• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ

cknewsnow desk by cknewsnow desk
March 20, 2022
in STATE
Reading Time: 2 mins read
0
ಸೂತಕದಲ್ಲಿ ಸಿನಿಮಾ ಕಾರ್ಯಕ್ರಮಕ್ಕೆ ಹೋಗಿದ್ದ ಸಿಎಂ
1.3k
VIEWS
FacebookTwitterWhatsuplinkedinEmail

RRR ಪ್ರೀ ರಿಲೀಸ್‌ ಇವೆಂಟ್‌ʼಗೆ ಹೋಗಿದ್ದ ಸಿಎಂಗೆ HDK ಚಾಟಿ

ಬಸ್‌ ದುರಂತದಲ್ಲಿ ಗಾಯಗೊಂಡವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ; ಆಸ್ಪತ್ರೆಗೆ ಭೇಟಿ, ನೊಂದ ಕುಟುಂಬಗಳಿಗೆ ನೆರವು: ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತ ಬಸ್ʼಗಳನ್ನು ನೀಡಬೇಕು

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಾಂತ್ವನ ಹೇಳದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ RRR ಸಿನಿಮಾ ಪ್ರೀ ರಿಲೀಸ್‌ ಇವೆಂಟ್‌ʼನಲ್ಲಿ ನಾಲ್ಕು ಗಂಟೆಗಳ ಕಾಲ ಕೂತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯದಲ್ಲಿ ಎಷ್ಟೊಂದು ಸಮಸ್ಯೆಗಳಿವೆ. ಮುಖ್ಯಮಂತ್ರಿಗಳು ನೋಡಿದರೆ ನಾಲ್ಕು ಗಂಟೆಗಳ ಕಾಲ ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಪಘಾತವಾಗಿ ಜನ ಸತ್ತರೂ, ಆಸ್ಪತ್ರೆಗಳಲ್ಲಿ ಅವರ ಆರ್ತನಾದ ಮುಗಿಲುಮುಟ್ಟಿದ್ದರೂ ಮುಖ್ಯಮಂತ್ರಿಗಳಿಗೆ ಸಿನಿಮಾ ಕಾರ್ಯಕ್ರಮವೇ ಮುಖ್ಯವಾಗಿದೆ. ನೊಂದ ಜನರಿಗೆ ಸಾಂತ್ವನ ಹೇಳುವುದಕ್ಕಿಂತ ಅವರಿಗೆ ಸಿನಿಮಾ ಕಾರ್ಯಕ್ರಮವೇ ಹೆಚ್ಚಾಗಿದೆ ಎಂದು ಕುಮಾರಸ್ವಾಮಿ ಅವರು ಬೊಮ್ಮಾಯಿ ಅವರ ಟೀಕಾಪ್ರಹಾರ ನಡೆಸಿದರು.

ಇಂದು ಚಿಕ್ಕಬಳ್ಳಾಪುರದಲ್ಲಿ ಏರ್ಪಡಿಸಲಾಗಿದ್ದ #RRR ಚಲನಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕನ್ನಡದ ಹಿರಿಯ ನಟ ಶಿವರಾಜಕುಮಾರ, #RRR ಚಿತ್ರದ ನಾಯಕ ನಟ ಜೂ. ಎನ್ ಟಿ ಆರ್, ರಾಮ್ ಚರಣ ತೇಜಾ, ನಿರ್ದೇಶಕ ರಾಜಮೌಳಿ ಹಾಗೂ ಉಪಸ್ಥಿತರಿದ್ದರು. pic.twitter.com/BrBhJZzTLN

— Basavaraj S Bommai (Modi Ka Parivar) (@BSBommai) March 19, 2022

ನೈಜವಾಗಿ ಹೋರಾಟ ಮಾಡಿದ ವ್ಯಕ್ತಿಗಳೇ ಬೇರೆ, ಸಿನಿಮಾದಲ್ಲಿ ತೋರಿಸಿರುವುದೇ ಬೇರೆ. ಭಾವನಾತ್ಮಕ ವಿಚಾರಗಳು, ಹೆಸರುಗಳ ಮೇಲೆ ಮತ ಪಡೆಯುವುದು ಈಗೀಗ ಹೆಚ್ಚಾಗಿದೆ. ಜನರು ಬುದ್ಧಿವಂತರಾಗಬೇಕು. ಸರಕಾರದ ವೈಫಲ್ಯದಿಂದಲೇ ಈ ಅಪಘಾತವಾಗಿದೆ. ಇದರ ಹೊಣೆಯನ್ನು ಸರಕಾರವೇ ಹೊರಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಮಾಜಿ ಸಿಎಂ ನೆರವು

ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಲು ಧಾವಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನೊಂದ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದರು.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ಗಾಯಾಳುಗಳಿಗೆ ತಲಾ 10,000 ರೂ. ಹಾಗೂ ದುರಂತದಲ್ಲಿ ಜೀವ ಕಳೆದುಕೊಂಡು ಆರು ಕುಟುಂಬಗಳಿಗೆ ತಲಾ 50,000 ರೂ.ಗಳ ನಗದು ಮೊತ್ತವನ್ನು ಹಸ್ತಾಂತರ ಮಾಡಿದರು.

ಅಲ್ಲದೆ, ಸರಕಾರದಿಂದ ಇನ್ನೂ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡುವುದಾಗಿ ಹೇಳಿದರು.

ವೈದ್ಯರ ಜತೆ ಪ್ರತಿ ಗಾಯಾಳುವಿನ ಬಳಿಗೂ ತೆರಳಿದ ಕುಮಾರಸ್ವಾಮಿ ಅವರು, ಅವರ ಕ್ಷೇಮ ವಿಚಾರಿಸಿದರಲ್ಲದೆ, ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದಲ್ಲದೆ, ಅವರ ಕುಟುಂಬದ ಪರಿಸ್ಥಿತಿಗಳನ್ನು ಕೇಳಿ ತಿಳಿದುಕೊಂಡರು. ನಂತರ ವೈದ್ಯರಿಂದಲೂ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ಅವರ ಸಂಕಟ ಕಂಡು ಮನಸ್ಸಿಗೆ ಬಹಳ ನೋವಾಯಿತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 1/3 pic.twitter.com/Js88jxQk21

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2022

ಮತ್ತೆ ಇಂಥ ದುರ್ಘಟನೆಗಳು ಸಂಭವಿಸದಂತೆ ರಾಜ್ಯ ಸರಕಾರ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಬೇಕು. ಸಾರ್ವಜನಿಕ ಬಸ್‌ ಸೌಲಭ್ಯವನ್ನು ಉತ್ತಮಪಡಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. 3/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2022

ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಸಂಪೂರ್ಣವಾಗಿ ಭರಿಸಬೇಕು. ಸುರಕ್ಷತಾ ಕ್ರಮಗಳಿಗೆ ಹೆಚ್ಚು ಒತ್ತು ನೀಡಿ ಅಪಘಾತಗಳನ್ನು ತಡೆಯಬೇಕು. ಗ್ರಾಮೀಣ ಪ್ರದೇಶಗಳಿಗೆ ಸುಸ್ಥಿತಿಯಲ್ಲಿರುವ ಬಸ್ʼಗಳನ್ನೇ ನೀಡಬೇಕು. ಕ್ರಮ ಜರುಗಿಸಿ ಎಂದರೆ ಖಾಸಗಿ ಬಸ್ʼಗಳ ಪರ್ಮಿಟ್ ರದ್ದು ಮಾಡುವುದು ಪರಿಹಾರವಲ್ಲ. ಇರುವ ನಿಯಮಗಳನ್ನು ಬಿಗಿಯಾಗಿ ಜಾರಿ ಮಾಡಬೇಕು. ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡದೇ ಅವುಗಳ ಪರ್ಮಿಟ್ ರದ್ದುಗೊಳಿಸುವುದರಿಂದ ಏನು ಪ್ರಯೋಜನ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಎಲ್ಲೆಡೆ ಕೆಎಸ್ಆರ್ಟಿಸಿ ಬಸ್ʼಗಳ ಸಂಖ್ಯೆಯನ್ನೇ ಕಡಿಮೆ ಮಾಡಲಾಗಿದೆ. ಸಾರಿಗೆ ನೌಕರರು ಮುಷ್ಕರ ನಡೆಸಿದಾಗ ಅನೇಕ ಸಿಬ್ಬಂದಿಯನ್ನು ಮನೆಗೆ ಕಳಿಸಲಾಗಿದೆ. ಕೋವಿಡ್ ಅನಾಹುತದಿಂದಲೂ ಇಲಾಖೆ ವೆಚ್ಚ ಕಡಿತ ಮಾಡಿದೆ. ಹೀಗಾಗಿ ಕಡಿಮೆ ಬಸ್ಸುಗಳು ಓಡಾಡುತ್ತಿವೆ. ಲಾಭ-ನಷ್ಟದ ಯೋಚನೆ ಮಾಡದೆ ಪ್ರತಿ ಹಳ್ಳಿಗೂ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪಾವಗಡ ತಾಲೂಕಿನಲ್ಲಿ ಅತ್ಯಂತ ಕಡಿಮೆ ಬಸ್ಸುಗಳು ಸಂಚರಿಸುತ್ತಿವೆ ಎಂಬ ಮಾಹಿತಿ ಇದೆ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಸಂಪರ್ಕವಿಲ್ಲದಂತಾಗಿದ್ದು, ತಕ್ಷಣವೇ ಕೆಎಸ್ಆರ್ಟಿಸಿ ಈ ನ್ಯೂನ್ಯತೆಗಳನ್ನು ಸರಿಪಡಿಸಬೇಕು.

ಬಸ್ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಸರಕಾರ ತಕ್ಷಣವೇ ಇತ್ತ ಗಮನ ಹರಿಸಬೇಕು. ಸಾರಿಗೆ ಇಲಾಖೆ ಮತ್ತು ಸರಕಾರದ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಇದರಿಂದ ಪರೀಕ್ಷೆ ಬರೆಯಬೇಕಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಪುನಾ ವಿಶೇಷ ವ್ಯವಸ್ಥೆ ಕಲ್ಪಿಸಿ ಪರೀಕ್ಷೆ ಬರೆಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಖಾಸಗಿ ಬಸ್ಸುಗಳ ಮೇಲೆ ನಿಗಾ ಇಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಜನರ ಹಿತದೃಷ್ಟಿಯಿಂದ ಚೆನ್ನಾಗಿ ಕೆಲಸ ಮಾಡಬೇಕು. ಬಸ್ʼಗಳು ಓವರ್ ಲೋಡ್ ಮಾಡುವುದಕ್ಕೆ ಅವಕಾಶ ನೀಡಬಾರದು. ಸಾರ್ವಜನಿಕರ ಅನುಕೂಲಕ್ಕೆ ಇರುವ ಕೆಎಸ್ಆರ್ಟಿಸಿಯಿಂದ ಲಾಭ ನಿರೀಕ್ಷೆ ಸರಿಯಲ್ಲ. ಆದರೆ, ಅಸಮರ್ಪಕ ನಿರ್ವಹಣೆಯಿಂದ ಹಣ ದುರುಪಯೋಗವಾಗುತ್ತಿದೆ ಎಂದು ಅವರು ಹೇಳಿದರು.

ಕೆಳಗಿನ ಸುದ್ದಿ ಓದ್ದಿ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ..
ಚಿಕ್ಕಬಳ್ಳಾಪುರದಲ್ಲಿ RRR ಇವೆಂಟ್‌, ಜನರಿಗೆ ಕಾದಿದೆ ಕೋವಿಡ್‌ ಹಾರರ್!

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

Leave a Reply Cancel reply

Your email address will not be published. Required fields are marked *

Recommended

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

“ನಾನೂ ಕುರಿ ಸಾಕುತ್ತೇನೆ, ಸಿದ್ದರಾಮಯ್ಯ ಬಿಡದಿ ತೋಟಕ್ಕೆ ಬಂದು ನೋಡಲಿ”

5 years ago
ಕರಿಗಾಂತಮ್ಮನಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ

ಕರಿಗಾಂತಮ್ಮನಹಳ್ಳಿ ಸರಕಾರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ