ಸಂಘಟನೆಯನ್ನು ಬಲಿಷ್ಠಗೊಳಿಸಲು ಪಣ
by GS Bharath Gudibande
ಗುಡಿಬಂಡೆ: ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಘಟಕದ ತಾಲ್ಲೂಕು ಅಧ್ಯಕ್ಷರಾಗಿ ಜಿ.ಎಲ್.ಶ್ರೀನಿವಾಸ್ ಯಾದವ್, ಜಿಲ್ಲಾ ಗೌರವಾಧ್ಯಕ್ಷರಾಗಿ ಜಿ.ವಿ.ಆನಂದ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿಯಾಗಿ ಬಿ.ಮಂಜುನಾಥ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಲೋಕೇಶ್ ನೇಮಕ ಮಾಡಿದ್ದಾರೆ.
ಪಟ್ಟಣದ ಗಾಯತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅವರು ಮಾತನಾಡಿದರು.
ಗುಡಿಬಂಡೆ ತಾಲ್ಲೂಕಿನಲ್ಲಿ 2007ರಿಂದ ನಮ್ಮ ಸಂಘಟನೆ ಸಕ್ರಿಯವಾಗಿ ವಿವಿಧ ಹೋರಾಟಗಳಲ್ಲಿ, ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬಂದಿರುತ್ತದೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾರಣದಿಂದ ಕಾರ್ಯಕ್ರಮಗಳು ನಡೆದಿರಲಿಲ್ಲ. ಇಷ್ಟು ವರ್ಷಗಳ ಕಾಲ ಅಧ್ಯಕ್ಷರಾಗಿದ್ದ ಜಿ.ವಿ.ಆನಂದ್ ಅವರನ್ನು ಜಿಲ್ಲಾ ಗೌರವಾಧ್ಯಕ್ಷರನ್ನಾಗಿ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರು ನಮ್ಮ ಸಂಘಟನೆಯಲ್ಲಿ ಮೊದಲಿನಿಂದಲೂ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದು ಅವರನ್ನು ಜಿಲ್ಲಾ ಪತ್ರಿಕಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದರು.
ನೂತವಾಗಿ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ಯಾದವ್ ಅವರಿಗೆ ಮುಂದೆ ಜವಾಬ್ದಾರಿ ಹೆಚ್ಚಿಗೆ ಇದೆ. ಈ ಹಿಂದೆ ಏನಾಗಿದೆಯೋ ಅದನ್ನು ಬಿಟ್ಟು ಮುಂದಿನ ದಿನಗಳಲ್ಲಿ ತಾಲ್ಲೂಕಿನ ಕರವೇ ಘಟಕವನ್ನು ಬಲಿಷ್ಠಗೊಗಳಿಸಬೇಕು. ಗ್ರಾ.ಪಂ ಮಟ್ಟದಲ್ಲಿ ವಾರ್ಡ್ ವಾರು ಸಂಘಟನೆ ಮಾಡಬೇಕಿದೆ. ಅದೇ ರೀತಿಯಾಗಿ ಯುವಘಟಕ, ನಗರ ಘಟಕ, ಕಾರ್ಮಿಕ ಘಟಕ, ಆಟೋಘಟಕ, ವಿದ್ಯಾರ್ಥಿ ಘಟಕ, ಮಹಿಳಾ ಘಟಕಗಳನ್ನು ಮಾಡಬೇಕು ಎಂದರು.
ಒಟ್ಟಾರೆ ಗುಡಿಬಂಡೆ ತಾಲ್ಲೂಕಿನಲ್ಲಿ ಈ ಹಿಂದೆ ಇರುವಂತಹ ಕರವೇ ಘಟಕ ಮತ್ತೊಮ್ಮೆ ಕಾಣಬೇಕಿದೆ ಎಂದು ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಾಲು, ಬಾಗೇಪಲ್ಲಿ ತಾಲ್ಲೂಕು ಅಧ್ಯಕ್ಷ ಹರೀಶ್, ಜಿಲ್ಲಾ ಉಪಾಧ್ಯಕ್ಷ ನಯಾಜ್ ಪಾಷ, ಗುಡಿಬಂಡೆ ತಾಲ್ಲೂಕು ಉಪಾಧ್ಯಕ್ಷ ನರೇಂದ್ರ, ಸದಸ್ಯರಾದ ಅಪ್ಸರ್ ಪಾಷ, ನಾಗರಾಜ್, ಜಿ.ಕೆ.ನರೇಂದ್ರ, ಮಧು, ನಿದರ್ಶನ್, ನವೀನ್ ಸೇರಿದಂತೆ ಇತರರು ಹಾಜರಿದ್ದರು.