1976ರಲ್ಲಿ ಡಾ.ರಾಜ್ ಅವರಿಗೆ ಗೌರವ ಡಾಕ್ಟರೇಟ್ ನೀಡಿದ್ದ ಮೈಸೂರು ವಿವಿ
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯ ಮರಣೋತ್ತರ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ವಿಷಯವನ್ನು ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.
ಮರಣೋತ್ತರ ಗೌರವ ಡಾಕ್ಟರೇಟ್ ಪಡೆಯಲು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಪ್ರೊ. ಹೇಮಂತ್ ಕುಮಾರ್ ತಿಳಿಸಿದರು.
ಮಾರ್ಚ್ 22ರಂದು ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವರು. ಪುನೀತ್ ರಾಜ್ ಕುಮಾರ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಗೌರವ ಡಾಕ್ಟರೇಟ್ ಪಡೆಯುವರು ಎಂದು ತಿಳಿಸಿದರು.
ಮೈಸೂರು ವಿಶ್ವ ವಿದ್ಯಾನಿಲಯವು 1976, ಫೆಬ್ರವರಿ 8 ರಂದು ವರನಟ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. ಈಗ ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರು ಕೂಡ ತಂದೆಯಂತೆ ಗೌರವ ಡಾಕ್ಟರೇಟ್ ಪಡೆಯುತ್ತಿದ್ದಾರೆ.