• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ; ವಿಜಯದಶಮಿಗೆ ನಿರ್ಧಾರ ಎಂದ KCR-HDK

P K Channakrishna by P K Channakrishna
May 26, 2022
in STATE
Reading Time: 2 mins read
0
ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ; ವಿಜಯದಶಮಿಗೆ ನಿರ್ಧಾರ ಎಂದ KCR-HDK
956
VIEWS
FacebookTwitterWhatsuplinkedinEmail

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜತೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಮಹತ್ವದ ಮಾತುಕತೆ; ಮೂರೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ; ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಭಾಗಿ

ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.

ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಉಜ್ವಲ್ ಹಿಂದೂಸ್ತಾನ್ ಬೇಕಿದೆ

ಉಜ್ವಲ್ ಹಿಂದೂಸ್ತಾನ್ ನಮಗೆ ಬೇಕಿದೆ. ಜನರು ಈ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಕೆ.ಚಂದ್ರಶೇಖರರಾವ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಶಕ್ತಿ ಇದ್ದರೂ, ದೇಶದಲ್ಲಿ ಹಲವು‌ ಸಂಪನ್ಮೂಲಗಳಿದ್ದರೂ ಇವತ್ತಿಗೂ ಹಲವು‌ ಸಮಸ್ಯೆಗಳ ಬಗ್ಗೆ ಚರ್ಚೆ, ಪರಿಹಾರ ಇಲ್ಲ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನು ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ. ಯುವಕರಿಗೆ ಉದ್ಯೋಗ ಕೊಟ್ರಾ? ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ ಎಂದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಅತೀ ಶೀಘ್ರದಲ್ಲೇ ಬದಲಾವಣೆಯಾಗಲಿದೆ ಹಾಗೂ ದೇಶವೂ ಬದಲಾಗಲಿದೆ. ಎರಡು-ಮೂರು ತಿಂಗಳು ಕಾಯಿರಿ ಎಂದು ಕೆಸಿಆರ್‌ ಅವರು ಸೂಚ್ಯವಾಗಿ ಹೇಳಿದರು.

ಕರ್ನಾಟಕದ ರಾಜಕೀಯ ಕೂಡ ನನಗೆ ಗೊತ್ತಿದೆ. ಕರ್ನಾಟಕದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದೆ. ಹೆಚ್.ಡಿ.ಕುಮಾರಸ್ಚಾಮಿ ಅವರು ಮುಖ್ಯಮಂತ್ರಿ ಆಗಿದ್ದವರು. ಭಾರತ ಬದಲಿಸುವ ಕೆಲಸ ನಮ್ಮಿಂದ ಆಗಲಿದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸುತ್ತಿದ್ದೇವೆ ಎಂದರು ಅವರು.

ದೇಶದ ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜತೆ ಸುದೀರ್ಘ ಚರ್ಚೆ ಮಾಡಿದ್ದೇನೆ. ದೇಶದಲ್ಲಿ ಬದಲಾವಣೆ ತರಬೇಕಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಹೇಳಿದರು.

ಪರ್ಯಾಯ ಶಕ್ತಿ ಅನಿವಾರ್ಯ: ಹೆಚ್‌ಡಿಕೆ

ದೇಶಕ್ಕೆ ಪರ್ಯಾಯ ರಾಜಕೀಯ ವ್ಯವಸ್ಥೆ ಅನಿವಾರ್ಯವಾಗಿದೆ. ಮೂರನೇ ಶಕ್ತಿ ಇಂದು ಅತ್ಯಗತ್ಯವಾಗಿದ್ದು, ಎರಡ್ಮೂರು ತಿಂಗಳಲ್ಲಿ ಸ್ಪಷ್ಟತೆ ಸಿಗಲಿದೆ. ಒಂದು ಉತ್ತಮ ನಿರ್ಧಾರ ಹೊರಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಈ ಪಕ್ಷಗಳ ಮುಖಂಡರ ಜತೆ ತೆಲಂಗಾಣ ಸಿಎಂ ಚಂದ್ರಶೇಖರರಾವ್ ಅವರು ಚರ್ಚೆ ಮಾಡುತ್ತಿದ್ದಾರೆ. ಹಿಂದಿನ ಪ್ರಯತ್ನಕ್ಕಿಂತ ಹೊಸ ರೀತಿ ಪ್ರಯತ್ನ ಮಾಡ್ತಿದ್ದಾರೆ. ದೇಶದ ಸಂಪತ್ತು ಕಡುಬಡವರಿಗೆ ತಲುಪಬೇಕು. ಸಂಪತ್ತು ದೇಶದ ಬೆಳವಣಿಗೆಗೆ ಸಹಕಾರವಾಗಬೇಕು. ಆ ನಿಟ್ಟಿನಲ್ಲಿ ಚಂದ್ರಶೇಖರ್ ರಾವ್ ಅವರು ಚರ್ಚಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ದಸರಾ ವೇಳೆ ಉತ್ತಮ ನಿರ್ಧಾರ

ದಸರಾ ಅಂದರೆ ಯುದ್ಧಕ್ಕೆ‌ ಹೋಗುವ ಸಂದರ್ಭ. ಹಾಗಾಗಿ ದಸರಾ ವೇಳೆ ಉತ್ತಮ ನಿರ್ಧಾರ ಹೊರಬೀಳಲಿದೆ ಎಂದು ಇದೇ ವೇಳೆ ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮೂರನೇ ಶಕ್ತಿ ಇಂದು ಅನಿವಾರ್ಯವಾಗಿದೆ. ಆಗ ತೆಗೆದುಕೊಂಡ ನಿರ್ಣಯ ಬೇರೆ, ಈಗ ತೆಗೆದುಕೊಳ್ಳುವ ನಿರ್ಣಯ ಬೇರೆ. ದೇಶದ ಇತಿಹಾಸಕ್ಕೆ ಇದು ಫೌಂಡೇಷನ್ ಹಾಕಲಿದೆ ಎಂದರು.

ದೇಶ ಹಲವು ಸಮಸ್ಯೆ ಎದುರಿಸುತ್ತಿದೆ. ಜನರ ಸಮಸ್ಯೆ ಮುಂದಿಟ್ಟುಕೊಂಡೇ ಹೋಗುತ್ತೇವೆ. ಎಲ್ಲರೂ ಸೇರಿಯೇ ಇದಕ್ಕೆ ಶಕ್ತಿ ಕೊಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಆತ್ಮೀಯ ವಾತಾವರಣ

ಹೈದರಾಬಾದ್‌ʼನಿಂದ ಹೆಚ್‌ʼಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಳಿದ ಕೆಸಿಆರ್‌ ಅವರು ನೇರವಾಗಿ ದೇವೇಗೌಡರ ಮನೆಗೆ ಆಗಮಿಸಿದರು. ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ಬಳಿಕ ತಮ್ಮ ನಿವಾಸಕ್ಕೆ ಆಗಮಿಸಿದ ಕೆಸಿಆರ್‌ ಅವರನ್ನು ದೇವೇಗೌಡರು ಆತ್ಮೀಯವಾಗಿ ಬರಮಾಡಿಕೊಂಡರು. ಭೋಜನದ ನಂತರ ಇಬ್ಬರು ನಾಯಕರು ಮಾತುಕತೆಗೆ ತೆರಳಿದರು.

ತೆಲಂಗಾಣ ರಾಷ್ಟ್ರ ಸಮಿತಿಯ ರಾಜ್ಯಸಭೆ ಸದಸ್ಯ ಶಾಸಕರಾದ ಸಂತೋಷ್‌ ಕುಮಾರ್‌, ಶಾಸಕರಾದ ಜೀವನ್‌ ರೆಡ್ಡಿ, ಜಾಜುಲ ಸುರೇಂದ್ರ, ಕೃಷ್ಣಮೋಹನ ರೆಡ್ಡಿ, ರಾಜೇಂದರ್‌ ರೆಡ್ಡಿ ಅವರು ಕೆಸಿಆರ್‌ ಜತೆಯಲ್ಲಿ ಗೌಡರ ನಿವಾಸಕ್ಕೆ ಆಗಮಿಸಿದ್ದರು.

Tags: hd devegowdahd kumaraswamyjdsk Chandrashekar RaokarnatakakcrPoliticsTelanganatrs
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
CkNewsNow Impact: ಗುಡಿಬಂಡೆ ವಿಕಲಚೇತನ ಬಾಲಕನ ನೆರವಿಗೆ ಬಂದ ಸಮಾಜ ಕಲ್ಯಾಣ ಇಲಾಖೆ

CkNewsNow Impact: ಗುಡಿಬಂಡೆ ವಿಕಲಚೇತನ ಬಾಲಕನ ನೆರವಿಗೆ ಬಂದ ಸಮಾಜ ಕಲ್ಯಾಣ ಇಲಾಖೆ

Leave a Reply Cancel reply

Your email address will not be published. Required fields are marked *

Recommended

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಡಾ.ಕೆ.ಸುಧಾಕರ್‌ ಸೇರಿ ವಲಸಿಗರಿಂದ ಅಂತರ ಕಾಯ್ದುಕೊಂಡಿತಾ ಬಿಜೆಪಿ? ಕೋರ್ಟ್‌ ಮೆಟ್ಟಿಲೇರಿದ 6 ಸಚಿವರು, ಸಿ.ಡಿ. ಪ್ರಸಂಗದಿಂದ ಸೈಡಿಗೆ ಸರಿದು ಸೈಲಂಟಾಯಿತಾ ಕಮಲ ಪಾಳೆಯ

5 years ago
ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ

ಚಿಕ್ಕಬಳ್ಳಾಪುರದಲ್ಲಿ ಇಡೀ ರಾತ್ರಿ ವರುಣಮೃದಂಗ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ