• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ

cknewsnow desk by cknewsnow desk
April 17, 2022
in STATE
Reading Time: 1 min read
0
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ
1k
VIEWS
FacebookTwitterWhatsuplinkedinEmail

ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ.ಕುಮಾರಸ್ವಾಮಿ


ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.

ಹಾಗೆಯೇ, ಹಿರಿಯ ಶಾಸಕರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸುವ ಮೂಲಕ ಈ ಇಬ್ರಾಹಿಂ ಅವರು ಪಕ್ಷದ ಚುಕ್ಕಾಣಿ ಹಿಡಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದರು. ಅವರು ಹೇಳಿದ್ದಿಷ್ಟು;

ನಾನು ದೇವರನ್ನು ನಂಬುತ್ತೇನೆ. ಅದಕ್ಕೆ ‌‌ಇವತ್ತು ಒಳ್ಳೆಯ ದಿನ ಎನ್ನುವ ಕಾರಣಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಇಬ್ರಾಹಿಂ ಅವರಿಗೆ ನೀಡಿದ್ದೇವೆ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೆಚ್.ಕೆ.ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಎಂದು ಹೇಳಿದ ಕೂಡಲೇ ಒಪ್ಪಿಕೊಂಡರು.

ಒಬ್ಬ ಸಮರ್ಥ ನಾಯಕ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಹಿರಿಯ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕೆಲವರು ಇಷ್ಟು ದಿನ ನಮ್ಮ ಪಕ್ಷದ ಬಗ್ಗೆ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ಮಾಡಿದ್ದರು. ಜಫ್ರುಲ್ಲಾ ಖಾನ್ 10 ವರ್ಷಗಳ ಹಿಂದೆ ನನ್ನ ಜತೆ ಬಂದರು. ನಬಿ ಅವರು ನನ್ನ ಜತೆಯೇ ಬಂದರು. ಫಾರೂಕ್ ಅವರು ನಮ್ಮ ಜತೆ ಬಂದರು. ಫಾರೂಕ್ ಅವರನ್ನು ರಾಜ್ಯಸಭೆಗೆ ಕಳಿಸಲು ಒದ್ದಾಡಿದೆವು. ಆದರೆ, ನಮ್ಮವರೇ ಅವರನ್ನು ಸೋಲಿಸಿದರು. ಅವರಿಗೆ ಐಟಿ ಸೇರಿದಂತೆ ಅನೇಕ ರೀತಿಯ ಹಿಂಸೆ ಆಗುತ್ತಿದೆ. ಆದರೂ ಅವರು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

ನನಗೆ ಈಗ 90 ವರ್ಷ ವಯಸ್ಸು. ಕುಮಾರಸ್ವಾಮಿ ಅನೇಕ ಯೋಜನೆ ಮಾಡಿದ್ದಾರೆ. ಬಡವರಿಗೆ ಅನ್ಯಾಯ ಆಗಬಾರದು ಅಂತ ಅನೇಕ ಕಾರ್ಯಕ್ರಮ ರೂಪಿಸಿದ್ದಾರೆ. ರಾಜ್ಯದ ಉದ್ದಗಲಕ್ಕೂ ಈಗ ಜಲಧಾರೆ ಕಾರ್ಯಕ್ರಮ ಪ್ರಾರಂಭ ಮಾಡಿದ್ದಾರೆ.

ಜಲಧಾರೆ ಕಾರ್ಯಕ್ರಮ ಕುಮಾರಸ್ವಾಮಿ ಅವರ ಕಲ್ಪನೆ ಕೂಸು. ಇದೊಂದು ಶ್ರೇಷ್ಠ ಕಾರ್ಯಕ್ರಮ. ಇಬ್ರಾಹಿಂ ಈ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಾರೆ. ಇದರ ನಡುವೆ ದೇವೇಗೌಡರ ಕುಟುಂಬದವರೇ ಎಲ್ಲಾ ಇದ್ದಾರೆ ಅಂತ ಅಪಪ್ರಚಾರ ಮಾಡಬಹುದು.

ಇದು ಒಕ್ಕಲಿಗರ ಪಾರ್ಟಿ ಅಂತ ಹೇಳಿದರು. ಬರೀ ಸುಳ್ಳು ಹೇಳುತ್ತಾರೆ. ಅಪಪ್ರಚಾರ ಮಾಡಿದರು. ನಾನು ಮಂತ್ರಿ ಮಂಡಲ ರಚನೆ ಮಾಡಿದಾಗ ಒಕ್ಕಲಿಗರು ಇದ್ದದ್ದು 4 ಜನ ಮಾತ್ರ. ಓಬಿಸಿ, ಎಸ್ಸಿ, ಎಸ್ಟಿಗೆ ಹೆಚ್ಚು ಸ್ಥಾನ ಕೊಟ್ಟಿದ್ದೆ. ಎಲ್ಲಾ ವರ್ಗದವರನ್ನು ಗುರುತಿಸಿ ನಾನು ‌ಮಂತ್ರಿಮಂಡಲ ಮಾಡಿದೆ. ಮುಸ್ಲಿಮರಿಗೆ ಮೀಸಲಾತಿ ತಂದಿದ್ದು ನಾನು.

ಮಿಷನ್ 123 ಸಾಕಾರ ಆಗುತ್ತದೆ. ಭಗವಂತನ ಅನುಗ್ರಹದಿಂದ ಈ ಪಕ್ಷ ಉಳಿಯುತ್ತದೆ. ಈ‌ ಪಕ್ಷವನ್ನು ಯಾರಿಂದಲೂ ತುಳಿಯಲು ಸಾಧ್ಯವಿಲ್ಲ. ಅಂದು ನಾವು ಮಾಡಿದ ಒಳ್ಳೆಯ ಕೆಲಸಕ್ಕೆ ಅವತ್ತು 16 ಎಂಪಿ ಸ್ಥಾನ ಗೆದ್ದೆವು. ಇನ್ನು ಮುಂದೆ ಜೆಡಿಎಸ್ ಅನ್ನು ಒಕ್ಕಲಿಗರ ಪಕ್ಷ ಅಂತ ಯಾರೂ ಹೇಳಬಾರದು. ಅಂತಹ ಮಾತುಗಳಿಗೆ ಇಬ್ರಾಹಿಂ ತಕ್ಕ ಉತ್ತರ ನೀಡುತ್ತಾರೆ. ನಾನು ‌‌ ಕುಳಿತುಕೊಳ್ಳೊಲ್ಲ. ಪಕ್ಷದ ಪರವಾಗಿ ನಾನು ದುಡಿಮೆ ಮಾಡ್ತೀನಿ.

ಮಾಜಿ ಮುಖ್ಯಮಂತ್ರಿ ಹೆಚ್ ಡಿಕೆ ಹೇಳಿದ್ದು

ಎರಡು ವರ್ಷಗಳ ಕಾಲ ಕಷ್ಟದ ಕಾಲದಲ್ಲೂ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿದ್ದರು ಹೆಚ್.ಕೆ.ಕುಮಾರಸ್ವಾಮಿ ಅವರು. ಇಬ್ರಾಹಿಂ ಅವರು ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದ ಮತ್ತೆ ಮರಳಿ ಮನೆಗೆ ಬಂದಿದ್ದಾರೆ.

ರಾಜ್ಯದಲ್ಲಿ ಜಲಧಾರೆ ಕಾರ್ಯಕ್ರಮ ಆರಂಭವಾಗಿದೆ. 15 ಕಡೆ ಒಂದೇ ಬಾರಿಗೆ ನೀರು ತುಂಬುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಇಬ್ರಾಹಿಂ ಅವರ ಸೇರ್ಪಡೆ ಒಂದು ಸಮಾಜವನ್ನು ಓಲೈಕೆ ಮಾಡಲು ಅಲ್ಲ. ನಾನು ಸ್ಪಷ್ಟವಾಗಿ ಹೇಳ್ತಿನಿ ನಾನು ಓಲೈಸಲು ಈ ಕೆಲಸ ಮಾಡ್ತಾ ಇಲ್ಲ. ಒಂದು ಸಮಾಜದ ಪರವಾಗಿ ನಾನು ಇಲ್ಲ. ಸರ್ವ ಜನಾಂಗದ ಶಾಂತಿಯ ತೋಟ ಅಂತ ಕುವೆಂಪು ಹೇಳಿದ್ದಾರೆ. ಇದನ್ನು ಉಳಿಸಲು ಹೋರಾಟ ಮಾಡಬೇಕಿದೆ.

ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್, ಶಾಸಕರಾದ ಕೆ.ಎಂ.ಕೃಷ್ಣಾರೆಡ್ಡಿ, ದಾಸರಹಳ್ಳಿ ಮಂಜುನಾಥ್, ಮುಖಂಡರಾದ ನಬಿ, ಟಿ.ಎ.ಶರವಣ, ಜಪ್ರುಲ್ಲಾ ಖಾನ್, ಪಕ್ಷದ ನಗರ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

Tags: cm Ibrahimhd devegowdajdsparty president
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಅರಣ್ಯದ 284 ಎಕರೆ ನುಂಗಿದ ಗೌರಿಬಿದನೂರು ಕಂದಾಯ ಇಲಾಖೆ

ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ನಕ್ಷೆಗಳಿಗೆ ಕಂದಾಯ ಕಚೇರಿಗೆ ಅಲೆಯಬೇಕಿಲ್ಲ

Leave a Reply Cancel reply

Your email address will not be published. Required fields are marked *

Recommended

200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ

200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ

3 years ago
ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌

ಬರಪೀಡಿತ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಪಾತಾಳಕ್ಕೆ ಕುಸಿಯುತ್ತಿರುವ ಗಂಗೆಯ ಸರಾಸರಿ ಪ್ರಮಾಣ ಎಷ್ಟು? ಬೆಚ್ಚಿಬೀಳುವ ಮಾಹಿತಿ ಹಂಚಿಕೊಂಡ ಜಲವಿಜ್ಞಾನಿ ಡಾ.ವಿ.ಎಸ್. ಪ್ರಕಾಶ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ