದ್ಯರ ನೇರ ನೇಮಕ

ಕ್ಯಾಬಿನೆಟ್ ಇತ್ತೀಚೆಗೆ 400 ಪಶು ವೈದ್ಯರನ್ನು ನೇಮಕ ಮಾಡಲು ಒಪ್ಪಿಗೆ ಸೂಚಿಸಿದೆ. ಅದನ್ನು ಕೆಪಿಎಸ್ಸಿ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಮಟ್ಟದ ಪಾಲಿಕ್ಲಿನಿಕ್ ಆಸ್ಪತ್ರೆ ನಿರ್ಮಾಣ

ಜಿಲ್ಲೆಯಲ್ಲಿ ಸುಸಜ್ಜಿತವಾದ ಜಿಲ್ಲಾಮಟ್ಟದ ಪಾಲಿಕ್ಲಿನಿಕ್ ಆಸ್ಪತ್ರೆಯನ್ನು ನಿರ್ಮಿಸಲು ಮಂಚನಬಲೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊನ್ನೇನಹಳ್ಳಿ ಗ್ರಾಮದ ಸರ್ವೆ ನಂ 26 ರಲ್ಲಿ 1.20 ಎಕರೆ ಜಮೀನನ್ನು ಜಿಲ್ಲಾಡಳಿತದಿಂದ ಮಂಜೂರು ಮಾಡಲಾಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ 2 ಕೋಟಿ ಅನುದಾನ ಕಾಮಗಾರಿಗಾಗಿ ಲಭ್ಯವಿದೆ. ಈ ಅನುದಾನದಲ್ಲಿ ಸುಸಜ್ಜಿತ ಪ್ರಯೋಗಾಲಯ, ಪ್ರಾಣಿಗಳ ತುರ್ತುಚಿಕಿತ್ಸೆಗಾಗಿ ಆಂಬುಲೆನ್ಸ್ ಸೇವೆ ಹಾಗೂ ತಜ್ಞ ಪಶುವೈದ್ಯರಿಂದ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ನಿರ್ಮಾಣವಾಗಲಿದೆ ಎಂದು ತಿಳಿಸಿ ಈ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿದರು.

ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಸಮಗ್ರ ಅಭಿವೃದ್ಧಿ (IDSMT) ಯೋಜನೆಯಡಿ ಚಿಕ್ಕಬಳ್ಳಾಪುರ ನಗರದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣವನ್ನು ಇಂದು ಉದ್ಘಾಟಿಸಲಾಯಿತು.

ಸಣ್ಣ ಮತ್ತು ಅತೀಸಣ್ಣ ವ್ಯಾಪಾರಿಗಳಿಗೆ ಕಡಿಮೆ ಬಾಡಿಗೆ ವೆಚ್ಚದಲ್ಲಿ ಸೂಕ್ತ ಮಾರುಕಟ್ಟೆ ಸ್ಥಳ ಒದಗಿಸಲು ಈ ಅಂಗಡಿ ಮಳಿಗೆಗಳು ಸಹಕಾರಿಯಾಗಲಿವೆ. pic.twitter.com/LgpqwAMNKC

— Dr Sudhakar K (Modi ka Parivar) (@DrSudhakar_) February 3, 2022

ಚಿಕ್ಕಬಳ್ಳಾಪುರದ ಹೊನ್ನೇನಹಳ್ಳಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪಾಲಿ ಕ್ಲಿನಿಕ್ ನ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಪಾಲಿಕ್ಲಿನಿಕ್ ನಲ್ಲಿ ಒಂದೇ ಸೂರಿನಡಿ ಎಲ್ಲಾ ರೀತಿಯ ಪಶುವೈದ್ಯ ಸೇವೆ ಸಿಗಲಿದ್ದು, ಪ್ರಾಯೋಗಾಲಯ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಎಕ್ಸ್ ರೇ ಸೌಲಭ್ಯ ಇರಲಿದೆ. pic.twitter.com/XFxPg7SmCG

— Dr Sudhakar K (Modi ka Parivar) (@DrSudhakar_) February 3, 2022

ಚಿಕ್ಕಬಳ್ಳಾಪುರದ ವಿವಿಧೆಡೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಒಟ್ಟು 3.3 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

1/2 pic.twitter.com/42iyuSvjqo

— Dr Sudhakar K (Modi ka Parivar) (@DrSudhakar_) February 3, 2022

ಸಚಿವರ ಕಾರ್ಯಕ್ರಮ ಏನೇನು?

ಮೊದಲಿಗೆ ಚಿಕ್ಕಬಳ್ಳಾಪುರ ನಗರಸಭೆ ಕಚೇರಿಯ ಆವರಣದಲ್ಲಿ ನಿರ್ಮಿಸಿರುವ ಬ್ಯಾಂಕ್ ಆಫ್ ಬರೋಡದ ನೂತನ ಪಾವತಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದರು.ನಂತರ ನಗರಸಭಾ ವ್ಯಾಪ್ತಿಯ ಕೃಷ್ಣಾ ಟಾಕೀಸ್ ಮುಂಭಾಗದಲ್ಲಿ ಐ.ಡಿ.ಎಸ್.ಎಮ್.ಟಿ ಯೋಜನೆಯಡಿ ನಿರ್ಮಿಸಿರುವ ನೂತನ ಅಂಗಡಿ ಮಳಿಗೆಗಳ ಉದ್ಘಾಟನೆಯನ್ನು ನೆರವೇರಿಸಿದರು.
ಅನಂತರ ನಗರದ ಬುದ್ಧ ವೃತ್ತದಿಂದ ನಗರಸಭೆ ಪರಿಮಿತಿವರೆಗಿನ ಮೈಲಪ್ಪನಹಳ್ಳಿ ರಸ್ತೆಯಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಕೆ.ಎಸ್.ಆರ್‌.ಟಿ.ಸಿ ಡಿಪೋ ಹತ್ತಿರದಿಂದ ನಗರಸಭೆ ಪರಿಮಿತಿವರೆಗಿನ ಮುಸ್ಟೂರು ರಸ್ತೆ ಯಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು ಮತ್ತು ನಗರದ ಬಿ.ಬಿ ರಸ್ತೆಯಿಂದ ಬೈಪಾಸ್ ರಸ್ತೆವರೆಗಿನ ಮಂಚನಬಲೆ ರಸ್ತೆಯಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿದರು.ನಂತರ ನಗರದ ಹೊರವಲಯದಲ್ಲಿ (ಚಿತ್ರಾವತಿ ಸಮೀಪದಲ್ಲಿ) ನಿರ್ಮಾಣ ಆಗಲಿರುವ “ಚಿಕ್ಕಬಳ್ಳಾಪುರ ಜಿಲ್ಲಾ ಪಾಲಿಕ್ಲಿನಿಕ್ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿದರು. ಕೊನೆಯದಾಗಿ ತುಮಕಲಹಳ್ಳಿ ಗ್ರಾಮದಲ್ಲಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಕಟ್ಟಡದ ನೆಲ ಅಂತಸ್ತು ಮತ್ತು ಒಂದನೇ ಅಂತಸ್ತು ನಿರ್ಮಾಣ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೆರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಣಾಧಿಕಾರಿ ಪಿ.ಶಿವಶಂಕರ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ತಾಲ್ಲೂಕು ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ ಬಾಬು, ಪೌರಾಯುಕ್ತ ಮಾಹಂತೇಶ್, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

Recommended

ಕೊರೋನಾ ನಡುವೆ ಶಾಸಕರಿಗೆ ಭರ್ಜರಿ ಶ್ರಾವಣ!!

ಕೊರೋನಾ ನಡುವೆ ಶಾಸಕರಿಗೆ ಭರ್ಜರಿ ಶ್ರಾವಣ!!

6 years ago
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ