ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಅಸಾಧ್ಯ
ತುಮಕೂರು: ತೈಲ ಬೆಲೆ ಏರಿಕೆ ನಿಯಂತ್ರಣಕ್ಕೆ ತೆರಿಗೆ ಕಡಿತಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ ನೆರವೇರಿಸಿ ಸಿಎಂ ಮಾತನಾಡಿದರು.
ಈ ಹಿಂದೆಯೇ ರಾಜ್ಯದ ಪಾಲಿನ ತೆರಿಗೆಯನ್ನು ಕಡಿತಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ತೆರಿಗೆ ಇಳಿಸಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಏನು ನಿರ್ಧಾರ ಕೈಗೊಳ್ಳಲಿದೆ ಕಾದು ನೋಡಬೇಕಿದೆ ಎಂದು ಹೇಳಿದರು.
ಗೌರಿಪಾಳ್ಯದಲ್ಲಿ ಚಂದ್ರು ಎಂಬ ಯುವಕನ ಕೊಲೆ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಭಿನ್ನ ಭಿನ್ನ ಹೇಳಿಕೆ ನೀಡಿದ್ದಾರಲ್ಲ ಎಂಬ ಮಾಧ್ಯಮ ದವರ ಪ್ರಶ್ನೆಗೆ ಆ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.