• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

P K Channakrishna by P K Channakrishna
April 24, 2022
in NATION, STATE
Reading Time: 2 mins read
0
ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ
1k
VIEWS
FacebookTwitterWhatsuplinkedinEmail

ಮುಕ್ತ, ನಿರ್ಭೀತ ಮಾಧ್ಯಮವಿಲ್ಲದೆ ಸದೃಢ & ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ: ವೆಂಕಯ್ಯ ನಾಯ್ಡು

ಬೆಂಗಳೂರು: ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಶ್ರೀ ಎಂ.ವೆಂಕಯ್ಯನಾಯ್ಡು ಅವರು ಇಂದು ಬಲವಾಗಿ ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನ 50 ನೇ ವಾರ್ಷಿಕೋತ್ಸವದ ಅಂಗವಾಗಿ  ಪ್ರೆಸ್ ಕ್ಲಬ್‌ ಆವರಣದಲ್ಲಿ ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ ಕುರಿತು ಮಾತನಾಡಿದ ಉಪರಾಷ್ಟ್ರಪತಿ ಗಳು, ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಿದರು.

ವಿವಿಧ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರು, ಸಂಪಾದಕರು ಮತ್ತು ಹಿರಿಯ ಪತ್ರಕರ್ತರನ್ನು ಉದ್ದೇಶಿಸಿ ಮಾತಾನಡಿದ ವೆಂಕಯ್ಯ ನಾಯ್ಡು, ಸಾಂವಿಧಾನಿಕ ಕಾನೂನಿನ ನಿಯಮವನ್ನು ಬಲಪಡಿಸುವ ವಿಚಾರಕ್ಕೆ ಬಂದರೆ, ಮುಕ್ತ ಮತ್ತು ನ್ಯಾಯಸಮ್ಮತ ಮಾಧ್ಯಮ  ಸ್ವತಂತ್ರ ನ್ಯಾಯಾಂಗಕ್ಕೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. 
ಮಾಧ್ಯಮಗಳಲ್ಲಿನ ಮೌಲ್ಯಗಳು ಕುಸಿಯುತ್ತಿರುವ ಬಗ್ಗೆ  ಎಚ್ಚರಿಕೆ ನೀಡಿದ ಉಪರಾಷ್ಟ್ರಪತಿ ಗಳು. ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ವರದಿಗಾರಿಕೆಗೆ ಕರೆ ನೀಡಿದರು.

Today, we find news constantly fused with opinion. While we expect news media to hold up a mirror to society, one often tends to feel that neither newspapers nor television channels give an accurate picture of some events. #Press pic.twitter.com/qypofTMA6e

— Vice-President of India (@VPIndia) April 24, 2022
ಸುದ್ದಿಯನ್ನು ಅಭಿಪ್ರಾಯಗಳೊಂದಿಗೆ ಬೆರೆಸಬಾರದು

ಹಿಂದೆ ಪತ್ರಿಕೋದ್ಯಮದಲ್ಲಿ ಸುದ್ದಿಯನ್ನು ಪವಿತ್ರವಾದ ಒಂದು ಧ್ಯೇಯವೆಂದು ಪರಿಗಣಿಸಲಾಗಿತ್ತು ಎಂದ ವೆಂಕಯ್ಯ ನಾಯ್ಡು ಅವರು , ಉತ್ತಮ ಪತ್ರಿಕೋದ್ಯಮವು ಘಟನೆಗಳ ನಿಷ್ಪಕ್ಷಪಾತ ಮತ್ತು ನೈಜ ಪ್ರಸಾರಕ್ಕೆ ಮತ್ತು ಜನರಿಗೆ ಅವುಗಳನ್ನು ನಂಬಲರ್ಹ ರೀತಿಯಲ್ಲಿ ತಲುಪಿಸುವುದರ ಮೇಲೆ ಅವಲಂಬಿತವಾಗಿದೆ ಎಂಬ ಅಂಶವನ್ನು ಬಲವಾಗಿ ಪ್ರತಿಪಾದಿಸಿದರು.

ಖಾಸಾ ಸುಬ್ಬಾ ರಾವು, ಫ್ರಾಂಕ್ ಮೊರೇಸ್ ಮತ್ತು ನಿಖಿಲ್ ಚಕ್ರವರ್ತಿಯಂತಹ ಹಿಂದಿನ ಹಲವು ಹೆಸರಾಂತ ಸುದ್ದಿ ಸಂಪಾದಕರ ಹೆಸರುಗಳನ್ನು ಉಲ್ಲೇಖಿಸಿದ ಉಪರಾಷ್ಟ್ರಪತಿಗಳು, ಅವರು ಎಂದಿಗೂ ಸುದ್ದಿಗೆ ತಮ್ಮ ಅಭಿಪ್ರಾಯದ  ಬಣ್ಣ ಹಚ್ಚುತ್ತಿರಲಿಲ್ಲ… ಮತ್ತು ಅವರು ಸದಾ ಸುದ್ದಿ ಮತ್ತು ಅಭಿಪ್ರಾಯಗಳ ನಡುವೆ ಲಕ್ಷ್ಮಣ ರೇಖೆಯನ್ನು ಗೌರವಿಸುತ್ತಿದ್ದರು ಎಂದು ಹೇಳಿದರು.

ಸ್ವಾತಂತ್ರ್ಯ ಸಂಗ್ರಾಮ ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಪಾರ ಕೊಡುಗೆ ನೀಡಿದ ಪತ್ರಿಕೋದ್ಯಮದ ದಿಗ್ಗಜರಿಂದ ಇಂದಿನ ವೃತ್ತಿಪರರ ಸ್ಫೂರ್ತಿ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.ಸುದ್ದಿಗಳನ್ನು ಅಭಿಪ್ರಾಯಗಳೊಂದಿಗೆ ಬೆರೆಸಬಾರದು ಎಂದು ಒತ್ತಿ ಹೇಳಿದ ಅವರು, ಮಾಧ್ಯಮದ ವ್ಯಕ್ತಿಗಳು ಎಂದಿಗೂ ಸತ್ಯದೊಂದಿಗೆ ರಾಜಿಮಾಡಿಕೊಳ್ಳಬೇಡಿ ಮತ್ತು ಸದಾ ಭಯ ಅಥವಾ ನಿಸ್ಪಕ್ಷಪಾತವಿಲ್ಲದೆ ಸುದ್ದಿಯನ್ನು ಪ್ರಸ್ತುತಪಡಿಸಬೇಕೆಂದು ಸಲಹೆ ನೀಡಿದರು.

ಇತ್ತೀಚಿನ ವರ್ಷಗಳಲ್ಲಿ ಪತ್ರಿಕೋದ್ಯಮದ ಮಾನದಂಡಗಳು ಭಾರಿ ಕುಸಿತವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು ಅವರು, ಇತ್ತೀಚಿನ ಸಾಮಾಜಿಕ ಮಾಧ್ಯಮಗಳ ಹೆಚ್ಚಳ ನೀರನ್ನು ಮತ್ತಷ್ಟು ಕೆಸರಿನಿಂದ ರಾಡಿಗೊಳಿಸಿದೆ ಎಂದು ಹೇಳಿದರು. “ ನಾವು ಇಂದು ಸದಾ  ಅಭಿಪ್ರಾಯದೊಂದಿಗೆ ಸುದ್ದಿಗಳನ್ನು ಸೇರಿಸುವುದನ್ನು ಕಾಣುತ್ತಿದ್ದೇವೆ. ಅದು ಎಷ್ಟರಮಟ್ಟಿಗೆ ಎಂದರೆ ಪತ್ರಿಕೆಗಳಾಗಲಿ ಅಥವಾ ದೂರದರ್ಶನ ವಾಹಿನಿಗಳಾಗಲಿ ಕೆಲವು ಘಟನೆಗಳ ನೈಜ ಚಿತ್ರಣವನ್ನೇ ನೀಡುವುದಿಲ್ಲ ಎಂದು ಕೆಲವೊಮ್ಮೆ ಭಾವಿಸುವಂತಾಗಿದೆ’’ ಎಂದು ಅವರು ಹೇಳಿದರು.

ಸಂಸತ್ತು ಮತ್ತು ಸರ್ಕಾರವು ಸಾಮಾಜಿಕ ಮಾಧ್ಯಮಗಳಲ್ಲಿನ ಸುಳ್ಳು ಸುದ್ದಿಗಳ ವಿಷಯವನ್ನು ಪರಿಶೀಲಿಸಬೇಕು ಮತ್ತು ಸುಳ್ಳು ಸುದ್ದಿಗಳನ್ನು ಎದುರಿಸಲು ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. 

ಪಕ್ಷಪಾತದ ಸುದ್ದಿ ಪ್ರಸ್ತುತಿ ಮತ್ತು ಘಟನೆಗಳನ್ನು ನಿರ್ದಿಷ್ಟ ಕಾರ್ಯಸೂಚಿ ಇಟ್ಟುಕೊಂಡು ಪ್ರಸಾರ ಮಾಡುವ ಬಗ್ಗೆ ಗಮನ ಸೆಳೆದ ಉಪರಾಷ್ಟ್ರಪತಿ, ಅಂತಹ ಪತ್ರಿಕೋದ್ಯಮದ ತೊಡಗಿರುವವರು, ತಮ್ಮ ವೃತ್ತಿಗೆ ದೊಡ್ಡ ಅಪಚಾರ ಎಸಗುತ್ತಿದ್ದಾರೆ, ಏಕೆಂದರೆ ಪತ್ರಿಕೋದ್ಯಮದ ಮೂಲಾಧಾರ ಆಡಗಿರುವುದು ಸತ್ಯಾಸತ್ಯತೆ ಮತ್ತು ವಿಶ್ವಾಸಾರ್ಹತೆಯಲ್ಲಿ ಎಂದು ಅವರು  ಹೇಳಿದರು. 

ಸಾರ್ವಜನಿಕ ಭಾಷಣಗಳಲ್ಲಿ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ಶ್ರೀ ವೆಂಕಯ್ಯ ನಾಯ್ಡು ಅವರು, ಶಾಸನ ಸಭೆಗಳಲ್ಲಿ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ಅಳವಡಿಸಿಕೊಳ್ಳುವ ಮೂಲಕ ರಾಜಕೀಯ ಪಕ್ಷಗಳು ತಮ್ಮನ್ನು ತಾವು ಸ್ವಯಂ ನಿರ್ಬಂಧಿಸಿಕೊಳ್ಳುವಂತೆ ಮಾಡಬೇಕೆಂದರು. ತಮ್ಮ ರಾಜಕೀಯ ಎದುರಾಳಿಗಳ ಮೇಲೆ ವೈಯಕ್ತಿಕ ದಾಳಿ ಮಾಡದಂತೆ ಸಾರ್ವಜನಿಕ ಪ್ರತಿನಿಧಿಗಳಿಗೆ ಸಲಹೆ ನೀಡಿದರು. ಯಾವುದೇ ಲೋಪ ದೋಷಗಳನ್ನು ನಿವಾರಿಸಲು ಪಕ್ಷಾಂತರ ವಿರೋಧಿ ಕಾನೂನನ್ನು ಮರು ಪರಿಶೀಲಿಸುವಂತೆಯೂ ಅವರು ಕರೆ ನೀಡಿದರು. 

ವಿಧಾನಮಂಡಲಗಳಲ್ಲಿ ಸದಸ್ಯರು ಚರ್ಚೆ, ಸಂವಾದ ನಡೆಸಿ ಅರ್ಥಪೂರ್ಣವಾಗಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಿ ಹೇಳಿದ ಉಪರಾಷ್ಟ್ರಪತಿ ಅವರು, ಮಾಧ್ಯಮಗಳು ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ನಡೆಸುವ ರಚನಾತ್ಮಕ ಭಾಷಣಗಳನ್ನು ಪ್ರಮುಖವಾಗಿ ಪ್ರಸಾರ ಮಾಡಬೇಕೇ ಹೊರತು ಅಡ್ಡಿಪಡಿಸುವ ಪ್ರಸಂಗಗಳನ್ನಲ್ಲ ಎಂದರು. ಮಾಧ್ಯಮಗಳು, ಸಂಸತ್ತು ಮತ್ತು ಶಾಸನ ಸಭೆಗಳಲ್ಲಿ ಕಲಾಪಕ್ಕೆ ಅಡ್ಡಿಪಡಿಸುವವರಿಗೆ ಅನಗತ್ಯ ಗಮನ ನೀಡುವುದರ ಬಗ್ಗೆ ಮತ್ತು ಸುದ್ದಿಗಳನ್ನು ವೈಭವೀಕರಿಸುವ ಬಗ್ಗೆ ಅವರು ಎಚ್ಚರಿಕೆ ನೀಡಿದರು. 

ಸಂಸದ ಪಿ.ಸಿ.ಮೋಹನ್, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಕೆ.ಸದಾಶಿವ ಶಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಕಿರಣ್, ಉಪಾಧ್ಯಕ್ಷ ಎಸ್. ಶ್ಯಾಮ್ ಪ್ರಸಾದ್ , ಜಂಟಿ ಕಾರ್ಯದರ್ಶಿ ಆನಂದ ಬೈದನಮನೆ ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಡಿಬಂಡೆ ಕಸಾಪ ಪದಾಧಿಕಾರಿಗಳ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಗುಡಿಬಂಡೆ ಕಸಾಪ ಪದಾಧಿಕಾರಿಗಳ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

Leave a Reply Cancel reply

Your email address will not be published. Required fields are marked *

Recommended

ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ

ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ

5 years ago
ಭ್ರಷ್ಟರ ಬೆನ್ನತ್ತಿದ್ದ ಎಸಿಬಿ; ಚಿಕ್ಕಬಳ್ಳಾಪುರ, ಚಿಂತಾಮಣಿಯಲ್ಲಿ ದಾಳಿ

ಭ್ರಷ್ಟರ ಬೆನ್ನತ್ತಿದ್ದ ಎಸಿಬಿ; ಚಿಕ್ಕಬಳ್ಳಾಪುರ, ಚಿಂತಾಮಣಿಯಲ್ಲಿ ದಾಳಿ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ