• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕನ್ನಡ ದ್ರೋಹಿಗಳು!

cknewsnow desk by cknewsnow desk
April 11, 2022
in STATE
Reading Time: 1 min read
0
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕನ್ನಡ ದ್ರೋಹಿಗಳು!
964
VIEWS
FacebookTwitterWhatsuplinkedinEmail

ಹಿಂದಿ ಹೇರಿಕೆ ವಿರುದ್ಧ ಹೆಚ್. ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಹೇಳಿಕೆಯನ್ನು ಸಮರ್ಥನೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹಾಗೂ ರಾಜ್ಯದ ಆರೋಗ್ಯ ಖಾತೆ ಮಂತ್ರಿ ಡಾ.ಕೆ.ಸುಧಾಕರ್ ಅವರು ಕನ್ನಡ ದ್ರೋಹಿಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು.

ಹಿಂದಿ ಹೇರಿಕೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಪರ ಹೇಳಿಕೆ ವಿರೋಧಿಸಿ ಹಮ್ಮಿಕೊಳ್ಳಲಿರುವ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರವು ಆರ್ ಎಸ್ ಎಸ್ ನ ಹಿಡನ್ ಅಜೆಂಡಾಗಳನ್ನು ಬಲವಂತವಾಗಿ ಹೇರಲು ಮುಂದಾಗಿದೆ. ಅದರಲ್ಲಿ ಈ ಹಿಂದಿ ಹೇರಿಕೆ ಕೂಡ ಒಂದು. ಅದನ್ನು ಬಿಜೆಪಿ ನಾಯಕರು, ಸಚಿವರು ಸಮರ್ಥನೆ ಮಾಡುತ್ತಿರುವುದು ಸರಿಯಲ್ಲ ಎಂದರು ಎಂದು ಅವರು ಹೇಳಿದರು.

ಇಂದು ಕನ್ನಡದ ಹಾಗೂ ಕನ್ನಡಿಗರ ಅನೇಕ ಸಮಸ್ಯೆಗಳು ನಮ್ಮ ಮುಂದಿವೆ. ಇತ್ತೀಚೆಗೆ ಭಾಷೆ ಸಮಸ್ಯೆ ಶುರುವಾಗಿದೆ. ಅಲ್ಲದೆ, ನಮ್ಮ ನದಿಗಳ ನೀರು ಉಪಯೋಗಿಸುವ ವಿಚಾರದಲ್ಲಿ ನಮ್ಮನ್ನು ಕೇಂದ್ರ ಸರಕಾರ ಲಘುವಾಗಿ ಪರಿಗಣಿಸುತ್ತಿದೆ. ಈಗಲೇ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಇಲ್ಲದೇ ಹೋದರೆ ನಮ್ಮತನ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಇಲ್ಲಿನ ಮಂತ್ರಿಗಳು, ಕೇಂದ್ರದ ಮಂತ್ರಿಗಳು ಕೇಂದ್ರದ ನೀತಿಯ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಹಾಗಾದರೆ, ಕನ್ನಡದ ಬಗ್ಗೆ ಅವರ ನಿಲುವೇನು? ಯಾಕೆ ಹಿಂದಿ ಮೇಲೆ ಮೋಹ? ಕನ್ನಡದ ಮೇಲೆ ಯಾಕೆ ನಿರ್ಲಕ್ಷ್ಯ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಇಂಥ ನಾಯಕರನ್ನು ಕನ್ನಡದ ದ್ರೋಹಿಗಳು ಎನ್ನದೆ ಇನ್ನೇನೆಂದು ಕರೆಯಬೇಕು ಎಂದು ಅವರು ಹೇಳಿದರು.

ನಮ್ಮ ನಾಡಗೀತೆಯಂತಹ ಗೀತೆಯನ್ನು ಬೇರೆ ಯಾವ ರಾಜ್ಯದಲ್ಲಿ ಕೂಡಾ ಕಾಣಲು ಸಾಧ್ಯವಿಲ್ಲ. ಹಲವಾರು ಪ್ರದೇಶ, ಬಾಷೆಗಳು ಸೇರಿ‌ ಒಕ್ಕೂಟ ರಾಷ್ಟ್ರವಾಗಿದೆ. ಕಳೆದ ಎಪ್ಪತ್ತೈದು ವರ್ಷಗಳಲ್ಲಿ ಭಾರತದ ಒಕ್ಕೂಟದ ವ್ಯವಸ್ಥೆ ಗೆ ಧಕ್ಕೆ ಆಗಿರಲಿಲ್ಲ. ಈಗ ಅದನ್ನು ಹಾಳು ಮಾಡುವ ಕೆಲಸ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಖಾಸಗಿ ಕ್ಷೇತ್ರದಲ್ಲಿ ಸ್ಪರ್ಧೆ ಇದೆ. ಹಾಗಾಗಿ ಇಂಗ್ಲೀಷ್ ಭಾಷೆ ಅನಿವಾರ್ಯವಾಗಿದೆ. ಕನ್ನಡ ಕಲಿತವರಲ್ಲಿ ಜ್ಞಾನ ಇದ್ದರೂ ಪ್ರೆಸೆಂಟೇಷನ್ ಬಗ್ಗೆ ಸ್ವಲ್ಪ ಕಷ್ಟವಾಗಲಿದೆ ಎನ್ನುವ ಕಾರಣಕ್ಕೆ ಇಂಗ್ಲಿಷ್ ಬೇಕು ಎಂದು ಎಲ್ಲರೂ ಹೇಳುತ್ತಾರೆ. ಆದರೆ, ಹಿಂದಿ ಹೇರಿಕೆ ಏಕೆ? ಹಿಂದಿ ಹೇರಿಕೆ ಬಗ್ಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ನಾವು ಕೂಡ ಇದನ್ನು ಪ್ರತಿಭಟಿಸಬೇಕಾಗಿದೆ. ಎಂದು ಅವರು ಹೇಳಿದರು.

ಕನ್ನಡದ ಸೋಗಡೇ ಬೇರೆ. ಕುವೆಂಪು ರಚಿಸಿದ ನಾಡಗೀತೆಯ ಸೊಗಬು ಬೇರೆ. ಅದು ಯಾವ ಭಾಷೆಯಲ್ಲಿಯೂ ಇಲ್ಲ ಎಂದರು ಅವರು.

ನೀರಾವರಿ ಅನ್ಯಾಯ

ಕೇಂದ್ರ ಸರಕಾರ ನೀರಾವರಿ ಯೋಜನೆಗಳಲ್ಲಿ ನನಗೆ ಅನ್ಯಾಯ ಮಾಡುತ್ತಲೇ ಇದೆ. ಬೇರೆ ರಾಜ್ಯಗಳಲ್ಲಿ ಇಂಥ ಯೋಜನೆಗಳು ಬೇಗ ಬೇಗ ಕಾರ್ಯಗತ ಮಾಡುತ್ತಿವೆ. ಉದಾಹರಣೆಗೆ, ತೆಲಂಗಾಣದ ಶ್ರೀ‌ ಕಾಳೇಶ್ವರ ನೀರಾವರಿ ಯೋಜನೆಗೆ ಮೂರು‌ಸಾವಿರ ಕೋಟಿ ಮೀಸಲು ಇಟ್ಟು ಐದಾರು ವರ್ಷಗಳಲ್ಲಿ ಮುಗಿಸಲಾಗಿದೆ. ಆದರೆ, ನಮ್ಮ ಪಾವಗಢ ಭಾಗಕ್ಕೆ ನೀರೇ ಇಲ್ಲ. ಇಲ್ಲಿ ಯೋಜನೆಗಳು ನಿಧಾನ. ಪ್ರತಿ ವರ್ಷ ಬಜೆಟ್‌ನಲ್ಲಿ ಹಣ‌ ಮೀಸಲಿಟ್ಟ ಹಣ ಗುತ್ತಿಗೆದಾರರ ಪಾಲಾಗುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನೈಸ್ ರಸ್ತೆ ಅಕ್ರಮ ಬಿಚ್ಚಿಟ್ಟ ಹೆಚ್ ಡಿಕೆ

ಜನರನ್ನು ಸುಲಿಗೆ ಮಾಡಿ ರಾಜ್ಯವನ್ನು ವಂಚಿಸುತ್ತಿರುವ ನೈಸ್ ರಸ್ತೆ ಹಗರಣವನ್ನು ಮಾಜಿ ಮುಖ್ಯಮಂತ್ರಿಗಳು ಬಿಡಿಸಿಟ್ಟರು.

ಈಗ ಕಾಂಕ್ರೀಟ್ ರಸ್ತೆ ಮಾಡಲು ಹೊರಟಿದ್ದಾರೆ ಅದು ಕೂಡ ಗುಣಮಟ್ಟ ಇಲ್ಲ. ಅದನ್ನು ಪ್ರಶ್ನೆ ಮಾಡಿದರೆ ಸರ್ಕಾರದಿಂದ ಉತ್ತರ ಇಲ್ಲ. ಮೆಟ್ರೋ ಗೆ ಭೂಮಿ ಬೇಕಾಗಿದೆ. ಅದಕ್ಕೆ 100 ಕೋಟಿ ಕ್ಲೈಮ್ ಮಾಡಿಕೊಂಡು ಕೂತಿದ್ದಾರೆ ಎಂದರು ಕುಮಾರಸ್ವಾಮಿ.

ಸರ್ಕಾರಿ ಭೂಮಿಯನ್ನು ಬ್ಯಾಂಕುಗಳಿಗೆ ಒತ್ತೆ ಇಟ್ಟು ಸಾಲ ಮಾಡೋದು, ಆ ಹಣವನ್ನು ಕೆಐಡಿಬಿಗೆ ಕಟ್ಟೋದು ನಡೆದಿದೆ. ಇದನ್ನು ನಾನು ಸಿಎಂ ಆದಾಗ ಸ್ಕ್ರಾಪ್ ಮಾಡಲು ಹೋದೆ. ಆಗ ಮೈತ್ರಿ ಸರ್ಕಾರ ಇತ್ತು. ಈ ವಿಚಾರ ಎತ್ತಿದರೆ ನಾವು ಸಂಪುಟ ಸಭೆಗೆ ಬರಲ್ಲ ಎಂದು ಮಿತ್ರಪಕ್ಷ ಹೇಳಿತು ಎಂದು ಅವರು ಹೇಳಿದರು.

ಚಳ್ಳಗಟ್ಟ ಕೆರೆ 124 ಎಕರೆ ಯಾವ ರೇಟ್ ಗೆ ಕೊಟ್ಟಿದ್ದಾರೆ..? ಇವತ್ತು 10-15 ಸಾವಿರ ಕೋಟಿ ಬೆಲೆ ಬಾಳುತ್ತದೆ ಆ ಭೂಮಿ. ಯಾರೋ ಮಜಾ ಮಾಡಲು ಅದನ್ನು ಕೊಡಲಾಗಿದೆ. ಚಳ್ಳಘಟ್ಟ ಕೆರೆ ಯನ್ನು ಗಾಲ್ಪ್ ಕೋರ್ಟ್ ಗೆ ಎಷ್ಟಕ್ಕೆ ಕೊಟ್ಟಿದ್ದಾರೆ.ವರ್ಷಕ್ಕೆ ಒಂದು ಎಕರೆಗೆ ಒಂದು ರುಪಾಯಿಗೆ ಕೊಟ್ಟಿದ್ದಾರೆ, 30 ವರ್ಷಕ್ಕೆ ಲೀಸ್ ಗೆ ಕೊಟ್ಟಿದ್ದಾರೆ.0ಯಾರೋ ಒಂದಿಬ್ಬರು ಐ ಎ ಎಸ್ ಆಫೀಸರ್ ಗಳು ಮಜಾ ಮಾಡಲಿಕ್ಕೆ ಇದನ್ನು ಬಿಟ್ಟು ಕೊಟ್ಟಿದ್ದಾರೆ.=ಇವೆಲ್ಲಾ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಗಳು ಎಂದು ಅವರು ಕಿಡಿ ಕಾರಿದರು.

ಕರವೇ ಅಧ್ಯಕ್ಷ ಶಿವರಾಮೇಗೌಡರು, ರೈತ ಹೋರಾಟಗಾರ ಪಚ್ಚೆ ನಂಜುಂಡ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜನತಾ ಜಲಧಾರೆ: ಇಂದು 15 ಗಂಗಾರಥಗಳಿಗೆ ಹಸಿರು ನಿಶಾನೆ

ಜನತಾ ಜಲಧಾರೆ: ಇಂದು 15 ಗಂಗಾರಥಗಳಿಗೆ ಹಸಿರು ನಿಶಾನೆ

Leave a Reply Cancel reply

Your email address will not be published. Required fields are marked *

Recommended

ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ

ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಇಲ್ಲ

3 years ago
ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

ಮೀಸಲು ಹೆಚ್ಚಳ ವಿಷಯ; ವೇದಿಕೆಯ ಮೇಲೆಯೇ ವಾಲ್ಮೀಕಿ ಶ್ರೀಗಳ ಸಾವಿನ ಮಾತು, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬೇಡಿಕೆ ಈಡೇರಿಕೆ ಭರವಸೆ, ಹೇಳಿಕೆ ಹಿಂಪಡೆದ ಶ್ರೀಗಳು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ