ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಬಗ್ಗೆ ನಿರ್ಲಕ್ಷ್ಯ
ಬೆಂಗಳೂರು: ದೇಶದಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಸಹ ಕೊರೋನಾ ಸೊಂಕಿನ ಪ್ರಮಾಣ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಮಾಸ್ಕ್ ಧರಿಸುವುದು ಮಾಯವಾಗಿದೆ. ಬೆಂಗಳೂರಿನಲ್ಲಿ ಮಾಸ್ಕ್ ಬಳಕೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
ಮುಖ್ಯವಾಗಿ ಬಿಎಂಟಿಸಿ ಬಸ್ಸು, ಮೆಟ್ರೋ ರೈಲುಗಳಲ್ಲಿ ಮೆಟ್ರೋ ರೈಲುಗಳಲ್ಲಿ ಸಿಬ್ಬಂದಿ ಮಾಸ್ಕ್ ಬಗ್ಗೆ ನಿಗಾ ಇರಿಸುತ್ತಿಲ್ಲ. ಬಿಎಂಟಿಸಿಯಲ್ಲಂತೂ ಪ್ರಯಾಣಿಕರು ಮಾಸ್ಕ್ ಧರಿಸುವುದಿರಲಿ, ಸಿಬ್ಬಂದಿ ಕೂಡ ಮಾಸ್ಕ್ ಧರಿಸುತ್ತಿಲ್ಲ.
ಬಸ್ ಹಾಗೂ ರೈಲಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡಿಸುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿದೆ.
ಮಾರ್ಗಸೂಚಿಯ ಅಂಶ
- ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದನ್ನು, ಈ ಕ್ರಮಗಳನ್ನು ಜಾರಿಗೊಳಿಸಲು ಮಾರ್ಷಲ್ ಹಾಗೂ ಪೊಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.
- ಮಚ್ಚಿದ ಸಂರಚನೆಯನ್ನು ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್ಗಳು, ರೆಸ್ಟೊರೆಂಟ್ಗಳು, ಪಬ್ಗಳು, ಕೆಫೆಟೀರಿಯಾ, ಹೋಟೆಲ್ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ಗಳು, ಕಚೇರಿಗಳು, ಕಾರ್ಖಾನೆ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುವುದು ಹಾಗೂ ಮಾಸ್ಕ್ ಧರಿಸಿ ಬರುವವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳಲು ಆಯಾ ಸಂಸ್ಥೆಯ ಮಾಲೀಕರ/ ಆಡಳಿತಗಳ ಜವಾಬ್ದಾರಿಯಾಗಿರುತ್ತದೆ
- ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು ಪ್ರಯಾಣಿಸುವ ಸಂದರರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.
- ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.
- ಬೂಸ್ಟರ್ ಡೋಸ್ ಸೇರಿದಂತೆ ಕೋವಿಡ್ 19 ಲಸಿಕೆನ್ನು ಪಡೆಯುವುದು ಕೋವಿಡ್19 ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಲಸಿಕೆ ಪತ್ರ ಕಡ್ಡಾಯ!
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿಯು ಮಾಲ್, ಸಿನಿಮಾ ಮಂದಿರದಲ್ಲಿ ಮಾಸ್ಕ್ ಧರಿಸುವುದು ಮತ್ತು ಲಸಿಕೆ ಪ್ರಮಾಣ ಪತ್ರ ಪರಿಶೀಲಿಸುವುದನ್ನು ಕಡ್ಡಾಯ ಮಾಡಿದೆ. ಆದರೆ ಸದ್ಯ ದಂಡ ವಿಧಿಸುತ್ತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದರು.