• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ನಾಳೆ ಸಿಎಂ ಚಾಲನೆ

cknewsnow desk by cknewsnow desk
February 22, 2022
in STATE
Reading Time: 1 min read
0
ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ನಾಳೆ ಸಿಎಂ ಚಾಲನೆ

Photo: CKPHOTOGRAPHY

942
VIEWS
FacebookTwitterWhatsuplinkedinEmail

ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ

ಬೆಂಗಳೂರು: ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management System-ITMS) ಅನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ.

ಐ.ಟಿ.ಎಂ.ಎಸ್ ಯೋಜನೆಯಿಂದ ಒಂದೇ ವೆಬ್‌ಸೈಟ್ ನಲ್ಲಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ. ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ / ಭಕ್ತಾಧಿಗಳಿಗೆ ಪಡೆಯಲು ಅನುಕೂಲವಾಗುವಂತೆ ಐಟಿಎಂಎಸ್ ತಂತ್ರಾಂಶದಲ್ಲಿ ಸದರಿ ಮಾಹಿತಿಗಳನ್ನು ಅಪ್ ಲೋಡ್ ಮಾಡುವ ವ್ಯವಸ್ಥೆಯಿದೆ.

ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳೂ ಇರಲಿವೆ. ಜಗತ್ತಿನ ಯಾವುದೇ ಭಾಗದಿಂದ ಆನ್‌ಲೈನ್‌ ಮೂಲಕ ಕಾಣಿಕೆಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ (Bhoomi etc.) ಸಂಯೋಜನೆ ಮಾಡಬಹುದಾದ ತಾಂತ್ರಿಕತೆಯನ್ನು ಅಳವಡಿಸಲಾಗಿದೆ. ವಿವಿಧ ರೀತಿಯ MIS ವರದಿಗಳನ್ನು ಪಡೆಯಲು ಅವಕಾಶವಿರುತ್ತದೆ.

ದೈವ ಸಂಕಲ್ಪ ಯೋಜನೆ

ಇದೇ ವೇಳೆ ದೈವ ಸಂಕಲ್ಪ ಯೋಜನೆಗೂ ಸಿಎಂ ಚಾಲನೆ ನೀಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿರುವ 205 ಎ ದರ್ಜೆಯ ದೇವಾಲಯಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ದೈವ ಸಂಕಲ್ಪ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ 25 ದೇವಾಲಯಗಳನ್ನು 1,140 ಕೋಟಿ ರು ಅಂದಾಜು ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು.

ಲಕ್ಷಾಂತರ ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ, ಮಲೈ ಮಹದೇಶ್ವರ ಸ್ವಾಮಿ ಬೆಟ್ಟ, ಚಾಮುಂಡಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ, ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನ, ಸವದತ್ತಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನ ಗಳು ಈ ಯೋಜನೆಯ ಅಡಿಯಲ್ಲಿ ಸೇರಿವೆ. ಭಕ್ತಾದಿಗಳಿಗೆ ವಸತಿ ಸೌಲಭ್ಯ, ಉತ್ತಮ ರಸ್ತೆ ಹಾಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಪಾರಂಪರಿಕ ಶಿಲಾಮಯ ಕಟ್ಟಡಗಳ ನಿರ್ಮಾಣ, ಮಲ್ಟಿಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆ, ಸ್ನಾನಘಟ್ಟ ಹಾಗೂ ಸುಸಜ್ಜಿತ ಅನ್ನದಾಸೋಹ ಭವನ, ವಾಣೀಜ್ಯ ಸಂಕೀರ್ಣ ಕಟ್ಟಡಗಳು, ಶೌಚಾಲಯಗಳು, ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕ, ಹಾಗೂ ಇನ್ನಿತರ ವ್ಯವಸ್ಥೆ ಗಳನ್ನು ಅಭಿವೃದ್ಧಿ ಗೊಳಿಸಲಾಗುವುದು. ದೇಶದ ಧಾರ್ಮಿಕ ಕ್ಷೇತ್ರಗಳನ್ನು ಸಮಗ್ರ ವಾಗಿ ಅಭಿವೃದ್ಧಿಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯು ಈ ಯೋಜನೆಗಳ ಮೂಲಕ ದಾಪುಗಾಲು ಇಟ್ಟಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಅ ಜೊಲ್ಲೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಹಾಗೂ ಆಯುಕ್ತರಾದ ರೋಹಿಣೀ ಸಿಂಧೂರಿ ಅವರು ಉಪಸ್ಥಿತರಿರುತ್ತಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೂ ಈಸ್ ಸಿದ್ದರಾಮಯ್ಯ?

ರಾಜ್ಯಪಾಲರ ಮಧ್ಯಪ್ರವೇಶಕ್ಕೆ HDK ಆಗ್ರಹ

Leave a Reply Cancel reply

Your email address will not be published. Required fields are marked *

Recommended

ಇಪ್ಪತ್ತು ದಿನದಲ್ಲಿ ಸಿಇಟಿ ಫಲಿತಾಂಶ

ಇಪ್ಪತ್ತು ದಿನದಲ್ಲಿ ಸಿಇಟಿ ಫಲಿತಾಂಶ

5 years ago
ಚಿಕ್ಕಬಳ್ಳಾಪುರ ಪೊಲೀಸರಿಗೆ ಶಹಬ್ಬಾಸ್‌ʼಗಿರಿ ಕೊಟ್ಟ ಗೃಹ ಸಚಿವ

ಚಿಕ್ಕಬಳ್ಳಾಪುರ ಪೊಲೀಸರಿಗೆ ಶಹಬ್ಬಾಸ್‌ʼಗಿರಿ ಕೊಟ್ಟ ಗೃಹ ಸಚಿವ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ