• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಹೆಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕುಂ ವೀರಭದ್ರಪ್ಪ ಸೇರಿ 61 ಜನರಿಗೆ ಜೇವ ಬೆದರಿಕೆ

cknewsnow desk by cknewsnow desk
April 8, 2022
in CRIME, STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
1k
VIEWS
FacebookTwitterWhatsuplinkedinEmail

ಸಾಹಿತಿಗಳಿಗೆ ತಕ್ಷಣ ಭದ್ರತೆ ನೀಡಿ ಎಂದು ಸರಕಾರವನ್ನು ಒತ್ತಾಯಿಸಿದ ಹೆಚ್‌ಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಸಾಹಿತಿ ಕುಂ ವೀರಭದ್ರಪ್ಪ ಸೇರಿ 61 ಪ್ರಗತಿಪರ ಚಿಂತಕರಿಗೆ ಜೀವ ಬೆದರಿಕೆ ಒಡ್ಡಲಾಗಿದೆ.

ಈಗ ಜೀವಗಳಿಗೆ ಬೆದರಿಕೆಯೊಡ್ಡುವ ಹಂತಕ್ಕೆ ಹಿಜಾಬ್‌ ವಿವಾದ ಬಂದು ಮುಟ್ಟಿರುವುದಕ್ಕೆ ರಾಜ್ಯದಲ್ಲಿ ಆತಂಕದ ಪರಿಸ್ಥಿತಿ ಸೃಷ್ಟಿಸಿದೆ.

ಇನ್ನೊಂದೆಡೆ, ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕುಂ ವೀರಭದ್ರಪ್ಪ ಸೇರಿ ಎಲ್ಲ ಸಾಹಿತಿಗಳಿಗೂ ಸೂಕ್ತ ಭದ್ರತೆ ನೀಡಬೇಕು ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಬೆದರಿಕೆ ಪತ್ರವನ್ನು ಕಾದಂಬರಿಕಾರ ಕುಂ.ವೀರಭದ್ರಪ್ಪ ಅವರ ಕೊಟ್ಟೂರಿನ ಮನೆಗೆ ಪೋಸ್ಟ್ ಮಾಡಲಾಗಿದೆ. ʼಸಹಿಷ್ಣು ಹಿಂದೂʼ ಎಂಬ ಹೆಸರಿನಲ್ಲಿ ಬರೆಯಲಾಗಿರುವ ಪತ್ರವನ್ನು ಏಪ್ರಿಲ್‌ ೬ರಂದು ಕುಂವೀ ಅವರ ಮನೆಯನ್ನು ತಲುಪಿದೆ.

ನಾನು ಹಿಂದೂ ಎಂದಿದ್ದ ಕುಂವೀ

ಮಾರ್ಚ್ 31ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಲೋಕನಾಯಕ ಜೆಪಿ ವಿಚಾರ ವೇದಿಕೆ ಏರ್ಪಡಿಸಿದ್ದ ʼಸರ್ವ ಜನಾಂಗದ ಶಾಂತಿಯ ತೋಟ-ಒಂದು ಭಾವೈಕ್ಯತೆ ಚರ್ಚೆʼ ಕಾರ್ಯಕ್ರಮದಲ್ಲಿ ಕುಂವೀ ಅವರು ಪಾಲ್ಗೊಂಡಿದ್ದರು

ಈ ಸಭೆಯಲ್ಲಿ ಭಾಷಣ ಮಾಡಿದ ಕುಂವೀ ಅವರು ಸರಕಾರ ಮತ್ತು ಹಿಂದೂ ಸಂಘಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಒಂದು ಹಂತದಲ್ಲಿ ನಾನು ಹಿಂದೂ ಅಲ್ಲ ಎಂದು ಅವರು ಹೇಳಿದ್ದರು. ಈ ಕಾರಣಕ್ಕೆ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿಕೊಂಡು ಅನಾಮಧೇಯ ಪತ್ರದಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಈ ಪತ್ರವನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಪೋಸ್ಟ್ ಮಾಡಲಾಗಿದೆ.

ಭದ್ರತೆ ನೀಡುವಂತೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಹಿರಿಯ ಸಾಹಿತಿ ಕುಂ ವೀರಭದ್ರಪ್ಪ ಸೇರಿದಂತೆ 61 ಜನರಿಗೆ ಸಹಿಷ್ಣು ಹಿಂದೂ ಎಂಬ ಹೆಸರಿನಲ್ಲಿ ಒಡ್ಡಲಾಗಿರುವ ಜೀವ ಬೆದರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂತಹ ಬೆದರಿಕೆ ಪತ್ರವನ್ನು ಲಘುವಾಗಿ ಪರಿಗಣಿಸಬೇಡಿ. ಕುಂ.ವೀರಭದ್ರಪ್ಪ ಸೇರಿ ಜೀವ ಬೆದರಿಕೆ ಒಡ್ಡಲಾಗಿರುವ ಎಲ್ಲ ಸಾಹಿತಿಗಳಿಗೆ ತಕ್ಷಣವೇ ಸರಕಾರವು ರಕ್ಷಣೆ ಕೊಡಬೇಕು ಎಂದು ಆಗ್ರಹಪಡಿಸಿದರು.

ನನಗೆ ಈ ವಿಚಾರದಲ್ಲಿ ಅಂಜಿಕೆ ಇಲ್ಲ. ದೇವರನ್ನು ನಾನು ನಂಬಿರುವೆ. ನನ್ನ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಂಜಿ ಸತ್ಯವನ್ನು ಮರೆಮಾಚಲಾರೆ. ಹಣೆಯಲ್ಲಿ ಬರೆದಿರುವುದನ್ನು ತಿದ್ದಲು ಇವರಿಂದ ಆಗುವುದಿಲ್ಲ ಎಂದ ಅವರು, ನೇರವಾಗಿ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಎಂ ಎಂ ಕಲಬುರ್ಗಿ ಸೇರಿ ಕೆಲವರನ್ನು ಹತ್ಯೆ ಮಾಡಿದ ಉದಾಹರಣೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ಮತ್ತೆ ಅಂಥ ಘಟನೆಗಳು ಮರುಕಳಿಸಬಾರದು ಎಂದು ಅವರು ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಬ್ದಸಂತ ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್

ಶಬ್ದಸಂತ ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್

Leave a Reply Cancel reply

Your email address will not be published. Required fields are marked *

Recommended

ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ

ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ

5 years ago
ರಾಮ್ ವಿಲಾಸ್ ಪಾಸ್ವಾನ್ ; ದಲಿತ ಧ್ವನಿ, ಎಲ್ಲರೂ ಅಪ್ಪಿಕೊಂಡಿದ್ದ ಅಪ್ಪಟ ನಾಯಕ

ರಾಮ್ ವಿಲಾಸ್ ಪಾಸ್ವಾನ್ ; ದಲಿತ ಧ್ವನಿ, ಎಲ್ಲರೂ ಅಪ್ಪಿಕೊಂಡಿದ್ದ ಅಪ್ಪಟ ನಾಯಕ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ