• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

P K Channakrishna by P K Channakrishna
April 6, 2022
in STATE
Reading Time: 1 min read
0
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

Photo by Nandan Mysuru

970
VIEWS
FacebookTwitterWhatsuplinkedinEmail

ಪರಿಸರ ಸೂಕ್ಷ್ಮ ನಂದಿಬೆಟ್ಟಕ್ಕೆ ರೋಪ್‌ ವೇ ಅಗತ್ಯವೇ? ಶುರುವಾದ ಜಿಜ್ಞಾಸೆ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು ಹೇಳಿದ್ದಾರೆ.

ಅರಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; “20 ನಿಮಿಷದ ಪ್ರವಾಸಕ್ಕೆ ರೋಪ್ ವೇ ಯಾಕೆ ಬೇಕು?” ಎಂದು ಪ್ರಶ್ನಿಸಿದರು.

ಬೆಟ್ಟಕ್ಕೆ ಕಾರಿನಲ್ಲಿ, ಬೈಕ್ʼನಲ್ಲಿ ಹೋವುದಕ್ಕೆ 20 ನಿಮಿಷ ಸಾಕು. ಮೆಟ್ಟಿಲು ಮಾರ್ಗವಾಗಿ ಹೋಗಲು 30 ನಿಮಿಷ ಸಾಕು. ಹೀಗಿರುವಾಗ ರೋಪ್ ವೇ ಅವಶ್ಯಕತೆ ಇಲ್ಲ ಅನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.

ಚಾಮುಂಡಿ ಬೆಟ್ಟದ ಪ್ರಾಕೃತಿಕ ಸೌಂದರ್ಯದ ಸಂರಕ್ಷಣೆ ಆಗಬೇಕು. ಆದ್ದರಿಂದ ಬೆಟ್ಟದ ಮೇಲೆ ಟೌನ್ ಶಿಪ್ ನಿರ್ಮಾಣ ಆಗುವುದು ಬೇಡ ಎಂದು ಸರಕಾರಕ್ಕೆ ರಾಜಮಾತೆ ಸಲಹೆ ನೀಡಿದರು.

ಬೆಟ್ಟದಲ್ಲಿ ಮೂಲ ನಿವಾಸಿಗಳನ್ನು ಬಿಟ್ಟರೆ ಅನ್ಯರ ವಾಸ್ತವ್ಯಕ್ಕೆ ಅವಕಾಶ ನೀಡಬಾರದು. ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸೂಕ್ತ ನಿರ್ಬಂಧ ವಿಧಿಸಬೇಕು ಎಂದು ಅವರು ಸರಕಾರಕ್ಕೆ ಸಲಹೆ ನೀಡಿದರು.

ಲ್ಯಾನ್ಸ್ ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆ ಕೆಡವಬಾರದು. ಹೀಗೆ ಕಟ್ಟಡಗಳನ್ನು ಕೆಡವುದರಿಂದ ಮೈಸೂರಿನ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಆಗುತ್ತದೆ. ಎರಡೂ ಕಟ್ಟಡಗಳನ್ನು ನಮಗೆ ಕೊಟ್ಟರೆ ಅದನ್ನು ಯಥಾಸ್ಥಿತಿಯಲ್ಲಿ ನವೀಕರಣ ಮಾಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.

ಇದೇ ಕಾರಣಕ್ಕೆ ಜಗನ್ಮೋಹನ ಅರಮನೆ, ರಾಜೇಂದ್ರ ವಿಲಾಸ ಅರಮನೆ ಯಥಾಸ್ಥಿತಿಯಲ್ಲಿ ನವೀಕರಣ ಮಾಡಿದ್ದೇವೆ. ಪಾರಂಪರಿಕ ಕಟ್ಟಡಗಳ ವಿಚಾರದಲ್ಲಿ ಸರಕಾರ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದ ಮೇಲೆ 120 ಅಡಿ ಎತ್ತರದಲ್ಲಿರುವ ರಾಜೇಂದ್ರ ವಿಲಾಸ  ಅರಮನೆ ಬಹಳ ದಿನಗಳಿಂದ ಪ್ರವಾಸಿಗರಿಗೆ ಮುಚ್ಚಿತ್ತು. ರಾಜೇಂದ್ರ ವಿಲಾಸ ಅರಮನೆ ಕಟ್ಟಡದ ಬಲಿಷ್ಠತೆ ಉತ್ತಮವಾಗಿದೆ. ತಜ್ಞರ ಅಭಿಪ್ರಾಯ ಪಡೆದು ನವೀಕರಣ ಮಾಡಲಾಗುವುದು ಎಂದು ರಾಜಮಾತೆ ತಿಳಿಸಿದರು.

ಅರಮನೆಯ ಪುರಾತನ ಪಾರಂಪರಿಕ ಶೈಲಿಯಲ್ಲೇ ನವೀಕರಣ ಮಾಡಲಾಗುವುದು. 1975ರಿಂದ ರಾಜೇಂದ್ರ ವಿಲಾಸ ಅರಮನೆ ಹೋಟೆಲ್ ಆಗಿ ನಡೆಯುತ್ತಿತ್ತು. 1995ರಿಂದ ಇದು ಮುಚ್ಚಲ್ಪಟ್ಟಿತ್ತು. ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಪ್ರಮೋದಾದೇವಿ ಅವರು ತಿಳಿಸಿದರು.

ಯಾವುದನ್ನೂ ಬದಲಾವಣೆ ಮಾಡಿಲ್ಲ, ಕೆಲವೊಂದು ಸೇವೆಗಳಲ್ಲಿ ಮಾರ್ಪಾಡು ಮಾಡಬಹುದಷ್ಟೇ. ಗೋಪುರದ ನವೀಕರಣ ಮಾಡುವುದು ಬಹಳ ಸವಾಲಾಗಿತ್ತು. ಎಲ್ಲವೂ ಒಂದು ಹಂತಕ್ಕೆ ಬಂದಿದೆ. ಹೋಟೆಲ್ ಆಗಿ ಮುಂದುವರಿಸುವ ಉದ್ದೇಶವಿದೆ ಎಂದು ವಿವರ ನೀಡಿದರು.

ನಂದಿಬೆಟ್ಟಕ್ಕೆ ರೋಪ್‌ ವೇ ಬೇಕಾ?

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಿಸುವ ಬಗ್ಗೆಯೂ ಈಗ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಲ್ಲಿ ತೀವ್ರ ಜಿಜ್ಞಾಸೆ ಶುರುವಾಗಿದೆ. ಪರಿಸರ ಸೂಕ್ಷ್ಮವಾಗಿರುವ ಈ ಬೆಟ್ಟಕ್ಕೆ ರೋಪ್‌ ವೇ ಕಟ್ಟಿದರೆ ಪರಿಸರಕ್ಕೆ ಭಾರೀ ಧಕ್ಕೆ ಆಗುತ್ತದೆ ಎಂದು ಈಗಾಗಲೇ ಪರಿಸರ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ.

ಪಂಚಗಿರಿ ಸಾಲುಗಳಲ್ಲಿಯೇ ಪ್ರಮುಖ ಗಿರಿಧಾಮವಾಗಿರುವ ನಂದಿಬೆಟ್ಟವು ಪುರಾಣ ಹಾಗೂ ಐತಿಹಾಸಿಕವಾಗಿ ಬಹಳ ಮಹತ್ವದ್ದಾಗಿದ್ದು, ಅಪಾರ ಜೀವವೈವಿಧ್ಯವುಳ್ಳ ತಾಣವಾಗಿದೆ. ಕಳೆದ ವರ್ಷ ಗಿರಿಧಾಮದಲ್ಲಿ ʼಮೇಘಸ್ಫೋಟʼ ಉಂಟಾಗಿ ಭಾರೀ ಪ್ರಮಾಣದ ಭೂ ಕುಸಿತ ಆಗಿತ್ತು. ಆ ಸಂದರ್ಭದಲ್ಲಿ ಬೆಟ್ಟದಲ್ಲಿ ಭಾರೀ ಪ್ರಮಾಣದ ಜೀವರಾಶಿಗೆ ಹಾನಿಯಾಗಿತ್ತು.

ಕೆಳಗಿನ ಸುದ್ದಿಯನ್ನು ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ..
ನಂದಿಬೆಟ್ಟದಲ್ಲಿ ಆಗಿದ್ದು ಮಿನಿ ಮೇಘಸ್ಫೋಟ!

ಇತ್ತೀಚೆಗಿನ ವರ್ಷಗಳಲ್ಲಿ ನಂದಿಬೆಟ್ಟದ ಸುತ್ತಮುತ್ತ ರಿಯಲ್‌ ಎಸ್ಟೇಟ್‌ ಅಂಕೆ ಮೀರಿ ಬೆಳೆಯುತ್ತಿದ್ದು, ಪ್ರವಾಸೋದ್ಯಮದ ನೆಪದಲ್ಲಿ ಅಕ್ರಮವಾಗಿ ಹೋಟೆಲ್‌, ರೆಸಾರ್ಟುಗಳು ತಲೆ ಎತ್ತಿವೆ. ಜಿಲ್ಲೆಯ ಕೆಲ ಪ್ರಭಾವೀ ರಾಜಕಾರಣಿಗಳೇಿ ಇದೆಲ್ಲದರ ಹಿಂದೆ ಇದ್ದಾರೆ ಎನ್ನುವುದೂ ಸುಳ್ಳೇನಲ್ಲ. ಜತೆಗೆ, ಕಲ್ಲು ಕ್ರಷರ್‌ʼಗಳು ಎಗ್ಗಿಲ್ಲದೆ ನಡೆಯುತ್ತಿದ್ದು ಅವುಗಳಿಂದಲೂ ಬೆಟ್ಟಕ್ಕೆ ಗಂಡಾಂತರ ಎದುರಾಗಿದೆ. ಗಿರಿಧಾಮದ ಅಕ್ಕಪಕ್ಕದಲ್ಲಿ ನಡೆಯುತ್ತಿರುವ ಮಿತಿಮೀರಿದ ಮಾನವ ಚಟುವಟಿಕೆಗಳಿಂದ ನಂದಿಬೆಟ್ಟದ ಭೂ ಪದರಗಳು ಸಡಿಲವಾಗುತ್ತಿವೆ ಎಂದು ಭೂ ವಿಜ್ಞಾನಿಗಳು ಈಗಾಗಲೇ ಆತಂಕ ವ್ಯಕ್ತಪಡಿಸಿದ್ದರು.

ಹೀಗಿರುವಾಗ ನಂದಿಬೆಟ್ಟಕ್ಕೆ ರೋಪ್‌ ವೇ ಬೇಕಾ? ಎನ್ನುವ ಜಿಜ್ಞಾಸೆ ಶುರುವಾಗಿದೆ. ರಾಜಮಾತೆ ಪ್ರಮೋದಾ ದೇವಿ ಅವರು, ಸಾಹಿತಿ ಎಸ್.‌ಎಲ್.ಭೈರಪ್ಪ ಮುಂತಾದವರು ಸೇರಿ ಚಾಮುಂಡಿ ಬೆಟ್ಟವನ್ನು ಉಳಿಸುವ ಅಭಿಯಾನ ನಡೆಸುತ್ತಿದ್ದಾರೆ. ಅದೇ ರೀತಿ ಚಿಕ್ಕಬಳ್ಳಾಪುರದಲ್ಲೂ ನಂದಿಬೆಟ್ಟ ಉಳಿಸಿ ಎನ್ನುವ ಅಭಿಯಾನ ಮತ್ತು ಚಳವಳಿ ಶುರುವಾಗಬೇಕಿದೆ.

ಕೆಳಗಿನ ಸುದ್ದಿಯನ್ನು ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ..
ನಂದಿ ಗಿರಿಧಾಮಕ್ಕೆ ರೋಪ್‌ ವೇ: ಆಡಳಿತಾತ್ಮಕ ಅನುಮೋದನೆ ಕೊಟ್ಟ ರಾಜ್ಯ ಸರಕಾರ
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

ಅಂತಾರಾಷ್ಟ್ರೀಯ ಮಟ್ಟದ ಅಭಿವೃದ್ಧಿ ಎಂದರೆ ಇದೇನಾ ಡಾ.ಸುಧಾಕರ್‌ ಅವರೇ..?

Leave a Reply Cancel reply

Your email address will not be published. Required fields are marked *

Recommended

ಪುನೀತ್‌ ಈಗ ಕರ್ನಾಟಕ ರತ್ನ

ಅಪ್ಪು ಆದರ್ಶಗಳನ್ನು ನಮ್ಮದಾಗಿಸಿಕೊಳ್ಳೋಣ

3 years ago
ಪಿಡಿಒ ವಿರುದ್ಧ ಸಿಟ್ಟಿಗೆದ್ದು ಪಂಚಾಯಿತಗೆ ಬೀಗ ಹಾಕಿದ ಅಧ್ಯಕ್ಷೆ

ಪಿಡಿಒ ವಿರುದ್ಧ ಸಿಟ್ಟಿಗೆದ್ದು ಪಂಚಾಯಿತಗೆ ಬೀಗ ಹಾಕಿದ ಅಧ್ಯಕ್ಷೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ