ಒಂದೇ ತರಗತಿಯ 21 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು
ಬೆಂಗಳೂರು: ಬಿಬಿಎಂಪಿಯ ವ್ಯಪ್ತಿಯ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತ ವಿದ್ಯಾರ್ಥಿಗಳ ತರಗತಿಗಳಿಗೆ ರಜೆ ನೀಡಿಲಾಗಿದೆ. ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ. ಕೊಠಡಿ ಹಾಗೂ ಶಾಲಾ ಆವರಣಕ್ಕೆ ಸೋಂಕು ನಿವಾರಕ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.
ನಗರದ ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 21 ಕಂಟೈನ್ಮೆಂಟ್ ವಲಯ
ರಾಜಧಾನಿ ಬೆಂಗಳೂರಿನಲ್ಲಿ ಜೂನ್ ಆರಂಭದಿಂದ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಕಂಟೈನ್ಮೆಂಟ್ ವಲಯಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ, ಸೋಮವಾರ ಐದು ಹೊಸ ಕಂಟೈನ್ಮೆಂಟ್ ವಲಯ ಏರಿಕೆಯಾಗಿದೆ. ಈ ಮೂಲಕ ಒಟ್ಟು ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹದೇವಪುರ ವಲಯದಲ್ಲಿ ನಾಲ್ಕು ಹಾಗೂ ದಾಸರಹಳ್ಳಿ ವಲಯದಲ್ಲಿ ಒಂದು ಹೊಸದಾಗಿ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಪ್ರತಿದಿನ 500ಕ್ಕೂ ಹೆಚ್ಚು ಕೇಸ್
ನಗರದಲ್ಲಿ ಕೊರೋನಾ ಪ್ರಕರಣಗಳ ಸಮಖ್ಯೆ ಪ್ರತಿದಿನ 500ರ ಗಡಿದಾಟಿದೆ. ಸೋಮವಾರ 400ಕ್ಕೆ ಕುಸಿದಿತ್ತು. ಉಳಿದಂತೆ 358 ಮಂದಿ ಗುಣಮುಖರಾಗಿದ್ದು, ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. ನಗರದಲ್ಲಿ 3,542 ಸಕ್ರಿಯ ಸೋಂಕಿನ ಪ್ರಕರಣಗಳಿದ್ದು, ಈ ಪೈಕಿ 29 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಐಸಿಯು ಮತ್ತು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಎಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜುಲೈ ತಿಂಗಳಲ್ಲಿ 4ನೇ ಅಲೆ ಸಂಭವ
ಕೊರೋನಾ ಹೆಚ್ಚಳವಾಗುತ್ತಿರುವ ಬಗ್ಗೆ ಸೋಮವಾರ ಸಂಜೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಕೂಡ ಸಭೆ ನಡೆಸಿ ಅಗತ್ಯ ಕ್ರಮಗಳ ಭರವಸೆ ನೀಡಿದ್ದಾರೆ. ತಾಂತ್ರಿಕಾ ಸಲಹಾ ಸಮಿತಿಯ ತಜ್ಞರ ಪ್ರಕಾರ ಜುಲೈ ತಿಂಗಳಲ್ಲಿ 4ನೇ ಅಲೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ. ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಹೊರತು ಪಡಿಸಿದರೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುವ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಹಾಗಾಗಿ ಜನರು ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಸಚಿವರ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ
ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳದ ಜೋತೆ ಡೆಂಘಿ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‍ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‍ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿದ್ಯಾರ್ಥಿಗಳಿಗೆ ಜೂನ್ 9ರಂದು ಸೋಂಕು ದೃಢಪಟ್ಟಿದೆ. ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಕಾರಣ 2 ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಲಸಿಕೆ ಹಾಕಲು ಮಕ್ಕಳಿಗೆ ರ್ಯಾಟ್ ಪರೀಕ್ಷೆ ಮಾಡಿದ ವೇಳೆ ಪಾಸಿಟಿವ್ ಬಂದಿದೆ. ನಂತರ ಪಾಸಿಟಿವ್ ಅದ ಮಕ್ಕಳ ಗಂಟಲು ಧ್ರವವನ್ನು ಅನ್ನು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಕಳಿಸಲಾಗಿದೆ . ಸದ್ಯ 21 ವಿದ್ಯಾರ್ಥಿಗಳಿಗೆ ಆರ್.ಟಿ.ಪಿ.ಸಿ.ಆರ್ ನೆಗೇಟಿವ್ ಬಂದಿದ್ದು . ಉಳಿದ 10 ಮಕ್ಕಳ ವರದಿಗಾಗು ಕಾಯಲಾಗುತ್ತಿದೆ . ಅಷ್ಟೇ ಅಲ್ಲ ಪಾಸಿಟಿವ್ ಅದ ವಿದ್ಯಾರ್ಥಿಗಳನ್ನು ಸದ್ಯ ಐಸೋಲೇಶನ್ ಮಾಡಲಾಗಿದೆ. ವರದಿಯಲ್ಲಿ 6 ಕ್ಕೂ ಹೆಚ್ಚು ಮಕ್ಕಳಿಗೆ ಪಾಸಿಟಿವ್ ಬಂದರೆ ಶಾಲೆಯನ್ನು ಸ್ವಲ್ಪ ದಿನಗಳು ಬಂದ್ ಮಾಡಲಗುತ್ತೆದೆ.
ಸುರೇಶ್ ರುದ್ರಪ್ಪ, ದಾಸರಹಳ್ಳಿ ವಿಭಾಗದ ಆರೋಗ್ಯಾಧಿಕಾರಿ
ಮಕ್ಕಳಲ್ಲಿ ಕೊವಿಡ್ ಬಂದ ತಕ್ಷಣ ಏನು ಆಗುವುದಿಲ್ಲ. ಕಳೆದ 2-3 ತಿಂಗಳಿಂದ ಶಾಲೆಗಳನ್ನು ಗಮನಿಸುತ್ತಿದ್ದೇವೆ. 15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಆಗಿದೆಯಾ ಎಂಬುದನ್ನು ಪರಿಶೀಲನೆ ಮಾಡುತ್ತೇವೆ. ಸೋಂಕು ಕಾಣಿಸಿಕೊಂಡ ಮಕ್ಕಳ ತರಗತಿಯನ್ನು ಸಸ್ಪೆಂಡ್ ಮಾಡುತ್ತೇವೆ. ಯಾರೂ ಆತಂಕಕ್ಕೆ ಒಳಗಾಗಬಾರದು. ಇದೆಲ್ಲವೂ ಒಮಿಕ್ರಾನ್ ಪ್ರಭೇದವೇ ಆಗಿದೆ. ನಮ್ಮಲ್ಲಿ ಬಿಎ4 ತರಹದ ತಳಿ ಪತ್ತೆಯಾಗಿಲ್ಲ.
ಡಾ.ಕೆ.ಸುಧಾಕರ್, ಆರೋಗ್ಯ ಸಚಿವರು
ನಗರದ ಶಾಲೆಗಳಲ್ಲಿ ಕೊರೊನ ಸ್ಪೋಟ ಹೆಚ್ಚಾಗುತ್ತಿದ್ದಂತೆ ಪ್ರತಿಯೊಂದು ಶಾಲೆಯಲ್ಲೂ ಎಸ್.ಒ.ಪಿ ಪಾಲನೆ ಮಾಡುವಂತೆ ಬಿಬಿಎಂಪಿ ಸಲಹೆ ನೀಡಿದೆ .ಮೊದಲಿನಂತೆ ಮಾಸ್ಕ್ ಸ್ಯಾನಿಟೈಜರ್, ಸಾಮಾಜಿ ಅಂತರದ ಜೊತೆಗೆ ಎಲ್ಲಾ ಶಾಲಾ ಕಾಲೇಜುಗಳ ಗೇಟ್ ನಲ್ಲಿ ವಿದ್ಯಾರ್ಥಿಗಳು ಒಳಗೆ ಬರುವಾಗ ಸ್ಕ್ರೀನಿಂಗ್ ಮಾಡುವಂತೆ ಬಿಬಿಎಂಪಿ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.
ರವೀಂದ್ರ, ವಿಶೇಷ ಆಯುಕ್ತರು, ಬಿಬಿಎಂಪಿ
Comments 1