• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಚಿಕ್ಕಬಳ್ಳಾಪುರ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ

cknewsnow desk by cknewsnow desk
February 4, 2022
in EDITORS'S PICKS, STATE
Reading Time: 2 mins read
0
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?
1.1k
VIEWS
FacebookTwitterWhatsuplinkedinEmail

ನಿಗದಿತ ಕಾರ್ಯಕ್ರಮವಿದ್ದರೂ ಭೂಕಂಪಪೀಡಿತ ಹಳ್ಳಿಗಳತ್ತ ಸುಳಿಯದ ಸಚಿವ ಡಾ.ಕೆ.ಸುಧಾಕರ್

by GS Bharath Gudibande

ಚಿಕ್ಕಬಳ್ಳಾಪುರ: ಒಂದೆಡೆ ಅಂಕೆ ಇಲ್ಲದ ಕಲ್ಲು ಗಣಿಗಾರಿಕೆ ಹಾಗೂ ನಿರಂತರ ಭೂಕಂಪನಗಳಿಂದ ಕಂಗೆಟ್ಟಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಭೂಕಂಪ ಪೀಡಿತ ಪ್ರದೇಶಗಳಿಗೆ ಕೇಂದ್ರದ ತಜ್ಞರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿಂದ ಜಿಲ್ಲೆಯಾದ್ಯಂತ ಸತತ ಭೂಕಂಪನಗಳು ಸಂಭವಿಸಿ ಜನರು ತೀವ್ರ ಆತಂಕಕ್ಕೆ ಗುರಿಯಾಗಿದ್ದರೂ ಜಿಲ್ಲೆಯ ಅಧಿಕಾರಿಗಳು, “ಭಯಪಡಬೇಡಿ.. ಏನೂ ಆಗಲ್ಲ” ಎಂದು ಸಬೂಬು ಹೇಳಿಕೊಂಡು ಬರುತ್ತಿದ್ದರು. ಈಗ ಕೇಂದ್ರ ತಂಡವೇ ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದರೊಂದಿಗೆ ಕಂಪನದ ತೀವ್ರತೆಯ ಬಿಸಿ ಸರಕಾರಕ್ಕೂ ತಟ್ಟಿದೆ.

ಗುರುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೂ ಕೇಂದ್ರ ಸರಕಾರದ ಕೇಂದ್ರ ಭೂ ವಿಜ್ಞಾನ ಇಲಾಖೆ, ಭೂಕಂಪನ ಶಾಸ್ತ್ರ ಇಲಾಖೆಯ ತಜ್ಞರು ಸೇರಿ ಉನ್ನತ ಅಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಹೊರಗಿಟ್ಟು ಭೂಕಂಪ ಪೀಡಿತ ಪ್ರದೇಶಗಳ ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಆದರೆ, ಕೇಂದ್ರ ತಂಡದ ಜತೆ ಶೆಟ್ಟಿಗೆರೆ, ಬಂಡಹಳ್ಳಿ ಗ್ರಾಮಗಳಿಗೆ ಭೇಟಿ ನೀಡಬೇಕಾಗಿದ್ದ ಸಚಿವ ಡಾ.ಕೆ.ಸುಧಾಕರ್‌ ಹೋಗಿಲ್ಲದಿರುವುದು ಎಲ್ಲರ ಹುಬ್ಬೇರಿಸಿದೆ.

 ಈ ಸುದ್ದಿಯನ್ನುಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.. 
ಚಿಕ್ಕಬಳ್ಳಾಪುರದಲ್ಲಿ ಭೂಕಂಪ, ಎರಡು ಸಲ ಕಂಪಿಸಿದ ಭೂಮಿ

ಕಲ್ಲು-ಗಣಿಗಾರಿಕೆ ಕಾರಣವೇ?

ಕಳೆದ ತಿಂಗಳಲ್ಲಿ ನಿರಂತರವಾಗಿ ಭೂಕಂಪನ ಆದ ಪರಿಣಾಮ ಸಾರ್ವಜನಿಕರು ಬೆಚ್ಚಿ ಬಿದ್ದಿದಾರೆ. ಹೀಗಿರುವಾಗ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಕಣ್ಣೊರೆಸುವ ಪ್ರಯತ್ನ ಮಾಡಿದ್ದಾರೆ. ಭೂಕಂಪನ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ನಾಶ, ಹವಾಮಾನ ವ್ಯತ್ಯಯಕ್ಕೆ ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಹಾಗೂ ಅಕ್ರಮವಾಗಿ ನಡೆಸುತ್ತಿರುವ ಬ್ಲಾಸ್ಟಿಂಗ್ʼಗಳೇ ಕಾರಣ ಎಂಬುದು ಸಾರ್ವಜನಿಕರ ಆಕ್ರೋಶ. ಕೇಂದ್ರ ತಂಡವು ಈ ಕುರಿತ ಮಾಹಿತಿಯನ್ನೂ ಕಲೆ ಹಾಕಿದೆ.

ಸ್ಥಳೀಯರಿಂದಲೂ ಕೇಂದ್ರ ತಂಡವು ಮಾಹಿತಿ ಪಡೆದಿದ್ದು, ಬೆಟ್ಟಗುಡ್ಡಗಳನ್ನು ಸ್ಫೋಟಿಸಿ ಸೀಳಿ ಹಾಕಿರುವ ದೃಶ್ಯಗಳನ್ನು ತಂಡದ ಸದಸ್ಯರು ಖುದ್ದು ವೀಕ್ಷಣೆ ಮಾಡಿದರು ಎಂದು ಗೊತ್ತಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು, ಸಚಿವರು ಆಗಿರುವ ಡಾ.ಕೆ ಸುಧಾಕರ್ ಅವರ ಹುಟ್ಟೂರು ಪೇರೆಸಂದ್ರಕ್ಕೆ ಕೂಗಳತೆ ದೂರದಲ್ಲಿ ಕಲ್ಲು ಗಣಿಗಣಿಗಾರಿಕೆ ಮಿತಿಮೀರಿ ನಡೆಯುತ್ತಿದೆ. ಭೂಕಂಪಪೀಡಿತ ಗ್ರಾಮಗಳಾದ ಶೆಟ್ಟಿಗೆರೆ, ಬಂಡಹಳ್ಳಿ, ಹಿರೆನಾಗವೇಲಿ, ಪೆರೇಸಂದ್ರ, ಮಂಡಿಕಲ್ಲು ಸೇರಿದಂತೆ ಹತ್ತು ಹಲವು ಹಳ್ಳಿಗಳಲ್ಲಿ ಕಂಪನಗಳು ಉಂಟಾಗಿದ್ದವು. ಗುರುವಾರ ವಿಜ್ಞಾನಿಗಳ ಜತೆ ಶೆಟ್ಟಗೆರೆ, ಬಂಡಹಳ್ಳಿ ಗ್ರಾಮಗಳಿಗೆ ಭೇಟಿ ನೀಡುವುದಾಗಿ ಸ್ವತಃ ಸಚಿವ ಸುಧಾಕರ್‌ ಅವರು ಟ್ವೀಟ್‌ʼನಲ್ಲಿ ಸ್ಟೇಟಸ್‌ ಹಾಕಿದ್ದರು. ಆದರೆ, ಭೂಕಂಪ ಪೀಡಿತ ಪ್ರದೇಶಗಳತ್ತ ಸುಳಿಯದೇ ಚಿಕ್ಕಬಳ್ಳಾಪುರದಲ್ಲಿ ಗುದ್ದಲಿಪೂಜೆ, ಟೇಪ್‌ ಕಟಿಂಗ್‌ʼನಲ್ಲಿ ಬ್ಯುಸಿಯಾಗಿದ್ದ ಸಚಿವರ ಬಗ್ಗೆ ಸ್ಥಳೀಯ ಜನರ ಆಕ್ರೋಶ ಕಟ್ಟೆಯೊಡೆದಿದೆ.

ಇಂದು ನನ್ನ ಸ್ವಕ್ಷೇತ್ರ ಚಿಕ್ಕಬಳ್ಳಾಪುರ ಪ್ರವಾಸ ಕೈಗೊಳ್ಳಲಿದ್ದು, IDSMT ಯೋಜನೆಯಡಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಅಂಗಡಿ ಮಳಿಗೆಗಳ ಉದ್ಘಾಟನೆ, ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ, ಭೂಕಂಪ ಪೀಡಿತ ಪ್ರದೇಶಗಳಿಗೆ ವಿಜ್ಞಾನಿಗಳೊಂದಿಗೆ ಭೇಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದೇನೆ. pic.twitter.com/vCMG5qJgT0

— Dr Sudhakar K (Modi ka Parivar) (@DrSudhakar_) February 3, 2022

ಸಚಿವ ಡಾ.ಕೆ.ಸುಧಾಕರ್ ಮೌನ ಯಾಕೆ?

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಡಾ.ಕೆ.ಸುಧಾಕರ್ ಶಾಸಕರಾದ ನಂತರ ಆ ಭಾಗದಲ್ಲಿ ಕಲ್ಲು ಕ್ರಷರ್ʼಗಳ ಪ್ರಮಾಣ ಹೆಚ್ಚಾಗಿದೆ. ಬೆಟ್ಟಗುಡ್ಡಗಳನ್ನು ಬಗೆಯಲು ಬೇಕಾಬಿಟ್ಟಿ ಲೈಸೆನ್ಸ್‌ʼಗಳನ್ನು ಕೊಡಲಾಗಿದೆ ಎಂಬ ಆರೋಪವಿದೆ. ಈ ಬಗ್ಗೆ ಜಿಲ್ಲೆಯ ಅನೇಕ ಹೋರಾಟಗಾರರೇ ನೇರವಾಗಿ ಆರೋಪ ಮಾಡಿದ್ದರು.‌

ಈ ಸುದ್ದಿಯನ್ನುಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಸುಧಾಕರ್‌ ಅವರ ಹುಟ್ಟೂರು ಪೇರೆಸಂದ್ರಕ್ಕೆ ಸಮೀಪವಿರುವ ಹಿರೇನಾಗವೇಲಿ ಬಳಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ 2021 ಫೆಬ್ರವರಿ 23ರಂದು ಸಂಭವಿಸಿದ ಜಿಲೆಟಿನ್‌ ಸ್ಫೋಟದಲ್ಲಿ 6 ಕಾರ್ಮಿಕರ ದೇಹಗಳು ಛಿದ್ರವಾದವು. ಆಗಿನ ಗೃಹ ಮಂತ್ರಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡಸಿದ್ದರು. ಆದರೂ ಈ ಭಾಗದಲ್ಲಿ ಕಲ್ಲು ಗಣಿಗಾರಿಕೆಗಳಿಗೆ ಅಂಕೆ ಬಿದ್ದಿಲ್ಲ. ಆ ದುರಂತ ಘಟನೆಯೂ ಸೇರಿದಂತೆ ರಾಜಕೀಯ ಕೃಪಾ ಕಟಾಕ್ಷದಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಕೇಂದ್ರ ತಂಡವು ಮಾಹಿತಿ ಕಲೆ ಹಾಕಿದೆ ಎಂದು ಮಾಹಿತಿ ಸಿಕ್ಕಿದೆ.

 ಈ ಸುದ್ದಿಯನ್ನುಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.. 
ಸಿಐಡಿ ತನಿಖೆಗೆ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ; ಹಿರೇನಾಗವೇಲಿಗೆ ಬಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಛಿಧ್ರವಾದ ದೇಹಗಳನ್ನು ನೋಡಿ ಕಣ್ಣೀರಿಟ್ಟ ಗೃಹ ಸಚಿವ
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಕ್ತಿಧಾಮದ ಮಕ್ಕಳನ್ನು ಶಿವಣ್ಣ ನಂದಿಗೆ ಕರೆದುಕೊಂಡು ಹೋಗಿದ್ದೇಕೆ?

ಶಕ್ತಿಧಾಮದ ಮಕ್ಕಳನ್ನು ಶಿವಣ್ಣ ನಂದಿಗೆ ಕರೆದುಕೊಂಡು ಹೋಗಿದ್ದೇಕೆ?

Leave a Reply Cancel reply

Your email address will not be published. Required fields are marked *

Recommended

ಇತಿಹಾಸ ಪ್ರಸಿದ್ಧ ಗುಡಿಬಂಡೆ ಶ್ರೀ ಸತಿ ನಾಗಭೈರವಿ ಗುಂಡಾಲಚ್ಚಮ್ಮ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ

ಇತಿಹಾಸ ಪ್ರಸಿದ್ಧ ಗುಡಿಬಂಡೆ ಶ್ರೀ ಸತಿ ನಾಗಭೈರವಿ ಗುಂಡಾಲಚ್ಚಮ್ಮ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ

5 years ago
ವಿಟಿ ವಿರುದ್ಧ ನಿಲ್ಲದ ಯುದ್ಧ ! ಸ್ವಾತಂತ್ರ್ಯಕ್ಕೆ ಏಳು ದಶಕ ಕಳೆದರೂ ದಾಸ್ಯವೆಂದರೆ ನಮಗೆ ಇಷ್ಟವೇಕೆ?

ವಿಟಿ ವಿರುದ್ಧ ನಿಲ್ಲದ ಯುದ್ಧ ! ಸ್ವಾತಂತ್ರ್ಯಕ್ಕೆ ಏಳು ದಶಕ ಕಳೆದರೂ ದಾಸ್ಯವೆಂದರೆ ನಮಗೆ ಇಷ್ಟವೇಕೆ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ