• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜನತಾ ಜಲಧಾರೆ: ಇಂದು 15 ಗಂಗಾರಥಗಳಿಗೆ ಹಸಿರು ನಿಶಾನೆ

cknewsnow desk by cknewsnow desk
April 11, 2022
in STATE
Reading Time: 1 min read
0
ಜನತಾ ಜಲಧಾರೆ: ಇಂದು 15 ಗಂಗಾರಥಗಳಿಗೆ ಹಸಿರು ನಿಶಾನೆ
992
VIEWS
FacebookTwitterWhatsuplinkedinEmail

16ರಂದು 15 ಕಡೆ ಜಲ ಸಂಗ್ರಹ


ರಾಮನಗರ: ಜೆಡಿಎಸ್ ಪಕ್ಷದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ನಾಳೆ (ಮಂಗಳವಾರ) ದಂದು ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್. ಡಿ.ದೇವೇಗೌಡರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಬಿಡದಿಯ ತಮ್ಮ ತೋಟ ಮನೆಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಜನತಾ ಜಲಧಾರೆಯ ಗಂಗಾ ರಥಗಳನ್ನು ತೋರಿಸಿ ವಿವರಣೆ ನೀಡಿದರು.

ಮುಂದುವರೆದು ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ರಾಮನಗರದ ಗ್ರಾಮ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಗಂಗಾ ರಥಗಳಿಗೆ ಮಾಜಿ ಪ್ರಧಾನಮಂತ್ರಿಗಳು ಚಾಲನೆ ನೀಡಲಿದ್ದಾರೆ‌ ಎಂದರು.

ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಸಿ ಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಶಾಸಕರು, ಹಿರಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಹಾಜರಿರುತ್ತಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನಗೆ ರಾಜಕೀಯವಾಗಿ ಜನ್ಮಕೊಟ್ಟ ರಾಮನಗರ ನೆಲದ ಗ್ರಾಮ ದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಜಲಧಾರೆ ಗಂಗಾರಥಗಳಿಗೆ ಚಾಲನೆ ನೀಡಲಾಗುವುದು. 15 ಜನತಾ ಜಲಧಾರೆಗೆ ಕಳಸ ಪ್ರತಿಷ್ಠಾಪನೆ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಯ 94 ಸ್ಥಳಗಳಲ್ಲಿ ಇರುವ ಪ್ರಮುಖ ನದಿ ಹಾಗೂ ಉಪ ನದಿಗಳಲ್ಲಿ ನೀರು ಸಂಗ್ರಹ ಮಾಡುತ್ತೇವೆ. ಎಲ್ಲಾ ರಥಗಳು ಮೆ 8 ರೊಳಗೆ ಬೆಂಗಳೂರು ಸೇರಲಿವೆ. ಪಕ್ಷದ ಕಚೇರಿ ಬಳಿ ಬೃಹತ್ ಕಳಸ ಸ್ಥಾಪನೆ ಮಾಡಿ ಅಲ್ಲಿ ಎಲ್ಲಾ ಜಿಲ್ಲೆಗಳಿಂದ ಬಂದ ನೀರನ್ನು ಇಟ್ಟು ಮುಂದಿನ ಚುನಾವಣೆವರೆಗೂ ಪೂಜೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ನಾಲ್ಕೈದು ಲಕ್ಷ ಕಾರ್ಯಕರ್ತರು ಹಾಗೂ ರೈತ ಕಾರ್ಯಕರ್ತರ ಸಭೆ ನಡೆಯಲಿದೆ. 180 ತಾಲೂಕುಗಳಲ್ಲಿ ವಾಹನ ಸಂಚಾರ ಮಾಡಲಿವೆ ಎಂದು ಅವರು ತಿಳಿಸಿದರು.

ಐದು ವರ್ಷಗಳಲ್ಲಿ ನೀರಾವರಿ ಯೋಜನೆ ಪೂರ್ಣ

75 ವರ್ಷಗಳಿಂದ ನಮ್ಮ ನದಿಯ ನೀರನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ. ರಾಜ್ಯಕ್ಕೆ ಎರಡು ರಾಷ್ಟ್ರೀಯ ಪಕ್ಷಗಳು ದ್ರೋಹ ಬಗೆದಿವೆ. ಈ ಬಗ್ಗೆ ಪಕ್ಷದ ಕಿರುಹೊತ್ತಿಗೆ ಮನೆ ಮನೆ ಸೇರಲಿದೆ. ರಾಜ್ಯದ ಜನರು ನನಗೆ 5 ವರ್ಷ ಅಧಿಕಾರ ನೀಡಲಿ, ನಾನು ಎಲ್ಲ ನೀರಾವರಿ ಯೋಜನೆಗಳನ್ನು ಸಂಪೂರ್ಣ ಮಾಡುತ್ತೇನೆ. ಒಂದು ವೇಳೆ ನಾನು ಈ ಕೆಲಸ ಮಾಡಿಲ್ಲ ಅಂದರೆ ಪಕ್ಷವನ್ನ ವಿಸರ್ಜನೆ ಮಾಡುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಅವರು ಹೇಳಿದರು.

ನಮ್ಮ ರಾಜ್ಯ ದೇಶಕ್ಕೆ ಕೊಡುವ ತೆರಿಗೆ ಹಣದಲ್ಲಿ ಎರಡನೇ ಸ್ಥಾನದಲ್ಲಿ‌ ಇದೆ. ಆದರೂ ನಾವು ನೀರಾವರಿಯಲ್ಲಿ ನಾವು ಹಿಂದೆ ಉಳಿದಿದ್ದೇವೆ. ನಮ್ಮ ಸರ್ಕಾರ ನೀರಾವರಿ ಯೋಜನೆಗೆ ಹೆಚ್ಚಿನ ಹಣವನ್ನು ಉಪಯೋಗಿಸಿಕೊಳ್ಳಲು ವಿಫಲವಾಗಿದೆ. ಈ ಸರ್ಕಾರಗಳು ವಿಳಂಬ ನೋಡಿದರೆ ಇನ್ನೂ 100 ವರ್ಷವಾದರೂ ನೀರಾವರಿ ಯೋಜನೆಗಳು ಮುಗಿಯಲ್ಲ ಎಂದರು ಅವರು.

ಎರಡು ರಾಷ್ಟ್ರೀಯ ಪಕ್ಷಗಳು ಈ ರಾಜ್ಯಕ್ಕೆ ಅನ್ಯಾಯ ಮಾಡಿವೆ. ಜನತಾ ಜಲಧಾರೆ ಮೂಲಕ ಜನರಿಗೆ ಮನ‌ ಮುಟ್ಟುವ ಕೆಲಸ ಮಾಡಲಾಗುತ್ತದೆ. ಮುಂದಿನ ಭವಿಷ್ಯಕ್ಕೆ ಸಂಬಂಧಿಸಿದಂತೆ ಈ ಬಾರಿ ಜೆಡಿಎಸ್ ಗೆ ಬೆಂಬಲ ನೀಡಬೇಕು. ಸರ್ಕಾರ ಮನೆ ಕಳೆದುಕೊಂಡವರಿಗೆ 5 ಲಕ್ಷ ಕೊಡ್ತೀನಿ ಅಂದು 1 ಲಕ್ಷ ಕೊಟ್ಟಿದ್ದಾರೆ. ಸರ್ಕಾರದವರು ಆ ಹಣವನ್ನು ಲೂಟಿ ಮಾಡಲು ಹೊರಟಿದ್ದಾರೆ ಎಂದು ಅವರು ಆರೋಪಿಸಿದರು.

ಜೆಡಿಎಸ್ ಪಕ್ಷ ತೊರೆದವರು ಪುನಃ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ಕೆಲ ಸಣ್ಣ ಪುಟ್ಟ ದೋಷಗಳಿಂದ ಪಕ್ಷದಿಂದ ಕೆಲವರು ದೂರ ಹೋಗಿದ್ದರು. ಪಕ್ಷದ ಕಾರ್ಯವೈಖರಿ, ಪಕ್ಷದ ಸಿದ್ದಾಂತ ಒಪ್ಪಿ ಬರುವವರು ಮತ್ತೆ ಬರಬಹುದು‌ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಈ ಹಿಂದೆ ಕೆಲವರು ಜೆಡಿಎಸ್ ಮುಳುಗೆ ಹೋಯ್ತು ಎಂದು ಕೆಲವರು ಹೇಳುತ್ತಿದ್ದರು. ಈಗ ಅನೇಕ ಸಂಘ ಸಂಸ್ಥೆಗಳು, ಕಾರ್ಯಕರ್ತರು ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಈಗಾಗಲೇ ಎರಡೂ ರಾಷ್ಟ್ರೀಯ ಪಕ್ಷಗಳು ಸಮೀಕ್ಷೆ ಮಾಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ನಲ್ಲಿ ಗೆಲ್ಲುವಂತ ನಾಯಕರನ್ನು ಅವರ ಪಕ್ಷಕ್ಕೆ ಸೆಳೆಯಲು ಮುಂದಾಗ್ತಿದ್ದಾರೆ. ಎರಡು ಪಕ್ಷದ ನಾಯಕರು ನಮ್ಮ ಪಕ್ಷದ ಮುಖಂಡರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಈ‌ ಹಿಂದೆ ನಮ್ಮ ಪಕ್ಷ ಬಿಟ್ಟು ಹೋದ ಶಾಸಕರ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ನಾಯಕರನ್ನು ಕಾರ್ಯಕರ್ತರು ಸೃಷ್ಟಿಮಾಡಿದ್ದಾರೆ. ಜೆಡಿಎಸ್ ತೊರೆದವರು ಪಕ್ಷ ಸೇರುವ ಕುರಿತು ಪಕ್ಷದಲ್ಲೇ ಹಿರಿಸು ಮುರಿಸು ಇದೆ. ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ. ಪ್ರಾದೇಶಿಕ ಪಕ್ಷಗಳು ಒಬ್ಬ ವ್ಯಕ್ತಿ ತೆಗೆದುಕೊಳ್ಳುವ ನಿಲುವು ಏನಿದೆ ಅನ್ನೊದರ ಮೇಲೆ ಆ ಪಕ್ಷ ಮೇಲೆ ಬರಲಿದೆ. ನನ್ನ ಈಗಿನ ನಿಲುವಿನ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂಚರಾಜ್ಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕಾರ ಮಾಡಿದ್ದಾರೆ. ನಮ್ಮ ರಾಜ್ಯದಲ್ಲೂ ಯಾವ ಎಎಪಿ ಇರಲಿ ಯಾವುದೇ ಬಂದ್ರೂ ಜನತಾದಳವೇ ಇಲ್ಲಿ ಮುಖ್ಯ. ವಿಷಯಾಧಾರಿತ ವಿಚಾರ ಮುಂದಿಟ್ಟುಕೊಂಡು ಜನರ ಮುಂದೆ ಹೋಗ್ತಿದ್ದೇನೆ. ಜನರು ನನ್ನ ವಿಚಾರಗಳನ್ನು ಒಪ್ಪಿಕೊಳ್ತಾರೆ ಎಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಮಂಜುನಾಥ್ ಅವರು ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹೊಣೆ

ವರಿಷ್ಠರ ಖಡಕ್‌ ಸೂಚನೆಗೆ ಮಣಿದ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

Recommended

ದಳಪತಿಗಳನ್ನು ಭೇಟಿಯಾದ ಡಾ.ಕೆ.ಸುಧಾಕರ್; ಸುಸೂತ್ರ ಚುನಾವಣೆ ಬಗ್ಗೆ ಸಮಾಲೋಚನೆ

ದಳಪತಿಗಳನ್ನು ಭೇಟಿಯಾದ ಡಾ.ಕೆ.ಸುಧಾಕರ್; ಸುಸೂತ್ರ ಚುನಾವಣೆ ಬಗ್ಗೆ ಸಮಾಲೋಚನೆ

2 years ago
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ