• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಹಣ! ಚಿನ್ನ!! ಆಸ್ತಿ!!! ಭಂಗಲೆ!!!! ವಾವ್ಹ್‌.. ಸಂಪದ್ಭರಿತ ಕರ್ನಾಟಕ!!

P K Channakrishna by P K Channakrishna
March 16, 2022
in CRIME, STATE
Reading Time: 2 mins read
0
ಹಣ! ಚಿನ್ನ!! ಆಸ್ತಿ!!! ಭಂಗಲೆ!!!!  ವಾವ್ಹ್‌.. ಸಂಪದ್ಭರಿತ ಕರ್ನಾಟಕ!!
993
VIEWS
FacebookTwitterWhatsuplinkedinEmail

ರಾಜ್ಯದ 18 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ಬುಧವಾರ ಮುಂಜಾನೆ ರಾಜ್ಯಾದ್ಯಂತ 18 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಹಚ್ಚಿದ್ದಾರೆ. 18 ಅಧಿಕಾರಿಗಳ 75 ಸ್ಥಳಗಳ ಮೇಲೆ ನೂರು ಎಸಿಬಿ ಅಧಿಕಾರಿಗಳು ಹಾಗೂ 300 ಸಿಬ್ಬಂದಿ ಏಕಕಾಲಕ್ಕೆ ಈ ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ಜ್ಞಾನೇಂದ್ರ ಕುಮಾರ್, ಬಿಡಿಎ ನಗರ ಯೋಜನಾ ವಿಭಾಗದ ಅಧಿಕಾರಿ ರಾಕೇಶ್‍ಕುಮಾರ್, ಕೈಗಾರಿಕಾ ಮತ್ತು ವಾಣಿಜ್ಯ ವಿಭಾಗದ ಹೆಚ್ಚುವರಿ ನಿರ್ದೆಶಕ ಬಿ.ಕೆ.ಶಿವಕುಮಾರ್ ಅವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಆಸ್ತಿ ಲೆಕ್ಕ ಹಾಕುತ್ತಿದ್ದಾರೆ.

ಯಾದಗಿರಿಯ ಆರ್‌ಎಫ್‍ಒ ರಮೇಶ್ ಕಂಕಟ್ಟೆ, ಗೋಕಾಕ್‍ನ ಕೌಜಲಗಿ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸವರಾಜ್ ಶೇಖರ್‌ ರೆಡ್ಡಿ ಪಾಟೀಲ್, ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರಸ್ತೆದಾರರಾಗಿರುವ ಬಸವಕುಮಾರ್ ಎಸ್. ಅಣ್ಣಿಗೆರೆ, ವಿಜಯಪುರದ ನಿರ್ಮಿತಿ ಕೇಂದ್ರದಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿರುವ ಗೋಪಿನಾಥ್ ಸಾ ಎನ್.ಮಳಗಿ, ಬದಾಮಿಯ ಆ‌ರ್‌ಎಫ್‍ಒ ಶಿವಾನಂದ್ ಪಿ.ಶರಣಪ್ಪ ಕೇದಗಿ ಅವರ ನಿವಾಸಗಳ ಮೇಲೂ ಎಸಿಬಿ ಪೊಲೀಸರು ದಾಳಿ ನಡೆಸಿದರು.

ರಾಮನಗರದ ಸಹಾಯಕ ಆಯುಕ್ತ ಮಂಜುನಾಥ್, ಸೋಷಿಯಲ್ ವೆಲ್ ಫೇರ್  ಇಲಾಖೆಯ ಜನರಲ್ ಮ್ಯಾನೇಜರ್ ಶ್ರೀನಿವಾಸ್, ದಾವಣಗೆರೆಯ ಜಿಲ್ಲಾ ಪರಿಸರ ಅಧಿಕಾರಿ ಮಹೇಶ್ವರಪ್ಪ, ಗುಂಡ್ಲುಪೇಟೆಯ ಅಬಕಾರಿ ಇನಸ್ಪೆಪೆಕ್ಟರ್ ಚಲುವರಾಜ್, ಹಾವೇರಿಯ ಎಪಿಎಂಸಿ ಸಹಾಯಕ ಅಭಿಯಂತರ ಕೃಷ್ಣನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉಪವಿಭಾಗದ ಸಹಾಯಕ ಅಭಿಯಂತರ ಗಿರೀಶ್,

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಎನ್.ಬಾಲಕೃಷ್ಣ, ಚಿಕ್ಕಮಗಳೂರಿನ ಲೋಕೋಪಯೋಗಿ ಇಲಾಖೆಯ ಎಇಇ ಗವಿರಂಗಪ್ಪ, ರಾಯಚೂರಿನ ಕೃಷ್ಣಭಾಗ್ಯ ಜಲನಿಗಮದ ಎಇಇ ಅಶೋಕ್‍ ರೆಡ್ಡಿ ಪಾಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಟಿಸಿಎಲ್ ಎಇಇ ದಯಾಸುಂದರ್ ರಾಜು ಎಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಭ್ರಷ್ಟ ಅಧಿಕಾರಿಗಳು.

ಸಿಸಿಬಿ ದಾಳಿಯ ದೃಶ್ಯಗಳು.. / ನೋಡಲು ಕೆಳಗಿನ ಸ್ಲೈಡ್‌ ಕ್ಲಿಕ್‌ ಮಾಡಿ..
ಅಬಕಾರಿ ಇನ್ಸಪೆಕ್ಟರ್ʼಗೆ ಛಳಿ ಬಿಡಿಸಿದ ಎಸಿಬಿ

ಚಾಮರಾಜನಗರ ವರದಿ: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಅಬ್ಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಹಾಗೂ ಅವರ ಸ್ನೇಹಿತನ‌ ಮನೆ ಮೇಲೆ ಬುಧವಾರ ಮುಂಜಾನೆ  ದಾಳಿ ನಡೆಸಲಾಗಿದೆ. ಗುಂಡ್ಲುಪೇಟೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಚೆಲುವರಾಜು ಅವರು ಮೈಸೂರಿನಲ್ಲಿ ವಾಸವಿರುತ್ತಿದ್ದರು.

ಈ ಅಧಿಕಾರಿ ಹಿಂದೆ ಕೊಳ್ಳೇಗಾಲ, ಚಾಮರಾಜನಗರದಲ್ಲೂ ಕೆಲಸ ನಿರ್ವಹಿಸಿ ಈಗ ಗುಂಡ್ಲುಪೇಟೆಯಲ್ಲಿ ಕೆಲಸ ಮಾಡುತ್ತಿದ್ದರು.

ಈ ಅಧಿಕಾರಿ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬದನಗುಪ್ಪೆಯಲ್ಲಿರುವ ಮಣಿಕಂಠ ವೈನ್ ಶಾಪ್ ಮಾಲೀಕರ ಮಗ ಪುನೀತ್  ಸಮೀಪವರ್ತಿಯಾಗಿದ್ದ. ಅಧಿಕೃತ ದೂರು ಬಂದ ಹಿನ್ನಲೆಯಲ್ಲಿ ಚಾಮರಾಜನಗರ – ಮೈಸೂರು ಎಸಿಬಿ ಅದಿಕಾರಿಗಳು ಮೈಸೂರು, ಚನ್ನಪಟ್ಟಣ, ರಾಮನಗರ, ಚಾಮರಾಜನಗರ ಅಲ್ಲದೆ ಬೆಂಗಳೂರಿನಲ್ಲಿರುವ ಈ ಅಧಿಕಾರಿಯ ತಮ್ಮನ ನಿವಾಸ ಮತ್ತು ಸ್ನೇಹಿತನ ಮನೆ ಹೀಗೆ ವಿವಿಧೆಡೆ ದಾಳಿ ನಡೆಸಿ ನಡೆಸಿದ್ದಾರೆ.

ಪೊಲೀಸ್ ಇನ್ಸಪೆಕ್ಟರ್ ನಿವಾಸದ ಮೇಲೆ ದಾಳಿ

ಮೈಸೂರು ವರದಿ:  ಇಲ್ಲಿನ ವಿಜಯನಗರ ಪೊಲೀಸ್ ಠಾಣಾ ಇನ್ಸಪೆಕ್ಟರ್ ಬಾಲಕೃಷ್ಣ ಹೆಚ್.ಎನ್ ಅವರ ವಿಜಯನಗರ ಎರಡನೇ ಹಂತದಲ್ಲಿರುವ ನಿವಾಸ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ದಾಖಲೆ ವಶಪಡಿಸಿಕೊಂಡಿದ್ದಾರೆ. ಬಾಲಕೃಷ್ಣ  ಹೆಚ್.ಎನ್ ಅವರ ಮೇಲೆ ಅಕ್ರಮ ಆಸ್ತಿ ಸಂಪಾದನೆ ಕುರಿತ ಹಲವು ಬಾರಿ ದೂರುಗಳು ಬಂದಿತ್ತು ಈ ದೂರುಗಳನ್ನಾಧರಿಸಿ  ದಾಳಿ ನಡೆಸಲಾಗಿದೆ.

Tags: acbacb raids in karnatakacknewsnowkarnataka
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

ಯಲಹಂಕದಲ್ಲಿ ಸೈಟು ಕೊಳ್ಳುವ ಮುನ್ನ ಯೋಚಿಸಿ!!

Leave a Reply Cancel reply

Your email address will not be published. Required fields are marked *

Recommended

ಕಷ್ಟಗಳನ್ನೇ ಮೆಟ್ಟಿಲು ಮಾಡಿಕೊಂಡ ಅಕ್ಕ-ತಂಗಿ

ಚಿನ್ನದ ಸಹೋದರಿಯರಿಗೆ ಇಂದು ಸನ್ಮಾನ

4 years ago
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ