ಹಾಲಿ ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಡಲು ಆದೇಶಿಸಿದ್ದ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು ಈಗ ಮತ್ತೊಂದು ಮೇಲ್ಪಂಕ್ತಿಗೆ ಕಾರಣರಾಗಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ನಿರ್ಧಾರವನ್ನು, ಬೇಡ ಎಂದೇ ನಯವಾಗಿ ತಿಸ್ಕರಿಸಿರುವ ಯಡಿಯೂರಪ್ಪ, ತಮ್ಮ ಹೆಸರಿಗಿಂತ ಬೇರೊಬ್ಬ ಸಾಧಕರ ಹೆಸರು ಇಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ.
ಯಡಿಯೂರಪ್ಪ ಅವರ ಈ ನಿರ್ಧಾರದ ಬಗ್ಗೆ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅವರ ಪತ್ರ ಇಲ್ಲಿದೆ.