• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ನಿಮ್ಮೊಳಗಿನ ದೈವಿಕ ಬೆಳಕು ರಾಮ

cknewsnow desk by cknewsnow desk
April 14, 2022
in EDITORS'S PICKS, GUEST COLUMN, STATE
Reading Time: 1 min read
0
ನಿಮ್ಮೊಳಗಿನ ದೈವಿಕ ಬೆಳಕು ರಾಮ
930
VIEWS
FacebookTwitterWhatsuplinkedinEmail

ಶ್ರೀರಾಮ ಬದುಕು ನಮ್ಮಲ್ಲರ ಆದರ್ಶವಾಗಲಿ

by Dr.Guruprasad Hawaladar

ಸತ್ಯಯುಗ,ತ್ರೇತಾಯುಗದಲ್ಲಿ ದೇವರು ಹಾಗೂ ರಾಕ್ಷಸರ ಮಧ್ಯೆ ಯುದ್ಧ ನಡೆದವು.  ದ್ವಾಪರ ಯುಗದಲ್ಲಿ ಒಂದೇ ಕುಟುಂಬದಲ್ಲಿರುವ ಜನರ ಮಧ್ಯೆ ಯುದ್ಧಗಳು ನಡೆದವು.  ಕಲಿಯುಗದಲ್ಲಿ ಯುದ್ಧಗಳು ನಮ್ಮೊಳಗೇ ನಡೆಯುತ್ತಿವೆ. ರಾಮನು ನಮ್ಮ ಆತ್ಮವಾದರೆ, ಸೀತೆಯು ನಮ್ಮ ಮನಸ್ಸು, ಹನುಮಾನ್ ನಮ್ಮ ಜೀವಶಕ್ತಿಯಾದರೆ ರಾವಣನು ನಮ್ಮ ಅಹಂ. ಅಹಂ ಮನಸ್ಸನ್ನು ಆವರಿಸಿಕೊಂಡಾಗ ನಮ್ಮ ಆತ್ಮವು ಪ್ರಕ್ಷುಬ್ಧಗೊಳ್ಳುತ್ತದೆ. ಮನಸ್ಸು ಮತ್ತು ಆತ್ಮವನ್ನು ಸಮನತ್ವಯಗೊಳಿಸಲು, ಧ್ಯಾನ ಮಾಡಿ, ಉಸಿರಾಟದ ಮೂಲಕ ನಮ್ಮ ಮನಸ್ಸು ಮತ್ತು ಆತ್ಮವನ್ನು ನಿಯಂತ್ರಿಸಬಹುದು. ರಾಮ ಮತ್ತು ಸೀತೆ ಒಂದಾದರೆ ಅಹಂ ನಾಶವಾಗುತ್ತದೆ.

ರಾಮ ಎನ್ನುವ ಎರಡು ಅಕ್ಷರದಲ್ಲಿ ಮಹತ್ವಪೂರ್ಣವಾದ ಅರ್ಥವಿದೆ. ‘ರಾ’ ಎಂದರೆ ಬೆಳಕು ‘ಮ’ ಎಂದರೆ ಒಳಗೆ. ಅಂದರೆ ನಿಮ್ಮೊಳಗಿನ ದೈವಿಕ ಬೆಳಕು ರಾಮ.

ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದೆ, ಶ್ರೀರಾಮನವಮಿ ಸಕಲ ಹಿಂದೂ ಧರ್ಮದವರಿಗೆಲ್ಲಾ ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ.

ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ರಾಮನವಮಿ ಹಬ್ಬವನ್ನು ಚೈತ್ರ ಮಾಸದ 9ನೇ ದಿನದಂದು ಆಚರಣೆ ಮಾಡಲಾಗುತ್ತದೆ.

ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣವನ್ನು ಭಕ್ತಿ, ಶ್ರದ್ಧೆಗಳಿಂದ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ.

ರಾಮನವಮಿ ಹಬ್ಬ ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ಈ ಹಬ್ಬವನ್ನು ದೇಶದಾದ್ಯಂತ ಬಹಳಷ್ಟು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಪ್ರಮುಖವಾಗಿ ಉತ್ತರ ಭಾರತದಲ್ಲಂತೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.

ರಾಮ ಮನೆದೇವರು ಇರುವವರು ಹಬ್ಬವನ್ನು 9 ದಿನಗಳ ಕಾಲ ಆಚರಣೆ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ.

ರಾಮನವಮಿ ಆಚರಣೆ ಅತ್ಯಂತ ಸರಳವಾಗಿದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಕ, ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ, ಇದರಲ್ಲಿ ಶ್ರೀರಾಮನ ಜೊತೆದೆ ಎಲ್ಲಾ ಸಹೋದರರು ಇರುತ್ತಾರೆ.

ಶ್ರೀರಾಮಚಂದ್ರನಿಗೆ ಷೋಡಶೋಪಚಾರದಿಂದ ಪೂಜೆ ಮಾಡಬೇಕು. ಪಾನಕ ಕೋಸಂಬರಿಗಳನ್ನು ನೈವೇದ್ಯ ಮಾಡಿ ಇತರರಿಗೆ ಹಂಚಲಾಗುತ್ತದೆ. ರಾಮನ ಭಜನೆ, ಹಾಡುಗಳಿಂದ ರಾಮನ ಧ್ಯಾನ ಮಾಡುತ್ತಾರೆ. ಮತ್ತೊಂದು ವಿಶೇಷವೆಂದರೆ, ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ.

ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ.

ದೇಶದ ಹಲವು ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ ಅದರಲ್ಲೂ ವಿಶೇಷವಾಗಿ  ಅಯೋಧ್ಯೆಯಲ್ಲಿ   ಶ್ರೀರಾಮನ ಜನ್ಮಸ್ಥಳಕ್ಕೆ  ಭೇಟಿ ನೀಡಿ ಸರಯೂ ನದಿಯಲ್ಲಿ ಮಿಂದು ಶ್ರೀರಾಮನ ದರ್ಶನ ಮಾಡಿ ಪಾವನರಾಗುತ್ತಾರೆ.

ದಕ್ಷಿಣ ಭಾರತದ ಮನೆಗಳಲ್ಲಿ, ಮುಖ್ಯವಾಗಿ ಕರ್ನಾಟಕದಲ್ಲಿ, ಪಾನಕ ಹಾಗೂ ಕೋಸಂಬರಿಗಳನ್ನು ಬಂದವರಿಗೆ ನೀಡಿ ಆಚರಿಸಲಾಗುತ್ತದೆ.

ಈ ದಿನದಂದು ಉಪವಾಸವನ್ನು ಮಾಡುತ್ತಾರೆ ಇದು ಅತ್ಯಂತ ಶ್ರೇಷ್ಠ.  ಬೆಳಗ್ಗೆಯಿಂದ ಮರುದಿನ ಬೆಳಗ್ಗೆಯವರೆಗೂ ಉಪವಾಸವನ್ನು ಮಾಡುತ್ತಾ  ಈ ಸಮಯದಲ್ಲಿ ಶ್ರೀರಾಮ ಜಪ, ರಾಮಾಯಣ ಪಾರಾಯಣ, ಶ್ರೀ ರಾಮ ಸೀತಾ ಕಲ್ಯಾಣ್ಯೋತ್ಸವವನ್ನೂ ಮಾಡುತ್ತಾರೆ.

ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕದಲ್ಲೂ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಕಛೇರಿಗಳನ್ನು ಆಯೋಜಿಸಲಾಗುತ್ತದೆ.

ಹಬ್ಬದ ದಿನದಂದು ಪ್ರತೀಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. ವಸುದೈವ ಕುಟುಂಬಕಂ ( ಇಡೀ ವಿಶ್ವವೇ ಒಂದು ಕುಟುಂಬ) ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ.


Dr.Guruprasad Hawaladar

  • ವೃತ್ತಿಯಲ್ಲಿ ಉಪನ್ಯಾಸಕರು. ಪ್ರವೃತ್ತಿಯಲ್ಲಿ ಬರಹಗಾರರು. ಇತಿಹಾಸ, ರಾಜಕೀಯ, ಸಾಹಿತ್ಯದಲ್ಲಿ ಆಸಕ್ತರು. ನಾಡಿನ ಪತ್ರಿಕೆ, ಡಿಜಿಟಲ್‌ ಪೋರ್ಟಲ್‌ʼಗಳಿಗೆ ಲೇಖನಗಳನ್ನು ಬರೆಯುತ್ತಿದ್ದಾರೆ. ಅಪಾರ ಓದುಗ ಬಳಗವನ್ನು ಹೊಂದಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಾಕ್ ಡೌನ್ ಇಲ್ಲ

ತೈಲ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ತೆರಿಗೆ ಕಡಿತ ಸಾಧ್ಯವಿಲ್ಲ ಎಂದುಬಿಟ್ಟರು ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

Recommended

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಾಲದ ಚೆಕ್ ವಿತರಿಸಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಾಲದ ಚೆಕ್ ವಿತರಿಸಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

5 years ago
ಗುಡಿಬಂಡೆ ೬ನೇ ಸಾಹಿತ್ಯ ಸಮ್ಮೇಳನ ಇಂದು

ಗುಡಿಬಂಡೆ ೬ನೇ ಸಾಹಿತ್ಯ ಸಮ್ಮೇಳನ ಇಂದು

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ