ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ; ಗಣ್ಯರಿಂದ ಸಂತಾಪ
ಬೆಂಗಳೂರು/ಮೈಸೂರು: ಶನಿವಾರ ತಡರಾತ್ರಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನಳಾದ ಮೂರು ವರ್ಷದ ಬಾಲಕಿ ಗೌರಿಯ ಅಂತ್ಯಕ್ರಿಯೆ ಇಂದು ಮೈಸೂರಿನ ಗುಂಗ್ರಾಲ್ ಛತ್ರದಲ್ಲಿ ನಡೆಯಿತು.
ಗೌರಿ, ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು. ಅನಾರೋಗ್ಯಕ್ಕೆ ತುತ್ತಾಗಿದ್ದ ಗೌರಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅಂತ್ಯಕ್ರಿಯೆ ವೇಳೆ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಅನೇಕ ಗಣ್ಯರು ಅಗಲಿದ ಬಾಲಕಿಗೆ ಅಶ್ರುತರ್ಪಣ ಸಲ್ಲಿಸಿದರು.