• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಭಜರಂಗ ದಳದ ಹರ್ಷ ಹತ್ಯೆ ಪೂರ್ವ ನಿಯೋಜಿತ: ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
February 21, 2022
in STATE
Reading Time: 1 min read
0
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ
941
VIEWS
FacebookTwitterWhatsuplinkedinEmail

ಹಿಂದೂ ಕಾರ್ಯಕರ್ತರು ಆತಂಕ ಪಡಬೇಕಿಲ್ಲ, ಅವರ ಬೆಂಬಲಕ್ಕೆ ನಾವಿದ್ದೇವೆ ಎಂದ ಡಾಕ್ಟರ್‌

ಬೆಂಗಳೂರು: ಹಿಂದೂ ಧರ್ಮಕ್ಕಾಗಿ ಕೆಲಸ ಮಾಡಿದ ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಬರ್ಬರ ಹತ್ಯೆ ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದರಲ್ಲಿ ಭಾಗಿಯಾದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಈ ದುಷ್ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ. ಇಂತಹ ಘಟನೆಗಳಿಂದ ಹಿಂದೂ ಕಾರ್ಯಕರ್ತರಲ್ಲಿ ಆತಂಕ ಉಂಟಾಗುತ್ತದೆ. ಹಿಂದೂ ಕಾರ್ಯಕರ್ತರೊಂದಿಗೆ ನಾನು ಸದಾ ಬೆಂಬಲವಾಗಿ ನಿಲ್ಲುತ್ತೇನೆ. ಇಲ್ಲಿ ಒಂದು ಕಡೆ ರಾಷ್ಟ್ರೀಯವಾದ, ಮತ್ತೊಂದೆಡೆ ಮೂಲಭೂತವಾದ ಕಾಣಿಸುತ್ತಿದೆ. ದೇಶದಲ್ಲಿ ಅಶಾಂತಿ ನೆಲೆಸಲು ಬೇರೆ ದೇಶದವರ ಕುಮ್ಮಕ್ಕು ಕೂಡ ಇದೆ ಎಂದೂ ಅನ್ನಿಸುತ್ತಿದೆ. ಈ ಬಗ್ಗೆ ಗೃಹ ಸಚಿವರಿಗೆ ಮನವಿ ಮಾಡಿ, ಇಂತಹ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ವಹಿಸಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಬೇಕು” ಎಂದು ಕೋರುತ್ತೇನೆ ಎಂದರು.

ಈ ಘಟನೆಯಿಂದ ಮನಸ್ಸಿಗೆ ಬಹಳ ನೋವಾಗಿದೆ. ಹತ್ಯೆಗೀಡಾದ ಯುವಕನ ಮನೆಯವರು ಈ ದುಃಖವನ್ನು ಹೇಗೆ ಭರಿಸಲು ಸಾಧ್ಯ ಎಂದು ಆಲೋಚಿಸಿ ಬಹಳ ನೋವುಂಟಾಗಿದೆ. ಈ ನೊಂದ ಕುಟುಂಬದೊಂದಿಗೆ ಸರ್ಕಾರ ನಿಂತಿದೆ. ಯಾವುದೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆತಂಕ ಪಡಬೇಕಿಲ್ಲ. ಎಲ್ಲಾ ಧರ್ಮಗಳಂತೆ ನಮ್ಮ ಹಿಂದೂ ಧರ್ಮವನ್ನೂ ರಕ್ಷಣೆ ಮಾಡುತ್ತೇವೆ. ಈ ಘಟನೆಯಿಂದಾಗಿ ಜನರು ಬೀದಿಗೆ ಬರುತ್ತಿದ್ದಾರೆ. ಆದರೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸರ್ಕಾರ ಎಲ್ಲರ ರಕ್ಷಣೆಗೆ ಬದ್ಧವಾಗಿದೆ. ಪ್ರತಿಭಟನಾಕಾರರು ಶಾಂತಿಯನ್ನು ಕಾಪಾಡಿಕೊಂಡು ಹೋರಾಟ ಮಾಡಬೇಕು ಎಂದು ಕೋರಿದರು.

ರಾಜಕೀಯ ಬೇಡ

ಹಿರಿಯ ನಾಯಕರು ಇಂತಹ ಸಮಯದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನೊಂದ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಮಾಡಬೇಕು. ಆದರೆ ಇದರಲ್ಲೂ ರಾಜಕೀಯ ಮಾಡಿದರೆ ಅದು ಹೇಯ ಕೃತ್ಯ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಇದು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಸಂಘಟನೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಟ್ಟ ಪ್ರವೃತ್ತಿಯನ್ನು ಎಂದೂ ಮಾಡುವುದಿಲ್ಲ ಎಂದರು.

ಕೆಲ ವರ್ಷಗಳಿಂದ ದೇಶದಲ್ಲಿ ಹಿಂದೂ ಕಾರ್ಯಕರ್ತರನ್ನು ಪೂರ್ವ ನಿಯೋಜಿತವಾಗಿ ಕೊಲೆ ಮಾಡಲಾಗುತ್ತಿದೆ. ಇಂತಹ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಯಾರೇ ಕಾರಣರಾಗಿದ್ದರೂ ಅಥವಾ ಯಾವುದೇ ಸಂಘಟನೆಯಾದರೂ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟಪಡಿಸಿದರು.

ನಿಯಮ ಪಾಲಿಸಬೇಕು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂದರ್ಶನವೊಂದರಲ್ಲಿ ಹಿಜಾಬ್ ಕುರಿತು ಅಭಿಪ್ರಾಯ ಹೇಳಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದೂ ಅವರು ಹೇಳಿದ್ದಾರೆ. ಶಾಲೆಯಲ್ಲಿ ಸಮವಸ್ತ್ರದ ನಿಯಮವನ್ನು ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಇದು ಸಹಜವಾದ ಹಾಗೂ ಸರಿಯಾದ ವಿಚಾರ. ಶಿಕ್ಷಣ ಸಂಸ್ಥೆಯ ಎಲ್ಲಾ ನಿಯಮಗಳನ್ನು ಮಕ್ಕಳು ಪಾಲಿಸಬೇಕು ಎಂದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಹರ್ಷ ಹಂತಕರನ್ನು ಗಲ್ಲಿಗೇರಿಸಿ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

2 years ago
ಹಿರೇವಾಗವೇಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡ ರಾಮು ಮನೆಗೆ ಉದಾರ ನೆರವು; ಮಗನ ಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಮಾತುಕೊಟ್ಟ ಸಂದೀಪ್‌ ರೆಡ್ಡಿ

ಹಿರೇವಾಗವೇಲಿ ಸ್ಫೋಟದಲ್ಲಿ ಜೀವ ಕಳೆದುಕೊಂಡ ರಾಮು ಮನೆಗೆ ಉದಾರ ನೆರವು; ಮಗನ ಪೂರ್ಣ ಶಿಕ್ಷಣ ವೆಚ್ಚ ಭರಿಸುವುದಾಗಿ ಮಾತುಕೊಟ್ಟ ಸಂದೀಪ್‌ ರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ