• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ನಮ್ಮವೊಳಗಿನ ಬುದ್ದನನ್ನು ಎಚ್ಚರಿಸೋಣ

cknewsnow desk by cknewsnow desk
May 16, 2022
in EDITORS'S PICKS, GUEST COLUMN, STATE
Reading Time: 1 min read
0
ನಮ್ಮವೊಳಗಿನ ಬುದ್ದನನ್ನು ಎಚ್ಚರಿಸೋಣ

Photo by Bharath Reddy on Unsplash

1k
VIEWS
FacebookTwitterWhatsuplinkedinEmail

ಇಂದು ಬುದ್ಧಪೂರ್ಣಿಮೆ

by Dr Guruprasad Hawldar

ಬುದ್ಧಂ ಶರಣಂ ಗಚ್ಛಾಮಿ
ಧರ್ಮಂ ಶರಣಂ ಗಚ್ಛಾಮಿ
ಸಂಘಂ ಶರಣಂ ಗಚ್ಛಾಮಿ

ಇಂದು ಬೌದ್ಧ ಮತೀಯರಿಗೆ ಬಹಳ ಪವಿತ್ರವಾದ ದಿನ. ವೈಶಾಖ ಶುದ್ಧ ಪೌರ್ಣಿಮೆ ಬುದ್ಧನ ಜನ್ಮ ದಿನ. “ಬುದ್ಧ” ಎಂದರೆ ‘ಜ್ಞಾನ ಪಡೆದವನು’ ಎಂದರ್ಥ.

ಶುದ್ಧೋಧನ ಮತ್ತು ಮಾಯಾದೇವಿಯರ ಪುತ್ರನಾಗಿ ಹುಟ್ಟಿದ ರಾಜಕುಮಾರನೇ ಸಿದ್ದಾರ್ಥ. 16ನೇ ವಯಸ್ಸಿನಲ್ಲೇ ಯಶೋಧರೆ ಎಂಬ ಕನ್ಯೆಯೊಂದಿಗೆ ವಿವಾಹವಾಗಿ, ತಮಗೆ ಹುಟ್ಟಿದ ಮುದ್ದಿನ ಮಗನಿಗೆ ರಾಹುಲ ಎಂದು ಹೆಸರನಿಟ್ಟು ರಾಜ್ಯ, ಸಂಪತ್ತು, ಅಧಿಕಾರ, ಪತ್ನಿ, ಮಗು ಎನ್ನುತ್ತ ನೆಮ್ಮದಿಯಿಂದ ಕಾಲ ಕಳೆಯುತ್ತಿದ್ದ. ಒಮ್ಮೆ ನಗರ ಸಂಚಾರ ಮಾಡುತ್ತಿದ್ದ ರಾಜ ಸಿದ್ಧಾರ್ಥನಿಗೆ ಶವ, ರೋಗಿ ಮತ್ತು ವೃದ್ಧನನ್ನು ಕಂಡು, ಬದುಕಿನಲ್ಲಿ ಕಾಯಿಲೆ, ವೃದ್ಧಾಪ್ಯ, ಸಾವು ಎಲ್ಲರಿಗೂ ಅನಿವಾರ್ಯವೇ ಎಂಬ ಪ್ರಶ್ನೆ ಹುಟ್ಟಿ,
ಈ ಕುರಿತು ಸನ್ಯಾಸಿ ಒಬ್ಬರನ್ನು ಪ್ರಶ್ನಿಸಿದಾಗ, “ನಿನಗೆ ಈ ಬಗ್ಗೆ ತಿಳಿಯಬೇಕೆಂದರೆ ಮೊದಲು ಎಲ್ಲವನ್ನೂ ತೊರೆದು ವಿರಾಗಿಯಾಗು, ಜ್ಞಾನಗಳಿಸಿದ ಮೇಲೆ ನಿನಗೆ ಈ ಪ್ರಶ್ನೆಯ ಉತ್ತರ ದೊರಕುತ್ತದೆ” ಎಂದು ಸಾಧು ಉತ್ತರಿಸಿದನು.

ವೈಶಾಖ ಶುದ್ಧ ಪೌರ್ಣಿಮಿಯ ರಾತ್ರಿ ಸಿದ್ಧಾರ್ಥ ಬಿಟ್ಟು ಹೊರಟಿದ್ದು ಅರಮನೆಯನ್ನಲ್ಲ. ಸಹಜೀವಿಗಳೊಂದಿಗೆ ಬೆರೆಯಲಾಗದಂತೆ ಮೇಲು-ಕೀಳು ಎಂಬುದನ್ನು ಸೃಷ್ಟಿಸುವ ಅಧಿಕಾರದ ಗದ್ದುಗೆಯನ್ನು; ಪದವಿ, ಐಶ್ವರ್ಯಗಳಿಂದ ಸುಖ ಸಿಗುತ್ತದೆ ಎಂಬ ಭ್ರಾಂತಿಯನ್ನು ಮನುಷ್ಯನ ಮೂಲಭೂತ ಕೊರತೆಗಳನ್ನು ಅರಸೊತ್ತಿಗೆಯಿಂದ ನೀಗಿಸಲು ಸಾಧ್ಯವಿಲ್ಲ ಎಂಬುದನ್ನು ಸಿದ್ಧಾರ್ಥ ಗಮನಿಸುತ್ತಾನೆ.

ರಾಜಕುಮಾರನೆಂಬ ಭ್ರಮಾಕೋಶ ಕಳಚಿ ಜನರಲ್ಲಿಗೆ ಹೋದಾಗ ಮಾತ್ರ ಅವರ ದುಃಖವನ್ನು ತಾನು ಅರ್ಥಮಾಡಿಕೊಳ್ಳಬಲ್ಲೆ. ಮನುಕುಲಕ್ಕೆ ಸುಖ-ಸಂತೃಪ್ತಿ ದೊರಕುವ ಮಾರ್ಗ ಯಾವುದು ಎಂಬುದಕ್ಕೆ ಉತ್ತರವನ್ನು ಕಂಡುಕೊಳ್ಳಬಲ್ಲೆ ಎಂದು ಬೆಳದಿಂಗಳ ಆ ಇರುಳಿನಲ್ಲಿ ರಾಜ ಪದವಿ ತೊರೆದು ಜನರ ನಡುವೆಯೇ ಹುಡುಕ ಹೊರಟ ಈ ಸಿದ್ಧಾರ್ಥ.

ಮಾನವರ ದುಃಖವನ್ನು ದೂರಮಾಡುವ ಮುನ್ನ ಅದರ ಮೂಲವನ್ನು ಆತ ಅರಿಯ ಬೇಕಿತ್ತು. ಆ ಅರಿವಿನ ಹಾದಿ ಹುಡುಕುತ್ತ ಆತ ಮೊದಲು ದೇಹ ದಂಡಿಸಿಕೊಳ್ಳುತ್ತಾನೆ. ಎಷ್ಟೋ ದಿನ ಅನ್ನ, ನೀರು ತೊರೆದು ಪ್ರಕೃತಿಯ ಸರ್ವ ಕಾಠಿಣ್ಯವನ್ನು ತನ್ನನ್ನು ತೆರೆದುಕೊಂಡು ಸತ್ಯ ಅರಿಯಲು ಯತ್ನಿಸುತ್ತಾನೆ.

ಇಷ್ಟರಲ್ಲಿ ಬುದ್ಧನಿಗೆ ತಾನು ನಡೆಯಬೇಕಾದ ಹಾದಿ ಧ್ಯಾನ ಮಾರ್ಗವೆಂದು ಮನವರಿಕೆಯಾಗುತ್ತದೆ. ಜಗತ್ತಿನ ಆಗುಹೋಗುಗಳಿಗೆ, ಮನುಷ್ಯನ ತುಮುಲಗಳಿಗೆ ಕಾರ್ಯಕಾರಣ ಸಂಬಂಧದ ಎಳೆ ಹಿಡಿದು ಧ್ಯಾನಿಸಿ ಆತ ಕಂಡುಕೊಂಡದ್ದು ಅತ್ಯಂತ ಸರಳವೆಂದು ಕಾಣುವ ಆಸೆಯೇ ದುಃಖಕ್ಕೆ ಮೂಲ-ಎಂಬ ಸತ್ಯವನ್ನು. ತನ್ನ ಹುಟ್ಟಿದ ದಿನವೂ ಆದ ಒಂದು ಪೌರ್ಣಮಿಯ ದಿನ ಬೋಧಿವೃಕ್ಷದ ಕೆಳಗೆ, ಜಗತ್ತು ಜ್ಞಾನೋದಯ ಎಂತ ಕರೆಯುವ ಅರಿವಿನ ಬೆಳದಿಂಗಳಿನಲ್ಲಿ ಮಿಂದು ಸಿದ್ದಾರ್ಥ ನಿರ್ಮೋಹಿ ಬುದ್ಧನಾದ.

ಬುದ್ಧ ಹೇಳುವಂತೆ ಬದುಕೆಂಬುದು ಶುದ್ಧ ಬೆಳಕು. ಇಲ್ಲಿ ಯಾವುದೂ ಯಾರ ಸ್ವತ್ತೂ ಅಲ್ಲ. ಸುಖವನ್ನು ವಸ್ತುಗಳಲ್ಲಿ ಅರಸಲು ಹೋಗುವುದರಿಂದಲೇ ಮನುಷ್ಯ ದುಃಖಕ್ಕೀಡಾಗುತ್ತಾನೆ ಎಂದು ಗೌತಮಬುದ್ಧ ಹೇಳಿದ್ದರು. ಯಾವುದನ್ನೂ ಸ್ವಂತವೆಂದು ಪರಿಗಣಿಸದವನಿಗೆ ನೋವೂ ಇಲ್ಲ, ನಲಿವೂ ಇಲ್ಲ.

ಅಂತಹ ನಿರ್ಲಿಪ್ತ ಸಮಚಿತ್ತ ಮಾತ್ರ ಬುದ್ಧನ ನಗೆಯಂತಹ ಕಿರುನಗೆಯನ್ನು ಹೊಳೆಯಬಹುದು. ಆ ನಿರ್ಮಲ ಧ್ಯಾನಸ್ಥ ಮಂದಹಾಸದಲ್ಲಿ ಆತ ಪೂರ್ಣಚಂದ್ರನಷ್ಟು ಶಾಂತ, ದೇದೀಪ್ಯಮಾನ. ತನ್ನ ಮಾತುಗಳು ಮನುಷ್ಯನ ಆಂತರಿಕ ಗುಣವನ್ನು ಕುರಿತು ಹೇಳುವುದರಿಂದ ಅವನ್ನು ಗ್ರಹಿಸುವುದು ಲೌಕಿಕದ ಲಾಲಸೆಗಳಲ್ಲಿ ಮುಳುಗಿರುವವರಿಗೆ ಸುಲಭವಲ್ಲ ಎಂದು ಗೌತಮನಿಗೆ ತಿಳಿದಿತ್ತು.

ಬಯಕೆಗಳ ಗಾಢಾಂಧಕಾರದಲ್ಲಿ ದಾರಿತಪ್ಪಿದವರಿಗೆ ತನ್ನ ಮಾತು ಪಥ್ಯವಾಗುವುದೆ? ಅಂಥವರಿಗೆ ಉಪದೇಶ ನೀಡಲು ಹೋಗಿ ತಾನು ದಣಿಯಲಾರೆನೆ? ಪ್ರಶ್ನೆಗಳು ಎದುರಾಗಿದ್ದವು. ಅದು ತರ್ಕದ ನಿಲುಕಿಗೆ ಮೀರಿದ್ದು. ಒಳಗಣ್ಣಿಗೆ ಮಾತ್ರ ಸ್ವಷ್ಟವಾಗುವಂಥದ್ದು ಅಂತ ತಿಳಿದಿದ್ದರೂ ಸಹಜೀವಿಗಳ ಬಗ್ಗೆ ಅಮಿತ ಕರುಣೆಯ ಬುದ್ಧ ಯಾರ ಆತ್ಮಗಳು ಸತ್ಯವನ್ನು ಕಾಣಲು ತೆರೆದಿರುತ್ತವೋ ಅಂಥವರಿಗೆ ನಾನು ಹೇಳುವುದು ಅರ್ಥವಾದೀತು ಎಂಬ ನಂಬಿಕೆಯಿಂದ ಜನರಲ್ಲಿ ಆತ್ಮಜ್ಞಾನದ ಬಗ್ಗೆ ಒಲವು ಮೂಡಿಸಿದ.

ಗೌತಮ ‘ಬುದ್ಧ’ನಾಗಿದ್ದು ಕೇವಲ ಸರ್ವ ಸಂಗ ಪರಿತ್ಯಾಗದಿಂದ ಅಲ್ಲ. ತಾನು ಕಂಡ ಬದುಕಿನ ಸತ್ಯ ದರ್ಶನದಿಂದ. ಯಾವ ಕಷ್ಟಗಳೂ ಅರಿಯದಂತೆ ಬೆಳೆದ ಗೌತಮನಿಗೆ ಅದೊಂದು ಬಾರಿ ಜಗತ್ತಿನ ಪರಿತಾಪಗಳು, ಸಂಕೋಲೆಗಳು ಕಣ್ಣೆದುರು ಬಂದಿದ್ದರಿಂದಲೇ ಅದರ ಮೂಲ ಅರಿಯಲು ಹೊರಟದ್ದು. ಅಂತಿಮವಾಗಿ ‘ಆಸೆಯೇ ದುಃಖಕ್ಕೆ ಮೂಲ’ ಎಂಬುದನ್ನು ಅರಿತದ್ದು. ಹಾಗಂತ, ಬುದ್ಧನಿಗೆ ಹೊರ ಜಗತ್ತಿನ ಸಮಸ್ಯೆಗಳ ಮೂಲ ತಿಳಿದದ್ದು ಹೊರಗಿನಿಂದಲ್ಲ, ಒಳಗಿನಿಂದಲೇ.

ಬುದ್ಧನ ಜ್ಞಾನೋದಯ ಜಗತ್ತಿನ ಒಳಿತಿನ ಚಿಂತನೆಯಲ್ಲಿ  ಹುಟ್ಟಿದ್ದು. ಆದರೆ, ಪಾಮರರಾದ ನಮಗೆ ಕೇವಲ ನಮ್ಮ ಒಳಿತಿನ ಬಗೆ ತಿಳಿದರೂ ಸಾಕು. ಅದು ಮಹಾಜ್ಞಾನವಾಗುತ್ತದೆ. ನಮ್ಮ ಮನಸು ಅಪಾರ ಶಕ್ತಿಯ ಆಗರ. ಸಂಕಲ್ಪಿಸಿದ್ದನ್ನು ಸಾಧಿಸಬಲ್ಲತಾಕತ್ತನ್ನು ಹೊಂದಿರುವ ಸ್ಫೂರ್ತಿ ಸೆಲೆ. ಅದಕ್ಕೇ ಬುದ್ಧ ಹೇಳಿದ್ದು, ನೋವು ಎಲ್ಲರಿಗೂ ಇರುತ್ತದೆ, ಅದನ್ನು ಅನುಭವವಾಗಿಸಿಕೊಳ್ಳುವುದು, ಯಾತನೆಯಾಗಿಸಿಕೊಳ್ಳುವುದು ಅವರವರಿಗೆ ಬಿಟ್ಟದ್ದು ಅಂತ. ಇನ್ನೊಬ್ಬರಲ್ಲಿತಪ್ಪು ಹುಡುಕುವುದು ತುಂಬ ಸುಲಭ, ನಮ್ಮ ತಪ್ಪು ಸರಿ ಮಾಡಿಕೊಳ್ಳುವುದು ಕಷ್ಟ ಎನ್ನುವ ಬುದ್ಧನ ಮಾತಿನಲ್ಲಿಇನ್ನೊಬ್ಬರಲ್ಲೂನಮ್ಮನ್ನು ಕಾಣುವ ಗುಣವಿದೆ. ‘ನನ್ನನ್ನು ದ್ವೇಷಿಸುವವರನ್ನು ದ್ವೇಷಿಸಲು ನನಗೆ ಸಮಯವಿಲ್ಲ. ಯಾಕೆಂದರೆ, ಹಾಗೆ ಮಾಡುತ್ತಾ ಹೋದರೆ ನನ್ನನ್ನು ಪ್ರೀತಿಸುವವರನ್ನು ಪ್ರೀತಿಸಲು ನನಗೆ ಸಮಯವೇ ಸಿಗುವುದಿಲ್ಲ’ ಎನ್ನುತ್ತಾನೆ ಬುದ್ಧ. ಬುದ್ಧನಾಗಬೇಕೆಂದರೆ ಮನೆ ಬಿಡಬೇಕಿಲ್ಲ, ಅರಳಿ ಮರವೂ ಬೇಕಿಲ್ಲ. ನಮ್ಮನ್ನು ನಾವು, ಇನ್ನೊಬ್ಬರ ನೋವು ಅರ್ಥ ಮಾಡಿಕೊಂಡರಷ್ಟೇ ಸಾಕು.

ಬುದ್ಧನಿಗೆ ಜ್ಞಾನೋದಯವಾದ ದಿನ, ಹುಟ್ಟಿದ ದಿನ ಹಾಗೂ ನಿರ್ವಾಣ ಹೊಂದಿದ ಈ ದಿನವನ್ನೂ ಭಾರತಾದ್ಯಂತ ಬುದ್ಧ ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದನ್ನು ಕೆಲವು ದೇಶಗಳ ಬುದ್ಧನ ಅನುಯಾಯಿಗಳು ಈ ದಿನವನ್ನು ವೆಸಕ ಎಂದು ಕರೆಯುತ್ತಾರೆ. ವೆಸೆಕ ಎಂದರೆ ಎಪ್ರಿಲ್‌- ಮೇ ತಿಂಗಳ ಪವಿತ್ರ ದಿನ ಎಂದರ್ಥ.
ಪ್ರಪಂಚದೆಲ್ಲೆಡೆಯೂ ಗೌತಮ ಬುದ್ಧನ ಮಂದಿರಗಳಿವೆ , ಅನೇಕ ದೊಡ್ಡ ದೊಡ್ಡ ಧ್ಯಾನಾಸಕ್ತ ಬುದ್ಧನ ಅನೇಕ ಬಗೆಯ ಮೂರ್ತಿಗಳಿವೆ , ಹಾಂಗ್ ಕಾಂಗ್, ಥಾಯ್ಲೆಂಡ್, ಚೀನಾ, ಬರ್ಮಾ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ಇವತ್ತಿಗೂ  ಬುದ್ಧನ ಅನುನಾಯಿಗಳೇ ಹೆಚ್ಚಾಗಿದ್ದಾರೆ.

ಪ್ರಸ್ತುತ ಕಾಲಘಟ್ಟದಲ್ಲಿ  ನಾವುಗಳು ಬುದ್ಧನ ತತ್ವ ಗಳನ್ನು ಅಚರಿಸಿ ಎಂದು ಹೇಳುವುದಕ್ಕಿಂತ ಮೊದಲು ನಮ್ಮವೊಳಗಿನ ಬುದ್ಧನನ್ನು ಎಚ್ಚರಿಸಬೇಕಿದೆ,ಹಾಗಾದಾಗ ಮಾತ್ರ ಸಮುದಾಯ, ಸಮಾಜ, ಮತ್ತು  ದೇಶ ಸಮಾನತೆ ಸಮತ್ವಯಡೆಗೆ  ಸಾಗಲು ಸಾಧ್ಯವಾಗುತ್ತದೆ.

***

ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.‌

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗುಡಿಬಂಡೆಯಲ್ಲಿ ಗ್ರೀನ್ ಪೊಲೀಸ್ ಸ್ಟೇಷನ್!

ದಂಪತಿ ಅಡ್ಡಗಟ್ಟಿ ಮಾಂಗಲ್ಯ, ಹಣ ಸುಲಿಗೆ ಮಾಡಿದ ಕಿರಾತಕರು

Leave a Reply Cancel reply

Your email address will not be published. Required fields are marked *

Recommended

ನಗರಸಭೆ ಸದಸ್ಯರ ಅನರ್ಹತೆ ಪ್ರಕರಣ: 4 ವಾರಗಳಲ್ಲಿ ಇತ್ಯರ್ಥ ಮಾಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶ

ನಗರಸಭೆ ಸದಸ್ಯರ ಅನರ್ಹತೆ ಪ್ರಕರಣ: 4 ವಾರಗಳಲ್ಲಿ ಇತ್ಯರ್ಥ ಮಾಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶ

5 years ago
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ