• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದೇವನಹಳ್ಳಿಯಿಂದ ಮೈಸೂರಿನವರೆಗೆ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ

P K Channakrishna by P K Channakrishna
March 11, 2022
in STATE
Reading Time: 1 min read
0
ದೇವನಹಳ್ಳಿಯಿಂದ ಮೈಸೂರಿನವರೆಗೆ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ
1k
VIEWS
FacebookTwitterWhatsuplinkedinEmail

ಕೇಂದ್ರ ಸರಕಾರದ ಜತೆ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೇವನಹಳ್ಳಿಯಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆ ಆಯೋಜಿಸಿದ್ದ ‘ಡೆಕ್ಕನ್ ಹೆರಾಲ್ಡ್ ಬೆಂಗಳೂರು 2040 ಶೃಂಗಸಭೆ’ ಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆಯನ್ನು ನಿವಾರಿಸಲು ಫೆರಿಫೆರಲ್ ರಿಂಗ್ ರಸ್ತೆಯ ಕಾಮಗಾರಿಗೆ ಸಧ್ಯದಲ್ಲಿಯೇ ಪ್ರಾರಂಭಿಸಲಾಗುವುದು. ಹೆಬ್ಬಾಳದಿಂದ ಮೈಸೂರು ರಸ್ತೆ ಫೆರಿಫೆರಲ್ ರಿಂಗ್ ರಸ್ತೆಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಅದರ ಮುಂದುವರಿದ ಭಾಗವಾಗಿ ಸೆಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ಉತ್ತಮ ರಸ್ತೆಗಳು, ಡ್ರೈನೇಜ್ ವ್ಯವಸ್ಥೆ, 12 ಅತಿ ಸಾಂದ್ರತೆಯಿರುವ ಕಾರಿಡಾರ್ ಗಳನ್ನು ಸರ್ಕಾರ ಅಭಿವೃದ್ಧಿಗೊಳಿಸುತ್ತಿದೆ. ಈ ಕಾರಿಡಾರ್ ಗಳಿಂದಾಗಿ ನಗರದ ಪ್ರಮುಖ ನಗರಗಳಿಗೆ ಸಿಗ್ನಲ್ ರಹಿತ ರಸ್ತೆ ಸಂಪರ್ಕ ದೊರೆಯಲಿದೆ. ಆಯಾ ವಾಹನಗಳ ಓಡಾಟಕ್ಕೆ ಆಯಾ ರಸ್ತೆಗಳನ್ನು ಅಭಿವೃದ್ಧಿಪಡಿಸಿ ವಾಹನ ದಟ್ಟಣೆಯನ್ನು ನಿವಾರಿಸಲು ಯೋಜಿಸಲಾಗುತ್ತಿದೆ. ಇದಕ್ಕಾಗಿ ಬೆಂಗಳೂರು ನಗರಕ್ಕೆ ಟ್ರಾಫಿಕ್ ಪ್ಲಾನನ್ನು ರೂಪಿಸಲಾಗುತ್ತಿದೆ‌ ಎಂದು ಸಿಎಂ ಹೇಳಿದರು.

ಮಳೆನೀರು ಸರಾಗವಾಗಿ ಹರಿದುಹೋಗಲು ರಾಜಕಾಲುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಈ ವರ್ಷ ಇದಕ್ಕಾಗಿ 1500 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದರು.

ಮುಖ್ಯಮಂತ್ರಿ @BSBommai ಅವರು ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ #DHBengaluru2040 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. pic.twitter.com/ucSNlbhLhh

— CM of Karnataka (@CMofKarnataka) March 11, 2022

ಜವಾಬ್ದಾರಿಯುತ ನಾಗರಿಕ ಸಮಾಜ ಬೆಂಗಳೂರಿನ ಜೀವಾಳ

ಜವಾಬ್ದಾರಿಯುತ ನಾಗರಿಕ ಸಮಾಜ ಬೆಂಗಳೂರಿನ ಜೀವಾಳವಾಗಿದೆ. ನಗರದ ಜನರ ಸಮಸ್ಯೆಗಳ ಬಗ್ಗೆ ಅರಿತು , ಪರಿಣಾಮಕಾರಿ ಪರಿಹಾರವನ್ನು ಸೂಚಿಸುವ ಉತ್ತಮ ಹಾಗೂ ಬಲಿಷ್ಟ ನಾಗರಿಕ ಸಮಾಜದ ಅವಶ್ಯಕತೆ ಇದೆ. ನಾಗರಿಕ ಸಮಾಜಗಳು ಸರ್ಕಾರದೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು. ಈ ಸಮಾಜಗಳಿಂದ ವಿವಿಧ ಸ್ಥರದ ಜನರೊಂದಿಗಿನ ಸಂಪರ್ಕದಿಂದಾಗಿ ಕೆಳವರ್ಗದ ಜನರ ಜೀವನವನ್ನು ಸುಗಮಗೊಳಿಸಿದಂತಾಗುತ್ತದೆ ಎಂದರು .

ಬೆಂಗಳೂರು ನಗರ ಅಭಿವೃದ್ಧಿ

ಭವಿಷ್ಯದ ಬೆಂಗಳೂರನ್ನು ರೂಪಿಸುವವರಿಗೆ ಬೆಂಗಳೂರಿನ ಇತಿಹಾಸದ ಜ್ಞಾನವಿರಬೇಕಾಗುತ್ತದೆ. ಮೂಲ ಬೆಂಗಳೂರಿಗೆ 8 ಪುರಸಭೆ , 110 ಗ್ರಾಮಗಳು ಸೇರಿ ಈಗ ನವೀಕೃತ ಬೆಂಗಳೂರು ಆಗಿದೆ. ಇಂತಹ ಬೆಂಗಳೂರಿಗೆ ಅಭಿವೃದ್ಧಿ, ರಸ್ತೆ, ನೀರು ಸೇರಿದಂತೆ ಉತ್ತಮ ಮೂಲಸೌಕರ್ಯಗಳನ್ನು ಒದಗಿಸಬೇಕಾಗಿದೆ. ನಗರದಲ್ಲಿ ರಸ್ತೆ ಅಭಿವೃದ್ಧಿ, ನೀರು ಸರಬರಾಜುಗಳಿಗೆ ಒಂದು ನಿರ್ದಿಷ್ಟ ಪ್ಲಾನ್ ಇಲ್ಲವಾಗಿದೆ. ಆದ್ದರಿಂದ ಬೆಂಗಳೂರು ನಗರ ಯೋಜನೆಯನ್ನು ಸರಿದಾರಿಗೆ ತರಬೇಕಿದೆ ಎಂದರು.

ಬೆಂಗಳೂರು ಆರ್ಥಿಕ ರಾಜಧಾನಿ

ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬರುತ್ತಾರೆ. ದೇಶದ ಉಳಿದ ಮೆಟ್ರೋಪಾಲಿಟನ್ ನಗರಗಳಿಗಿಂತ ಬೆಂಗಳೂರು ಉತ್ತಮವಾಗಿದೆ ಎಂದು ಹಲವು ಜನರು, ಖಾಸಗಿ ಕಂಪನಿಗಳು ನಗರಕ್ಕೆ ಬರುತ್ತಿವೆ. ಮೊದಲು ಬೆಂಗಳೂರು ಐಟಿ ಬಿಟಿ ರಾಜಧಾನಿ ಎಂದು ಗುರುತಿಸಲಾಗುತ್ತಿತ್ತು. ಆದರೆ ನಿಧಾನವಾಗಿ ಬೆಂಗಳೂರು ನಗರ ಈಗ ಆರ್ಥಿಕ ರಾಜಧಾನಿಯಾಗುವತ್ತ ಹೆಜ್ಜೆ ಹಾಕುತ್ತಿದೆ. ಪರಿಹಾರ ಮಾರ್ಗವನ್ನು ಹುಡುಕದೇ ಕೇವಲ ಸಮಸ್ಯೆಗಳ ಬಗೆಗಿನ ಚರ್ಚೆಯಿಂದ ಪ್ರಯೋಜನವಿಲ್ಲ. ನಗರ ಯೋಜನೆಗಳಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಿ ಅದನ್ನು ವಾಸ್ತವತೆಗೆ ತರುವವನು ನಿಜವಾದ ನಗರ ಯೋಜನೆಕಾರ ಮತ್ತು ಉತ್ತಮ ಆಡಳಿತಗಾರ ಎಂದೆನಿಸುತ್ತಾನೆ. ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನ್ನು ವಾಸ್ತವಿಕತೆಗೆ ತರಲು ಸಾರ್ವಜನಿಕರ ಸಹಯೋಗ , ಸಹಭಾಗಿತ್ವ ಅತ್ಯಗತ್ಯ ಎಂದು ತಿಳಿಸಿದರು.

ತ್ಯಾಜ್ಯ ನಿರ್ವಹಣೆ

ಬೆಂಗಳೂರಿನಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ ದೊಡ್ಡ ಸವಾಲಾಗಿದೆ. ನಗರದ ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದ ನಿಯಂತ್ರಣ, ನಿರ್ವಹಣೆ ಮಾಡಲು ಚಿಂತಿಸಬೇಕು. ದೊಡ್ಡ ಹೊಟೆಲ್ ಗಳು, ಕಲ್ಯಾಣಮಂಟಪಗಳು, ಆಸ್ಪತ್ರೆಗಳು, ಮಾಲ್ ಗಳು ಈಗ ಆಧುನಿಕ ತಂತ್ರಜ್ಞಾನದ ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪಿಸಿಕೊಳ್ಳುವ ಮೂಲಕ ತ್ಯಾಜ್ಯ ಸಂಸ್ಕರಣೆಯನ್ನು ಮಾಡಬಹುದಾಗಿದೆ. ಇದರಿಂದ ಉತ್ಪತ್ತಿಯಾಗುವ ಸಾವಯವ ಗೊಬ್ಬರವನ್ನು ಕೃಷಿಗೆ ಬಳಸಿಕೊಳ್ಳಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ: ಎಸಿಬಿ ಬಲೆಗೆ ಬಿದ್ದ ಸೋಮೇನಹಳ್ಳಿ ಪಿಡಿಓ

ಗುಡಿಬಂಡೆ: ಎಸಿಬಿ ಬಲೆಗೆ ಬಿದ್ದ ಸೋಮೇನಹಳ್ಳಿ ಪಿಡಿಓ

Leave a Reply Cancel reply

Your email address will not be published. Required fields are marked *

Recommended

ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

ಕಂಟ್ರೋಲ್‌ಗೆ ಬಾರದ ಕೋವಿಡ್‌ ಎರಡನೇ ಅಲೆ; ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಕ್ಟಿಕಲ್‌ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆ

5 years ago
ತಿಮಿಂಗಿಲಗಳನ್ನು ಬಿಟ್ಟು ಸಣ್ಣ ಮೀನುಗಳಿಗೆ ಗಾಳ ಹಾಕಲು ಕುಮ್ಮಕ್ಕು ನೀಡುತ್ತಿರುವ ಪಟ್ಟಭದ್ರರು; ಪ್ರಭಾವಿಗಳಿಗೆ ರಕ್ಷಣೆ, ಗುಡಿಬಂಡೆ ಪೊಲೀಸರನ್ನು ಸಿಕ್ಕಿಸಲು ಷಡ್ಯಂತ್ರ?

ಚಿಕ್ಕಬಳ್ಳಾಪುರ ಸ್ಫೋಟಕ್ಕೆ ಟ್ವಿಸ್ಟ್;‌ ಗುಡಿಬಂಡೆ ಇನಸ್ಪೆಕ್ಟರ್‌, ಸಬ್‌ ಇನಸ್ಪೆಕ್ಟರ್‌ ಇಬ್ಬರನ್ನು ಸಸ್ಪೆಂಡ್‌ ಮಾಡಿ ಕೈತೊಳೆದುಕೊಂಡಿತಾ ಸರಕಾರ? ಹಾಗಾದರೆ ಉಳಿದವರು..??

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ